ಉಡುಪಿ: ಜುಲೈ 27, 28ರಂದು ಮತ್ಸ್ಯರಾಜ್ ಕರ್ನಾಟಕ ಬ್ಯಾಂಡ್ಮಿಂಟನ್ ಲೀಗ್
ಉಡುಪಿ: ಮತ್ಸ್ಯರಾಜ್ ಗ್ರೂಪ್ ಸ್ಪೋರ್ಟ್ಸ್ ಆ್ಯಂಡ್ ಕಲ್ಚರಲ್ ಕ್ಲಬ್ ಮಲ್ಪೆ ಇದರ ವತಿಯಿಂದ ಎರಡು ದಿನಗಳ ಮತ್ಸ್ಯರಾಜ್ ಕರ್ನಾಟಕ ಬ್ಯಾಂಡ್ಮಿಂಟನ್ ಲೀಗ್ ಇದೇ ಜುಲೈ 27ಮತ್ತು 28ರಂದು ಉಡುಪಿ ಅಜ್ಜರಕಾಡಿನ ಒಳಾಂಗಣ ಬ್ಯಾಡ್ಮಿಂಟನ್ ಕ್ರೀಡಾಂಗಣದಲ್ಲಿ ನಡೆಯಲಿದೆ ಎಂದು ಬ್ಯಾಡ್ಮಿಂಟನ್ ಆಟಗಾರ ಪ್ರದೀಪ್ ಶೆಟ್ಟಿ ತಿಳಿಸಿದರು.ಉಡುಪಿಯಲ್ಲಿಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಕರಾವಳಿ ಕರ್ನಾಟಕದ ಆಟಗಾರರಿಗೆ ರಾಜ್ಯ ಮತ್ತು ರಾಷ್ಟ್ರ ಮಟ್ಟದಲ್ಲಿ ಪ್ರತಿನಿಧಿಸಲು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಈ ಪಂದ್ಯಾಟವನ್ನು ಆಯೋಜಿಸಲಾಗಿದೆ. ಈ ಪಂದ್ಯಾಟದಲ್ಲಿ ರಾಜ್ಯ ಮತ್ತು ರಾಷ್ಟ್ರೀಯ […]
ಪಾಕಿಸ್ತಾನವನ್ನು ಸೋಲಿಸಿ ಲೆಜೆಂಡ್ಸ್ ವಿಶ್ವ ಚಾಂಪಿಯನ್ ಶಿಪ್ ಗೆದ್ದ ಭಾರತ.
2024 ಲೆಜೆಂಡ್ಸ್ ವಿಶ್ವ ಚಾಂಪಿಯನ್ ಶಿಪ್ ಕೂಟದ ಫೈನಲ್ ಪಂದ್ಯದಲ್ಲಿ ಪಾಕಿಸ್ತಾನ ತಂಡವನ್ನು ಸೋಲಿಸಿದ ಭಾರತ ತಂಡವು ಚಾಂಪಿಯನ್ ಗೆದ್ದುಕೊಂಡಿದೆ. ಅನುರೀತ್, ರಾಯುಡು, ಯೂಸುಫ್ ಪಠಾಣ್ ಸಹಾಯದಿಂದ ಭಾರತ ತಂಡವು 5 ವಿಕೆಟ್ ಅಂತರದ ಗೆಲುವು ಸಾಧಿಸಿ ಚೊಚ್ಚಲ ಚಾಂಪಿಯನ್ ಆಗಿ ಮೂಡಿ ಬಂದಿದೆ. ಎಜ್ ಬಾಸ್ಟನ್ ನಲ್ಲಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಪಾಕಿಸ್ತಾನ 156 ರನ್ ಗಳಿಸಿದರೆ, ಭಾರತವು 19.1 ಓವರ್ ಗಳಲ್ಲಿ ಗುರಿ ತಲುಪಿ ವಿಕ್ರಮ ಸಾಧಿಸಿತು. ಲೀಗ್ ಹಂತದಲ್ಲಿ ಭಾರತದ […]
ಟಿ20 ವಿಶ್ವಕಪ್ ಗೆದ್ದ ‘ಟೀಂ ಇಂಡಿಯಾ’ಗೆ ಪ್ರಧಾನಿ ಮೋದಿಯಿಂದ ಶುಭಾಶಯ.
