ಟೆಸ್ಟ್ ಸರಣಿ ಐತಿಹಾಸಿಕ ಗೆಲುವು ಪಡೆದ ಟೀಂ ಇಂಡಿಯಾಗೆ ಬಿಸಿಸಿಐ ಬಂಪರ್ ಗಿಫ್ಟ್

ಮುಂಬೈ: 1947-78ರಲ್ಲಿ ಮೊದಲ ಬಾರಿಗೆ ಆಸೀಸ್ ವಿರುದ್ಧ ಟೆಸ್ಟ್ ಸರಣಿ ಆಡಿದ್ದ ಟೀಂ ಇಂಡಿಯಾ ಇದೂವರೆಗೂ 12 ಸರಣಿಗಳನ್ನು ಆಡಿತ್ತು. ಆದರೆ ಇದೇ ಮೊದಲ ಬಾರಿಗೆ ಆಸ್ಟ್ರೇಲಿಯಾ ನೆಲದಲ್ಲಿ ಟೆಸ್ಟ್ ಸರಣಿ ಜಯಿಸಿತ್ತು.ಆಸ್ಪ್ರೇಲಿಯಾ ವಿರುದ್ಧ ಟೆಸ್ಟ್ ಸರಣಿಯನ್ನು 2-1ರ ಅಂತರದಲ್ಲಿ ಗೆದ್ದು ಇತಿಹಾಸ ಬರೆದಿದ್ದ ಟೀಂ ಇಂಡಿಯಾ ತಂಡಕ್ಕೆ ಬಿಸಿಸಿಐ ನಗದು ಬಹುಮಾನ ಘೋಷಣೆ ಮಾಡಿದೆ.ಟೆಸ್ಟ್ ಸರಣಿಯ ಗೆದ್ದ ಸಂತಸದಲ್ಲಿದ್ದ ತಂಡದ ಆಟಗಾರರು ಹಾಗೂ ಟೀಂ ಮ್ಯಾನೇಜ್‍ಮೆಂಟ್ ಸಿಬ್ಬಂದಿ ಕೂಡ ನಗದು ಬಹುಮಾನ ಪಡೆಯಲಿದ್ದಾರೆ. ಪ್ರಮುಖವಾಗಿ ಆಡುವ 11ರ […]

ಪ್ರೊ ಕಬಡ್ಡಿ: ಬೆಂಗಳೂರು ಬುಲ್ಸ್ ಚಾಂಪಿಯನ್

ಮುಂಬೈ:  ಪ್ರೊ ಕಬಡ್ಡಿ ಆರನೇ ಆವೃತ್ತಿಯ ಫೈನಲ್ ಪಂದ್ಯದಲ್ಲಿ ಬೆಂಗಳೂರು ಬುಲ್ಸ್ ಚಾಂಪಿಯನ್ ಆಗಿ ಹೊರಹೊಮ್ಮಿದೆ. ಬೆಂಗಳೂರು ಬುಲ್ಸ್ 38-33 ಅಂಕಗಳಿಂದ ಗುಜರಾತ್ ಫಾರ್ಚ್ಯೂನ್’ ಜೈಂಟ್ಸ್ ತಂಡವನ್ನು ಮಣಿಸಿತು. ಈ ಮೂಲಕ ರೋಹಿತ್ ಕುಮಾರ್ ನೇತೃತ್ವದ ಬೆಂಗಳೂರು ಬುಲ್ಸ್ ಚೊಚ್ಚಲ ಪ್ರಶಸ್ತಿ ಎತ್ತಿಹಿಡಿದು ಸಂಭ್ರಮಿಸಿತು. ಪವನ್ ಕುಮಾರ್ ಶೆರಾವತ್ 22 ಅಂಕ ಕಲೆಹಾಕುವ ಮೂಲಕ ಬುಲ್ಸ್ ಗೆಲುವಿನ ರೂವಾರಿ ಎನಿಸಿದರು.

ಪ್ರೊ ಕಬಡ್ಡಿ: ಇಂದು ‘ಬೆಂಗಳೂರು ಬುಲ್ಸ್‌ ಮತ್ತು ಗುಜರಾತ್‌ ಫಾರ್ಚೂನ್‌ಜೈಂಟ್ಸ್‌’ ಫೈನಲ್‌ ಫೈಟ್‌

