ಬೀದಿನಾಯಿಗಳ ದಾಳಿಗೆ ಮೂರು ವರ್ಷದ ಬಾಲಕಿ ಮೃತ್ಯು.

ಜಲ್ನಾ: ನಗರದ ಯಶವಂತ್ ನಗರ ಪ್ರದೇಶದಲ್ಲಿ ಸೋಮವಾರ ಮುಂಜಾನೆ ಬೀದಿನಾಯಿಗಳ ಹಿಂಡು ನಡೆಸಿದ ದಾಳಿಗೆ ಮೂರು ವರ್ಷದ ಬಾಲಕಿಯೊಬ್ಬಳು ಸಾವಿಗೀಡಾದ ಘಟನೆ ನಡೆದಿದೆ. ಪಾರಿ ಗೋಸ್ವಾಮಿ (3) ಮೃತ ಬಾಲಕಿ. ರವಿವಾರ ತನ್ನ ತಾಯಿ ಮತ್ತು ಸಹೋದರಿಯೊಂದಿಗೆ ಬಿಹಾರಕ್ಕೆ ತೆರಳಬೇಕಿದ್ದ ಪಾರಿ, ಕೊನೆಗಳಿಗೆಯಲ್ಲಿ ತಂದೆಯೊಂದಿಗೆ ಉಳಿಯಲು ನಿರ್ಧರಿಸಿದ್ದಳು. ಸೋಮವಾರ ಮುಂಜಾನೆ 3.30ರ ಸುಮಾರಿಗೆ ತಂದೆ ಗಾಢ ನಿದ್ರೆಯಲ್ಲಿದ್ದಾಗ ತಾಯಿಯನ್ನು ಹುಡುಕುತ್ತಾ ಪಾರಿ ಮನೆಯಿಂದ ಹೊರಬಂದಿದ್ದಾಳೆ. ಈ ವೇಳೆ ಬೀದಿಯಲ್ಲಿ ಅಲೆಯುತ್ತಿದ್ದ ಬಾಲಕಿಯನ್ನು ಸುತ್ತುವರಿದ ಬೀದಿನಾಯಿಗಳ ಗುಂಪು, ಆಕೆಯ ಮೇಲೆ […]
ರಾಜ್ಯಾದ್ಯಂತ 13 ಸಾವಿರ ಶಿಕ್ಷಕರ ನೇಮಕಾತಿಗೆ ಅಧಿಸೂಚನೆ ಪ್ರಕಟ: ಸಚಿವ ಮಧು ಬಂಗಾರಪ್ಪ ಮಾಹಿತಿ

ಶಿವಮೊಗ್ಗ: ರಾಜ್ಯಾದ್ಯಂತ 13 ಸಾವಿರ ಶಿಕ್ಷಕರ ನೇಮಕಾತಿಗೆ ಸರಕಾರ ನಿರ್ಧರಿಸಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಮಾಹಿತಿ ನೀಡಿದ್ದಾರೆ. ಸೋಮವಾರ ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಶಿಕ್ಷಕರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಧಿಸೂಚನೆ ಹೊರಡಿಸಲಾಗಿದೆ. ಅಕ್ಟೋಬರ್ 23 ರಿಂದ ನವೆಂಬರ್ 9 ರವರೆಗೆ ಶಿಕ್ಷಕರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಡಿಸೆಂಬರ್ 7ರಂದು ಟಿಇಟಿ ಪರೀಕ್ಷೆ ನಡೆಸಿ, ಡಿಸೆಂಬರ್ 31ರಂದು ಫಲಿತಾಂಶ ಪ್ರಕಟಿಸಲು ನಿರ್ಧರಿಸಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.
ಬೆಂಗಳೂರಿನ ಲಾಡ್ಜ್ ನಲ್ಲಿ ಪುತ್ತೂರಿನ ಯುವಕ ಅನುಮಾನಾಸ್ಪದ ಸಾವು: ಸಾವಿನ ಬಗ್ಗೆ ಅನುಮಾನ ವ್ಯಕ್ತ!

ಪುತ್ತೂರು: ಬೆಂಗಳೂರಿನ ಮಡಿವಾಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪುತ್ತೂರು ತಾಲೂಕಿನ ಕೋಡಿಂಬಾಡಿ ಗ್ರಾಮದ ಸೇಡಿಯಾಪು ನಿವಾಸಿ ತಕ್ಷಿತ್ (20) ಅವರ ಮೃತದೇಹ ಬೆಂಗಳೂರಿನ ವಸತಿಗೃಹದಲ್ಲಿ ಪತ್ತೆಯಾಗಿದ್ದು, ಸಾವಿನ ಬಗ್ಗೆ ಅನುಮಾನ ಮೂಡಿದೆ. ತಕ್ಷಿತ್ ಕುಟುಂಬ ಮೂಲತ ತಮಿಳುನಾಡಿನವರು. ಸೇಡಿಯಾಪಿನ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ಶುಕ್ರವಾರ ಬೆಳಗ್ಗಿನಿಂದ ತಕ್ಷಿತ್ ತಂದೆ ಪ್ರಸಾದ್ ಅವರು ಮಗನ ಮೊಬೈಲ್‌ಗೆ ಕರೆ ಮಾಡುತ್ತಿದ್ದರೂ ಆತ ಕರೆ ಸ್ವೀಕರಿಸಿರಲಿಲ್ಲ. ಸಂಜೆ ವೇಳೆಗೆ ಮಡಿವಾಳ ಪೊಲೀಸರು ಕರೆ ಮಾಡಿ ತಕ್ಷಿತ್ ವಸತಿಗೃಹದಲ್ಲಿ ನಿಗೂಢವಾಗಿ ಸಾವನ್ನಪ್ಪಿರುವ ಮಾಹಿತಿ […]

ಕಾರ್ಕಳದ ಅಭಿಷೇಕ್ ಆತ್ಮಹತ್ಯೆ ಪ್ರಕರಣ: ಗೆಳತಿಯರು ಬಟ್ಟೆ ಬದಲಿಸುವ ವಿಡಿಯೋ ವೈರಲ್; ಯುವತಿ ಬಂಧನ.

ಮಂಗಳೂರು: ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದ 26 ವರ್ಷದ ಯುವಕ ಅಭಿಷೇಕ್ ತನ್ನ ಖಾಸಗಿ ವಿಡಿಯೋ ಬಳಸಿ ನಾಲ್ವರು ತನಗೆ ಬ್ಲಾಕ್‌ಮೇಲ್ ಮಾಡುತ್ತಿದ್ದಾರೆ ಎಂದು ಆರೋಪಿಸಿ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿದ್ದನು. ಈ ಪ್ರಕರಣದ ತನಿಖೆ ಚುರುಕುಗೊಳಿಸಿದ್ದ ಮಂಗಳೂರಿನ ಕದ್ರಿ ಪೊಲೀಸರು ಯುವತಿಯೋರ್ವಳನನ್ನು ಬಂಧಿಸಿದ್ದಾರೆ. ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ನಿಟ್ಟೆಯ ಪರಪ್ಪಾಡಿ ನಿವಾಸಿ ಅಭಿಷೇಕ್ ಡೆತ್ ನೋಟ್ ನಲ್ಲಿ ನಿರೀಕ್ಷಾ ಎಂಬಾಕೆಯ ಹೆಸರು ಬರೆದಿದ್ದು ಸಾವಿಗೆ ಶರಣಾಗಿದ್ದನು. ಹೀಗಾಗಿ ಪೊಲೀಸರು ಚಿಕ್ಕಮಗಳೂರಿನ ನಿರೀಕ್ಷಾಳನ್ನು […]