ಗ್ರಾಮೀಣ ಬ್ಯಾಂಕ್ ಗಳಿಂದ ಸಾಲ ಪಡೆದ ರೈತರ ಸಮಸ್ಯೆ ಆಲಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಬಳ್ಳಾರಿ ಕರ್ನಾಟಕ ಗ್ರಾಮೀಣ ಬ್ಯಾಂಕಿನಿಂದ ಬೆಳೆಸಾಲ ಪಡೆದು ಸುಸ್ತಿದಾರರಾಗಿರುವ ರೈತರಿಗೆ ಓ.ಟಿ.ಎಸ್. (One Time Settlement) ಯೋಜನೆಯಡಿ ಅನುಕೂಲ ಕಲ್ಪಿಸುವ ಕುರಿತು ಬ್ಯಾಂಕಿನ ಮುಖ್ಯಸ್ಥರು, ನಬಾರ್ಡ್ ಹಾಗೂ ಪ್ರವರ್ತಕ ಬ್ಯಾಂಕ್ ಆದ ಕೆನರಾ ಬ್ಯಾಂಕ್ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಪರಿಹಾರ ಕಂಡುಕೊಳ್ಳಲು ಮುಖ್ಯ ಕಾರ್ಯದರ್ಶಿ ಹಾಗೂ ಹಣಕಾಸು ಇಲಾಖೆ ಅಪರ ಮುಖ್ಯ ಕಾರ್ಯದರ್ಶಿಗಳಿಗೆ ಸೂಚಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು. ಅವರು ಮಂಗಳವಾರ ಗೃಹ ಕಚೇರಿ ಕೃಷ್ಣಾದಲ್ಲಿ ಶಾಸಕ ಬಿ.ಆರ್. ಪಾಟೀಲ ಹಾಗೂ ದರ್ಶನ್ ಪುಟ್ಟಣ್ಣಯ್ಯ […]
‘ಜಾಲಿವುಡ್ ಸ್ಟುಡಿಯೋಸ್ ಆಯಂಡ್ ಅಡ್ವೆಂಚರ್ಸ್’ ಥೀಮ್ ಪಾರ್ಕ್ ಡಿಸಿಎಂ ಡಿಕೆಶಿ, ನಟ ಶಿವ ರಾಜ್ಕುಮಾರ್ ಅವರಿಂದ ಉದ್ಘಾಟನೆ

ಇದೀಗ ಈ ಇನ್ನೋವೇಟಿವ್ ಫಿಲ್ಮ್ ಸಿಟಿ ಸಂಪೂರ್ಣವಾಗಿ ಬದಲಾವಣೆ ಆಗುವ ಮೂಲಕ ಹೊಸ ರೂಪದಲ್ಲಿ ಜಾಲಿವುಡ್ ಆಗಿ ಬದಲಾಗಿದೆ. ಈ ಪಾರ್ಕ್ನಲ್ಲಿ 33 ಮುಖ್ಯ ಆಕರ್ಷಣೆಗಳಿವೆ. ವಾಟರ್ ರೈಡ್ಗಳಲ್ಲದೇ, ಡೈನೋ ಪಾರ್ಕ್, 5 ರೆಸ್ಟೋರೆಂಟ್ಗಳು, 2 ರೆಸ್ಟ್ರೋ ಪಬ್ಗಳು..ಹೀಗೆ ಮನೆ ಮಂದಿಯೆಲ್ಲಾ ಜೊತೆಯಾಗಿ ಒಟ್ಟಿಗೆ ಕಾಲ ಕಳೆಯಲು ಸೂಕ್ತವಾದ ಸುಂದರ ತಾಣವಾಗಿದೆ. ಇನ್ನೋವೇಟಿವ್ ಫಿಲ್ಮ್ ಸಿಟಿ ಅಂದಾಕ್ಷಣ ನೆನಪಾಗುವುದು ವೀಕೆಂಡ್ನಲ್ಲಿ ಫ್ಯಾಮಿಲಿ ಸಮೇತ ಅಡ್ವೆಂಚರ್ಸ್, ಮಕ್ಕಳಿಗೆ ಮನರಂಜನೆ ಸಿಗುವ ಎಂಟರ್ಟೈನ್ಮೆಂಟ್ ತಾಣ.’ಜಾಲಿವುಡ್ ಸ್ಟುಡಿಯೋಸ್ ಆಯಂಡ್ ಅಡ್ವೆಂಚರ್ಸ್’ ಥೀಮ್ […]
ಮುಂದಿನ ಶೈಕ್ಷಣಿಕ ವರ್ಷದಿಂದ ರಾಜ್ಯದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ ಸಂಪೂರ್ಣ ರದ್ದು: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಮುಂದಿನ ಶೈಕ್ಷಣಿಕ ವರ್ಷದಿಂದ ರಾಜ್ಯದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿಯನ್ನು (ಎನ್‌ಇಪಿ) ರದ್ದುಗೊಳಿಸಲಾಗುವುದು ಎಂದು ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಸೋಮವಾರ ಹೇಳಿದ್ದಾರೆ. ಕಾಂಗ್ರೆಸ್ ಸರ್ಕಾರವು