ಮುಂಬಯಿ : ಪ್ರೊ ಕಬಡ್ಡಿ ಲೀಗ್‌ನ ಆರನೇ ಆವೃತ್ತಿಯ ಫೈನಲ್‌ ಇಂದು ರಾತ್ರಿ 8 ಗಂಟೆಗೆ  ಮುಂಬಯಿಯಲ್ಲಿ ಬೆಂಗಳೂರು ಬುಲ್ಸ್‌ ಮತ್ತು ಗುಜರಾತ್‌ ಫಾರ್ಚೂನ್‌ಜೈಂಟ್ಸ್‌  ತಂಡಗಳು ಪ್ರಶಸ್ತಿಗಾಗಿ ಕಾದಾಟ ನಡೆಸಲಿವೆ. ಸತತ ಮೂರು ತಿಂಗಳು ಅಭಿಮಾನಿಗಳು ಸಂಭ್ರಮದ ಹೊಳೆಯಲ್ಲಿ ಮಿಂದೇಳುವಂತೆ ಮಾಡಿದ್ದ ಈ ಬಾರಿಯ ಟೂರ್ನಿ‌ಗೆ ಜ.5ರಂದು ತೆರೆಬೀಳಲಿದೆ. ಡಿ.31ರಂದು ನಡೆದ ಮೊದಲ ಕ್ವಾಲಿಫೈಯರ್‌ನಲ್ಲಿ ಬುಲ್ಸ್‌ ಮತ್ತು ಫಾರ್ಚೂನ್‌ಜೈಂಟ್ಸ್‌ ಮುಖಾಮುಖಿಯಾಗಿದ್ದವು. ಆಗ ಬೆಂಗಳೂರಿನ ತಂಡ 12 ಪಾಯಿಂಟ್ಸ್‌ಗಳಿಂದ ಗೆದ್ದು ನೇರವಾಗಿ ಪ್ರಶಸ್ತಿ ಸುತ್ತಿಗೆ ಲಗ್ಗೆ ಇಟ್ಟಿತ್ತು. ಮೊದಲಾರ್ಧದಲ್ಲಿ ಹಿನ್ನಡೆ ಕಂಡಿದ್ದ ರೋಹಿತ್‌ ಪಡೆ […]

ಸಚಿನ್ ಬಾಲ್ಯದ ಕೋಚ್‍ ರಮಾಕಾಂತ್ ಆಚ್ರೇಕರ್ ನಿಧನ

ಮುಂಬೈ: ಕ್ರಿಕೆಟ್ ದಿಗ್ಗಜ ಸಚಿನ್ ತೆಂಡೂಲ್ಕರ್ ಅವರ  ಬಾಲ್ಯದ ಕ್ರಿಕೆಟ್ ಕೋಚ್ ರಮಾಕಾಂತ್ ಆಚ್ರೇಕರ್ (87) ಬುಧವಾರ ಸಂಜೆ ನಿಧನರಾಗಿದ್ದಾರೆ. ಸಚಿನ್ ತೆಂಡೂಲ್ಕರ್ ಅವರನ್ನು ಒಬ್ಬ ಉತ್ತಮ ಬ್ಯಾಟ್ಸ್ ಮನ್ ಆಗಿ ರೂಪಿಸಿದ್ದ ರಮಾಕಾಂತ್ ಅವರು ಕಳೆದ ಕೆಲವು ತಿಂಗಳುಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಬಾಲ್ಯದ ದಿನಗಳಲ್ಲಿ ತಮ್ಮನ್ನು ಉತ್ತಮವಾಗಿ ರೂಪಿಸಿದ್ದ ಕೋಚ್ ರಮಾಕಾಂತ್ ಅವರ ಬಗ್ಗೆ ಸಚಿನ್ ಅವರು ಹೆಚ್ಚಿನ ಗೌರವ ಹೊಂದಿದ್ದರು. ರಮಾಕಾಂತ್ ಅವರು ತಮ್ಮ ವೃತ್ತಿ ಜೀವನದಲ್ಲಿ ಕೇವಲ ಸಚಿನ್ ಮಾತ್ರವಲ್ಲದೇ ವಿನೋದ್ ಕಾಂಬ್ಳಿ, ಪ್ರವೀಣ್ ಅಮ್ರೆ, ಸಮೀರ್ […]

ಎಂಕುಲ್ ಫ್ರೆಂಡ್ಸ್ ಕಲಾವಿದರು(ರಿ.) ಹಿರಿಯಡ್ಕ ಜಿಲ್ಲಾ ಮಟ್ಟದ ಕ್ರಿಕೆಟ್ ಪಂದ್ಯಾಕೂಟ

ಹಿರಿಯಡ್ಕ: ಎಂಕುಲ್ ಫ್ರೆಂಡ್ಸ್ ಕಲಾವಿದರು(ರಿ.) ಹಿರಿಯಡ್ಕ ಇವರ ಆಶ್ರಯದಲ್ಲಿ 4ನೇ ವರ್ಷದ ಉಡುಪಿ ಜಿಲ್ಲಾ ಮಟ್ಟದ ಕ್ರಿಕೆಟ್ ಪಂದ್ಯಾಕೂಟವು ದಿನಾಂಕ 22-12-2018 ರಿಂದ 23-12-2018 ರ ವರೆಗೆ ಹಿರಿಯಡ್ಕ ಸರಕಾರಿ ಪದವಿ ಪೂರ್ವ ಕಾಲೇಜುನ ಮೈದಾನದಲ್ಲಿ  ನಡೆಯಲಿದೆ. ಶನಿವಾರ ಪೂರ್ವಾಹ್ನ10 ಗಂಟೆಗೆ ಉದ್ಘಾಟನಾ ಸಮಾರಂಭ ನಡೆಯಲಿದ್ದು ಕೇಮಾರು ಮಠದ ಶ್ರೀ ಈಶ ವಿಠಲದಾಸ ಸ್ವಾಮೀಜಿ ಅವರು ಆಶೀರ್ವಚನ ನೀಡಲಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾ ಯೂತ್ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈ ಉದ್ಘಾಟಿಸಲಿದ್ದು, ಕಾಪು ಶಾಸಕ ಲಾಲಾಜಿ ಆರ್ […]