ಸನ್‌ರೈಸರ್ಸ್ ಆಟಗಾರನಿಗೆ ಕೋವಿಡ್: ಇಂದಿನ ಪಂದ್ಯದ ಮೇಲೆ ಕರಿಛಾಯೆ!

ದುಬೈ: ಸನ್‌ರೈಸರ್ಸ್ ಹೈದರಾಬಾದ್ ತಂಡದ ಓರ್ವ ಆಟಗಾರನಲ್ಲಿ ಕೋವಿಡ್ ಸೋಂಕು ದೃಢಪಟ್ಟಿದ್ದು, ಈ ಹಿನ್ನೆಲೆಯಲ್ಲಿ ದುಬೈಯಲ್ಲಿ ಇಂದು ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯ ನಡೆಯಬಹುದೇ ಎಂಬ ಅನುಮಾನ ಉಂಟಾಗಿದೆ. ತಂಡೆದೆಲ್ಲ ಆಟಗಾರರನ್ನು ಆರ್‌ಟಿ-ಪಿಸಿಆರ್ ಪರೀಕ್ಷೆಗೆ ಒಳಪಡಿಸಲಾಗುತ್ತಿದ್ದು, ಫಲಿತಾಂಶ ನೆಗೆಟಿವ್ ಬಂದರೆ ಮಾತ್ರ ಪಂದ್ಯ ನಿಗದಿತ ವೇಳಾಪಟ್ಟಿಯಂತೆ ನಡೆಯಲಿವೆ ಎಂದು ಮೂಲಗಳು ತಿಳಿಸಿವೆ. ಈ ಕುರಿತು ಐಪಿಎಲ್ ಅಧಿಕೃತ ಟ್ವೀಟ್ ಮಾಡಿದ್ದು, ಸನ್‌ರೈಸರ್ಸ್ ತಂಡದ ಎಡಗೈ ವೇಗಿ ಟಿ. ನಟರಾಜನ್ ಅವರಿಗೆ ಕೋವಿಡ್ ಸೋಂಕು ತಗುಲಿರುವುದನ್ನು ದೃಢಪಡಿಸಿದೆ. ಅಲ್ಲದೆ ಅವರ […]
ಎರಡನೇ ಟೆಸ್ಟ್: ಭಾರತಕ್ಕೆ 8 ವಿಕೇಟ್ ಗಳ ಭರ್ಜರಿ ಜಯ; ಸರಣಿ ಸಮಬಲ

ಮೇಲ್ಬರ್ನ್: ಇಲ್ಲಿನ ಕ್ರೀಡಾಂಗಣದಲ್ಲಿ ನಡೆಯುತ್ತಿದ್ದ ಆಸ್ಟ್ರೇಲಿಯಾ ವಿರುದ್ಧದ ಎರಡನೇ ಟೆಸ್ಟ್ ನಲ್ಲಿ ಟೀಂ ಇಂಡಿಯಾ 8 ವಿಕೆಟ್ ಗಳಿಂದ ಭರ್ಜರಿ ಗೆಲುವು ಸಾಧಿಸಿದೆ. ಈ ಮೂಲಕ ನಾಲ್ಕು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ 1-1 ಅಂತರದಿಂದ ಸಮಬಲ ಸಾಧಿಸಿದೆ. ನಾಲ್ಕನೇ ದಿನದಾಟದ ಅಂತಿಮ ಇನ್ನಿಂಗ್ಸ್ ನಲ್ಲಿ 70 ರನ್ ಗಳ ಗೆಲುವಿನ ಗುರಿ ಬೆನ್ನಟ್ಟಿದ್ದ ಭಾರತಕ್ಕೆ ಆರಂಭದಲ್ಲೇ ಮಯಾಂಕ್ ಅಗರ್ ವಾಲ್ (5) ಮತ್ತು ಚೇತೇಶ್ವರ ಪೂಜಾರ (3) ರನ್ ಗಳಿಗೆ ಓಟ್ ಆಗುವ ಮೂಲಕ ಆರಂಭಿಕ ಆಘಾತ […]
ಬಾಕ್ಸಿಂಗ್ ಡೇ ಟೆಸ್ಟ್: ಭಾರತದ ಮಾರಕ ದಾಳಿಗೆ ಆಸ್ಟ್ರೇಲಿಯಾ ತತ್ತರ

