ಸರ್ಕಾರದಿಂದ 132 ಸಹಾಯಕ ಅಭಿಯೋಜಕರಿಗೆ ನೇಮಕಾತಿ ಆದೇಶ ಹೊರಡಿಸಿರುವುದಾಗಿ ಹೈಕೋರ್ಟ್ಗೆ ಮಾಹಿತಿ

ಬೆಂಗಳೂರು : ರಾಜ್ಯಾದ್ಯಂತ ಖಾಲಿ ಇರುವ ಸರ್ಕಾರಿ ಅಭಿಯೋಜಕರ ನೇಮಕಾತಿಗೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ಸ್ವಯಂಪ್ರೇರಿತವಾಗಿ ದಾಖಲಿಸಿಕೊಂಡಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಾಲಚಂದ್ರ ವರಾಳೆ ಮತ್ತು ನ್ಯಾಯಮೂರ್ತಿ ಕೃಷ್ಣ ಎಸ್ ದೀಕ್ಷಿತ್ ಅವರ ನೇತೃತ್ವದ ವಿಭಾಗೀಯ ಪೀಠಕ್ಕೆ ಸರ್ಕಾರಿ ವಕೀಲರು ಮಾಹಿತಿ ನೀಡಿದರು. ಅಲ್ಲದೇ, 49 ಸಹಾಯಕ ಸರ್ಕಾರಿ ಅಭಿಯೋಜಕರಿಗೆ ಹಿರಿಯ ಸರ್ಕಾರಿ ಅಭಿಯೋಜಕ ಹುದ್ದೆಗೆ ಬಡ್ತಿ ನೀಡಿರುವುದಾಗಿ ಸರ್ಕಾರ ವಿವರಣೆ ನೀಡಿದೆ. ಜೊತೆಗೆ ರಾಜ್ಯ ಸರ್ಕಾರವು 49 ಮಂದಿ ಸಹಾಯಕ […]
ಗೌರಿ ಗಣೇಶ ಹಬ್ಬದ ಪ್ರಯುಕ್ತ ಗಜಪಡೆಗೆ ಮೈಸೂರು ಅರಮನೆ ಆವರಣದಲ್ಲಿ ವಿಶೇಷ ಪೂಜೆ

ಮೈಸೂರು: ವಿಶ್ವ ವಿಖ್ಯಾತ ನಾಡಹಬ್ಬ ದಸರಾ ಮಹೋತ್ಸವದ ಜಂಬೂಸವಾರಿ ಮೆರವಣಿಗೆಯಲ್ಲಿ ಭಾಗವಹಿಸಲು ಅರಮನೆಗೆ ಆಗಮಿಸಿರುವ ಅಭಿಮನ್ಯು ನೇತೃತ್ವದ ಗಜಪಡೆಗಳಾದ ಅರ್ಜುನ, ಭೀಮ, ಮಹೇಂದ್ರ, ಧನಂಜಯ, ಗೋಪಿ, ಕಂಜನ್ ಮತ್ತು ಹೆಣ್ಣಾನೆಗಳಾದ ವಿಜಯ ಹಾಗೂ ವರಲಕ್ಷ್ಮಿ ಆನೆಗಳಿಗೆ ಅರಮನೆಯ ಮುಂಭಾಗದ ಆನೆ ಮಾವುತರ ಶೆಡ್ನ ಹಿಂಭಾಗದಲ್ಲಿ ಮೈಸೂರಿನ ಅರಮನೆ, ಅರಣ್ಯ ಇಲಾಖೆಯ ಸಹಯೋಗದೊಂದಿಗೆ ಸಾಂಪ್ರದಾಯಿಕವಾಗಿ ಪೂಜೆ ಸಲ್ಲಿಸಲಾಯಿತು. ಇಂದು ಗೌರಿ ಗಣೇಶ ಹಬ್ಬದ ಹಿನ್ನೆಲೆಯಲ್ಲಿ ನಾಡಹಬ್ಬ ದಸರಾ ಮಹೋತ್ಸವದಲ್ಲಿ ಭಾಗವಹಿಸಲು ಆಗಮಿಸಿರುವ ಅಭಿಮನ್ಯು ನೇತೃತ್ವದ ದಸರಾ ಗಜಪಡೆಗೆ ಅರಮನೆಯ […]
ಬನ್ನೇರುಘಟ್ಟದಲ್ಲಿ ಮಾರಕ ವೈರಸ್‌ಗೆ 7 ಚಿರತೆ ಮರಿಗಳು ಸಾವು

