ಬೆಂಗಳೂರಿನಲ್ಲಿ ಗಣೇಶ ಮೂರ್ತಿ ಮೆರವಣಿಗೆ ನಡೆಯುವ ಹಿನ್ನೆಲೆ ನಗರದ ಈ ದಿನಗಳಲ್ಲಿ ಮದ್ಯ ಮಾರಾಟ ಬಂದ್

ಬೆಂಗಳೂರು : ಗಣೇಶ ನಿಮಜ್ಜನ ವೇಳೆ ಮೆರವಣಿಗೆ ನಡೆಯುವ ಹಿನ್ನೆಲೆ ಕಾನೂನು ಸುವ್ಯವಸ್ಥೆ ಕಾಪಾಡುವ ಸಲುವಾಗಿ ನಗರದಲ್ಲಿ ಮದ್ಯದಂಗಡಿಗಳನ್ನು ಮುಚ್ಚುವಂತೆ ನಗರ ಪೊಲೀಸ್ ಆಯುಕ್ತ ಬಿ ದಯಾನಂದ ಆದೇಶ ಹೊರಡಿಸಿದ್ದಾರೆ. ಬೆಂಗಳೂರು ನಗರದಲ್ಲಿ ಗಣೇಶ ನಿಮಜ್ಜನ ಇರುವುದರಿಂದ ಕಾನೂನು ಸುವ್ಯವಸ್ಥೆ ಕಾಪಾಡುವ ಸಲುವಾಗಿ ಮಧ್ಯದಂಗಡಿ ಮುಚ್ಚುವಂತೆ ನಗರ ಪೊಲೀಸ್ ಆಯುಕ್ತ ಬಿ ದಯಾನಂದ ಅವರು ಆದೇಶಿಸಿದ್ದಾರೆ. ನಗರದ ವಿವಿಧ ಭಾಗಗಳಲ್ಲಿ ನಿಗದಿತ ದಿನಗಳಲ್ಲಿ ಮದ್ಯದಂಗಡಿ ತೆರೆಯುವುದಿಲ್ಲ. ಅಲ್ಲದೆ ಕೆಲ ಪ್ರದೇಶಗಳಲ್ಲಿ ನಿಷೇಧಾಜ್ಞೆ ವಿಧಿಸಲಾಗಿದೆ. ಬೆಂಗಳೂರಿನ ಕೇಂದ್ರ, ಉತ್ತರ, […]
ವಿಜಯನಗರದಲ್ಲಿ ಶಂಕಿತ ಡೆಂಗ್ಯೂಗೆ ಶಾಲಾ ಬಾಲಕಿ ಬಲಿ

ವಿಜಯನಗರ : ವಿಜಯನಗರದಲ್ಲಿ 7ನೇ ತರಗತಿ ವಿದ್ಯಾರ್ಥಿನಿಯೋರ್ವಳು ಶಂಕಿತ ಡೆಂಗ್ಯೂ ಜ್ವರಕ್ಕೆ ಬಲಿಯಾಗಿದ್ದಾಳೆ.ಶಾಲಾ ಬಾಲಕಿಯೋರ್ವಳು ಶಂಕಿತ ಡೆಂಗ್ಯೂ ಜ್ವರಕ್ಕೆ ಬಲಿಯಾಗಿರುವ ಘಟನೆ ವಿಜಯನಗರದಲ್ಲಿ ನಡೆದಿದೆ.ಮೃತ ಜಾಹ್ನವಿಯ ತಂದೆ ತಿರುಮಲೇಶ್ ನಗರದ ಖಾಸಗಿ ಆಸ್ಪತ್ರೆಯಲ್ಲಿ ಲ್ಯಾಬ್ ಟೆಕ್ನಿಷಿಯನ್ ಆಗಿ ಕೆಲಸ ಮಾಡುತ್ತಿದ್ದಾರೆ. ನಗರದ ಟಿ.ಬಿ. ಡ್ಯಾಂನ ವಂಕಾಯಿ ಕ್ಯಾಂಪ್‌ನಲ್ಲಿ ಇವರು ವಾಸವಾಗಿದ್ದರು. ಕಳೆದ ಒಂದು ವಾರದಿಂದ ಬಾಲಕಿಗೆ ಜ್ವರ ಕಾಣಿಸಿಕೊಂಡಿದೆ. ವೈರಲ್ ಫೀವರ್ ಎಂದು ಹೊಸಪೇಟೆಯ ಖಾಸಗಿ ಆಸ್ಪತ್ರೆಯಲ್ಲಿ ಬಾಲಕಿಗೆ ಚಿಕಿತ್ಸೆ ನೀಡಿದ್ದಾರೆ. ಬಳಿಕ ಜ್ವರ ಕಡಿಮೆಯಾಗದ ಹಿನ್ನೆಲೆ […]
ಸರ್ಕಾರದಿಂದ 132 ಸಹಾಯಕ ಅಭಿಯೋಜಕರಿಗೆ ನೇಮಕಾತಿ ಆದೇಶ ಹೊರಡಿಸಿರುವುದಾಗಿ ಹೈಕೋರ್ಟ್ಗೆ ಮಾಹಿತಿ

