ರಾಷ್ಟ್ರೀಯ ಕ್ರೀಡಾ ಪ್ರಶಸ್ತಿ ಪ್ರಕಟ: ಯಾರಿಗೆಲ್ಲಾ ಒಲಿಯಿತು ಪ್ರತಿಷ್ಠಿತ ಅರ್ಜುನ ಪ್ರಶಸ್ತಿ?

ನವದೆಹಲಿ: ರಾಷ್ಟ್ರೀಯ ಕ್ರೀಡಾ ಪ್ರಶಸ್ತಿಗಳ ಪಟ್ಟಿಯನ್ನು ಕೇಂದ್ರ ಕ್ರೀಡಾ ಸಚಿವಾಲಯ ಪ್ರಕಟಿಸಿದ್ದು, ಈ ಬಾರಿ 17 ಕ್ರೀಡಾಪಟುಗಳಿಗೆ ಪ್ರತಿಷ್ಠಿತ ಅರ್ಜುನ ಪ್ರಶಸ್ತಿ ನೀಡಲು ಅಂತಿಮ ಅನುಮೋದನೆ ನೀಡಲಾಗಿದೆ. ಆಯ್ಕೆ ಸಮಿತಿ ಶಿಫಾರಸು ಮಾಡಿದ್ದ ಪಟ್ಟಿಯನ್ನು ಸುಮಾರು ಆರು ತಿಂಗಳ ಬಳಿಕ ಮರುಪರಿಶೀಲಿಸಿದ ಸಚಿವಾಲಯ, ಪ್ರಶಸ್ತಿಯ ಘನತೆ ಹಾಗೂ ಅರ್ಹತೆಯನ್ನು ಪರಿಗಣಿಸಿ 24 ಹೆಸರುಗಳ ಪೈಕಿ 17 ಮಂದಿಯನ್ನು ಅಂತಿಮಗೊಳಿಸಿದೆ. ಇದೇ ವೇಳೆ, ಈ ಬಾರಿ ಮೇಜರ್ ಧ್ಯಾನ್‌ಚಂದ್ ಖೇಲ್ ರತ್ನ ಪ್ರಶಸ್ತಿಗೆ ಯಾವುದೇ ಕ್ರೀಡಾಪಟುವನ್ನು ಆಯ್ಕೆ ಮಾಡಲಾಗಿಲ್ಲ. […]
“ವೈಭವ್ ಗೆ 15 ವರ್ಷವೋ,18 ವರ್ಷವೋ ಎಂಬುದು ನನಗೆ ಮುಖ್ಯವಲ್ಲ”ವೈಭವ್ ಸೂರ್ಯವಂಶಿ ಬಗ್ಗೆ ಆಸ್ಟ್ರೇಲಿಯಾದ ದಿಗ್ಗಜ ಬ್ರೆಟ್ ಲಿ ಹೀಗಂದಿದ್ಯಾಕೆ?

ತಮ್ಮ ಸ್ಫೋಟಕ ಬ್ಯಾಟಿಂಗ್ ಹಾಗೂ ಆತ್ಮವಿಶ್ವಾಸದ ಆಟದ ಮೂಲಕ ಕ್ರಿಕೆಟ್ ಜಗತ್ತಿನಲ್ಲಿ ಗಮನ ಸೆಳೆದಿರುವ ಭಾರತದ ಯುವ ಬ್ಯಾಟರ್ ವೈಭವ್ ಸೂರ್ಯವಂಶಿ ಇದೀಗ ಮತ್ತೊಮ್ಮೆ ಸುದ್ದಿಯಲ್ಲಿದ್ದಾರೆ. ಮೈದಾನದಲ್ಲಿ ಅನುಭವಿ ಆಟಗಾರನಂತೆ ಬ್ಯಾಟ್ ಬೀಸುತ್ತಿರುವ ಸೂರ್ಯವಂಶಿ ಅವರ ವಯಸ್ಸಿನ ಕುರಿತು ಈ ಹಿಂದೆ ಹಲವು ಚರ್ಚೆಗಳು ನಡೆದಿದ್ದವು. ಇದೀಗ ಆಸ್ಟ್ರೇಲಿಯಾದ ಮಾಜಿ ವೇಗದ ಬೌಲರ್ ಬ್ರೆಟ್ ಲೀ ಕೂಡ ಈ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ರಣವೀರ್ ಅಲ್ಲಾಹಬಾಡಿಯಾ ಅವರೊಂದಿಗೆ ಮಾತನಾಡಿದ ಬ್ರೆಟ್ ಲೀ, ಸೂರ್ಯವಂಶಿ ಅವರ ವಯಸ್ಸಿನ ಬಗ್ಗೆ […]
ಅಂತರಾಷ್ಟ್ರೀಯ ಕ್ರಿಕೆಟ್ ಗೆ ಗುಡ್‌ಬೈ ಹೇಳಿದ ಅಜಿಂಕ್ಯ ರಹಾನೆ!

