ಜೈಸ್ವಾಲ್ ಶತಕ, ಬಿಷ್ಣೋಯ್, ಅವೇಶ್​ ಮಿಂಚು.. ನೇಪಾಳ ವಿರುದ್ಧ ಗೆದ್ದ ಟೀಂ ಇಂಡಿಯಾ : ಏಷ್ಯನ್ ಗೇಮ್ಸ್‌ ಕ್ರಿಕೆಟ್‌

ವನಿತೆಯರ ತಂಡ ಇತ್ತೀಚೆಗೆ ತಮ್ಮ ಮೊದಲ ಪ್ರಯತ್ನದಲ್ಲೇ ಸ್ವರ್ಣ ಪದಕ ಗೆದ್ದುಕೊಂಡಿದೆ. ಇಂದು ರುತುರಾಜ್ ಗಾಯಕ್ವಾಡ್​ ನಾಯಕತ್ವದ ಭಾರತ ತಂಡ ಏಷ್ಯಾಡ್​ ಕ್ವಾರ್ಟರ್‌ಫೈನಲ್‌ ಪಂದ್ಯದಲ್ಲಿ ನೇಪಾಳ ವಿರುದ್ಧ 23 ರನ್​ಗಳ ಗೆಲುವು ಸಾಧಿಸಿದೆ.ಹ್ಯಾಂಗ್​ಝೌ, ಚೀನಾ: ಏಷ್ಯನ್​ ಗೇಮ್ಸ್​ನಲ್ಲಿ ಭಾಗವಹಿಸಲು ಇದೇ ಮೊದಲ ಬಾರಿಗೆ ಬಿಸಿಸಿಐ ವನಿತೆಯರ ಮತ್ತು ಪುರುಷರ ತಂಡವನ್ನು ಚೀನಾದ ಹ್ಯಾಂಗ್‌ಝೌಗೆ ಕಳುಹಿಸಿದೆ.ಏಷ್ಯನ್​ ಗೇಮ್ಸ್​ ಕ್ರಿಕೆಟ್​ನ ಮೊದಲ ಕ್ವಾರ್ಟರ್​ ಫೈನಲ್​ ಪಂದ್ಯದಲ್ಲಿ ನೇಪಾಳ ವಿರುದ್ಧ ಭಾರತ ತಂಡ ಗೆಲುವು ಸಾಧಿಸಿದೆ. ವರ್ಮಾ ಔಟಾದ ಬೆನ್ನೆಲ್ಲೇ ಬಂದ […]

ಬ್ಯಾಡ್ಮಿಂಟನ್​ನಲ್ಲಿ ಶುಭಾರಂಭ: ಏಷ್ಯನ್​ ಗೇಮ್ಸ್: ಟೇಬಲ್​ ಟೆನಿಸ್​ನಲ್ಲಿ ಭಾರತಕ್ಕೆ ಚೊಚ್ಚಲ ಪದಕ

ಹ್ಯಾಂಗ್‌ಝೌ (ಚೀನಾ): 19ನೇ ಏಷ್ಯಾಡ್​ನಲ್ಲಿ ಭಾರತ ಉತ್ತಮ ಪ್ರದರ್ಶನ ನೀಡುತ್ತಿದ್ದು, ಪದಕ ಪಟ್ಟಿಯಲ್ಲಿ ಸದ್ಯ ನಾಲ್ಕನೇ ಸ್ಥಾನದಲ್ಲಿದೆ. 13 ಚಿನ್ನ, 21 ಬೆಳ್ಳಿ ಮತ್ತು 22 ಕಂಚಿನ ಪದಕ ಸೇರಿದಂತೆ 56 ಪದಕಗಳನ್ನು ಭಾರತೀಯ ಸ್ಪರ್ಧಿಗಳು ಗೆದ್ದಿದ್ದು, ಪದಕಗಳ ಶತಕ ಬಾರಿಸುವ ಉತ್ಸಾಹದಲ್ಲಿದ್ದಾರೆ. ಏಷ್ಯನ್​ ಗೇಮ್ಸ್​ನಲ್ಲಿ ಟೇಬಲ್​​ ಟೆನಿಸ್​ ಮಹಿಳೆಯರ ಡಬಲ್ಸ್ ಸ್ಪರ್ಧೆಯಲ್ಲಿ ಭಾರತದ ಅಹಿಕಾ ಮುಖರ್ಜಿ ಮತ್ತು ಸುತೀರ್ಥ ಮುಖರ್ಜಿ ಉತ್ತರ ಕೊರಿಯಾದ ಸುಯೋಂಗ್ ಚಾ ಮತ್ತು ಸುಗ್ಯಾಂಗ್ ಪಾಕ್ ವಿರುದ್ಧ 4-3 ಅಂತರದಲ್ಲಿ ಸೋಲನುಭವಿಸಿ […]