ಬೆಂಗಳೂರು : ರಾಜ್ಯಾದ್ಯಂತ ಖಾಲಿ ಇರುವ ಸರ್ಕಾರಿ ಅಭಿಯೋಜಕರ ನೇಮಕಾತಿಗೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ಸ್ವಯಂಪ್ರೇರಿತವಾಗಿ ದಾಖಲಿಸಿಕೊಂಡಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಾಲಚಂದ್ರ ವರಾಳೆ ಮತ್ತು ನ್ಯಾಯಮೂರ್ತಿ ಕೃಷ್ಣ ಎಸ್ ದೀಕ್ಷಿತ್ ಅವರ ನೇತೃತ್ವದ ವಿಭಾಗೀಯ ಪೀಠಕ್ಕೆ ಸರ್ಕಾರಿ ವಕೀಲರು ಮಾಹಿತಿ ನೀಡಿದರು. ಅಲ್ಲದೇ, 49 ಸಹಾಯಕ ಸರ್ಕಾರಿ ಅಭಿಯೋಜಕರಿಗೆ ಹಿರಿಯ ಸರ್ಕಾರಿ ಅಭಿಯೋಜಕ ಹುದ್ದೆಗೆ ಬಡ್ತಿ ನೀಡಿರುವುದಾಗಿ ಸರ್ಕಾರ ವಿವರಣೆ ನೀಡಿದೆ. ಜೊತೆಗೆ ರಾಜ್ಯ ಸರ್ಕಾರವು 49 ಮಂದಿ ಸಹಾಯಕ […]
ಗೌರಿ ಗಣೇಶ ಹಬ್ಬದ ಪ್ರಯುಕ್ತ ಗಜಪಡೆಗೆ ಮೈಸೂರು ಅರಮನೆ ಆವರಣದಲ್ಲಿ ವಿಶೇಷ ಪೂಜೆ

ಮೈಸೂರು: ವಿಶ್ವ ವಿಖ್ಯಾತ ನಾಡಹಬ್ಬ ದಸರಾ ಮಹೋತ್ಸವದ ಜಂಬೂಸವಾರಿ ಮೆರವಣಿಗೆಯಲ್ಲಿ ಭಾಗವಹಿಸಲು ಅರಮನೆಗೆ ಆಗಮಿಸಿರುವ ಅಭಿಮನ್ಯು ನೇತೃತ್ವದ ಗಜಪಡೆಗಳಾದ ಅರ್ಜುನ, ಭೀಮ, ಮಹೇಂದ್ರ, ಧನಂಜಯ, ಗೋಪಿ, ಕಂಜನ್ ಮತ್ತು ಹೆಣ್ಣಾನೆಗಳಾದ ವಿಜಯ ಹಾಗೂ ವರಲಕ್ಷ್ಮಿ ಆನೆಗಳಿಗೆ ಅರಮನೆಯ ಮುಂಭಾಗದ ಆನೆ ಮಾವುತರ ಶೆಡ್ನ ಹಿಂಭಾಗದಲ್ಲಿ ಮೈಸೂರಿನ ಅರಮನೆ, ಅರಣ್ಯ ಇಲಾಖೆಯ ಸಹಯೋಗದೊಂದಿಗೆ ಸಾಂಪ್ರದಾಯಿಕವಾಗಿ ಪೂಜೆ ಸಲ್ಲಿಸಲಾಯಿತು. ಇಂದು ಗೌರಿ ಗಣೇಶ ಹಬ್ಬದ ಹಿನ್ನೆಲೆಯಲ್ಲಿ ನಾಡಹಬ್ಬ ದಸರಾ ಮಹೋತ್ಸವದಲ್ಲಿ ಭಾಗವಹಿಸಲು ಆಗಮಿಸಿರುವ ಅಭಿಮನ್ಯು ನೇತೃತ್ವದ ದಸರಾ ಗಜಪಡೆಗೆ ಅರಮನೆಯ […]
ಬನ್ನೇರುಘಟ್ಟದಲ್ಲಿ ಮಾರಕ ವೈರಸ್‌ಗೆ 7 ಚಿರತೆ ಮರಿಗಳು ಸಾವು

ಆನೇಕಲ್(ಬೆಂಗಳೂರು ಗ್ರಾಮಾಂತರ): ಫೆಲಿನ್ ಪ್ಯಾನ್ಲೂಕೋಪೇನಿಯಾ ವೈರಸ್ ತಗುಲಿ ಬನ್ನೇರುಘಟ್ಟ ಜೈವಿಕ ಉದ್ಯಾನದ 3ರಿಂದ 10 ತಿಂಗಳ ವಯೋಮಾನದ ಏಳು ಚಿರತೆ ಮರಿಗಳು ಮೃತಪಟ್ಟಿವೆ ಎಂದು ಕಾರ್ಯನಿರ್ವಾಹಕ ಅಧಿಕಾರಿ ಸೂರ್ಯ ಸೇನ್ ತಿಳಿಸಿದ್ದಾರೆ. ಫೆಲಿನ್ ಪ್ಯಾನ್ಲೂಕೋಪೇನಿಯಾ ಎಂಬ ವೈರಸ್ ತಗುಲಿ ಬನ್ನೇರುಘಟ್ಟ ಜೈವಿಕ ಉದ್ಯಾನದ 7 ಚಿರತೆ ಮರಿಗಳು ಮೃತಪಟ್ಟಿವೆ ಎಂದು ಕಾರ್ಯನಿರ್ವಾಹಕ ಅಧಿಕಾರಿ ಸೂರ್ಯ ಸೇನ್ ತಿಳಿಸಿದ್ದಾರೆ. ಆಗಸ್ಟ್ 22ರಂದು ಉದ್ಯಾನದ ಚಿರತೆ ಮರಿಗಳಲ್ಲಿ ಮೊದಲ ಬಾರಿಗೆ ಸೋಂಕು ಕಾಣಿಸಿಕೊಂಡಿತ್ತು. ಇದು ಬೆಕ್ಕುಗಳಲ್ಲಿ ಕಾಣಿಸಿಕೊಳ್ಳುವ ಮಾರಕ ರೋಗವಾಗಿದೆ. […]