ನಾಗ್ಪುರ : 2 ಸರ್ಕಾರಿ ಆಸ್ಪತ್ರೆಗಳಲ್ಲಿ 24 ಗಂಟೆಗಳಲ್ಲಿ 25 ರೋಗಿಗಳ ಸಾವು

ನಾಗ್ಪುರ (ಮಹಾರಾಷ್ಟ್ರ): ನಾಗ್ಪುರದ ಸರ್ಕಾರಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ಹಾಗೂ ಇಂದಿರಾ ಗಾಂಧಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ (ಮೇಯೊ) ಯಲ್ಲಿ ಕಳೆದ 24 ಗಂಟೆಗಳಲ್ಲಿ 25 ರೋಗಿಗಳು ಸಾವನ್ನಪ್ಪಿರುವುದು ವರದಿಯಾಗಿದೆ. ಸರ್ಕಾರಿ ವೈದ್ಯಕೀಯ ಕಾಲೇಜಿನಲ್ಲಿ 16 ರೋಗಿಗಳು ಹಾಗೂ ಮೇಯೊ ಆಸ್ಪತ್ರೆಯಲ್ಲಿ 9 ರೋಗಿಗಳು ಸಾವನ್ನಪ್ಪಿದ್ದಾರೆ. ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ರೋಗಿಗಳ ಸಾವುಗಳು ಹೆಚ್ಚುತ್ತಿರುವ ಬಗ್ಗೆ ಇತ್ತೀಚೆಗೆ ವರದಿಯಾಗುತ್ತಿದ್ದು, ಇದೀಗ ನಾಗ್ಪುರದ ಎರಡು ಸರ್ಕಾರಿ ಆಸ್ಪತ್ರೆಗಳಲ್ಲಿ ಕಳೆದ 24 ಗಂಟೆಗಳಲ್ಲಿ 25 ರೋಗಿಗಳು ಸಾವನಪ್ಪಿರುವುದು […]

   ಸಂಚಾರದಲ್ಲಿ ವ್ಯತ್ಯಯ : ಬೆಂಗಳೂರು ರಾಜಾಜಿನಗರ  ಹಳಿ ತಪ್ಪಿದ ಮೆಟ್ರೋ ರೀ ರೈಲ್

ಬೆಂಗಳೂರು : ರಾಜಾಜಿನಗರ ಬಳಿ ನಮ್ಮ ಮೆಟ್ರೋ ರೀ ರೈಲು ಹಳಿ ತಪ್ಪಿದ್ದು, ಸಂಚಾರದಲ್ಲಿ ವ್ಯತ್ಯಯ ಉಂಟಾಗಿದೆ. ನಮ್ಮ ಮೆಟ್ರೋ ರೀ ರೈಲು ಹಳಿ ತಪ್ಪಿದ್ದು, ಸಂಚಾರದಲ್ಲಿ ವ್ಯತ್ಯಯ ಉಂಟಾಗಿದೆ.ರಾಜಾಜಿನಗರ ಬಳಿ ಉಂಟಾದ ತಾಂತ್ರಿಕ ಸಮಸ್ಯೆ ಸರಿಪಡಿಸಲು ಮೆಟ್ರೋ ಸಿಬ್ಬಂದಿ ಹರಸಾಹಸ ಪಡುತ್ತಿದ್ದು, ಮಧ್ಯಾಹ್ನದ ವೇಳೆಗೆ ಸಮಸ್ಯೆ ಸರಿಹೋಗುವ ಸಾಧ್ಯತೆ ಇದೆ. ಅಲ್ಲಿಯವರಿಗೆ ಈ ಮಾರ್ಗದಲ್ಲಿ ಸಂಚಾರ ಸ್ಥಗಿತವಾಗಿರಲಿದೆ. ಸದ್ಯ ರಾಜಾಜಿನಗರದಿಂದ ಮಂತ್ರಿ ಸ್ಕ್ವೇರ್ ಮತ್ತು ಯಶವಂತಪುರ ನಡುವಿನ ಮೆಟ್ರೋ ಸಂಚಾರ ಸ್ಥಗಿತವಾಗಿದ್ದು, ಪ್ರಯಾಣಿಕರು ಪರದಾಡಿದರು.

24 ಗಂಟೆಯಲ್ಲಿ 12 ಶಿಶುಗಳು ಸೇರಿ 24 ರೋಗಿಗಳ ಸಾವು : ಮಹಾರಾಷ್ಟ್ರದ ಸರ್ಕಾರಿ ಆಸ್ಪತ್ರೆಯಲ್ಲಿ ಮರಣಮೃದಂಗ