ಆರ್ಚರಿ, ಸ್ಕ್ವಾಷ್‌​ನಲ್ಲಿ ಕ್ವಾರ್ಟರ್​ ಫೈನಲ್​ಗೆ ಲಗ್ಗೆ: 3,000 ಮೀ ಸ್ಟೀಪಲ್‌ಚೇಸ್‌ನಲ್ಲಿ ಭಾರತಕ್ಕೆ ಬೆಳ್ಳಿ, ಕಂಚು

ಹ್ಯಾಂಗ್‌ಝೌ (ಚೀನಾ): ಶೂಟಿಂಗ್​ ವಿಭಾಗದ ನಂತರ ಭಾರತ ಅಥ್ಲೆಟಿಕ್ಸ್​ನಲ್ಲಿ ಉತ್ತಮ ಪ್ರದರ್ಶನ ನೀಡುತ್ತಿದೆ.ಏಷ್ಯನ್​ ಗೇಮ್ಸ್​ನಲ್ಲಿ ಭಾರತಕ್ಕೆ ಈವರೆಗೆ ಅಥ್ಲೆಟಿಕ್ಸ್ ವಿಭಾಗದಲ್ಲಿ 2 ಚಿನ್ನ, 6 ಬೆಳ್ಳಿ ಮತ್ತು 6 ಕಂಚು ಸೇರಿದಂತೆ 13 ಪದಕಗಳು ಬಂದಿವೆ. ಏಷ್ಯಾಡ್​ನ 9ನೇ ದಿನವಾದ ಸೋಮವಾರ 3,000 ಮೀಟರ್ ಸ್ಟೀಪಲ್‌ಚೇಸ್‌ನಲ್ಲಿ ಬೆಳ್ಳಿ ಹಾಗು ಕಂಚಿನ ಪದಕ ಗೌರವ ಸಿಕ್ಕಿದೆ. ಪಾರುಲ್ ಚೌಧರಿ 9:27.63 ಸೆಕೆಂಡ್​ಗಳ ಸಮಯದಲ್ಲಿ ಗುರಿ ಮುಟ್ಟಿ ಎರಡನೇ ಸ್ಥಾನ ಪಡೆದರು. ಚೊಚ್ಚಲ ಏಷ್ಯನ್​ ಗೇಮ್ಸ್​ ಆಡುತ್ತಿರುವ ಪ್ರೀತಿ 9:43.32 […]