ಮೆಲ್ಬರ್ನ್: ಭಾರತದ ಬೌಲರ್ ಗಳ ಮಾರಕ ದಾಳಿಗೆ ಆತಿಥೇಯ ಆಸ್ಟ್ರೇಲಿಯಾ ತಂಡ ತತ್ತರಿಸಿದ್ದು, 195 ರನ್ ಗೆ ತನ್ನ ಮೊದಲ ಇನ್ನಿಂಗ್ಸ್ ಮುಕ್ತಾಯಗೊಳಿಸಿದೆ. ಮೆಲ್ಬರ್ನ್ ಕ್ರೀಡಾಂಗಣದಲ್ಲಿ ಶನಿವಾರ ಆರಂಭವಾಗಿರುವ ಬಾಕ್ಸಿಂಗ್ ಡೇ ಟೆಸ್ಟ್‌ನಲ್ಲಿ ಭಾರತದ ಸ್ಪಿನ್ನರ್ ಆರ್. ಅಶ್ವಿನ್ ಮೂರು, ವೇಗಿ ಜಸ್‌ಪ್ರೀತ್ ಬೂಮ್ರಾ ನಾಲ್ಕು ವಿಕೆಟ್ ಪಡೆದು ಮಿಂಚಿದರು. ಭಾರತದ ಎದುರು ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಆಸ್ಟ್ರೇಲಿಯಾ ಮೊದಲ ಇನ್ನಿಂಗ್ಸ್‌ನಲ್ಲಿ 72.3 ಓವರ್‌ಗಳಲ್ಲಿ 195 ರನ್ ಗಳಿಸಿ ಆಲೌಟ್ ಆಯಿತು. ಆಸ್ಟ್ರೇಲಿಯಾ ಪರ […]
ಮೊದಲ ಟೆಸ್ಟ್: ಆಸ್ಟ್ರೇಲಿಯಾ ವಿರುದ್ಧ ಭಾರತಕ್ಕೆ ಹೀನಾಯ ಸೋಲು

ಅಡಿಲೇಡ್: ಆಸ್ಟ್ರೇಲಿಯಾ ತಂಡದ ಮಾರಕ ದಾಳಿಗೆ ತತ್ತರಿಸಿದ ಭಾರತ ತಂಡವು ಮೊದಲನೇ ಟೆಸ್ಟ್ ಪಂದ್ಯದಲ್ಲಿ 8 ವಿಕೆಟ್‌ಗಳ ಹೀನಾಯ ಸೋಲು ಕಂಡಿದೆ. ದ್ವಿತೀಯ ಇನಿಂಗ್ಸ್ ನಲ್ಲಿ ಕೊಹ್ಲಿ ಪಡೆ 21.2 ಓವರ್‌ಗಳಿಗೆ ಕೇವಲ 36 ರನ್‌ಗಳಿಗೆ 9 ವಿಕೆಟ್‌ಗಳನ್ನು ಕಳೆದುಕೊಂಡು ಡಿಕ್ಲೇರ್ ಮಾಡಿಕೊಂಡಿತು. ಇದರೊಂದಿಗೆ ಆಸ್ಟ್ರೇಲಿಯಾ ತಂಡಕ್ಕೆ 90 ರನ್ ಗುರಿ ನೀಡಿತು. ಜಾಶ್ ಹೇಝಲ್‌ವುಡ್(8ಕ್ಕೆ5) ಹಾಗೂ ಪ್ಯಾಟ್ ಕಮಿನ್ಸ್ (24ಕ್ಕೆ 4 ) ಅವರ ಮಾರಕ ದಾಳಿ ನಡೆಸಿದರು. ಮಯಾಂಕ್ ಅಗರ್ವಾಲ್ 9 ರನ್, ವಿರಾಟ್ […]
ಕೊನೆಗೂ ಬಿಡುಗಡೆಗೊಂಡಿತು ಐಪಿಎಲ್ ವೇಳಾಪಟ್ಟಿ: ಉದ್ಘಾಟನಾ ಪಂದ್ಯದಲ್ಲಿ ಈ ಎರಡು ತಂಡಗಳು ಕಣಕ್ಕಿಳಿಯಲಿವೆ

ದುಬೈ: ಕೊರೊನಾ ಭೀತಿಯ ನಡುವೆಯೂ ಭಾರೀ ನಿರೀಕ್ಷೆಯ ಐಪಿಎಲ್ ಟೂರ್ನಿ ನಡೆಯುತ್ತಿದ್ದು, ಕೊನೆಗೂ ಟೂರ್ನಿಯ ವೇಳಾಪಟ್ಟಿ ಬಿಡುಗಡೆಯಾಗಿದೆ. ಭಾರತದಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಿರುವುದರಿಂದ ಈ ಬಾರಿಯ ಐಪಿಎಲ್ ಯುಎಇನಲ್ಲಿ ಆಯೋಜಿಸಲಾಗಿದೆ. ಸೆ. 19ರಂದು ಅಬುಧಾಬಿಯಲ್ಲಿ ನಡೆಯಲಿರುವ ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ಮತ್ತು ರನ್ನರ್ಸ್ ಅಪ್ ಚೆನ್ನೈ ಸೂಪರ್ ಕಿಂಗ್ಸ್ ಸೆಣಸಾಟ ನಡೆಸಲಿದೆ. ಸೆ. 20ರಂದು ನಡೆಯುವ ಟೂರ್ನಿಯ ಎರಡನೇ ಪಂದ್ಯದಲ್ಲಿ ಕಿಂಗ್ಸ್ ಇಲೆವನ್ ಪಂಜಾಬ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ಮುಖಾಮುಖಿಯಾಗಲಿವೆ. ಸೆ. 21ರಂದು […]