ಗೀತಾ ಲೇಖನ ಯಜ್ಞ ದೀಕ್ಷೆ ಪಡೆದುಕೊಂಡ ಗಾಯಕಿ ಸಂಗೀತ ಕಟ್ಟಿ

ಉಡುಪಿ: ಬೆಂಗಳೂರಿನ ಶ್ರೀ ರಾಘವೇಂದ್ರ ಸ್ವಾಮಿ ಮಠ ಪೂರ್ಣಪ್ರಜ್ಞ ಲೇಔಟ್ ನಲ್ಲಿ ಪ್ರಸಿದ್ಧ ಗಾಯಕಿ ಸಂಗೀತ ಕಟ್ಟಿ ಇವರು ಪೂಜ್ಯ ಶ್ರೀ ಸುಗುಣೇಂದ್ರ ತೀರ್ಥ ಶ್ರೀ ಪಾದರಿಂದ ಕೋಟಿ ಗೀತಾ ಲೇಖನ ಯಜ್ಞ ದೀಕ್ಷೆ ಪಡೆದುಕೊಂಡರು.

ಶಿವಮೊಗ್ಗ ಲಯನ್ಸ್​ಗೆ ರೋಚಕ ಗೆಲುವು: ಬ್ಯಾಟಿಂಗ್‌ನಲ್ಲಿ ಅಬ್ಬರಿಸಿದ ಶರತ್

ಬೆಂಗಳೂರು: ಟಾಸ್​ ಗೆದ್ದ ಶಿವಮೊಗ್ಗ ಬೌಲಿಂಗ್​ ಆಯ್ಕೆ ಮಾಡಿಕೊಂಡು ಗುಲ್ಬರ್ಗಕ್ಕೆ ಬ್ಯಾಟಿಂಗ್​ ಮಾಡುವಂತೆ ಆಹ್ವಾನಿಸಿತು. ಲಯನ್ಸ್​ ಬೌಲಿಂಗ್​ ದಾಳಿಗೆ ಸಿಲುಕಿದ ಗುಲ್ಬರ್ಗ ಆರಂಭಿಕ ಆಘಾತ ಎದುರಿಸಿತು. ಮೊದಲ ಓವರ್‌ನಲ್ಲಿಯೇ ಎಲ್‌.ಆರ್.ಚೇತನ್ ರನೌಟಿಗೆ ಬಲಿಯಾದರು. ನಂತರ ಬಂದ ಸೌರಭ್ ಮುತ್ತೂರ್ ಕೂಡ ವಿ.ಕೌಶಿಕ್‌ಗೆ ವಿಕೆಟ್ ಒಪ್ಪಿಸಿ ಬಹುಬೇಗ ನಿರ್ಗಮಿಸಿದರು. ಮೂರನೇ ವಿಕೆಟ್‌ಗೆ ಆದರ್ಶ್ ಪ್ರಜ್ವಲ್ (43), ಆರ್.ಸ್ಮರಣ್ (40) ಜೊತೆಯಾಟವಾಡಿ 77 ರನ್ ಕಲೆಹಾಕುವ ಮೂಲಕ 10 ಓವರ್‌ಗಳಲ್ಲಿ ತಂಡದ ಸ್ಕೋರ್​ ಅನ್ನು 86ಕ್ಕೆ ಕೊಂಡೊಯ್ದರು. ಮಹಾರಾಜ ಟ್ರೋಫಿ […]

₹145.50 ಶಾಸಕರ ನಿಧಿಯ ಮೊದಲ ಕಂತು ಕೋಟಿ ಬಿಡುಗಡೆ

ಬೆಂಗಳೂರು: ಕರ್ನಾಟಕ ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯಡಿ 2023-24ನೇ ಸಾಲಿನ ಆಯವ್ಯಯದಲ್ಲಿ ಒದಗಿಸಿರುವ ಅನುದಾನದಡಿ ಮೊದಲನೇ ಕಂತಿನ ಅನುದಾನವನ್ನು ಸರ್ಕಾರ ಇಂದು (ಗುರುವಾರ) ಬಿಡುಗಡೆಗೊಳಿಸಿ ಆದೇಶ ಹೊರಡಿಸಿದೆ. ಪ್ರದೇಶಾಭಿವೃದ್ಧಿ ಯೋಜನೆಯಡಿ 2023-24ನೇ ಸಾಲಿನ ಆಯವ್ಯಯ ಅಂದಾಜಿನಲ್ಲಿ ಮೊದಲನೆಯ ಕಂತಿನ ಅನುದಾನವನ್ನು (224 ವಿಧಾನಸಭಾ ಕ್ಷೇತ್ರಗಳು ಹಾಗೂ 67 ವಿಧಾನ ಪರಿಷತ್ ಸದಸ್ಯರಿಗೆ) ಪ್ರತಿ ಕ್ಷೇತ್ರಕ್ಕೆ ತಲಾ ರೂ.50 ಲಕ್ಷಗಳಂತೆ ಒಟ್ಟು 145.50 ಕೋಟಿ ರೂ. ಬಿಡುಗಡೆ ಮಾಡಲಾಗಿದೆ.ಕರ್ನಾಟಕ ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯಡಿ 2023-24ನೇ ಸಾಲಿನ ಆಯವ್ಯಯ […]

