ರಾಜ್ಯದಲ್ಲಿ ದಕ್ಷಿಣ ಒಳನಾಡಿನ 8 ಜಿಲ್ಲೆಗಳಿಗೆ ನಾಳೆಯಿಂದ ಭಾರಿ ಮಳೆ: ಯೆಲ್ಲೋ ಅಲರ್ಟ್ ಘೋಷಣೆ

ಬೆಂಗಳೂರು: ನಾಳೆಯಿಂದ ಸೆಪ್ಟೆಂಬರ್ 7 ರವರೆಗೆ ರಾಜ್ಯದಲ್ಲಿ ಭಾರಿ ವರ್ಷಧಾರೆ ಆಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಸೆಪ್ಟೆಂಬರ್ 2ರಿಂದ 7ರವರೆಗೆ ರಾಜ್ಯದಲ್ಲಿ ಭಾರಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. 6 ದಿನ ಭಾರಿ ಮಳೆ: ರಾಜ್ಯದಲ್ಲಿ ನೈರುತ್ಯ ಮುಂಗಾರು ಸಕ್ರಿಯಗೊಂಡಿದೆ. ಹೀಗಾಗಿ ಮುಂದಿನ 6 ದಿನಗಳ ಕಾಲ ಜೋರು ಮಳೆ ಬೀಳುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನಲ್ಲಿ ಭಾರಿ ಮಳೆಯಾಗಲಿದ್ದು, ಉತ್ತರ ಒಳನಾಡು ಹಾಗೂ ಮಲೆನಾಡು, ಕರಾವಳಿ ಜಿಲ್ಲೆಗಳಲ್ಲಿ ಲಘು ಮಳೆಯಾಗಲಿದೆ. […]
ಹೈಕೋರ್ಟ್ ಆದೇಶ : ಸಂಸದ ಸ್ಥಾನದಿಂದ ಪ್ರಜ್ವಲ್ ರೇವಣ್ಣ ಅನರ್ಹ

ಬೆಂಗಳೂರು: ಹಾಸನ ಲೋಕಸಭಾ ಕ್ಷೇತ್ರದಿಂದ ಜೆಡಿಎಸ್ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸಿ ಆಯ್ಕೆಯಾಗಿದ್ದ ಪ್ರಜ್ವಲ್ ರೇವಣ್ಣ ಚುನಾವಣಾ ಆಯೋಗಕ್ಕೆ ಸುಳ್ಳು ಮಾಹಿತಿ ನೀಡಿದ ಆರೋಪ ಹಿನ್ನೆಲೆಯಲ್ಲಿ ಅವರ ಸಂಸದ ಸ್ಥಾನವನ್ನು ಅನರ್ಹಗೊಳಿಸಿ ಹೈಕೋರ್ಟ್ ಆದೇಶಿಸಿದೆ.ಚುನಾವಣಾ ಆಯೋಗಕ್ಕೆ ಸುಳ್ಳು ಮಾಹಿತಿ ನೀಡಿದ ಆರೋಪ ಹಿನ್ನೆಲೆಯಲ್ಲಿ ಪ್ರಜ್ವಲ್ ರೇವಣ್ಣ ಅವರನ್ನು ಸಂಸದ ಸ್ಥಾನದಿಂದ ಅನರ್ಹಗೊಳಿಸಿ ಹೈಕೋರ್ಟ್ ಮಹತ್ವದ ಆದೇಶ ಹೊರಡಿಸಿದೆ. 2019ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯಿಂದ ಸ್ಪರ್ಧಿಸಿ ಪರಾಜಿತಗೊಂಡಿದ್ದ ಹಾಲಿ ಜೆಡಿಎಸ್ ಶಾಸಕ ಎ. ಮಂಜು ಹಾಗೂ ವಕೀಲರಾದ ಜಿ ದೇವರಾಜೇಗೌಡ […]
ಕೇಂದ್ರದ ಮಾಜಿ ಸಚಿವ ಮಣಿಶಂಕರ್ ಅಯ್ಯರ್ ದಂಪತಿ ಇಂದು ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ

