ಶ್ರಾವಣ ಮಾಸದ ಆರಂಭದ ಹಿನ್ನೆಲೆ :ಬಾಳೆಹಣ್ಣಿನ ಬೆಲೆ ಏರಿಕೆ

ಬೆಂಗಳೂರು: ಶ್ರಾವಣ ಮಾಸದಲ್ಲಿ ಹಬ್ಬಗಳ ಸೀಸನ್ ಆರಂಭವಾಗುತ್ತಿದ್ದಂತೆಯೇ ಬಾಳೆ ಬೆಲೆ ಸದ್ದಿಲ್ಲದೇ ಹೆಚ್ಚಾಗಿದೆ. ಬಹುಮುಖ್ಯ ಬೇಡಿಕೆಯುಳ್ಳ ಈ ಹಣ್ಣಿನ ಬೆಲೆ ಶತಕ ದಾಟಿರುವುದು ಗ್ರಾಹಕರಿಗೆ ತಲೆಬಿಸಿ ತರಿಸಿದೆ. ಬೇಡಿಕೆ ಹಾಗೂ ಪೂರೈಕೆ ವ್ಯತ್ಯಾಸದಿಂದ ಈ ವಾರ ನಗರದಲ್ಲಿ ಒಂದು ಕೆ.ಜಿ. ಏಲಕ್ಕಿ ಬಾಳೆಹಣ್ಣಿನ ದರ 100 ರಿಂದ 140 ರೂ ಆಗಿದೆ.ಟೊಮೆಟೊ, ತರಕಾರಿ ಬೆಲೆ ಏರಿಕೆ ಬಿಸಿಯಿಂದ ಹೊರಬಾರದ ಜನರಿಗೆ ಈಗ ಬಾಳೆಹಣ್ಣಿನ ಬೆಲೆ ಹೆಚ್ಚಳ ಮತ್ತೊಂದು ಆಘಾತ ಉಂಟುಮಾಡಿದೆ. ಶ್ರಾವಣ ಮಾಸದ ಹಬ್ಬಗಳ ಋತು ಆರಂಭವಾಗುತ್ತಿದ್ದಂತೆ […]

ಉಡುಪಿಯಲ್ಲಿ ಛಾಯಾ ಸಮ್ಮಾನ ಅಭಿನಂದನಾ ಸಮಾರಂಭ

ತಮ್ಮದೇ ವೃತ್ತಿ ಬಾಂಧವರನ್ನು ವ್ಯಾಪಾರ ವಹಿವಾಟನ್ನು ನಡೆಸುವ ವೃತ್ತಿ ಪರ ಸಂಸ್ಥೆಗಳೊಂದಿಗೆ ಸೇರಿ ಗುರುತಿಸಿ ಗೌರವಿಸುವುದು. ಬೇರೆಯವರ ಮುಖದಲ್ಲಿ ನಗುವಿರಲೆಂದು ಆಶಿಸಿ ಸದಾ ಸ್ಮೈಲ್ ಪ್ಲೀಸ್ ಎಂದೆನ್ನುವವರು ಛಾಯಾಗ್ರಾಹಕರು ಮಾತ್ರ. ಹಾಗಾಗಿ ಅವರು ಎಲ್ಲರಿಗೂ ಆತ್ಮೀಯರು.ಅಭಿನಂದನೀಯ ಎಂದು ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಉಡುಪಿ ವಲಯ ಹಾಗೂ ತನಿಷ್ಕ್ ಗೋಲ್ಡ್ ಮತ್ತು ಡೈಮಂಡ್ ಜ್ಯುವೆಲ್ಲರಿ ಉಡುಪಿಯಲ್ಲಿ ಆಯೋಜಿಸಿದ್ದ ಛಾಯಾ ಸಮ್ಮಾನ್ ಕಾರ್ಯಕ್ರಮವನ್ನು ಕನ್ನಡ ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮಾ ಉದ್ಘಾಟಿಸಿ ಮಾತನಾಡಿದರು‌. ಹಿರಿಯ ಹಾಗೂ ಛಾಯಾ […]

