ಆಂಗ್ಲರ ಕೈಯಿಂದ ಗೆಲುವು ಕಸಿದುಕೊಂಡ ಭಾರತ; ಸರಣಿ ಸಮಬಲ

ಲಂಡನ್:‌ ಅತ್ಯಂತ ರೋಚಕ ಘಟ್ಟದತ್ತ ಸಾಗಿದ್ದ ಭಾರತ – ಇಂಗ್ಲೆಂಡ್‌ ಸರಣಿಯ ಅಂತಿಮ ಪಂದ್ಯದಲ್ಲಿ ಭಾರತ ಆರು ರನ್‌ ಅಂತರ ಗೆಲುವು ಸಾಧಿಸಿದೆ. ಗೆಲುವಿಗೆ 374 ರನ್‌ ಗುರಿ ಪಡೆದಿದ್ದ ಇಂಗ್ಲೆಂಡ್‌ ತಂಡವು 367 ರನ್‌ ಗೆ ಆಲೌಟಾಯಿತು. ಇದರೊಂದಿಗೆ ಭಾರತ ಆರು ರನ್‌ ಅಂತರದ ರೋಚಕ ಜಯ ಸಾಧಿಸಿತು. ಇದರೊಂದಿಗೆ ಆಂಡರ್ಸನ್‌ ತೆಂಡೂಲ್ಕರ್‌ ಟ್ರೋಫಿ ಟೆಸ್ಟ್‌ ಸರಣಿ 2-2 ರಿಂದ ಸಮಬಲವಾಗಿದೆ. ಗೆಲುವಿಗೆ 374 ರನ್‌ ಗುರಿ ಪಡೆದ ಇಂಗ್ಲೆಂಡ್‌ ತಂಡವು ನಾಲ್ಕನೇ ದಿನದಾಟದ ಅಂತ್ಯಕ್ಕೆ […]

ಮೂಡುಬಿದಿರೆ:ಅಂತರಾಷ್ಟ್ರೀಯ ಯೋಗ ಸ್ಪರ್ಧೆಯಲ್ಲಿ ಆಳ್ವಾಸ್ ಯೋಗಪಟುಗಳಿಗೆ 8 ಚಿನ್ನದ ಪದಕ

ಮೂಡುಬಿದಿರೆ: ಇತ್ತೀಚೆಗೆ ವಿಯೆಟ್ನಾಂನಲ್ಲಿ ಜರುಗಿದ ಎರಡನೇ ಅಂತರಾಷ್ಟ್ರೀಯ ಯೋಗಾಸನ ಚಾಂಪಿಯನ್‌ಶಿಫ್‌ನಲ್ಲಿ ಆಳ್ವಾಸ್ ವಿದ್ಯಾಸಂಸ್ಥೆಯ 8 ಯೋಗಪಟುಗಳು ಭಾರತ ದೇಶವನ್ನು ಪ್ರತಿನಿಧಿಸಿ 8 ಚಿನ್ನದ ಪದಕವನ್ನು ಜಯಿಸುವುದರ ಜೊತೆಗೆ ವೈಯಕ್ತಿಕ ವಿಭಾಗದಲ್ಲಿ 8 ಅಂತರಾಷ್ಟ್ರೀಯ ಯೋಗ ರತ್ನ ಪ್ರಶಸ್ತಿಯನ್ನು ಪಡೆದು ಸಮಗ್ರ ತಂಡ ಪ್ರಶಸ್ತಿಯನ್ನು ಪಡೆದುಕೊಂಡರು. ಸಬ್‌ಜ್ಯೂನಿಯರ್ ವಿಭಾಗದಲ್ಲಿ ಯಶಿಕ ಹಾಗೂ ಚಂದನ – ತಾಳಬದ್ದ ಯೋಗಾಸನದಲ್ಲಿ ಚಿನ್ನ, ಕೋಮಲ – ಕಲಾತ್ಮಕ ಯೋಗಾಸನದಲ್ಲಿ ಚಿನ್ನದ ಪದಕ ಪಡೆದರು. ಜ್ಯೂನಿಯರ್ ಹುಡುಗರ ವಿಭಾಗದಲ್ಲಿ ಪ್ರಜ್ವಲ್ – ಕಲಾತ್ಮಕ ಯೋಗಾಸನ […]

ನಾನು ಐಪಿಎಲ್‌ ಆಡುವ ಕೊನೇ ದಿನದವರೆಗೂ ಆರ್ ಸಿಬಿ ತಂಡಕ್ಕಾಗಿ ಮಾತ್ರ ಆಡುತ್ತೇನೆ: ಐಪಿಎಲ್‌ ಟ್ರೋಫಿ ಗೆದ್ದ ಬಳಿಕ ವಿರಾಟ್‌ ಕೊಹ್ಲಿ ಭಾವುಕ ಮಾತು.