ಬೆಂಗಳೂರು : ಕಾಂಗ್ರೆಸ್ ಪಕ್ಷದ ಹಿರಿಯ ಧುರೀಣ, ಕೇಂದ್ರದ ಮಾಜಿ ಸಚಿವ ಮಣಿಶಂಕರ್ ಅಯ್ಯರ್ ದಂಪತಿ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಸೌಹಾರ್ದಯುತವಾಗಿ ಭೇಟಿಯಾಗಿ ಮಾತುಕತೆ ನಡೆಸಿದರು.ಸಿಎಂ ಸಿದ್ದರಾಮಯ್ಯ ಅವರನ್ನು ಕೇಂದ್ರದ ಮಾಜಿ ಸಚಿವ ಮಣಿಶಂಕರ್ ಅಯ್ಯರ್ ರಾಜಕೀಯೇತರವಾಗಿ ಇಂದು ಭೇಟಿಯಾದರು. 2022ರಲ್ಲಿ ಬೆಂಗಳೂರಿಗೆ ಬಂದಿದ್ದ ಮಣಿಶಂಕರ್ ಅಯ್ಯರ್ ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಟಿ ನಡೆಸಿ ಸಿದ್ದರಾಮಯ್ಯ ಮೊದಲ ಅವಧಿಯ ಸರ್ಕಾರವನ್ನು ನೇರವಾಗಿ ಟೀಕಿಸಿದ್ದರು. 2013-18 ರವರೆಗೆ ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಿದ್ದರು. ಆಗ ಪಂಚಾಯತ್ ರಾಜ್ ಕಾನೂನುಗಳನ್ನು ಜಾರಿ […]
ಬೆಂಗಳೂರು: ಅಂತಾರಾಷ್ಟ್ರೀಯ ವಿಮಾನಗಳ ಹಾರಾಟವನ್ನುಟರ್ಮಿನಲ್ 2ರಲ್ಲಿ ತಾಂತ್ರಿಕ ಕಾರಣಗಳಿಂದ ಮುಂದೂಡಿಕೆ

ದೇವನಹಳ್ಳಿ : ಅಂತಾರಾಷ್ಟ್ರೀಯ ಕಾರ್ಯಾಚರಣೆ ಸ್ಥಳಾಂತರದ ಅಂತಿಮ ಹಂತದ ಸಿದ್ಧತೆ ಮತ್ತು ಪರೀಕ್ಷಾ ಸಂದರ್ಭದಲ್ಲಿ ಪ್ರಯಾಣಿಕರಿಗೆ ಸೂಕ್ತ ಹಾಗೂ ಸುಗಮ ಪ್ರಯಾಣವನ್ನು ಒದಗಿಸುವ ನಿಟ್ಟಿನಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಆದ್ದರಿಂದ, ಮುಂದಿನ ಸೂಚನೆ ಪ್ರಕಟ ಆಗುವವರೆಗೂ ಅಂತಾರಾಷ್ಟ್ರೀಯ ವಿಮಾನಗಳ ಕಾರ್ಯಾಚರಣೆಯು ಟರ್ಮಿನಲ್ 1 ರಿಂದಲೇ ಮುಂದುವರೆಯುತ್ತದೆ ಎಂದು ತಿಳಿಸಿದ್ದಾರೆ. ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಆಗಸ್ಟ್ 31 ರಂದು ಟರ್ಮಿನಲ್ 2 ಕ್ಕೆ ಸ್ಥಳಾಂತರಗೊಳ್ಳಬೇಕಿದ್ದ ಅಂತಾರಾಷ್ಟ್ರೀಯ ವಿಮಾನಗಳ ಕಾರ್ಯಾಚರಣೆಯನ್ನು ಕಾರಣಾಂತರಗಳಿಂದ ಮುಂದೂಡಿರುವ ಬಗ್ಗೆ ಬಿಐಎಎಲ್ ವಕ್ತಾರರು ಪತ್ರಿಕಾ […]
ಇಂದಿನಿಂದ ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ವಿಮಾನ ಹಾರಾಟ ಆರಂಭ

ಶಿವಮೊಗ್ಗ: ಮಲೆನಾಡಿಗರ ಬಹುದಿನದ ಕನಸು ಇಂದು ನನಸಾಗುತ್ತಿದೆ. ಇಂದಿನಿಂದ ಶಿವಮೊಗ್ಗದಲ್ಲಿ ಲೋಹದ ಹಕ್ಕಿಗಳ ಹಾರಾಟ ಪ್ರಾರಂಭವಾಗಲಿದೆ. ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಇಂದು ಬೆಳಗ್ಗೆ 9:50ಕ್ಕೆ ಇಂಡಿಗೋ 6E 7731 ವಿಮಾನವು ಕುವೆಂಪು ವಿಮಾನ ನಿಲ್ದಾಣಕ್ಕೆ ಸುಮಾರು 11:05ಕ್ಕೆ ಆಗಮಿಸಲಿದೆ. ಈ ಮೂಲಕ ನಾಗರಿಕ ವಿಮಾನ ಹಾರಾಟ ಪ್ರಥಮವಾಗಿ ಪ್ರಾರಂಭವಾಗಲಿದೆ. ಇಂಡಿಗೋ ವಿಮಾನ 6E 77312 ವಿಮಾನವು ಕುವೆಂಪು ವಿಮಾನ ನಿಲ್ದಾಣದಿಂದ 11:25 ಕ್ಕೆ ಹೊರಟು 12:25 ಕ್ಕೆ ಬೆಂಗಳೂರು ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ವಾಪಸ್ […]