ಬೆಂಗಳೂರು : ತಮಿಳುನಾಡಿಗೆ ಕಾವೇರಿ ನದಿ ನೀರು ಬಿಟ್ಟಿರುವುದನ್ನು ವಿರೋಧಿಸಿ ವಿವಿಧೆಡೆ ಪ್ರತಿಭಟನೆ

ಬೆಂಗಳೂರು: ರಾಜ್ಯ ಬರದ ಸಂಕಷ್ಟದಲ್ಲಿರುವ ಸಂದರ್ಭದಲ್ಲಿ ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವುದನ್ನು ಖಂಡಿಸಿ ಜಯ ಕರ್ನಾಟಕ ಸಂಘಟನೆಯ ಕಾರ್ಯಕರ್ತರು ಬೆಂಗಳೂರಿನ ಫ್ರೀಡಂ ಪಾರ್ಕ್‌ ರಸ್ತೆಗಳಲ್ಲಿ ಉರುಳು ಸೇವೆ ಮಾಡಿ ಪ್ರತಿಭಟನೆ ನಡೆಸಿದರು. ”ರಾಜ್ಯ ಸಂಕಷ್ಟದಲ್ಲಿ ಇದ್ದಾಗ ನೀರು ಬಿಡಬೇಡಿ, ಯಾವುದೇ ಸಮಸ್ಯೆಗೂ ಸರ್ಕಾರದೊಂದಿಗೆ ನಾವು ಇದ್ದೇವೆ ಎಂದರೂ ರಾಜಕಾರಣಿಗಳು ತಮ್ಮ ಬೇಳೆ ಬೇಯಿಸಿಕೊಳ್ಳುವ ಉದ್ದೇಶದಿಂದ ತಮಿಳುನಾಡಿಗೆ ನೀರು ಹರಿಸುತ್ತಿದ್ದಾರೆ. ಸರ್ವಪಕ್ಷಗಳ ಸಭೆಯಲ್ಲಿ ರೈತರನ್ನು, ಕನ್ನಡಪರ ಸಂಘಟನೆಗಳನ್ನು ಹೊರಗಿಟ್ಟು ತೀರ್ಮಾನ ತೆಗೆದುಕೊಂಡಿದ್ದಾರೆ. ಯಾವುದೇ ಪಕ್ಷವೂ ಅಧಿಕಾರದಲ್ಲಿದ್ದಾಗ ರಾಜ್ಯದ ಪರ […]

ಕೇರಳ ಹೈಕೋರ್ಟ್​ ಆದೇಶ : ಪೋಕ್ಸೋ ಆರೋಪಿಗಳಿಗೂ ನಿರೀಕ್ಷಣಾ ಜಾಮೀನು

ಎರ್ನಾಕುಲಂ (ಕೇರಳ) : ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಸಂಬಂಧಿಸಿದಂತೆ ಕೇರಳ ಹೈಕೋರ್ಟ್​ ಇಂದು ಆದೇಶ ನೀಡಿದೆ.ಪೋಕ್ಸೊ ಪ್ರಕರಣಗಳಲ್ಲಿ ಪ್ರಾಥಮಿಕ ಹಂತದ ಸಾಕ್ಷ್ಯಾಧಾರಗಳಿಲ್ಲದಿದ್ದಲ್ಲಿ ಆರೋಪಿಗಳಿಗೆ ನಿರೀಕ್ಷಣಾ ಜಾಮೀನು ಕೊಡಬಹುದು ಎಂದು ಕೇರಳ ಹೈಕೋರ್ಟ್​ ಆದೇಶ ನೀಡಿದೆ. ಸುಳ್ಳು ಆರೋಪದ ಮೇಲೆ ಅಮಾಯಕರ ವಿರುದ್ಧ ಪ್ರಕರಣ ದಾಖಲಾದ ಹಲವು ಪ್ರಕರಣಗಳು ನಮ್ಮ ಕಣ್ಣ ಮುಂದಿವೆ. ಇಂತಹ ಸಂದರ್ಭಗಳಲ್ಲಿ ವಾಸ್ತವಾಂಶಗಳನ್ನು ಪರಿಶೀಲಿಸಿ ನಿರ್ಧಾರ ಕೈಗೊಳ್ಳಬೇಕು. ತಪ್ಪಿತಸ್ಥರನ್ನು ಶಿಕ್ಷಿಸುವುದಷ್ಟೇ ಅಲ್ಲ. ಜೊತೆಗೆ ಅಮಾಯಕರನ್ನೂ ರಕ್ಷಿಸುವುದು ಮುಖ್ಯವಾಗುತ್ತದೆ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ. […]