ಸೆಮಿಫೈನಲ್​ ಪ್ರವೇಶಿಸಿದ ಹಾಕಿ ತಂಡ : ಲಾಂಗ್ ಜಂಪ್‌, 4×400 ಮೀ ಮಿಶ್ರ ತಂಡಕ್ಕೆ ಬೆಳ್ಳಿ

ಹ್ಯಾಂಗ್‌ಝೌ (ಚೀನಾ): ಏಷ್ಯಾಡ್​ನಲ್ಲಿ ಭಾರತದ ಅಥ್ಲೀಟ್​ಗಳು ಪದಕ ಗೆಲ್ಲುವಲ್ಲಿ ಯಶಸ್ವಿಯಾಗುತ್ತಿದ್ದಾರೆ.19ನೇ ಏಷ್ಯನ್​ ಗೇಮ್ಸ್​ನಲ್ಲಿ ಈವರೆಗೆ ಭಾರತ 60 ಪದಕಗಳನ್ನು ಬಾಚಿಕೊಂಡಿದೆ. 9ನೇ ದಿನವಾದ ಇಂದು ರೋರಲ್​ ಸ್ಕೇಟಿಂಗ್​, ಟೇಬಲ್​ ಟೆನಿಸ್,​ ಸ್ಟೀಪಲ್​ಚೇಸ್‌ನಲ್ಲಿ ಪದಕಗಳು ಬಂದಿವೆ. ಸಂಜೆ ನಡೆದ ಸ್ಪರ್ಧೆಯಲ್ಲಿ ಮಹಿಳೆಯರ ಲಾಂಗ್ ಜಂಪ್‌ನಲ್ಲಿ ಆನ್ಸಿ ಸೋಜನ್ ಎಡಪ್ಪಿಳ್ಳಿ ಮತ್ತು 4×400 ಮೀ ಮಿಶ್ರ ತಂಡ ಬೆಳ್ಳಿ ಗೆದ್ದುಕೊಂಡಿತು.ಇನ್ನು ಹತ್ತು ಪದಕ ಗೆದ್ದರೆ ಕಳೆದ ಬಾರಿಯ ದಾಖಲೆ ಮುರಿಯಲಿದೆ. 2018ರಲ್ಲಿ ಒಟ್ಟಾರೆ 70 ಪದಕಗಳನ್ನು ಭಾರತೀಯ ಅಥ್ಲೀಟ್‌ಗಳು ಗೆದ್ದಿದ್ದರು. […]

ಹಾಕಿಯಲ್ಲಿ ಪಾಕಿಸ್ತಾನದ ವಿರುದ್ಧ ಭಾರತಕ್ಕೆ ಭರ್ಜರಿ ಗೆಲುವು

ಹ್ಯಾಂಗ್‌ಝೌ (ಚೀನಾ): 19ನೇ ಏಷ್ಯನ್ ಗೇಮ್ಸ್ 2023ರಲ್ಲಿ ಭಾರತೀಯ ಪುರುಷರ ಹಾಕಿ ತಂಡವು ತನ್ನ ನೆರೆಯ ಎದುರಾಳಿ ಪಾಕಿಸ್ತಾನದ ವಿರುದ್ಧ 10-2 ಅಂತರದ ಭರ್ಜರಿ ಜಯ ಸಾಧಿಸಿ ಟೂರ್ನಿಯಲ್ಲಿ ಗೆಲುವಿನ ಓಟವನ್ನು ಮುಂದುವರಿಸಿದೆ.ಈ ಪಂದ್ಯದಲ್ಲಿ ಭಾರತದ ಫಾರ್ವರ್ಡ್ ಆಟಗಾರ ಲಲಿತ್ ಕುಮಾರ್ ಉಪಾಧ್ಯಾಯ ತಮ್ಮ 150ನೇ ಅಂತಾರಾಷ್ಟ್ರೀಯ ಕ್ಯಾಪ್ ಧರಿಸಿದರು. ನಡೆಯುತ್ತಿರುವ 19ನೇ ಏಷ್ಯನ್​ ಗೇಮ್ಸ್​ನಲ್ಲಿ ಭಾರತ 10 ಚಿನ್ನ, 14 ಬೆಳ್ಳಿ ಮತ್ತು 14 ಕಂಚು ಗೆದ್ದು, ಒಟ್ಟು 38 ಪದಕದಿಂದ ಪಟ್ಟಿಯಲ್ಲಿ ನಾಲ್ಕನೇ ಸ್ಥಾನವನ್ನು […]