SIR: ರಾಜ್ಯದ 43.80 ಲಕ್ಷ ಮತದಾರರ ಮನೆಗೆ ಬರಲಿದೆ ನೋಟಿಸ್:ಯಾರಿಗೆಲ್ಲಾ ಸಿಗಲಿದೆ ನೋಟಿಸ್ ?

ಬೆಂಗಳೂರು: ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆ ಚುರುಕುಗೊಂಡಿದ್ದು, ಮ್ಯಾಪಿಂಗ್ ಆಗದ ಹಾಗೂ ಮಾಹಿತಿಯಲ್ಲಿ ದೋಷವಿರುವ 43.80 ಲಕ್ಷ ಮತದಾರರನ್ನು ಚುನಾವಣಾ ಆಯೋಗ ಗುರುತಿಸಿದೆ. ಈ ಮತದಾರರಿಗೆ ಶೀಘ್ರದಲ್ಲೇ ನೋಟಿಸ್ ಜಾರಿಯಾಗಲಿದ್ದು, ದಾಖಲೆಗಳ ಪರಿಶೀಲನೆ ಬಳಿಕವೇ ಅಂತಿಮ ನಿರ್ಧಾರ ಕೈಗೊಳ್ಳಲಾಗುತ್ತದೆ. ಕರಡು ಮತದಾರರ ಪಟ್ಟಿ ಆಗಸ್ಟ್ 24ರಂದು ಪ್ರಕಟವಾಗಲಿದ್ದು, ಅದೇ ದಿನದಿಂದ ಅಕ್ಟೋಬರ್ 22ರವರೆಗೆ ನೋಟಿಸ್ ಜಾರಿ, ದಾಖಲೆ ಪರಿಶೀಲನೆ ಹಾಗೂ ತಕರಾರು ವಿಲೇವಾರಿ ಪ್ರಕ್ರಿಯೆ ನಡೆಯಲಿದೆ. ನೋಟಿಸ್ ಬಂದ ತಕ್ಷಣವೇ ಮತದಾರರ […]

SBI ಗ್ರಾಹಕರೇ ಗಮನಿಸಿ, ಅ.1 ರಿಂದ ಹೊಸ ನಿಯಮ: ತಿಂಗಳಿಗೆ 4 ಬಾರಿ ಮಾತ್ರ ATM ನಗದು ವಿತ್‌ಡ್ರಾ ಉಚಿತ, 5ನೇ ವಿತ್‌ಡ್ರಾಗೆ ಹೆಚ್ಚುವರಿ ಶುಲ್ಕ!

ನವದೆಹಲಿ: ಭಾರತೀಯ ಸ್ಟೇಟ್ ಬ್ಯಾಂಕ್ (SBI) ತನ್ನ Basic Savings Bank Deposit (BSBD) ಖಾತೆಗಳ ನಗದು ಹಿಂಪಡೆಯುವ ಶುಲ್ಕದಲ್ಲಿ ಪರಿಷ್ಕರಣೆ ಮಾಡಿದೆ. ಹೊಸ ಶುಲ್ಕ ಅಕ್ಟೋಬರ್ 1ರಿಂದ ಜಾರಿಗೆ ಬರಲಿದೆ. ಹೊಸ ನಿಯಮದಂತೆ, BSBD ಖಾತೆದಾರರು ತಿಂಗಳಿಗೆ 4 ಬಾರಿ ATM ಮೂಲಕ ಹಣ ಹಿಂಪಡೆಯುವುದು ಉಚಿತ. ಐದನೇ ವಹಿವಾಟಿನಿಂದ ಪ್ರತಿ ನಗದು ಹಿಂಪಡೆಯುವಿಕೆಗೆ ₹15 + GST ಶುಲ್ಕ ವಿಧಿಸಲಾಗುತ್ತದೆ. ಡಿಜಿಟಲ್ ವಹಿವಾಟು ಉಚಿತ ಈ ಶುಲ್ಕವು ATM ನಗದು ವಿತ್‌ಡ್ರಾ ವಹಿವಾಟುಗಳಿಗೆ ಮಾತ್ರ […]

ನಕಲಿ ಔಷಧಿ ಜಾಲಕ್ಕೆ 5 ರಾಜ್ಯಗಳ ನಂಟು, ತನಿಖೆಗೆ ಐದು ತಂಡ ರಚನೆ

ಬೆಂಗಳೂರು: ರಾಜ್ಯದಲ್ಲಿ ಪತ್ತೆಯಾಗಿರುವ ನಕಲಿ ಔಷಧಿ ಜಾಲದ ತನಿಖೆ ಮತ್ತಷ್ಟು ವಿಸ್ತರಿಸಿದೆ. ಈ ಜಾಲಕ್ಕೆ ಹಿಮಾಚಲ ಪ್ರದೇಶ, ತೆಲಂಗಾಣ, ದೆಹಲಿ, ಚೆನ್ನೈ ಹಾಗೂ ಆಂಧ್ರಪ್ರದೇಶ ಸೇರಿದಂತೆ ಹಲವು ರಾಜ್ಯಗಳ ನಂಟು ಇರುವ ಶಂಕೆ ವ್ಯಕ್ತವಾಗಿದೆ. ಬಿದದಿ ಸಮೀಪದ ಲೈಸೆನ್ಸ್‌ರಹಿತ ಘಟಕದ ಮೇಲೆ ನಡೆದ ದಾಳಿಯಲ್ಲಿ ನಕಲಿ ಔಷಧಗಳು, ಪ್ಯಾಕೇಜಿಂಗ್ ಯಂತ್ರಗಳು, ಖಾಲಿ ವಯಲ್‌ಗಳು ಹಾಗೂ ನಕಲಿ ಲೇಬಲ್‌ಗಳನ್ನು ವಶಪಡಿಸಿಕೊಳ್ಳಲಾಗಿದ್ದು, ವಶಪಡಿಸಿಕೊಂಡ ವಸ್ತುಗಳ ಮೌಲ್ಯ ಸುಮಾರು ₹5 ಕೋಟಿ ಎಂದು ವರದಿಯಾಗಿದೆ. ಜಾಲದ ಅಂತರರಾಜ್ಯ ಸಂಪರ್ಕದ ಹಿನ್ನೆಲೆಯಲ್ಲಿ ಡ್ರಗ್ […]

