ಸಚಿವ ರಾಮಲಿಂಗ ರೆಡ್ಡಿ : ಜಿಲ್ಲೆಯಲ್ಲಿನ ಲಾರಿ ಮಾಲೀಕರ ಸಮಸ್ಯೆಗಳ ಜೊತೆ ವಿವಿಧ ಬೇಡಿಕೆಗಳ ಮನವಿ

ಉಡುಪಿ: ರಾಜ್ಯ ಸರ್ಕಾರದ ಹೊಸ ನಿಯಮದ ಪ್ರಕಾರ ಮೆಟ್ರಿಕ್ ಟನ್ ಆಧಾರದಲ್ಲಿ ಲೈಫ್ ಟ್ಯಾಕ್ಸ್ ಪಾವತಿ, ಕಡ್ಡಾಯ ಜಿ.ಪಿ.ಎಸ್. ಅಳವಡಿಕೆಗೆ ನಿರ್ಧಾರವನ್ನು ಪುನರ್ ಪರಿಶೀಲನೆ ನಡೆಸುವಂತೆ ಹಾಗೂ ಲಾರಿ ಮಾಲೀಕರ ಸಮಸ್ಯೆ ಹಾಗೂ ಬೇಡಿಕೆಗಳ ಸಾಧಕ ಬಾಧಕಗಳ ಬಗ್ಗೆ ಸಂಘದ ಪದಾಧಿಕಾರಿಗಳ ಸಭೆ ಕರೆದು ಚರ್ಚಿಸುವಂತೆ ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ಯವರಿಗೆ ಶಾಸಕ ಯಶ್ ಪಾಲ್ ಸುವರ್ಣ ಮನವಿ ಸಲ್ಲಿಸಿದರು. ಉಡುಪಿ ಜಿಲ್ಲೆಯ ಆರ್. ಟಿ. ಓ. ಕಚೇರಿಯಲ್ಲಿ ದೈನಂದಿನ ಚಟವಟಿಕೆಗೆ ಸಿಬ್ಬಂದಿ ಕೊರತೆಯಿಂದ ಸಾರ್ವಜನಿಕರು […]
ಇವಿಎಂ : ಸೋರ್ಸ್ ಕೋಡ್ ಆಡಿಟ್ ಕೋರಿದ್ದ ಪಿಐಎಲ್ ವಜಾ

ನವದೆಹಲಿ: ಇವಿಎಂಗಳ ಸೋರ್ಸ್ ಕೋಡ್ ಆಡಿಟ್ ನಡೆಸಬೇಕೆಂದು ಕೋರಿ ಸಲ್ಲಿಸಲಾಗಿದ್ದ ರಿಟ್ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾ ಮಾಡಿದೆ. ವಿದ್ಯುನ್ಮಾನ ಮತದಾನ ಯಂತ್ರಗಳಲ್ಲಿ (ಇವಿಎಂ) ಬಳಸುವ ಸೋರ್ಸ್ ಕೋಡ್ ಅನ್ನು ಆಡಿಟ್ ಮಾಡಬೇಕೆಂದು ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ (ಪಿಐಎಲ್) ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ಶುಕ್ರವಾರ ನಿರಾಕರಿಸಿದೆ. ಇವಿಎಂಗಳ ಸೋರ್ಸ್ ಕೋಡ್ ಬಗ್ಗೆ ಅನುಮಾನಿಸಲು ನ್ಯಾಯಾಲಯದ ಮುಂದೆ ತಾವು ಪ್ರಸ್ತುತಪಡಿಸುತ್ತಿರುವ ಪುರಾವೆಗಳೇನು ಎಂದು ಮುಖ್ಯ ನ್ಯಾಯಮೂರ್ತಿ ಈ ಸಂದರ್ಭದಲ್ಲಿ ಪ್ರಶ್ನಿಸಿದರು. ಇದಕ್ಕೆ ಉತ್ತರಿಸಿದ ಅಹ್ಯಾ, […]
ಅಂಬಾರಿ ಹೊರುವ ಆನೆಗೆ ಸಿದ್ಧವಾಗುತ್ತಿದೆ ನಮ್ದಾ : ಮೈಸೂರು ದಸರಾ -2023.

ಮೈಸೂರು : ಐತಿಹಾಸಿಕ ಮೈಸೂರು ದಸರಾಗೆ ಭರದ ಸಿದ್ಧತೆಗಳು ನಡೆಯುತ್ತಿವೆ.ವಿಶ್ವ ವಿಖ್ಯಾತ ಮೈಸೂರು ದಸರಾಗೆ ಭರದ ಸಿದ್ಧತೆಗಳು ನಡೆಯುತ್ತಿವೆ. ಚಿನ್ನದ ಅಂಬಾರಿ ಹೊರುವ ಆನೆಗೆ ಬೆನ್ನ ಮೇಲೆ ಹೊದಿಸಲಾಗುವ ನಮ್ದಾವನ್ನು ತಯಾರಿಸಲಾಗುತ್ತಿದೆ. ದಸರಾ ಹಬ್ಬದ ಪ್ರಮುಖ ಕೇಂದ್ರ ಬಿಂದುವಾದ ಜಂಬೂಸವಾರಿಗೆ ಗಜಪಡೆಗಳನ್ನು ಸಿದ್ಧಪಡಿಸಲಾಗುತ್ತಿದೆ. ಜಂಬೂಸವಾರಿಯ ಪ್ರಮುಖ ಆಕರ್ಷಣೆ ಎಂದರೆ ಚಿನ್ನದ ಅಂಬಾರಿ ಮತ್ತು ಅಂಬಾರಿ ಹೊರುವ ಆನೆ. ಅಂಬಾರಿ ಹೊರುವ ಆನೆಯು 750 ಕೆಜಿ ಚಿನ್ನದ ಅಂಬಾರಿಯನ್ನು ಹೊತ್ತು ಅರಮನೆಯಿಂದ ಬನ್ನಿ ಮಂಟಪದವರೆಗೆ ಸುಮಾರು 5 ಕಿಲೋಮೀಟರ್ […]
ಹೈಕೋರ್ಟ್ ಸೂಚನೆ : ಮೈಸೂರು ವಿವಿ ಕುಲಪತಿಯಾಗಿ ಲೋಕ್ನಾಥ್ ಮುಂದುವರಿಕೆ