ತಮಿಳುನಾಡು ಸಿಎಂ ಸ್ಟಾಲಿನ್ ಘೋಷಣೆ : ಸರ್ಕಾರಿ ಗೌರವಗಳೊಂದಿಗೆ ಅಂಗಾಂಗ ದಾನಿಗಳ ಅಂತ್ಯಸಂಸ್ಕಾರ

ಚೆನ್ನೈ (ತಮಿಳುನಾಡು): ತಮ್ಮ ಅಂಗಾಂಗಗಳನ್ನು ದಾನ ಮಾಡುವವರ ಅಂತ್ಯಕ್ರಿಯೆಯನ್ನು ಇನ್ಮುಂದೆ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲಾಗುವುದು ಎಂದು ತಮಿಳುನಾಡು ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್ ಪ್ರಕಟಿಸಿದ್ದಾರೆ.”ತಮ್ಮ ಅಂಗಾಂಗಗಳನ್ನು ದಾನ ಮಾಡುವ ಹಾಗೂ ಅನೇಕ ಪ್ರಾಣಗಳನ್ನು ಉಳಿಸುವವರ ತ್ಯಾಗವನ್ನು ಗೌರವಿಸುವ ಸಲುವಾಗಿ, ಸಾವಿಗೂ ಮುನ್ನ ತಮ್ಮ ಅಂಗಾಂಗಗಳನ್ನು ದಾನ ಮಾಡುವವರ ಅಂತ್ಯಕ್ರಿಯೆಯನ್ನು ಸರ್ಕಾರಿ ಗೌರವಗಳೊಂದಿಗೆ ನಡೆಸಲಾಗುವುದು” ಎಂದು ಮುಖ್ಯಮಂತ್ರಿ ಸ್ಟಾಲಿನ್​ ಪ್ರಕಟಿಸಿದ್ದಾರೆ. ಇದೇ ವೇಳೆ, ”ಅಂಗಾಂಗ ದಾನದ ಮೂಲಕ ನೂರಾರು ರೋಗಿಗಳಿಗೆ ಮರುಜೀವ ನೀಡುವಲ್ಲಿ ತಮಿಳುನಾಡು ದೇಶದಲ್ಲೇ ಅಗ್ರಸ್ಥಾನದಲ್ಲಿದೆ” ಎಂದು […]

ಸಚಿವ ರಾಮಲಿಂಗ ರೆಡ್ಡಿ : ಜಿಲ್ಲೆಯಲ್ಲಿನ ಲಾರಿ ಮಾಲೀಕರ ಸಮಸ್ಯೆಗಳ ಜೊತೆ ವಿವಿಧ ಬೇಡಿಕೆಗಳ ಮನವಿ

ಉಡುಪಿ: ರಾಜ್ಯ ಸರ್ಕಾರದ ಹೊಸ ನಿಯಮದ ಪ್ರಕಾರ ಮೆಟ್ರಿಕ್ ಟನ್ ಆಧಾರದಲ್ಲಿ ಲೈಫ್ ಟ್ಯಾಕ್ಸ್ ಪಾವತಿ, ಕಡ್ಡಾಯ ಜಿ.ಪಿ.ಎಸ್. ಅಳವಡಿಕೆಗೆ ನಿರ್ಧಾರವನ್ನು ಪುನರ್ ಪರಿಶೀಲನೆ ನಡೆಸುವಂತೆ ಹಾಗೂ ಲಾರಿ ಮಾಲೀಕರ ಸಮಸ್ಯೆ ಹಾಗೂ ಬೇಡಿಕೆಗಳ ಸಾಧಕ ಬಾಧಕಗಳ ಬಗ್ಗೆ ಸಂಘದ ಪದಾಧಿಕಾರಿಗಳ ಸಭೆ ಕರೆದು ಚರ್ಚಿಸುವಂತೆ ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ಯವರಿಗೆ ಶಾಸಕ ಯಶ್ ಪಾಲ್ ಸುವರ್ಣ ಮನವಿ ಸಲ್ಲಿಸಿದರು. ಉಡುಪಿ ಜಿಲ್ಲೆಯ ಆರ್. ಟಿ. ಓ. ಕಚೇರಿಯಲ್ಲಿ ದೈನಂದಿನ ಚಟವಟಿಕೆಗೆ ಸಿಬ್ಬಂದಿ ಕೊರತೆಯಿಂದ ಸಾರ್ವಜನಿಕರು […]

ಇವಿಎಂ : ಸೋರ್ಸ್​ ಕೋಡ್​ ಆಡಿಟ್​ ಕೋರಿದ್ದ ಪಿಐಎಲ್​ ವಜಾ

ನವದೆಹಲಿ: ಇವಿಎಂಗಳ ಸೋರ್ಸ್ ಕೋಡ್​ ಆಡಿಟ್​ ನಡೆಸಬೇಕೆಂದು ಕೋರಿ ಸಲ್ಲಿಸಲಾಗಿದ್ದ ರಿಟ್ ಅರ್ಜಿಯನ್ನು ಸುಪ್ರೀಂ ಕೋರ್ಟ್​ ವಜಾ ಮಾಡಿದೆ. ವಿದ್ಯುನ್ಮಾನ ಮತದಾನ ಯಂತ್ರಗಳಲ್ಲಿ (ಇವಿಎಂ) ಬಳಸುವ ಸೋರ್ಸ್​ ಕೋಡ್ ಅನ್ನು ಆಡಿಟ್​ ಮಾಡಬೇಕೆಂದು ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ (ಪಿಐಎಲ್) ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ಶುಕ್ರವಾರ ನಿರಾಕರಿಸಿದೆ. ಇವಿಎಂಗಳ ಸೋರ್ಸ್​ ಕೋಡ್​ ಬಗ್ಗೆ ಅನುಮಾನಿಸಲು ನ್ಯಾಯಾಲಯದ ಮುಂದೆ ತಾವು ಪ್ರಸ್ತುತಪಡಿಸುತ್ತಿರುವ ಪುರಾವೆಗಳೇನು ಎಂದು ಮುಖ್ಯ ನ್ಯಾಯಮೂರ್ತಿ ಈ ಸಂದರ್ಭದಲ್ಲಿ ಪ್ರಶ್ನಿಸಿದರು. ಇದಕ್ಕೆ ಉತ್ತರಿಸಿದ ಅಹ್ಯಾ, […]