ಬೆಂಗಳೂರಿನಲ್ಲಿ ನಕಲಿ ಔಷಧ ತಯಾರಿಕಾ ಜಾಲ ಪತ್ತೆ: ದೇಶದ ಹಲವು ರಾಜ್ಯಗಳಿಗೆ ನಂಟು, ದೇಶಾದ್ಯಂತ ಕಟ್ಟೆಚ್ಚರ!

ಬೆಂಗಳೂರು: ಬೆಂಗಳೂರಿನ ಸಮೀಪ ಪತ್ತೆಯಾದ ನಕಲಿ ಔಷಧ ತಯಾರಿಕಾ ಜಾಲದ ನಂಟು ದೇಶದ ಹಲವು ರಾಜ್ಯಗಳಿಗೆ ವಿಸ್ತರಿಸಿರುವ ಶಂಕೆ ವ್ಯಕ್ತವಾಗಿದ್ದು, ಔಷಧ ನಿಯಂತ್ರಣ ಇಲಾಖೆ ತನಿಖೆಯನ್ನು ಮತ್ತಷ್ಟು ಚುರುಕುಗೊಳಿಸಿದೆ. ಕರ್ನಾಟಕದ ಔಷಧ ನಿಯಂತ್ರಣ ಇಲಾಖೆ ನೀಡಿದ ಮಾಹಿತಿಯ ಆಧಾರದ ಮೇಲೆ ದೇಶದ ಎಲ್ಲ ರಾಜ್ಯಗಳ ಔಷಧ ನಿಯಂತ್ರಕರು ಹಾಗೂ ರಾಜ್ಯ ಪರವಾನಗಿ ಪ್ರಾಧಿಕಾರಗಳಿಗೆ ಎಚ್ಚರಿಕೆ ನೀಡಲಾಗಿದೆ. ಆಗಸ್ಟ್ 18ರಂದು ಕರ್ನಾಟಕದ ಡ್ರಗ್ ಎನ್‌ಫೋರ್ಸ್‌ಮೆಂಟ್ ವಿಂಗ್ ಬಿದದಿ ಸಮೀಪದ ನಂ.34 ಕುರುಬರಹಳ್ಳಿ ಗ್ರಾಮದ ಲೈಸೆನ್ಸ್‌ರಹಿತ ಔಷಧ ತಯಾರಿಕಾ ಘಟಕದ […]

ಉಡುಪಿಯಿಂದ ಸಾಗರಕ್ಕೆ ತೆರಳುತ್ತಿದ್ದ ಖಾಸಗಿ ಬಸ್‌ಗೆ ಬೆಂಕಿ; 7 ಪ್ರಯಾಣಿಕರು ಪಾರು

ಉಡುಪಿ: ಬ್ರಹ್ಮಾವರ ಸಮೀಪ ಖಾಸಗಿ ಬಸ್‌ಗೆ ಬೆಂಕಿ ಹೊತ್ತಿಕೊಂಡ (Udupi) ಘಟನೆ ಸಂಭವಿಸಿದ್ದು, ಬಸ್‌ನಲ್ಲಿದ್ದ ಏಳು ಪ್ರಯಾಣಿಕರು ಅದೃಷ್ಟವಶಾತ್ (Bus Fire Accident) ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಉಡುಪಿಯಿಂದ ಸಾಗರದತ್ತ ತೆರಳುತ್ತಿದ್ದ ಖಾಸಗಿ ಬಸ್‌ನಲ್ಲಿ ಏಕಾಏಕಿ ಹೊಗೆ ಕಾಣಿಸಿಕೊಂಡಿದೆ. ಬಳಿಕ ಬಸ್‌ನ ಎಲೆಕ್ಟ್ರಿಕಲ್ ಬಾಕ್ಸ್ (EDC Box) ಭಾಗದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಕೆಲವೇ ಕ್ಷಣಗಳಲ್ಲಿ ಬೆಂಕಿ ವ್ಯಾಪಿಸಲು ಆರಂಭಿಸಿದೆ. ಪರಿಸ್ಥಿತಿಯ ಗಂಭೀರತೆಯನ್ನು ಅರಿತ ಬಸ್ ನಿರ್ವಾಹಕರು ತಕ್ಷಣ ಸಮಯಪ್ರಜ್ಞೆ ಮೆರೆದು ಬಸ್ ನಿಲ್ಲಿಸಿ ಎಲ್ಲಾ ಪ್ರಯಾಣಿಕರನ್ನು ಸುರಕ್ಷಿತವಾಗಿ ಕೆಳಗಿಳಿಸಿದ್ದಾನೆ. ನಿರ್ವಾಹಕನ […]