ನಾಳೆ ಶ್ರೀಕೃಷ್ಣ ಜನ್ಮಾಷ್ಟಮಿ ಹಿನ್ನೆಲೆ ಉಡುಪಿ, ಮಂಗಳೂರಿನಲ್ಲಿ ಭರದಿಂದ ಸಾಗಿದ ಹಬ್ಬದ ತಯಾರಿ

ಮಂಗಳೂರು (ದಕ್ಷಿಣ ಕನ್ನಡ) :ಶ್ರೀಕೃಷ್ಣ ಜನ್ಮಾಷ್ಟಮಿ ಹಬ್ಬದ ತಯಾರಿ ನಾಳೆ ನಾಡಿನೆಲ್ಲೆಡೆ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮಾಚರಣೆಗೆ ಸಿದ್ದತೆ ನಡೆಯುತ್ತಿದೆ.ಅಷ್ಟಮಿ ಸಂಭ್ರಮಾಚರಣೆಗೆ ಉಡುಪಿಯಲ್ಲಿ ಶ್ರೀಕೃಷ್ಣ ಮಠದಲ್ಲಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಿದ್ದತೆ ನಡೆದಿವೆ. ಈಗಾಗಲೇ ದಕ್ಷಿಣ ಕನ್ನಡದಲ್ಲಿ ಅಷ್ಟಮಿಗೆ ಮೂಡೆ/ಕೊಟ್ಟಿಗೆ/ ಗುಂಡ ತಿಂಡಿಗೆ ಎಲೆ ಕಟ್ಟುವುದು, ದೇವರ ಅಲಂಕಾರ ಮಾಡುವುದಕ್ಕೆ ಸಿದ್ಧತೆ ನಡೆಯುತ್ತಿದೆ. ನಗರದ ಕಾರ್ ಸ್ಟ್ರೀಟ್ ನಲ್ಲಿ ಮಹಿಳೆಯರು ಮೂಡೆ, ಕೊಟ್ಟಿಗೆ, ಗುಂಡ ಎಲೆ ಕಟ್ಟಿ ಮಾರಿದರೆ, ಘಟ್ಟದ ಮೇಲಿನಿಂದ ಬಂದ ವ್ಯಾಪಾರಿಗಳು ಹೂವಿನ ಮಾರಾಟದಲ್ಲಿ […]
ಡಬ್ಬಲ್ ಡೆಕ್ಕರ್ ಬಸ್ ಜಮಾನ : ಮತ್ತೆ ಬೆಂಗಳೂರಿನಲ್ಲಿ ಆರಂಭ

ಬೆಂಗಳೂರು: ರಾಜ್ಯ ರಾಜಧಾನಿಯಲ್ಲಿ ಡಬ್ಬಲ್ ಡೆಕ್ಕರ್ ಬಸ್ಗಳ ಜಮಾನ ಮತ್ತೆ ಶುರುವಾಗಲಿದೆ. ಪ್ರಾಯೋಗಿಕವಾಗಿ ಐದು ಮಾರ್ಗದಲ್ಲಿ ಡಬ್ಬಲ್ ಡೆಕ್ಕರ್ ಬಸ್ಗಳು ಸಂಚರಿಸಲಿವೆ.ಮುಂದಿನ ದಿನಗಳಲ್ಲಿ ಬೇಡಿಕೆಗೆ ಅನುಸಾರವಾಗಿ ಬಸ್ ಸಂಖ್ಯೆ ಹೆಚ್ಚಿಸಲಾಗುತ್ತದೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ.ಬೆಂಗಳೂರಿನಲ್ಲಿ ಸದ್ಯದಲ್ಲೇ ಡಬ್ಬಲ್ ಡೆಕ್ಕರ್ ಬಸ್ಗಳ ಸಂಚಾರ ಆರಂಭ ಆಗಲಿದೆ. ಕಲಾಸಿಪಾಳ್ಯ ಟಿಟಿಎಂಸಿಯಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಡಬ್ಬಲ್ ಡೆಕ್ಕರ್ ಬಸ್ಗಳಿಗೆ ಟೆಂಡರ್ ಕರೆಯಲಾಗಿದೆ. ಒಂದು ವಾರದಲ್ಲಿ ಟೆಂಡರ್ ಪೂರ್ಣವಾಗಲಿದೆ. ಮೊದಲ ಹಂತವಾಗಿ 5 ಡಬ್ಬಲ್ ಡೆಕ್ಕರ್ ಬಸ್ಗಳನ್ನು […]
ವಿಧಾನಸೌಧದಲ್ಲಿ ಅದ್ದೂರಿ ಕಾರ್ಯಕ್ರಮ, ಪ್ರಶಸ್ತಿ ಪ್ರದಾನ ಸಮಾರಂಭ ; ನಾಳೆ ಶಿಕ್ಷಕರ ದಿನಾಚರಣೆ