ಅಹಮದಾಬಾದ್‌: ನನ್ನ ಹೃದಯ ಬೆಂಗಳೂರಿಗಾಗಿ, ನನ್ನ ಆತ್ಮ ಬೆಂಗಳೂರಿಗಾಗಿ, ನಾನು ಐಪಿಎಲ್‌ ಆಡುವ ಕೊನೇ ದಿನದವರೆಗೂ ಇದೇ ತಂಡಕ್ಕಾಗಿ ಆಡುತ್ತೇನೆ. ಐತಿಹಾಸಿಕ ಐಪಿಎಲ್ ಟ್ರೋಫಿ ಗೆದ್ದ ಬೆನ್ನಲ್ಲಿ ವಿರಾಟ್ ಕೊಹ್ಲಿ ಅವರು ಹೇಳಿದ ಮಾತುಗಳಿವು. ಸಂದರ್ಶನದಲ್ಲಿ ಮಾತಾನಾಡಿದ ಅವರು, ನಾನು ಈ ರಾತ್ರಿ ಮಗುವಿನಂತೆ ಮಲಗುತ್ತೇನೆ ಎಂದು ಹೇಳಿದ್ದರಲಲ್ದೇ. ನನ್ನ ಹೃದಯ, ಆತ್ಮ ಎರಡೂ ಬೆಂಗಳೂರಿಗಾಗಿಯೇ.. ಐಪಿಎಲ್‌ ಆಡುವ ಕೊನೇ ದಿನದವರೆಗೂ ಇದೇ ತಂಡಕ್ಕಾಗಿ ಆಡುತ್ತೇನೆ ಎಂದು ಭಾವುಕವಾಗಿ ನುಡಿದರು. ನಾನು ಪ್ರಭಾವಿ ಆಟಗಾರನಾಗಿ ಆಡಲು ಬಯಸುವುದಿಲ್ಲ, […]

ಆರ್ ಸಿಬಿ ಐತಿಹಾಸಿಕ ಗೆಲುವು ಬೆನ್ನಲ್ಲೇ, ಇಂದು(ಜೂ.4) ಬೆಂಗಳೂರಿನಲ್ಲಿ ವಿಜಯೋತ್ಸವ ಮೆರವಣಿಗೆ.

ಬೆಂಗಳೂರು: ಕೋಟ್ಯಾಂತರ ಅಭಿಮಾನಿಗಳ ಬೆಂಬಲ, ಹಾರೈಕೆ, ಪ್ರಾರ್ಥನೆ ಕೊನೆಗೂ ಫಲಿಸಿದೆ. 18ನೇ ಪ್ರಯತ್ನದಲ್ಲಿ ಆರ್’ಸಿಬಿ ತಂಡ ಟ್ರೋಫಿಗೆ ಮುತ್ತಿಟ್ಟಿದೆ. ಆರ್​ಸಿಬಿ’ಯ ಈ ಐತಿಹಾಸಿಕ ಗೆಲುವು ಬೆನ್ನಲ್ಲೇ, ಫ್ರಾಂಚೈಸಿ ತಮ್ಮ ನಿಷ್ಠಾವಂತ ಅಭಿಮಾನಿಗಳೊಂದಿಗೆ ಗೆಲುವಿನ ಸಂಭ್ರಮಾಚರಣೆ ಮಾಡಲು ವಿಜಯೋತ್ಸವದ ಮೆರವಣಿಗೆಯನ್ನು ಘೋಷಣೆ ಮಾಡಿದೆ. ಇಂದು ಮಧ್ಯಾಹ್ನ 3.30ಕ್ಕೆ ಬೆಂಗಳೂರಿನಲ್ಲಿ ಆರ್​ಸಿಬಿ ವಿಜಯೋತ್ಸವದ ಮೆರವಣಿಗೆ ನಡೆಯಲಿದೆ. ಈ ವಿಜಯೋತ್ಸವ ಮೆರಣವಣಿಗೆ ವಿಧಾನಸೌಧದಿಂದ ಆರಂಭವಾಗಿ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಮುಕ್ತಾಯವಾಗಲಿದೆ. ಆಟಗಾರರನ್ನು ಸ್ವಾಗತಿಸಲು ಬೆಂಗಳೂರು ಸಜ್ಜಾಗಿದ್ದು, ವಿಜಯೋತ್ಸವ ಮೆರವಣಿಗೆಯಲ್ಲಿ ಸಾವಿರಾರು ಜನರು […]

ಈ ಸಲ ಕಪ್ ನಮ್ದು‌..!

ಬೆಂಗಳೂರು: ಆರ್ ಸಿಬಿಯ ಚೊಚ್ಚಲ ಐತಿಹಾಸಿಕ ಗೆಲುವಿಗೆ ಸಿಎಂ ಸಿದ್ದರಾಮಯ್ಯ ಆದಿಯಾಗಿ ಸಚಿವರು ಅಭಿನಂದನೆಗಳ ಮಹಾಪಪೂರದೊಂದಿಗೆ ಹರ್ಷ ವ್ಯಕ್ತಪಡಿಸಿದ್ದಾರೆ. ಎಕ್ಸ್ ಪೋಸ್ಟ್ ಮೂಲಕ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ. ಕೆ. ಶಿವಕುಮಾರ್ ಸೇರಿ ಸಚಿವರುಗಳು ಐಪಿಎಲ್ ಚಾಂಪಿಯನ್ ಆರ್ ಸಿಬಿಗೆ ಅಭಿನಂದನೆ ಸಲ್ಲಿಸಿದ್ದಾರೆ.‌ ಟ್ಯಾಬ್​ನಲ್ಲೇ ಪಂದ್ಯ ವೀಕ್ಷಿಸಿದ ಸಿಎಂ: ಸಿಎಂ ಸಿದ್ದರಾಮಯ್ಯ ಅವರು ಗದಗ ಜಿಲ್ಲಾ ಪ್ರವಾಸ ಮುಗಿಸಿ ಬರುತ್ತಿದ್ದಂತೆ ಬೆಂಗಳೂರು ಹೆಚ್ ಎಎಲ್ ವಿಮಾನ ನಿಲ್ದಾಣದಿಂದ ಟ್ಯಾಬ್ ನಲ್ಲೇ ಐಪಿಎಲ್ ಫೈನಲ್ ಪಂದ್ಯ ವೀಕ್ಷಿಸಿದರು. ಆರ್ […]