ಬೆಂಗಳೂರು: ಮೈಸೂರು ವಿಶ್ವವಿದ್ಯಾಲಯ ಕುಲಪತಿ ಆಗಿರುವ ಪ್ರೊ.ಎನ್ ಕೆ ಲೋಕನಾಥ್ ಅವರಿಗೆ ತಾತ್ಕಾಲಿಕ ರಿಲೀಫ್ ನೀಡಿರುವ ಹೈಕೋರ್ಟ್ ಮುಂದಿನ ಆದೇಶದವರೆಗೆ ಕುಲಪತಿ ಹುದ್ದೆಯಲ್ಲಿ ಮುಂದುವರಿಯಲು ಅವಕಾಶ ಮಾಡಿಕೊಟ್ಟಿದೆ. ವಿಶ್ವವಿದ್ಯಾಲಯದ ಕುಲಪತಿ ಹುದ್ದೆಯು ಖಾಲಿಯಾಗುವಂತಿಲ್ಲ. ಈ ಹಿನ್ನೆಲೆ ಹುದ್ದೆಯಲ್ಲಿ ಮುದುವರೆಯಬೇಕು ಎಂದು ಸೂಚನೆ ನೀಡಿದ ನ್ಯಾಯಪೀಠ, ಈ ಸಂಬಂಧ ಯಾವುದೇ ಆಡಳಿತಾತ್ಮಕ ನಿರ್ಧಾರಗಳನ್ನು ಕೈಗೊಳ್ಳುವಂತಿಲ್ಲ ಎಂದು ತಿಳಿಸಿದೆ. ಮೈಸೂರು ವಿಶ್ವವಿದ್ಯಾಲಯ ಕುಲಪತಿ ಪ್ರೊ ಎನ್ ಕೆ ಲೋಕನಾಥ್ ಅವರಿಗೆ ತಾತ್ಕಾಲಿಕ ನಿರಾಳತೆ ನೀಡಿದ ಹೈಕೋರ್ಟ್, ವಿಶ್ವವಿದ್ಯಾಲಯದ ಕುಲಪತಿ ಹುದ್ದೆಯು […]
ನಮಗೇ ಕುಡಿಯಲಿಕ್ಕೆ ನೀರಿಲ್ಲ, ತಮಿಳುನಾಡಿಗೆ ನೀರು ಬಿಡಲು ಹೇಗೆ ಸಾಧ್ಯ: ನಟಿ ಪೂಜಾ ಗಾಂಧಿ

ಬೆಂಗಳೂರು: ಕಾವೇರಿ ಜಲ ವಿವಾದವು ಮತ್ತೆ ಮುನ್ನೆಲೆಗೆ ಬಂದಿದ್ದು, ತಮಿಳುನಾಡಿಗೆ ನೀರು ಬಿಡಬೇಕೆನ್ನುವ ನಿರ್ಧಾರದ ವಿರುದ್ದ ಕನ್ನಡ ಚಿತ್ರ ನಟ ನಟಿಯರು ಧ್ವನಿ ಎತ್ತಿದ್ದಾರೆ. ನಟ ದರ್ಶನ್ ತೂಗುದೀಪ ಮತ್ತು ಕಿಚ್ಚ ಸುದೀಪ್ ಬಳಿಕ ಪೂಜಾ ಗಾಂಧಿಯೂ ಕರ್ನಾಟಕದ ಪರ ಧ್ವನಿ ಎತ್ತಿದ್ದಾರೆ. ಈ ಬಗ್ಗೆ ವಿಡೀಯೋ ಸಂದೇಶ ನೀಡಿರುವ ಪೂಜಾ, “ಕರ್ನಾಟಕದಲ್ಲಿ ಭೀಕರವಾದ ಬರ ಇದೆ.175 ತಾಲೋಕು ಬರಪೀಡಿತ ಅಂತ ಹೇಳ್ತಿದಾರೆ. ಸೆಂಟ್ರಲ್ ವಾಟರ್ ಕಮಿಷನ್ ನ ಸದಸ್ಯರನ್ನು ಕೆ. ಆರ್. ಎಸ್ ಗೆ ಕರೆಸಬೇಕು. ಅವರು ಮುಳುಗುವಷ್ಟು […]