ಬ್ರಿಡ್ಜ್ಟೌನ್ ಕ್ರೀಡಾಂಗಣದಲ್ಲಿ ನಡೆದ ಪಂದ್ಯದ ಕೊನೆಯ ನಾಲ್ಕು ಓವರ್ ಗಳು ತೀವ್ರ ಜಿದ್ದಾಜಿದ್ದಿನಿಂದ ಕೂಡಿತ್ತು. ಅಂತಿಮವಾಗಿ ಭಾರತ 7 ರನ್ ಗಳಿಂದ ದಕ್ಷಿಣ ಆಫ್ರಿಕಾವನ್ನು ಮಣಿಸಿ ಟ್ರೋಫಿಯನ್ನು ಎತ್ತಿಹಿಡಿದಿದೆ. ಇದು ಟೀಂ ಇಂಡಿಯಾದ ಎರಡನೇ ಟಿ20 ವಿಶ್ವಕಪ್ ಟ್ರೋಫಿ ಆಗಿದೆ. ಇನ್ನು 2007ರಲ್ಲಿ ಎಂಎಸ್ ಧೋನಿ ನಾಯಕತ್ವದಲ್ಲಿ ಮೊದಲ ಟಿ20 ವಿಶ್ವಕಪ್ ಟ್ರೋಫಿ ಗೆದ್ದಿತ್ತು. ಇನ್ನು ಟೀಂ ಇಂಡಿಯಾ ಟಿ20 ವಿಶ್ವಕಪ್ ಗೆಲ್ಲುತ್ತಿದ್ದಂತೆ ಪ್ರಧಾನಿ ನರೇಂದ್ರ ಮೋದಿ ಅವರು ತಂಡದ ಆಟಗಾರರಿಗೆ ಶುಭಾಶಯ ತಿಳಿಸಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ […]
ಟಿ20 ವಿಶ್ವಕಪ್ ಗೆಲ್ಲುತ್ತಿದ್ದಂತೆ ಟಿ20 ಕ್ರಿಕೆಟ್ ಗೆ ನಿವೃತ್ತಿ ಘೋಷಿಸಿದ ವಿರಾಟ್, ರೋಹಿತ್.
ಭಾರತ ಟಿ20 ವಿಶ್ವಕಪ್ ಗೆಲ್ಲುತ್ತಿದ್ದಂತೆ ನಾಯಕ ರೋಹಿತ್ ಶರ್ಮಾ, ಮಾಜಿ ನಾಯಕ ವಿರಾಟ್ ಕೊಹ್ಲಿ ಕೊನೆಗೊಂದು ಬೇಸರ ಮೂಡಿಸಿದ್ದಾರೆ. ಟಿ20 ವಿಶ್ವಕಪ್ ಗೆಲುವಿನ ಬೆನ್ನಲ್ಲೇ ಈ ಇಬ್ಬರು ದಿಗ್ಗಜರು ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ವಿದಾಯ ಹೇಳಿದ್ದಾರೆ. ವಿರಾಟ್ ಕೊಹ್ಲಿ ಪಂದ್ಯ ಮುಗಿದ ಬಳಿಕ ಪಂದ್ಯಶ್ರೇಷ್ಠ ಪ್ರಶಸ್ತಿ ಸ್ವೀಕರಿಸುವ ವೇಳೆ ತಮ್ಮ ನಿವೃತ್ತಿಯ ಬಗ್ಗೆ ಖಚಿತಪಡಿಸಿದರು. ನಾಯಕ ರೋಹಿತ್ ಶರ್ಮಾ ಅವರೂ ಬಳಿಕ ತನ್ನ ಟಿ20 ನಿವೃತ್ತಿಯನ್ನು ಘೋಷಿಸಿದರು. ವಿರಾಟ್ ಕೊಹ್ಲಿ ಅವರು ಇದು ನನ್ನ ಕೊನೆಯ […]
ಮೂಡುಬಿದಿರೆ: ರಾಜೀವ್ ಗಾಂಧಿ ಆರೋಗ್ಯ ವಿ.ವಿ. ಕಬಡ್ಡಿ: ಆಳ್ವಾಸ್ ಚಾಂಪಿಯನ್, ಮಹಿಳಾ ವಿಭಾಗದಲ್ಲಿ ಉಜಿರೆ ಎಸ್ಡಿಎಂಗೆ ಪ್ರಶಸ್ತಿ.
ವಿದ್ಯಾಗಿರಿ: ಆಳ್ವಾಸ್ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನ ಕಾಲೇಜಿನ ಅತಿಥ್ಯದಲ್ಲಿ ನಡೆದ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ (ರಾಜ್ಯ ಮಟ್ಟ) ಕಬಡ್ಡಿ ಪಂದ್ಯಾಟದ ಪುರುಷರ ವಿಭಾಗದಲ್ಲಿ ಆಳ್ವಾಸ್ ಕಾಲೇಜ್ ಆಫ್ ಅಲೈಡ್ ಹೆಲ್ತ್ ಸೈನ್ಸ್ ಹಾಗೂ ಮಹಿಳಾ ವಿಭಾಗದಲ್ಲಿ ಉಜಿರೆಯ ಎಸ್ಡಿಎಂ ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನ ಕಾಲೇಜುಗಳು ಚಾಂಪಿಯನ್ ಆಗಿವೆ. ಆಳ್ವಾಸ್ ಕಾಲೇಜಿನ ಮುಂಡ್ರೆದಗುತ್ತು ಕೆ.ಅಮರನಾಥ ಶೆಟ್ಟಿ (ಕೃಷಿ ಸಿರಿ) ಅಂಕಣದಲ್ಲಿ ಬುಧವಾರ ನಡೆದ ಪುರುಷರ ಫೈನಲ್ನಲ್ಲಿ ಮಂಗಳೂರಿನ ಎ.ಜೆ. ಇನ್ಸ್ಟಿಟ್ಯೂಟ್ […]