ಬೆಂಗಳೂರು: ಭಾರತ ರತ್ನ ಡಾ.ಸರ್ವೆಪಲ್ಲಿ ರಾಧಾಕೃಷ್ಣನ್ ಜನ್ಮದಿನಾಚರಣೆ ನಿಮಿತ್ತ ನಾಳೆ ವಿಧಾನಸೌಧದಲ್ಲಿ ರಾಜ್ಯಮಟ್ಟದ ಶಿಕ್ಷಕರ ದಿನಾಚರಣೆ ಹಾಗೂ ರಾಜ್ಯ ಪ್ರಶಸ್ತಿ ಪುರಸ್ಕೃತರಿಗೆ, ನ್ಯಾಕ್ ಪುರಸ್ಕೃತ ಕಾಲೇಜುಗಳಿಗೆ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಆಯೋಜನೆ ಮಾಡಲಾಗಿದೆ.ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ನಲ್ಲಿ ನಾಳೆ ಶಿಕ್ಷಕರ ದಿನಾಚರಣೆ ಮತ್ತು ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಡೆಯಲಿದೆ. ಆರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಡಾ.ಸರ್ವೆಪಲ್ಲಿ ರಾಧಾಕೃಷ್ಣನ್ ಹಾಗೂ ಮಾತೆ ಸಾವಿತ್ರಿಬಾಯಿ ಫುಲೆ ಅವರ ಭಾವಚಿತ್ರಗಳಿಗೆ ಪುಷ್ಪಾರ್ಚನೆ ಮಾಡಲಾಗುತ್ತದೆ. ನಂತರ ಪ್ರಾಥಮಿಕ ಹಾಗೂ ಪ್ರೌಢ […]
ನಿಫ್ಟಿ 94, ಬಿಎಸ್‌ಇ ಸೆನ್ಸೆಕ್ಸ್ 241 ಅಂಕ ಏರಿಕೆ

ಮುಂಬೈ : ಜಾಗತಿಕ ಮಾರುಕಟ್ಟೆಗಳಲ್ಲಿನ ದೃಢ ಪ್ರವೃತ್ತಿಯ ಮಧ್ಯೆ ದೇಶೀಯ ಸ್ಥೂಲ ಆರ್ಥಿಕ ದತ್ತಾಂಶಗಳು ಸಕಾರಾತ್ಮಕವಾಗಿರುವ ಹಿನ್ನೆಲೆಯಲ್ಲಿ ಬೆಂಚ್ ಮಾರ್ಕ್ ಇಕ್ವಿಟಿ ಸೂಚ್ಯಂಕಗಳಾದ ಸೆನ್ಸೆಕ್ಸ್ ಮತ್ತು ನಿಫ್ಟಿ ಸೋಮವಾರ ಸತತ ಎರಡನೇ ಅವಧಿಗೆ ಏರಿಕೆ ಕಂಡವು. ಸೋಮವಾರದ ವಹಿವಾಟಿನಲ್ಲಿ ಭಾರತೀಯ ಷೇರು ಮಾರುಕಟ್ಟೆಗಳು ಏರಿಕೆಯಲ್ಲಿ ಕೊನೆಗೊಂಡಿವೆ. ಬಿಎಸ್‌ಇ ಬೆಂಚ್ ಮಾರ್ಕ್ ಸೆನ್ಸೆಕ್ಸ್ 240.98 ಪಾಯಿಂಟ್ ಅಥವಾ ಶೇಕಡಾ 0.37 ರಷ್ಟು ಏರಿಕೆ ಕಂಡು 65,628.14ಕ್ಕೆ ತಲುಪಿದೆ. ದಿನದ ವಹಿವಾಟಿನಲ್ಲಿ ಇದು 296.75 ಪಾಯಿಂಟ್ ಅಥವಾ ಶೇಕಡಾ 0.45 […]
ಆರ್ಯ – ದ್ರಾವಿಡ ರಾಜಕಾರಣದ ಮುಂದುವರಿದ ಭಾಗ ಉದಯನಿಧಿ ಸ್ಟಾಲಿನ್ ಹೇಳಿಕೆ ಖಂಡನೀಯ ಎಂದ ನಳಿನ್‍ಕುಮಾರ್ ಕಟೀಲ್

ಬೆಂಗಳೂರು : ಉದಯನಿಧಿ ಸ್ಟಾಲಿನ್ ಸನಾತನ ಹಿಂದೂ ಧರ್ಮದ ವಿರುದ್ಧ ಅವಹೇಳನ ಮಾಡಿರುವುದು ಖಂಡನೀಯ ಎಂದು ನಳಿನ್‍ಕುಮಾರ್ ಕಟೀಲ್ ಆಕ್ರೋಶ ಹೊರಹಾಕಿದ್ದಾರೆ.ತಮಿಳುನಾಡಿನ ರಾಜಕಾರಣದಲ್ಲಿ ನಿರಂತರವಾಗಿ ಆರ್ಯ – ದ್ರಾವಿಡ ಎಂಬ ಸಮಸ್ಯೆಯನ್ನು ಹುಟ್ಟು ಹಾಕಿ ಅದರ ಮೂಲಕ ರಾಜಕಾರಣ ಮಾಡಲಾಗುತ್ತಿದೆ. ಅದರ ಮುಂದುವರಿದ ಭಾಗವೇ ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್ ಸನಾತನ ಹಿಂದೂ ಧರ್ಮದ ವಿರುದ್ಧ ನೀಡಿದ ಹೇಳಿಕೆಯಾಗಿದ್ದು, ಖಂಡಿಸುವುದಾಗಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‍ಕುಮಾರ್ ಕಟೀಲ್ ತಿಳಿಸಿದ್ದಾರೆ. ಭಾರತದ ಆತ್ಮ ಹಿಂದುತ್ವ. ಈ ದೇಶದ ಬಹುಸಂಖ್ಯಾತ ಜನರು […]