ಬಿಜೆಪಿ ಅಭ್ಯರ್ಥಿಗಳ ಮಧ್ಯಪ್ರದೇಶ, ಛತ್ತೀಸ್‌ಗಢ ವಿಧಾನಸಭೆ ಚುನಾವಣೆಗೆ ಮೊದಲ ಪಟ್ಟಿ ಬಿಡುಗಡೆ

ನವದೆಹಲಿ: ಛತ್ತೀಸ್‌ಗಢದ 21 ಅಭ್ಯರ್ಥಿಗಳ ಪಟ್ಟಿ ಹಾಗೂ ಮಧ್ಯಪ್ರದೇಶದ 39 ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಲಾಗಿದೆ. ಮೊದಲ ಹಂತದಲ್ಲೇ ಉಭಯ ರಾಜ್ಯಗಳಲ್ಲೂ ತಲಾ ಐವರು ಮಹಿಳೆಯರಿಗೆ ಟಿಕೆಟ್​ ನೀಡಲಾಗಿದೆ. ಮಧ್ಯಪ್ರದೇಶ ಹಾಗೂ ಛತ್ತೀಸ್‌ಗಢ ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಣೆಗೂ ಮುನ್ನವೇ ಬಿಜೆಪಿ ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಇಂದು (ಗುರುವಾರ) ಬಿಡುಗಡೆ ಮಾಡಿದೆ.ಮಧ್ಯಪ್ರದೇಶ ಹಾಗೂ ಛತ್ತೀಸ್‌ಗಢದ ಮುಂಬರುವ ವಿಧಾನಸಭೆ ಚುನಾವಣೆಗೆ ಕ್ರಮವಾಗಿ 39 ಹಾಗೂ 21 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಜೆಪಿ ಬಿಡುಗಡೆ ಮಾಡಿದೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ […]

ಗಡಿಜಿಲ್ಲೆ ಚಾಮರಾಜನಗರದಲ್ಲಿ ಬಾಗಿಲು ಮುಚ್ಚುವ ಹಂತ ತಲುಪಿದ 13 ಸರ್ಕಾರಿ ಶಾಲೆಗಳು

ಚಾಮರಾಜನಗರ: 2023-24ನೇ ಶೈಕ್ಷಣಿಕ ಸಾಲಿನಲ್ಲಿ ಮೂಲಸೌಕರ್ಯ ಕೊರತೆ, ಶಿಕ್ಷಕರ ಕೊರತೆ, ಶಿಥಿಲ ಶಾಲಾ ಕಟ್ಟಡಗಳಿಂದ ಆತಂಕಗೊಂಡು ಮಕ್ಕಳ ಶೂನ್ಯ ದಾಖಲಾತಿಯಿಂದಾಗಿ ಜಿಲ್ಲೆಯಲ್ಲಿ ಒಟ್ಟು 13 ಸರ್ಕಾರಿ ಶಾಲೆಗಳಿಗೆ ಬೀಗ ಹಾಕಲಾಗಿದೆ.ಮೂಲಸೌಕರ್ಯದ ಕೊರತೆಯಿಂದಾಗಿ ಗಡಿಜಿಲ್ಲೆ ಚಾಮರಾಜನಗರದಲ್ಲಿ ಹಲವು ಸರ್ಕಾರಿ ಶಾಲೆಗಳು ಬಾಗಿಲು ಮುಚ್ಚುವ ಹಂತ ತಲುಪಿವೆ. ಈ ಪೈಕಿ ಒಂದು ಉರ್ದು ಮಾಧ್ಯಮದ ಶಾಲೆಯೂ ಸೇರಿದೆ.ಅಗತ್ಯ ಮೂಲಸೌಕರ್ಯ, ಶಿಕ್ಷಕರ ಕೊರತೆ, ಶಿಥಿಲ ಶಾಲಾ ಕಟ್ಟಡಗಳೇ ಚಾಮರಾಜನಗರ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ ಉಂಟಾಗಲು ಕಾರಣವಾಗಿವೆ. ಕೋವಿಡ್ ವೇಳೆ […]