ನಾಂದೇಡ್​ (ಮಹಾರಾಷ್ಟ್ರ) : ಮಹಾರಾಷ್ಟ್ರದಲ್ಲಿ ಆರೋಗ್ಯ ಸೇವೆ ತೀವ್ರ ಕುಸಿತ ಕಾಣುತ್ತಿದೆಯೇ ಎಂಬ ಅನುಮಾನ ಮೂಡಿಸಿದೆ. ಮಹಾರಾಷ್ಟ್ರದ ಸರ್ಕಾರಿ ಆಸ್ಪತ್ರೆಯಲ್ಲಿ ಮರಣಮೃದಂಗ ಕೇಳಿಬಂದಿದೆ. ಕೆಲ ದಿನಗಳ ಹಿಂದಷ್ಟೇ ಥಾಣೆಯ ಸರ್ಕಾರಿ ಆಸ್ಪತ್ರೆಯಲ್ಲಿ 12 ತಾಸಿನಲ್ಲಿ 17 ಮಂದಿ ಸಾವಿಗೀಡಾದ ಘಟನೆ ಸಂಚಲನ ಉಂಟು ಮಾಡಿತ್ತು. ಇದೀಗ ಅಂಥದ್ದೇ ಮತ್ತೊಂದು ದುರ್ಘಟನೆ ನಡೆದಿದ್ದು, ನಾಂದೇಡ್​ ಸರ್ಕಾರಿ ಆಸ್ಪತ್ರೆಯಲ್ಲಿ 24 ಗಂಟೆಯಲ್ಲಿ 12 ನವಜಾತ ಶಿಶುಗಳು ಸೇರಿ 24 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಇದು ಸರ್ಕಾರದ ವಿರುದ್ಧ ತೀವ್ರ ಆಕ್ರೋಶಕ್ಕೆ […]

2 ಲಕ್ಷ ಜನರಿಗೆ ಅಂಟಿದ ಸೋಂಕು! ಬಾಂಗ್ಲಾದಲ್ಲಿ 1000ರದ ಗಡಿ ದಾಟಿದ ಡೆಂಘೀ ಸಾವಿನ ಸಂಖ್ಯೆ

ಢಾಕಾ(ಬಾಂಗ್ಲಾದೇಶ): ನೆರೆಯ ಬಾಂಗ್ಲಾ ದೇಶದಲ್ಲಿ ಡೆಂಘೀ ವ್ಯಾಪಕವಾಗಿ ಹಬ್ಬಿದ್ದು ಕೇವಲ ಈ ಒಂದೇ ವರುಷದಲ್ಲಿ ಡೆಂಘೀ ಮಾರಿಗೆ 1,000 ಕ್ಕೂ ಅಧಿಕ ಜನರು ಸಾವನ್ನಪ್ಪಿದ್ದಾರೆ ಎಂದು ಬಾಂಗ್ಲಾದ ಅಧಿಕೃತ ಮಾಧ್ಯಮ ಸಂಸ್ಥೆ ವರದಿ ಮಾಡಿದೆ. ಈ ವರುಷ ಪೂರ್ಣಗೊಳ್ಳಲು ಇನ್ನೂ 3 ತಿಂಗಳೂ ಬಾಕಿ ಇದೆ. ಆದರೆ, 9 ತಿಂಗಳಿನಲ್ಲಿಯೇ ಡೆಂಘೀ ಜ್ವರದಿಂದ ಸಾವನ್ನಪ್ಪಿರುವವರ ಸಂಖ್ಯೆ 1000ದ ಗಡಿ ದಾಟಿದೆ. ನಿಖರ ಮಾಹಿತಿ ಪ್ರಕಾರ ಇದುವರೆಗೆ 1,017 ಜನರು ಸಾವನ್ನಪ್ಪಿದ್ದು, ಸುಮಾರು 2,09,000 ಜನರು ಸೋಂಕಿತರಾಗಿದ್ದಾರೆ. 2000ದಲ್ಲಿ […]

200ಕ್ಕೂ ಹೆಚ್ಚು ಕಂಪನಿಗಳು ಭಾಗವಹಿಸುವ ನಿರೀಕ್ಷೆ ಅಕ್ಟೋಬರ್​ 6, 7ಕ್ಕೆ ಬೃಹತ್ ಉದ್ಯೋಗ ಮೇಳ: ಪ್ರಸಾದ್ ಶೆಟ್ಟಿ

ಕಾರವಾರ (ಉತ್ತರ ಕನ್ನಡ): ”ಆಳ್ವಾಸ್ ಶಿಕ್ಷಣ ಪತಿಷ್ಠಾನದ ವತಿಯಿಂದ ಮೂಡಬಿದಿರೆಯ ವಿದ್ಯಾಗಿರಿ ಕಾಲೇಜು ಆವರಣದಲ್ಲಿ ಅಕ್ಟೋಬರ್ 6 ಮತ್ತು 7 ರಂದು `ಆಳ್ವಾಸ್ ಪ್ರಗತಿ-2023′ ಬೃಹತ್ ಉದ್ಯೋಗ ಮೇಳ ಆಯೋಜಿಸಲಾಗಿದೆ” ಎಂದು ಆಳ್ವಾಸ್ ಸ್ನಾತಕೋತ್ತರ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಮುಖ್ಯಸ್ಥ ಪ್ರಸಾದ್ ಶೆಟ್ಟಿ ಹೇಳಿದರು. ಆಳ್ವಾಸ್ ಸ್ನಾತಕೋತ್ತರ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಮುಖ್ಯಸ್ಥ ಪ್ರಸಾದ್ ಶೆಟ್ಟಿ ಮಾತನಾಡಿ ಅಕ್ಟೋಬರ್​ 6 ಹಾಗೂ 7ಕ್ಕೆ ಬೃಹತ್ ಉದ್ಯೋಗ ಮೇಳ ಆಯೋಜಿಸಲಾಗಿದೆ. ಈ ಮೇಳದಲ್ಲಿ […]