ಭಾರತೀಯ ಸಂವಿಧಾನಕ್ಕೆ ಅನುಗುಣವಾಗಿ ಶಿಕ್ಷಣ ನೀತಿಯನ್ನು ಬದಲಾಯಿಸುತ್ತದೆ ಮತ್ತು ರಾಜ್ಯ ಶಿಕ್ಷಣ ನೀತಿಯನ್ನು (ಎಸ್‌ಇಪಿ) ಪರಿಚಯಿಸಲಿದೆ ಎಂದು ಮುಖ್ಯಮಂತ್ರಿ ಹೇಳಿದ್ದಾರೆ. ಹಿಂದಿನ ಬಿಜೆಪಿ ಸರ್ಕಾರವು ಎನ್‌ಇಪಿ ಮೂಲಕ ಶಿಕ್ಷಣದಲ್ಲಿ ಆರ್‌ಎಸ್‌ಎಸ್ ಅಜೆಂಡಾವನ್ನು ಜಾರಿಗೆ ತರಲು ಪ್ರಯತ್ನಿಸುತ್ತಿದೆ ಎಂದು ಸಿದ್ದರಾಮಯ್ಯ ಆರೋಪಿಸಿದ್ದಾರೆ. ಕರ್ನಾಟಕ ಕಾಂಗ್ರೆಸ್ ಸಮಿತಿಯ ಪ್ರಧಾನ ಕಚೇರಿಯಲ್ಲಿ ಪಕ್ಷದ ಸಭೆಯನ್ನುದ್ದೇಶಿಸಿ ಮಾತನಾಡಿದ […]
ಉಡುಪಿಯ ದೊಡ್ಡಣ್ಣಗುಡ್ಡೆ ಶ್ರೀ ಕ್ಷೇತ್ರ ಆದಿಶಕ್ತಿ ನಾಗಾಲಯದಲ್ಲಿ ನಾಗರ ಪಂಚಮಿ ಆಚರಣೆ

ಉಡುಪಿ : ದೊಡ್ಡಣ್ಣ ಗುಡ್ಡೆಯ ಶ್ರೀಚಕ್ರ ಪೀಠ ಸುರ ಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕಾರಣಿಕ ಕ್ಷೇತ್ರದ ನಾಗಾಲಯದಲ್ಲಿ ಏಕಶಿಲೆಯಲ್ಲಿ ಕೆತ್ತಲಾದ ನಾಗರಾಜ ನಾಗರಾಣಿಯರ ಸನ್ನಿಧಾನದಲ್ಲಿ ನಾಗರ ಪಂಚಮಿ ಯು ಕ್ಷೇತ್ರದ ಧರ್ಮದರ್ಶಿ ಶ್ರೀಯುತ ಶ್ರೀ ರಮಾನಂದ ಗುರೂಜಿ ಮಾರ್ಗದರ್ಶನದಲ್ಲಿ ಅರ್ಶಕ ಅನಿಶ್ ಆಚಾರ್ಯರ ಪೌರೋಹಿತ್ಯದಲ್ಲಿ ಸಂಪನ್ನಗೊಂಡಿತು.. ಸರ್ವಾಲಂಕಾರ ಪೂಜೆ ಪ್ರಸನ್ನ ಪೂಜೆ ಸಾಮೂಹಿಕ ಪ್ರಾರ್ಥನೆಯೊಂದಿಗೆ ನೆರವೇರಿ ಮಧ್ಯಾಹ್ನ ಮಹಾ ಅನ್ನಸಂತರ್ಪಣೆಯು ನೆರವೇರಿತು ಎಂದು ಕ್ಷೇತ್ರ ಉಸ್ತುವಾರಿ ಶ್ರೀಮತಿ ಕುಸುಮ ನಾಗರಾಜು ತಿಳಿಸಿರುತ್ತಾರೆ ಪ್ರತ:ಕಾಲದಿಂದಲೇ ಕ್ಷೇತ್ರದಲ್ಲಿ ನಾಗ […]
ಕಾಂಗ್ರೆಸ್ ಹಿರಿಯ ನಾಯಕ ಕಾಗೋಡು ತಿಮ್ಮಪ್ಪಗೆ ಅರಸು ಪ್ರಶಸ್ತಿ ಪ್ರದಾನ ಮಾಡಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ದೇವರಾಜ ಅರಸು ಅವರ ಕಾರ್ಯಕ್ರಮಗಳ ಅನುಕೂಲ ಪಡೆದ ಫಲಾನುಭವಿಗಳು ಮತ್ತು ಅವರ ಮಕ್ಕಳು ಶಾಶ್ವತವಾಗಿ ಸಾಮಾಜಿಕ ನ್ಯಾಯದ ಪರವಾಗಿ ಇರಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಯುವ ಸಮೂಹಕ್ಕೆ ಕರೆ ನೀಡಿದ್ದಾರೆ.ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ನಲ್ಲಿ ಹಮ್ಮಿಕೊಂಡಿದ್ದ ದೇವರಾಜು ಅರಸು ಅವರ 108 ನೇ ಜನ್ಮ ದಿನಾಚರಣೆ ಹಾಗೂ ಡಿ. ದೇವರಾಜ ಅರಸು ಪ್ರಶಸ್ತಿ ಪ್ರದಾನ ಸಮಾರಂಭವನ್ನು ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ, ಕಾಂಗ್ರೆಸ್ ಹಿರಿಯ ನಾಯಕ ಕಾಗೋಡು ತಿಮ್ಮಪ್ಪ ಅವರಿಗೆ ಅರಸು ಪ್ರಶಸ್ತಿ […]