ಅಂಬಾರಿ ಹೊರುವ ಆನೆಗೆ ಸಿದ್ಧವಾಗುತ್ತಿದೆ ನಮ್ದಾ : ಮೈಸೂರು ದಸರಾ -2023.

ಮೈಸೂರು : ಐತಿಹಾಸಿಕ ಮೈಸೂರು ದಸರಾಗೆ ಭರದ ಸಿದ್ಧತೆಗಳು ನಡೆಯುತ್ತಿವೆ.ವಿಶ್ವ ವಿಖ್ಯಾತ ಮೈಸೂರು ದಸರಾಗೆ ಭರದ ಸಿದ್ಧತೆಗಳು ನಡೆಯುತ್ತಿವೆ. ಚಿನ್ನದ ಅಂಬಾರಿ ಹೊರುವ ಆನೆಗೆ ಬೆನ್ನ ಮೇಲೆ ಹೊದಿಸಲಾಗುವ ನಮ್ದಾವನ್ನು ತಯಾರಿಸಲಾಗುತ್ತಿದೆ. ದಸರಾ ಹಬ್ಬದ ಪ್ರಮುಖ ಕೇಂದ್ರ ಬಿಂದುವಾದ ಜಂಬೂಸವಾರಿಗೆ ಗಜಪಡೆಗಳನ್ನು ಸಿದ್ಧಪಡಿಸಲಾಗುತ್ತಿದೆ. ಜಂಬೂಸವಾರಿಯ ಪ್ರಮುಖ ಆಕರ್ಷಣೆ ಎಂದರೆ ಚಿನ್ನದ ಅಂಬಾರಿ ಮತ್ತು ಅಂಬಾರಿ ಹೊರುವ ಆನೆ. ಅಂಬಾರಿ ಹೊರುವ ಆನೆಯು 750 ಕೆಜಿ ಚಿನ್ನದ ಅಂಬಾರಿಯನ್ನು ಹೊತ್ತು ಅರಮನೆಯಿಂದ ಬನ್ನಿ ಮಂಟಪದವರೆಗೆ ಸುಮಾರು 5 ಕಿಲೋಮೀಟರ್ […]
ಹೈಕೋರ್ಟ್ ಸೂಚನೆ : ಮೈಸೂರು ವಿವಿ ಕುಲಪತಿಯಾಗಿ ಲೋಕ್ನಾಥ್ ಮುಂದುವರಿಕೆ

ಬೆಂಗಳೂರು: ಮೈಸೂರು ವಿಶ್ವವಿದ್ಯಾಲಯ ಕುಲಪತಿ ಆಗಿರುವ ಪ್ರೊ.ಎನ್ ಕೆ ಲೋಕನಾಥ್ ಅವರಿಗೆ ತಾತ್ಕಾಲಿಕ ರಿಲೀಫ್ ನೀಡಿರುವ ಹೈಕೋರ್ಟ್ ಮುಂದಿನ ಆದೇಶದವರೆಗೆ ಕುಲಪತಿ ಹುದ್ದೆಯಲ್ಲಿ ಮುಂದುವರಿಯಲು ಅವಕಾಶ ಮಾಡಿಕೊಟ್ಟಿದೆ. ವಿಶ್ವವಿದ್ಯಾಲಯದ ಕುಲಪತಿ ಹುದ್ದೆಯು ಖಾಲಿಯಾಗುವಂತಿಲ್ಲ. ಈ ಹಿನ್ನೆಲೆ ಹುದ್ದೆಯಲ್ಲಿ ಮುದುವರೆಯಬೇಕು ಎಂದು ಸೂಚನೆ ನೀಡಿದ ನ್ಯಾಯಪೀಠ, ಈ ಸಂಬಂಧ ಯಾವುದೇ ಆಡಳಿತಾತ್ಮಕ ನಿರ್ಧಾರಗಳನ್ನು ಕೈಗೊಳ್ಳುವಂತಿಲ್ಲ ಎಂದು ತಿಳಿಸಿದೆ. ಮೈಸೂರು ವಿಶ್ವವಿದ್ಯಾಲಯ ಕುಲಪತಿ ಪ್ರೊ ಎನ್ ಕೆ ಲೋಕನಾಥ್ ಅವರಿಗೆ ತಾತ್ಕಾಲಿಕ ನಿರಾಳತೆ ನೀಡಿದ ಹೈಕೋರ್ಟ್, ವಿಶ್ವವಿದ್ಯಾಲಯದ ಕುಲಪತಿ ಹುದ್ದೆಯು […]
ನಮಗೇ ಕುಡಿಯಲಿಕ್ಕೆ ನೀರಿಲ್ಲ, ತಮಿಳುನಾಡಿಗೆ ನೀರು ಬಿಡಲು ಹೇಗೆ ಸಾಧ್ಯ: ನಟಿ ಪೂಜಾ ಗಾಂಧಿ

