ವೆಸ್ಟ್ ಇಂಡೀಸ್ ವರ್ಸಸ್ ಭಾರತ: ಏಕದಿನ ಪಂದ್ಯದಲ್ಲಿ ಭಾರತಕ್ಕೆ 2 ವಿಕೆಟ್‌ಗಳ ಜಯ; ಸರಣಿಯಲ್ಲಿ 2-0 ಮುನ್ನಡೆ

ಪೋರ್ಟ್ ಆಫ್ ಸ್ಪೇನ್‌ನ ಕ್ವೀನ್ಸ್ ಪಾರ್ಕ್ ಓವಲ್‌ನಲ್ಲಿ ನಿನ್ನೆ ರಾತ್ರಿ ನಡೆದ ಎರಡನೇ ಏಕದಿನ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ತಂಡವನ್ನು 2 ವಿಕೆಟ್‌ಗಳಿಂದ ಸೋಲಿಸಿದ ಭಾರತ ಮೂರು ಪಂದ್ಯಗಳ ಸರಣಿಯಲ್ಲಿ 2-0 ಮುನ್ನಡೆ ಸಾಧಿಸಿದೆ. 312 ರನ್‌ಗಳ ಗೆಲುವಿನ ಗುರಿ ಬೆನ್ನತ್ತಿದ ಭಾರತ 49.4 ಓವರ್‌ಗಳಲ್ಲಿ 8 ವಿಕೆಟ್‌ಗೆ 312 ರನ್ ಗಳಿಸಿತು. ಅಕ್ಷರ್ ಪಟೇಲ್ ಅಜೇಯ 64 ರನ್ ಮತ್ತು ಶ್ರೇಯಸ್ ಅಯ್ಯರ್ 63 ರನ್ ಗಳಿಸಿದರು. ಇದಕ್ಕೂ ಮುನ್ನ ಆತಿಥೇಯರು ಟಾಸ್ ಗೆದ್ದು ಬ್ಯಾಟಿಂಗ್ […]
ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್: ರಜತ ಪದಕ ಗೆದ್ದ ಮೊದಲ ಭಾರತೀಯ ನೀರಜ್ ಚೋಪ್ರಾ

ಅಮೇರಿಕಾದಲ್ಲಿ ನಡೆಯುತ್ತಿರುವ ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ನ ಪುರುಷರ ಜಾವೆಲಿನ್ ಥ್ರೋ ಸ್ಪರ್ಧೆಯಲ್ಲಿ ಭಾರತದ ಒಲಿಂಪಿಕ್ ಚಿನ್ನದ ಪದಕ ವಿಜೇತ ನೀರಜ್ ಚೋಪ್ರಾ ಬೆಳ್ಳಿ ಪದಕ ಗೆದ್ದಿದ್ದಾರೆ. ಇಂದು ಬೆಳಗ್ಗೆ ಒರೆಗಾನ್‌ನ ಯುಜೀನ್‌ನಲ್ಲಿ ನಡೆದ ಸ್ಪರ್ಧೆಯ ನಾಲ್ಕನೇ ಪ್ರಯತ್ನದಲ್ಲಿ 88.13 ಮೀಟರ್ ದೂರ ಜಾವೆಲಿನ್ ಎಸೆದು ಎರಡನೇ ಸ್ಥಾನ ಪಡೆದಿದ್ದಾರೆ. ನೀರಜ್ ಚೋಪ್ರಾ ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ನಲ್ಲಿ ಬೆಳ್ಳಿ ಪದಕ ಗೆದ್ದ ಮೊದಲ ಭಾರತೀಯ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಮಾಜಿ ಲಾಂಗ್ ಜಂಪರ್ ಅಂಜು ಬಾಬಿ ಜಾರ್ಜ್ ನಂತರ […]
ಅಮೇರಿಕಾದ ಒರೆಗಾನ್‌ನಲ್ಲಿ ಚೊಚ್ಚಲ ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್ ಫೈನಲ್‌ಗೆ ಅರ್ಹತೆ ಪಡೆದ ನೀರಜ್ ಚೋಪ್ರಾ