ಮುಂಬೈ: ಭಾರತದ ಅನುಭವಿ ಬ್ಯಾಟರ್ ಹಾಗೂ ಮಾಜಿ ನಾಯಕ ಅಜಿಂಕ್ಯ ರಹಾನೆ ಎಲ್ಲಾ ಮಾದರಿಯ ಕ್ರಿಕೆಟ್‌ಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ್ದಾರೆ. ಅಂತಾರಾಷ್ಟ್ರೀಯ ಕ್ರಿಕೆಟ್ ಸೇರಿದಂತೆ ತಮ್ಮ ವೃತ್ತಿಪರ ಕ್ರಿಕೆಟ್ ಪಯಣಕ್ಕೆ ತೆರೆ ಎಳೆದಿರುವ ರಹಾನೆ, ಸಾಮಾಜಿಕ ಜಾಲತಾಣದ ಮೂಲಕ ಈ ಮಹತ್ವದ ನಿರ್ಧಾರವನ್ನು ಪ್ರಕಟಿಸಿದ್ದಾರೆ. ಭಾರತ ತಂಡದ 278ನೇ ಟೆಸ್ಟ್ ಆಟಗಾರರಾಗಿರುವ ರಹಾನೆ, ಇನ್‌ಸ್ಟಾಗ್ರಾಂನಲ್ಲಿ ವಿಡಿಯೋ ಸಂದೇಶ ಹಂಚಿಕೊಂಡು “Cap 278 Signing Off” ಎಂಬ ಶೀರ್ಷಿಕೆಯೊಂದಿಗೆ ತಮ್ಮ ನಿವೃತ್ತಿಯನ್ನು ಘೋಷಿಸಿದರು. ಭಾವನಾತ್ಮಕ ಸಂದೇಶದಲ್ಲಿ ಮಾತನಾಡಿದ 36 […]
₹47.23 ಕೋಟಿಗೆ ಮಾರಾಟವಾಯ್ತು ಈ ಐತಿಹಾಸಿಕ ಟೀ ಶರ್ಟ್, ಬ್ರೆಜಿಲ್ ನ ಫುಟ್ಬಾಲ್ ದಂತಕಥೆ ಧರಿಸಿದ್ದ ಟೀ ಶರ್ಟ್ ಇದು!

ನ್ಯೂಯಾರ್ಕ್: ಬ್ರೆಜಿಲ್ ಫುಟ್ಬಾಲ್ ದಂತಕಥೆ ಪೀಲೆ ಅವರು 1958ರ ಫಿಫಾ ವಿಶ್ವಕಪ್ ಫೈನಲ್‌ನಲ್ಲಿ ಧರಿಸಿದ್ದ ಐತಿಹಾಸಿಕ ನಂಬರ್ 10 ಟಿ-ಶರ್ಟ್ ಹರಾಜಿನಲ್ಲಿ ದಾಖಲೆ ಮೊತ್ತಕ್ಕೆ ಮಾರಾಟವಾಗಿದೆ. ಈ ಟಿ-ಶರ್ಟ್ ಬರೋಬ್ಬರಿ **4.9 ಮಿಲಿಯನ್ ಅಮೆರಿಕನ್ ಡಾಲರ್ (ಸುಮಾರು ₹47.23 ಕೋಟಿ)**ಗೆ ಸೇಲ್ ಆಗಿದೆ. 1958ರಲ್ಲಿ ಸ್ವೀಡನ್‌ನ ಸ್ಟಾಕ್‌ಹೋಮ್‌ನಲ್ಲಿ ನಡೆದ ಫಿಫಾ ವಿಶ್ವಕಪ್ ಫೈನಲ್‌ನಲ್ಲಿ ಆತಿಥೇಯ ಸ್ವೀಡನ್ ತಂಡವನ್ನು ಬ್ರೆಜಿಲ್ 5-2 ಗೋಲುಗಳಿಂದ ಮಣಿಸಿ ಮೊದಲ ಬಾರಿಗೆ ವಿಶ್ವಕಪ್ ಗೆದ್ದಿತ್ತು. ಆಗ ಕೇವಲ 17 ವರ್ಷದ ಪೀಲೆ ಧರಿಸಿದ್ದ […]
ಫಿಫಾ ವಿಶ್ವಕಪ್ ಸೆಮಿಫೈನಲ್-ಫೈನಲ್ ಹಿನ್ನೆಲೆ: ಬೆಂಗಳೂರಿನಲ್ಲಿ ಹೋಟೆಲ್, ರೆಸ್ಟೋರೆಂಟ್‌ಗಳಿಗೆ ತಡರಾತ್ರಿ 3.30ರವರೆಗೆ ಆಹಾರ ಸೇವೆಗೆ ಅನುಮತಿ

ಬೆಂಗಳೂರು,: ಫಿಫಾ ವಿಶ್ವಕಪ್ 2026ರ ನಿರ್ಣಾಯಕ ಪಂದ್ಯಗಳ ಹಿನ್ನೆಲೆಯಲ್ಲಿ ಬೆಂಗಳೂರು ಫುಟ್‌ಬಾಲ್ ಅಭಿಮಾನಿಗಳಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದೆ. ಸೆಮಿಫೈನಲ್ ಹಾಗೂ ಫೈನಲ್ ಪಂದ್ಯಗಳ ದಿನಗಳಲ್ಲಿ ನಗರದಲ್ಲಿನ ಹೋಟೆಲ್ ಮತ್ತು ರೆಸ್ಟೋರೆಂಟ್‌ಗಳು ಬೆಳಗಿನ 3.30 ಗಂಟೆಯವರೆಗೆ ಆಹಾರ ಸೇವೆ ನೀಡಲು ಅನುಮತಿ ನೀಡಲಾಗಿದೆ. ಈ ಕುರಿತು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸಾಮಾಜಿಕ ಜಾಲತಾಣದ ಮೂಲಕ ಮಾಹಿತಿ ಹಂಚಿಕೊಂಡಿದ್ದಾರೆ. ಭಾರತೀಯ ರಾಷ್ಟ್ರೀಯ ರೆಸ್ಟೋರೆಂಟ್ ಸಂಘದ (NRAI) ಮನವಿಯನ್ನು ಪರಿಗಣಿಸಿ ಬೆಂಗಳೂರು ನಗರ ಪೊಲೀಸ್ ಆಯುಕ್ತರು ಈ ಆದೇಶ […]