ಬೆಂಗಳೂರು: ಕಾವೇರಿ ಜಲ ವಿವಾದವು ಮತ್ತೆ ಮುನ್ನೆಲೆಗೆ ಬಂದಿದ್ದು, ತಮಿಳುನಾಡಿಗೆ ನೀರು ಬಿಡಬೇಕೆನ್ನುವ ನಿರ್ಧಾರದ ವಿರುದ್ದ ಕನ್ನಡ ಚಿತ್ರ ನಟ ನಟಿಯರು ಧ್ವನಿ ಎತ್ತಿದ್ದಾರೆ. ನಟ ದರ್ಶನ್ ತೂಗುದೀಪ ಮತ್ತು ಕಿಚ್ಚ ಸುದೀಪ್ ಬಳಿಕ ಪೂಜಾ ಗಾಂಧಿಯೂ ಕರ್ನಾಟಕದ ಪರ ಧ್ವನಿ ಎತ್ತಿದ್ದಾರೆ. ಈ ಬಗ್ಗೆ ವಿಡೀಯೋ ಸಂದೇಶ ನೀಡಿರುವ ಪೂಜಾ, “ಕರ್ನಾಟಕದಲ್ಲಿ ಭೀಕರವಾದ ಬರ ಇದೆ.175 ತಾಲೋಕು ಬರಪೀಡಿತ ಅಂತ ಹೇಳ್ತಿದಾರೆ. ಸೆಂಟ್ರಲ್ ವಾಟರ್ ಕಮಿಷನ್ ನ ಸದಸ್ಯರನ್ನು ಕೆ. ಆರ್. ಎಸ್ ಗೆ ಕರೆಸಬೇಕು. ಅವರು ಮುಳುಗುವಷ್ಟು […]
‘ಕಾವೇರಿ’ದ ಜಲ ಕದನ: ಪ್ರಾಧಿಕಾರದ ನಿರ್ಧಾರಕ್ಕೆ ‘ಸುಪ್ರೀಂ’ ಮನ್ನಣೆ; ಕರ್ನಾಟಕದಲ್ಲಿ ಭುಗಿಲೆದ್ದ ಪ್ರತಿಭಟನೆ

ಬೆಂಗಳೂರು: ತಮಿಳುನಾಡಿಗೆ 5,000 ಕ್ಯೂಸೆಕ್ ನೀರು ಬಿಡುವಂತೆ ರಾಜ್ಯಕ್ಕೆ ನಿರ್ದೇಶಿಸಿದ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (ಸಿಡಬ್ಲ್ಯೂಎಂಎ) ಮತ್ತು ಕಾವೇರಿ ನೀರು ನಿಯಂತ್ರಣ ಸಮಿತಿ (ಸಿಡಬ್ಲ್ಯೂಆರ್‌ಸಿ) ಆದೇಶಗಳನ್ನು ಎತ್ತಿಹಿಡಿಯುವ ಸುಪ್ರೀಂ ಕೋರ್ಟ್ ತೀರ್ಪಿನ ನಂತರ ಕರ್ನಾಟಕದಲ್ಲಿ ಪ್ರತಿಭಟನೆಗಳು ಭುಗಿಲೆದ್ದಿವೆ. ಮೈಸೂರು, ಮಂಡ್ಯ ಮತ್ತು ಬೆಂಗಳೂರಿನಂತಹ ನಗರಗಳಲ್ಲಿ ರೈತ ಸಂಘಟನೆಗಳು ಮತ್ತು ಕನ್ನಡ ಪರ ಸಂಘಟನೆಗಳು ಕರ್ನಾಟಕದ ಕಾವೇರಿ ನದಿ ಜಲಾನಯನ ಜಿಲ್ಲೆಗಳಾದ್ಯಂತ ಪ್ರತಿಭಟನೆಗಳನ್ನು ಆಯೋಜಿಸಿವೆ. ತಮ್ಮ ಅಸಮಾಧಾನವನ್ನು ವ್ಯಕ್ತಪಡಿಸಿರುವ ಸಂಘಟನೆಗಳು ತಮಿಳುನಾಡಿಗೆ ನೀರು ಬಿಡದಂತೆ ರಾಜ್ಯ ಸರ್ಕಾರಕ್ಕೆ […]
ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಡೆಂಗ್ಯೂ ಜ್ವರ : ಬೆಂಗಳೂರಲ್ಲಿ ಜನರಲ್ಲಿ ಆತಂಕ
ಬೆಂಗಳೂರು : ಸಿಲಿಕಾನ್ ಸಿಟಿಯಲ್ಲಿ ದಿನದಿಂದ ದಿನಕ್ಕೆ ಡೆಂಗ್ಯೂ ಪ್ರಕರಣಗಳು ಹೆಚ್ಚುತ್ತಿವೆ.ಬೆಂಗಳೂರು ನಗರದಲ್ಲಿ ಕಳೆದ ಒಂದು ತಿಂಗಳಲ್ಲಿ ಡೆಂಗ್ಯೂ ಜ್ವರ ಪ್ರಕರಣದಲ್ಲಿ ಏರಿಕೆ ಕಂಡುಬಂದಿದೆ.ಆಗಸ್ಟ್ ತಿಂಗಳಿನಲ್ಲಿಯೇ 2,374 ಡೆಂಗ್ಯೂ ಪ್ರಕರಣಗಳು ಪತ್ತೆಯಾಗಿದ್ದವು. ಮುಂದುವರೆದು ಸೆಪ್ಟೆಂಬರ್ ಪ್ರಾರಂಭದಿಂದ 20 ದಿನಗಳಲ್ಲಿಯೇ 2,182 ಪ್ರಕರಣಗಳು ದಾಖಲಾಗಿವೆ. ಪ್ರತಿದಿನ ಸುಮಾರು 100 ಜನರಲ್ಲಿ ಡೆಂಗ್ಯೂ ಕಾಣಿಸಿಕೊಳ್ಳುತ್ತಿರುವುದು ಆತಂಕ ಹೆಚ್ಚಾಗಲು ಕಾರಣವಾಗಿದೆ. ರಾಜ್ಯದಲ್ಲಿ ಒಟ್ಟು 9000 ಕೇಸ್ಗಳು ವರದಿಯಾಗಿವೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ. ಬಿಬಿಎಂಪಿ ವ್ಯಾಪ್ತಿಯಲ್ಲಿ ಹೆಚ್ಚು ಪ್ರಕರಣ : […]