ಅಮೇರಿಕಾದ ಒರೆಗಾನ್‌ನಲ್ಲಿ ನಡೆದ ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ನ ಪುರುಷರ ಜಾವೆಲಿನ್ ಥ್ರೋ ನಲ್ಲಿ 88.39 ಮೀಟರ್‌ಗಳ ಎಸೆತದೊಂದಿಗೆ ಭಾರತ ನೀರಜ್ ಚೋಪ್ರಾ ಫೈನಲ್ ಗೆ ಅರ್ಹತೆ ಪಡೆದಿದ್ದಾರೆ. ಒಲಿಂಪಿಕ್ ಚಿನ್ನದ ಪದಕ ವಿಜೇತ ಚೋಪ್ರಾ, ಅರ್ಹತಾ ಸುತ್ತಿನ ಮೊದಲ ಎಸೆತದಲ್ಲೇ ಫೈನಲ್‌ನ ತಮ್ಮ ಸ್ಥಾನವನ್ನು ಭದ್ರಪಡಿಸಿದ್ದಾರೆ. ಅರ್ಹತಾ ಸುತ್ತಿನ ಎ ಗುಂಪಿನಲ್ಲಿ ಚೋಪ್ರಾ ಮೊದಲಿಗರಾಗಿ ಜಾವಲಿನ್ ಎಸೆದಿದ್ದಾರೆ. ನಾಳೆ ಮುಂಜಾನೆ ನಡೆಯಲಿರುವ ಫೈನಲ್‌ನಲ್ಲಿ 24 ವರ್ಷ ವಯಸ್ಸಿನ ಚೋಪ್ರಾ ಸ್ಪರ್ಧಿಸಲಿದ್ದಾರೆ. ನೀರಜ್ ಜೊತೆಗೆ ರೋಹಿತ್ ಯಾದವ್ ಕೂಡ […]
ಸಿಂಗಾಪುರ ಓಪನ್: ಫೈನಲ್ ಪ್ರವೇಶಿಸಿದ ಪಿ.ವಿ ಸಿಂಧು

ಭಾರತದ ಬ್ಯಾಡ್ಮಿಂಟನ್ ಪಟು ಪಿವಿ ಸಿಂಧು 21-15, 21-7 ಸೆಟ್‌ಗಳಿಂದ ಜಪಾನಿನ ಶಟ್ಲರ್ ಸೈನಾ ಕವಾಕಮಿ ವಿರುದ್ಧ ನೇರ ಗೆಲುವು ಸಾಧಿಸುವ ಮೂಲಕ ಸಿಂಗಾಪುರ ಓಪನ್ ಫೈನಲ್‌ಗೆ ಲಗ್ಗೆ ಇಟ್ಟಿದ್ದಾರೆ. ಕೇವಲ ಅರ್ಧಗಂಟೆಯಲ್ಲಿ ಮುಗಿದ ಪಂದ್ಯದಲ್ಲಿ ಸಿಂಧು ತಮ್ಮ ಎದುರಾಳಿಯನ್ನು ಸೋಲಿಸಿದ್ದಾರೆ ಪಂದ್ಯಾವಳಿಯಲ್ಲಿ ಭಾರತದ ಏಕೈಕ ಸ್ಪರ್ಧಿಯಾಗಿ ಸಿಂಧು ಭಾಗವಹಿಸಿದ್ದಾರೆ.
ವಿದೇಶದಲ್ಲಿ ಚಿನ್ನ ಗೆದ್ದ 94 ಹರೆಯದ ಅಜ್ಜಿಗೆ ಸ್ವದೇಶದಲ್ಲಿ ಭರ್ಜರಿ ಸ್ವಾಗತ

ನವದೆಹಲಿ: 94 ವರ್ಷದ ಭಗವಾನಿ ದೇವಿ ದಾಗರ್ ಫಿನ್‌ಲ್ಯಾಂಡ್‌ನಲ್ಲಿ ನಡೆದ ವಿಶ್ವ ಮಾಸ್ಟರ್ಸ್ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್ 2022 ರಲ್ಲಿ ಭಾರತಕ್ಕಾಗಿ ಒಂದು ಚಿನ್ನ ಮತ್ತು 2 ಕಂಚು ಗೆಲ್ಲುವ ಮೂಲಕ ದೇಶಕ್ಕೆ ಕೀರ್ತಿ ತಂದಿರುವ ಹಿನ್ನೆಲೆಯಲ್ಲಿ ಸ್ವದೇಶಕ್ಕೆ ಮರಳಿದ ಅಜ್ಜಿಗೆ ದೆಹಲಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭರ್ಜರಿ ಸ್ವಾಗತ ದೊರೆತಿದೆ. “ನನಗೆ ತುಂಬಾ ಸಂತೋಷವಾಗಿದೆ…ಬೇರೆ ದೇಶದಲ್ಲಿ ಪದಕಗಳನ್ನು ಗೆಲ್ಲುವ ಮೂಲಕ ನನ್ನ ದೇಶವನ್ನು ಹೆಮ್ಮೆ ಪಡುವಂತೆ ಮಾಡಿದೆ” ಎಂದು ಚಿನ್ನದ ಚಿಗರೆ ಅಜ್ಜಿ ಭಗವಾನಿ ದೇವಿ ಡಾಗರ್ […]