ಗಜಪಯಣಕ್ಕೂ ಮುನ್ನವೇ ಮೈಸೂರು ದಸರಾ ಆಚರಣೆಗೆ 16 ಉಪಸಮಿತಿ ರಚನೆ

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ದಸರಾಗೆ ಇನ್ನೂ ಎರಡು ತಿಂಗಳು ಬಾಕಿ ಇರುವಾಗಲೇ,‌ ಅದ್ಧೂರಿ ಆಚರಣೆಗೆ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹಾದೇವಪ್ಪ ನೇತೃತ್ವದಲ್ಲಿಂದು ನಡೆದ ಸಭೆಯಲ್ಲಿ 16 ಉಪ ಸಮಿತಿಗಳಿಗೆ ಜಿಲ್ಲೆಯ ಅಧಿಕಾರಿಗಳನ್ನು ನೇಮಿಸಲಾಗಿದೆ.ದಸರಾವನ್ನು ಸಾಂಪ್ರದಾಯಿಕ ಹಾಗೂ ಅದ್ಧೂರಿಯಾಗಿ ನಾಡಪರಂಪರೆಯನ್ನು ಬಿಂಬಿಸುವ ಕಾರ್ಯಕ್ರಮವನ್ನಾಗಿ ಮಾಡಲು ಸ್ವತಃ ಮೈಸೂರಿನವರೇ ಆದ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ವಿಧಾನಸೌಧದಲ್ಲಿ ಉನ್ನತ ಮಟ್ಟದ ಸಭೆ ನಡೆಸಲಾಗಿದೆ. ನಂತರ ಮೈಸೂರಿನಲ್ಲಿ ಸಚಿವ ಡಾ.ಎಚ್.ಸಿ ಮಹಾದೇವಪ್ಪ ನೇತೃತ್ವದಲ್ಲಿ ಸಭೆ ನಡೆದಿದ್ದು ಉಪ ಸಮಿತಿಗಳನ್ನು ರಚಿಸಿ, ಅದಕ್ಕೆ ಉಪ ವಿಶೇಷಾಧಿಕಾರಿಗಳು, […]

ಗೀತಾ ಲೇಖನ ಯಜ್ಞ ದೀಕ್ಷೆ ಪಡೆದುಕೊಂಡ ಗಾಯಕಿ ಸಂಗೀತ ಕಟ್ಟಿ

ಉಡುಪಿ: ಬೆಂಗಳೂರಿನ ಶ್ರೀ ರಾಘವೇಂದ್ರ ಸ್ವಾಮಿ ಮಠ ಪೂರ್ಣಪ್ರಜ್ಞ ಲೇಔಟ್ ನಲ್ಲಿ ಪ್ರಸಿದ್ಧ ಗಾಯಕಿ ಸಂಗೀತ ಕಟ್ಟಿ ಇವರು ಪೂಜ್ಯ ಶ್ರೀ ಸುಗುಣೇಂದ್ರ ತೀರ್ಥ ಶ್ರೀ ಪಾದರಿಂದ ಕೋಟಿ ಗೀತಾ ಲೇಖನ ಯಜ್ಞ ದೀಕ್ಷೆ ಪಡೆದುಕೊಂಡರು.

ಶಿವಮೊಗ್ಗ ಲಯನ್ಸ್​ಗೆ ರೋಚಕ ಗೆಲುವು: ಬ್ಯಾಟಿಂಗ್‌ನಲ್ಲಿ ಅಬ್ಬರಿಸಿದ ಶರತ್

ಬೆಂಗಳೂರು: ಟಾಸ್​ ಗೆದ್ದ ಶಿವಮೊಗ್ಗ ಬೌಲಿಂಗ್​ ಆಯ್ಕೆ ಮಾಡಿಕೊಂಡು ಗುಲ್ಬರ್ಗಕ್ಕೆ ಬ್ಯಾಟಿಂಗ್​ ಮಾಡುವಂತೆ ಆಹ್ವಾನಿಸಿತು. ಲಯನ್ಸ್​ ಬೌಲಿಂಗ್​ ದಾಳಿಗೆ ಸಿಲುಕಿದ ಗುಲ್ಬರ್ಗ ಆರಂಭಿಕ ಆಘಾತ ಎದುರಿಸಿತು. ಮೊದಲ ಓವರ್‌ನಲ್ಲಿಯೇ ಎಲ್‌.ಆರ್.ಚೇತನ್ ರನೌಟಿಗೆ ಬಲಿಯಾದರು. ನಂತರ ಬಂದ ಸೌರಭ್ ಮುತ್ತೂರ್ ಕೂಡ ವಿ.ಕೌಶಿಕ್‌ಗೆ ವಿಕೆಟ್ ಒಪ್ಪಿಸಿ ಬಹುಬೇಗ ನಿರ್ಗಮಿಸಿದರು. ಮೂರನೇ ವಿಕೆಟ್‌ಗೆ ಆದರ್ಶ್ ಪ್ರಜ್ವಲ್ (43), ಆರ್.ಸ್ಮರಣ್ (40) ಜೊತೆಯಾಟವಾಡಿ 77 ರನ್ ಕಲೆಹಾಕುವ ಮೂಲಕ 10 ಓವರ್‌ಗಳಲ್ಲಿ ತಂಡದ ಸ್ಕೋರ್​ ಅನ್ನು 86ಕ್ಕೆ ಕೊಂಡೊಯ್ದರು. ಮಹಾರಾಜ ಟ್ರೋಫಿ […]