ಆನೇಕಲ್(ಬೆಂಗಳೂರು ಗ್ರಾಮಾಂತರ): ಫೆಲಿನ್ ಪ್ಯಾನ್ಲೂಕೋಪೇನಿಯಾ ವೈರಸ್ ತಗುಲಿ ಬನ್ನೇರುಘಟ್ಟ ಜೈವಿಕ ಉದ್ಯಾನದ 3ರಿಂದ 10 ತಿಂಗಳ ವಯೋಮಾನದ ಏಳು ಚಿರತೆ ಮರಿಗಳು ಮೃತಪಟ್ಟಿವೆ ಎಂದು ಕಾರ್ಯನಿರ್ವಾಹಕ ಅಧಿಕಾರಿ ಸೂರ್ಯ ಸೇನ್ ತಿಳಿಸಿದ್ದಾರೆ. ಫೆಲಿನ್ ಪ್ಯಾನ್ಲೂಕೋಪೇನಿಯಾ ಎಂಬ ವೈರಸ್ ತಗುಲಿ ಬನ್ನೇರುಘಟ್ಟ ಜೈವಿಕ ಉದ್ಯಾನದ 7 ಚಿರತೆ ಮರಿಗಳು ಮೃತಪಟ್ಟಿವೆ ಎಂದು ಕಾರ್ಯನಿರ್ವಾಹಕ ಅಧಿಕಾರಿ ಸೂರ್ಯ ಸೇನ್ ತಿಳಿಸಿದ್ದಾರೆ. ಆಗಸ್ಟ್ 22ರಂದು ಉದ್ಯಾನದ ಚಿರತೆ ಮರಿಗಳಲ್ಲಿ ಮೊದಲ ಬಾರಿಗೆ ಸೋಂಕು ಕಾಣಿಸಿಕೊಂಡಿತ್ತು. ಇದು ಬೆಕ್ಕುಗಳಲ್ಲಿ ಕಾಣಿಸಿಕೊಳ್ಳುವ ಮಾರಕ ರೋಗವಾಗಿದೆ. […]
ಗಿನ್ನಿಸ್ ದಾಖಲೆ ಬರೆದ ಗರ್ಭಿಣಿ :ಸತತ 26 ಗಂಟೆಗಳ ಕಾಲ ಸ್ಯಾಕ್ಸೋಫೋನ್ ನುಡಿಸಿ ದಾಖಲೆ

ಹೊಸಕೋಟೆ (ಬೆಂಗಳೂರು): 7 ತಿಂಗಳ ಗರ್ಭಿಣಿ ಸತತ 26 ಗಂಟೆ ಸ್ಯಾಕ್ಸೋಫೋನ್ ನುಡಿಸಿ ಗಿನ್ನಿಸ್ ವರ್ಲ್ಡ್ ರೆಕಾರ್ಡ್ ಮಾಡಿ ವಿಶೇಷ ಮನ್ನಣೆ ತನ್ನದಾಗಿಸಿಕೊಂಡಿದ್ದಾರೆ.ಗರ್ಭಿಣಿಯೊಬ್ಬರು ಸತತ 26 ಗಂಟೆಗಳ ಕಾಲ ಸ್ಯಾಕ್ಸೋಫೋನ್ ನುಡಿಸಿ ಗಿನ್ನಿಸ್ ದಾಖಲೆ ನಿರ್ಮಿಸಿದ್ದಾರೆ.ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ಸಮೀಪದ ಆವಲಹಳ್ಳಿ ನಿವಾಸಿ ಸುಬ್ಬಲಕ್ಷ್ಮೀ ಈ ಸಾಧಕಿ. ಕಳೆದ ಪೆಬ್ರವರಿಯಲ್ಲಿ ಇವರು ಆವಲಹಳ್ಳಿಯಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ 26 ಗಂಟೆ 23 ನಿಮಿಷ ಸ್ಯಾಕ್ಸೊಫೋನ್ ನುಡಿಸಿದ್ದಾರೆ. ಇಷ್ಟು ಸಮಯ ನಿರಂತರವಾಗಿ ಸ್ಯಾಕ್ಸೊಪೋನ್ ನುಡಿಸಿದ ಮೊದಲ ಮಹಿಳೆ ಅನ್ನೋ […]
ನ್ಯೂಸ್ ಪೇಪರ್ನಲ್ಲೇ 12 ಅಡಿ ಗಣೇಶನನ್ನು ಪ್ರತಿಷ್ಠಾಪಿಸಿ ಪರಿಸರ ಪ್ರೇಮ ಮೆರೆದ ಸಿದ್ದಗಂಗಾ ಶಾಲೆಯ ವಿದ್ಯಾರ್ಥಿಗಳು

ದಾವಣಗೆರೆ : ಸಿದ್ದಗಂಗಾ ಶಾಲೆಯ ನಿರ್ದೇಶಕ ಡಾ ಜಯಂತ್ ಅವರು ಪರಿಸರ ಸ್ನೇಹಿ ಗಣಪತಿ ನಿರ್ಮಾಣದ ಬಗ್ಗೆ ಮಾಹಿತಿ ನೀಡಿದ್ದಾರೆ. ದಾವಣಗೆರೆ ನಗರದ ಸಿದ್ದಗಂಗಾ ಶಾಲೆಯ ಮಕ್ಕಳು ನ್ಯೂಸ್ ಪೇಪರ್ನಲ್ಲಿ ಪರಿಸರ ಸ್ನೇಹಿ ಗಣಪತಿ ಮೂರ್ತಿಯನ್ನು ಪ್ರತಿಷ್ಠಾಪಿಸಿದ್ದಾರೆ. ಪಿಒಪಿ ಗಣೇಶನ ಮೂರ್ತಿಯ ಹಾವಳಿಯಲ್ಲಿ ಪರಿಸರ ಸ್ನೇಹಿ ಗಣೇಶಗಳ ನಿರ್ಮಾಣ ಕಡಿಮೆಯಾಗುತ್ತಿದೆ. ಆದರೆ ಪ್ರಧಾನಿ ನರೇಂದ್ರ ಮೋದಿಯವರು ಪರಿಸರ ಸ್ನೇಹಿ ಗಣೇಶಗಳಿಗೆ ಒತ್ತು ನೀಡಿ ಎಂದು ಕರೆ ನೀಡಿದ ಬೆನ್ನಲ್ಲೇ ನಗರದ ಸಿದ್ದಗಂಗಾ ಶಾಲೆಯ ಮಕ್ಕಳು ಅನುಪಯುಕ್ತ ನ್ಯೂಸ್ […]