ಮಾನಹಾನಿ ಪದ ಬಳಕೆ ಆರೋಪ: ಬಿಜೆಪಿ ಹಿರಿಯ ನಾಯಕ ಸಿ.ಟಿ.ರವಿ ಬಂಧನ.

ಬೆಳಗಾವಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಸದನದಲ್ಲಿ ಗುರುವಾದಂದು ಆಕ್ಷೇಪಾರ್ಹ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಈಗ ಬಿಜೆಪಿ ಹಿರಿಯ ನಾಯಕ ಸಿ.ಟಿ.ರವಿ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಈ ಹಿನ್ನೆಲೆಯಲ್ಲಿ ಈಗ ಸಿಟಿ ರವಿ ಅವರನ್ನು ಬೆಳಗಾವಿಯಲ್ಲಿನ ಸುವರ್ಣ ಸೌಧದಲ್ಲಿ ಪೊಲೀಸರು ಬಂಧಿಸಿದ್ದಾರೆ.ತಮ್ಮ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹಿರೇಬಾಗೇವಾಡಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಿದ್ದರು. ಈ ದೂರಿನ ಆಧಾರದ ಮೇಲೆ ಈಗ ಸಿಟಿ ರವಿ ಅವರನ್ನು ಪೊಲೀಸರು ಬಂಧಿಸಿದ್ದಾರೆ. […]
ಕಸ್ತೂರ್ಬಾ ಆಸ್ಪತ್ರೆಯ ಕಾರ್ಪೊರೇಟ್ ಕ್ರಿಕೆಟ್ ಲೀಗ್ (ಕೆಎಚ್ – ಸಿಸಿಎಲ್) 2024ರ ಜರ್ಸಿ ಬಿಡುಗಡೆ

ಮಣಿಪಾಲ: ಕಸ್ತೂರ್ಬಾ ಹಾಸ್ಪಿಟಲ್ ಕಾರ್ಪೊರೇಟ್ ಕ್ರಿಕೆಟ್ ಲೀಗ್ (KH-CCL) ನ 3 ನೇ ಆವೃತ್ತಿಯು ಜನವರಿ 5 ರಿಂದ ಜನವರಿ 07 ರವರೆಗೆ ಎಂಡ್ ಪಾಯಿಂಟ್ ಮೈದಾನ, ಮಾಹೆ ಮಣಿಪಾಲದಲ್ಲಿ ನಡೆಯಲಿದೆ. ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದಿಂದ ಆಯೋಜಿಸಲ್ಪಟ್ಟಿರುವ ಈ ಕ್ರಿಕೆಟ್ ಲೀಗ್ ಕಾರ್ಪೊರೇಟ್ ಕಂಪನಿಗಳು, ಬ್ಯಾಂಕ್‌ಗಳು, ವೈದ್ಯಕೀಯ ಸಂಘಗಳು, ಆಸ್ಪತ್ರೆಗಳು ಮತ್ತು ಮಾಧ್ಯಮ ಪಾಲುದಾರರನ್ನು ಪೂರೈಸುತ್ತದೆ. ಈ ಕಾರ್ಯಕ್ರಮಕ್ಕೆ ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಗುರುರಾಜ ಗಂಟಿಹೊಳೆ ಅವರು ಆಟಗಾರರ ಜರ್ಸಿಯನ್ನು ಅಧಿಕೃತವಾಗಿ ಬಿಡುಗಡೆ ಮಾಡಿದರು. […]
2023 ಥಾಯ್ಲೆಂಡ್ ಓಪನ್ ಬ್ಯಾಡ್ಮಿಂಟನ್ ಚಾಂಪಿಯನ್‌ಶಿಪ್: ಸೆಮಿಫೈನಲ್ ಪ್ರವೇಶಿಸಿದ ಲಕ್ಷ್ಯ ಸೇನ್
ಥಾಯ್ಲೆಂಡ್ ರಾಜಧಾನಿ ಹುವಾಮಾರ್ಕ್‌ನ ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ ಕ್ವಾರ್ಟರ್‌ಫೈನಲ್‌ನಲ್ಲಿ ಮಲೇಷ್ಯಾ ಎದುರಾಳಿಯನ್ನು 21-19, 21-11 ಸೆಟ್‌ಗಳಿಂದ ಸೋಲಿಸಿದರು. ಶನಿವಾರ ಚೀನಾದ ಲು ಗುವಾಂಗ್ ಜು ಮತ್ತು ಥಾಯ್ಲೆಂಡ್‌ನ ಕುನ್ಲವುಟ್ ವಿಟಿಡ್ಸರ್ನ್ ಎದುರಾಗುತ್ತಿದ್ದು, ಇದರಲ್ಲಿ ಗೆದ್ದವರ ಜೊತೆ ಲಕ್ಷ್ಯ ಸೇನ್ ಆಡಲಿದ್ದಾರೆ. ಲಕ್ಷ್ಯ ಸೇನ್ ಲಿಯಾಂಗ್ ಜುನ್ ಹಾವೊ ವಿರುದ್ಧ ತೀವ್ರ ಪೈಪೋಟಿಯನ್ನು ಎದುರಿಸಿದರು. 10-10ರ ಸಮಬಲದಲ್ಲಿ ಇಬ್ಬರ ಹೋರಾಟ ಮುಂದುವರೆದಿತ್ತು. ನಂತರ ಲಿಯಾಂಗ್ ಜುನ್ ಹಾವೊ ಆರು ಅಂಕಗಳ ಮುನ್ನಡೆ ಪಡೆದುಕೊಂಡರು. ಆದರೆ, ಮುನ್ನಡೆಯನ್ನು ಸೇನ್ಹೆಚ್ಚುಹೊತ್ತು ಬಿಟ್ಟುಕೊಡದೇ […]
ಮಹಿಳಾ ಪ್ರೀಮಿಯರ್ ಲೀಗ್ : 3.4 ಕೋಟಿ ರೂ ಗೆ ಆರ್.ಸಿ.ಬಿ ಪಾಲಾದ ಸ್ಮೃತಿ ಮಂಧಾನಾ

ಮುಂಬೈ: ಮಹಿಳಾ ಪ್ರೀಮಿಯರ್ ಲೀಗ್‌ನ (WPL) ಉದ್ಘಾಟನಾ ಆವೃತ್ತಿಯ ಹರಾಜಿನಲ್ಲಿ ಮಾರಾಟವಾದ ಮೊದಲ ಆಟಗಾರ್ತಿ ಎಂಬ ಹೆಗ್ಗಳಿಕೆಗೆ ಪಾತ್ರರಾದ ಭಾರತದ ಉಪನಾಯಕಿ ಮತ್ತು ಆರಂಭಿಕ ಆಟಗಾರ್ತಿ ಸ್ಮೃತಿ ಮಂಧಾನ ಫೆಬ್ರವರಿ 13 ಸೋಮವಾರದಂದು ಇತಿಹಾಸ ಬರೆದಿದ್ದಾರೆ. ಮುಂಬೈನಲ್ಲಿ ನಡೆದ ಹರಾಜಿನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಸ್ಮೃತಿ ಅವರನ್ನು ಬರೋಬ್ಬರಿ 3.4 ಕೋಟಿ ರೂ.ಗಳ ಮೊತ್ತಕ್ಕೆ ಖರೀದಿಸಿದೆ. ಏತನ್ಮಧ್ಯೆ,ಭಾರತ ತಂಡದ ನಾಯಕಿ ಹರ್ಮನ್‌ಪ್ರೀತ್ ಕೌರ್ ಮುಂಬೈ ಇಂಡಿಯನ್ಸ್‌ಗೆ 1.8 ಕೋಟಿ ರೂ.ಗೆ ಮಾರಾಟವಾಗಿದ್ದಾರೆ. ಆಸ್ಟ್ರೇಲಿಯಾದ ಆಲ್‌ರೌಂಡರ್ ಆಶ್ಲೀ […]
ಮತ್ತೊಮ್ಮೆ ಶತಕ ಪೇರಿಸಿದ ಶುಭಮನ್ ಗಿಲ್: ಭಾರತ ಮತ್ತು ನ್ಯೂಜಿಲೆಂಡ್ ಪಂದ್ಯದಲ್ಲಿ ಗಿಲ್ ಕಮಾಲ್

ಭಾರತ ಮತ್ತು ನ್ಯೂಜಿಲೆಂಡ್ ನಡುವೆ ನಡೆಯುತ್ತಿರುವ ಮೂರು ಏಕದಿನ ಸರಣಿಯ ಕೊನೆಯ ಪಂದ್ಯದಲ್ಲಿ ಶುಭಮನ್ ಗಿಲ್ ಶತಕ ಸಿಡಿಸಿದ್ದಾರೆ. ಇತ್ತೀಚೆಗಷ್ಟೇ ದ್ವಿಶತಕ ಬಾರಿಸಿ ಎಲ್ಲರಲ್ಲೂ ಅಚ್ಚರಿ ಮೂಡಿಸಿದ್ದ ಗಿಲ್ ಮತ್ತೊಂದು ಶತಕ ಬಾರಿಸುವ ಮೂಲಕ ತಂಡದಲ್ಲಿ ತಮ್ಮ ಸ್ಥಾನವನ್ನು ಖಚಿತಪಡಿಸಿಕೊಂಡಿದ್ದಾರೆ. ಶುಭಮನ್ ಗಿಲ್ 72 ಎಸೆತಗಳಲ್ಲಿ 100 ರನ್ ಪೂರೈಸಿದರು. ಮೂರನೇ ಏಕದಿನ ಪಂದ್ಯದಲ್ಲಿ ಅವರ ಒಟ್ಟು ಸ್ಕೋರ್ 78 ಎಸೆತಗಳಲ್ಲಿ 112 ರನ್ ಆಗಿತ್ತು. ಈ ವೇಳೆ ಅವರು 5 ಸಿಕ್ಸರ್ ಮತ್ತು 13 ಬೌಂಡರಿಗಳನ್ನು […]