ಮುರುಘಾ ಶ್ರೀ ಬಿಡುಗಡೆ: ಇಂದು ಚಿತ್ರದುರ್ಗ ಜೈಲಿನಿಂದ ಬಿಡುಗಡೆ

ಚಿತ್ರದುರ್ಗ: ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದಲ್ಲಿ ಜೈಲು ಸೇರಿದ್ದ ಚಿತ್ರದುರ್ಗ ಮುರುಘಾ ಮಠದ ಪೀಠಾಧಿಪತಿ ಡಾ.ಶಿವಮೂರ್ತಿ ಶರಣರು ಇಂದು ಚಿತ್ರದುರ್ಗ ಜೈಲಿನಿಂದ ಬಿಡುಗಡೆಯಾಗಿದ್ದಾರೆ.ಮುರುಘಾ ಶ್ರೀ ವಿರುದ್ಧದ ಎರಡು ಪೋಕ್ಸೋ ಪ್ರಕರಣಗಳ ಪೈಕಿ ಒಂದರಲ್ಲಿ ಈಗಾಗಲೇ ಜಾಮೀನು ದೊರೆತಿದೆ. ಚಿತ್ರದುರ್ಗ ಜೈಲಿನಿಂದ ಶ್ರೀಗಳು ನಿನ್ನೆ ವಿಡಿಯೋ ಕಾನ್ಫರೆನ್ಸ್​ ಮೂಲಕ ಚಿತ್ರದುರ್ಗದ ಕೋರ್ಟ್​ಗೆ ಹಾಜರಾಗಿದ್ದರು. ಬುಧವಾರ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್​ ನ್ಯಾಯಾಲಯ ಹೈಕೋರ್ಟ್​ ವಿಧಿಸಿದ್ದ ಷರತ್ತುಗಳನ್ನು ಹಾಗೂ ದಾಖಲೆಗಳನ್ನು ಪರಿಶೀಲಿಸಿದ ನಂತರ ಜಿಲ್ಲಾ ಕಾರಾಗೃಹದ ಅಧಿಕಾರಿಗಳಿಗೆ ಶ್ರೀಗಳನ್ನು […]

ವಿಶ್ವಕಪ್ 2023 ಸೆಮಿಫೈನಲ್: 50 ಸಿಕ್ಸರ್‌ಗಳ ಹೊಸ ಕ್ರಿಕೆಟ್ ವಿಶ್ವಕಪ್ ದಾಖಲೆ ಬರೆದ ನಾಯಕ ರೋಹಿತ್ ಶರ್ಮಾ

ಮುಂಬೈ: 13ನೇ ಏಕದಿನ ಅರ್ಧಶತಕ ಸಿಡಿಸಿದ ಶುಭ್‌ಮನ್ ಗಿಲ್, ವಿರಾಟ್ ಕೊಹ್ಲಿ ಜೊತೆ ಆತ್ಮವಿಶ್ವಾಸದ ಆಟವನ್ನು ತೋರಿದ್ದಾರೆ. ನ್ಯೂಜಿಲೆಂಡ್ ವಿರುದ್ಧದ ಕ್ರಿಕೆಟ್ ವಿಶ್ವಕಪ್ ಸೆಮಿಫೈನಲ್ ಪಂದ್ಯದಲ್ಲಿ ಶುಭ್‌ಮನ್ ಗಿಲ್ ಮತ್ತು ವಿರಾಟ್ ಕೊಹ್ಲಿ ಭಾರತದ ರನ್ ದರವನ್ನು ಪ್ರತಿ ಓವರ್‌ಗೆ 7.5 ಕ್ಕಿಂತ ಕಡಿಮೆಗೊಳ್ಳಲು ಬಿಡದೆ ಈಗಾಗಲೇ 150 ಕ್ಕೂ ಮಿಕ್ಕಿ ರನ್‌ಗಳನ್ನು ಬಾಚಿದ್ದಾರೆ. ಇದಕ್ಕೂ ಮುನ್ನ ಭಾರತ ಕ್ರಿಕೆಟ್ ತಂಡದ ನಾಯಕ ರೋಹಿತ್ ಶರ್ಮಾ 50 ಸಿಕ್ಸರ್‌ಗಳ ಹೊಸ ಕ್ರಿಕೆಟ್ ವಿಶ್ವಕಪ್ ದಾಖಲೆಯನ್ನು ನಿರ್ಮಿಸಿದ್ದಾರೆ. 2023 […]

ಕ್ವಾರ್ಟರ್ – ಫೈನಲ್‌ ಪ್ರವೇಶಿಸಿದ ಪರ್ವೀನ್ ಹೂಡಾ : ಪದಕದ ಸುತ್ತಿಗೆ ಬೋಪಣ್ಣ- ಭೋಸಲೆ ಜೋಡಿ 

ಹ್ಯಾಂಗ್‌ಝೌ (ಚೀನಾ): .ಭಾರತದ ಜೋಡಿಯು ಮೊದಲ ಸೆಟ್ನ ಆರಂಭಿಕ ಲಾಭವನ್ನು ಪಡೆದು 28 ನಿಮಿಷದಲ್ಲಿ ವಶ ಪಡಿಸಿಕೊಂಡಿದೆ. 19ನೇ ಏಷ್ಯನ್ ಗೇಮ್ಸ್ನಲ್ಲಿ ಇದು ವರೆಗೆ ಒಟ್ಟು 32 ಪದಕಗಳನ್ನು ಗೆದ್ದಿರುವ ಭಾರತ ಪದಕ ಪಟ್ಟಿಯಲ್ಲಿ ನಾಲ್ಕನೇ ಸ್ಥಾನದಲ್ಲಿದೆ.   ಮೂರನೇ ಶ್ರೇಯಾಂಕದ ಚೈನೀಸ್ ತೈಪೆ ಜೋಡಿಯು ಎರಡನೇ ಸೆಟ್‌ನಲ್ಲಿ ಪುನರಾಗಮನ ಮಾಡಿದೆ. 43 ವರ್ಷದ ಭಾರತದ ಟೆನಿಸ್ ತಾರೆ ರೋಹನ್ ಬೋಪಣ್ಣ ಮತ್ತು ರುತುಜಾ ಭೋಸಲೆ ಅವರ ಜೋಡಿ ಏಷ್ಯನ್ ಗೇಮ್ಸ್ನಲ್ಲಿ ಫೈನಲ್ ಪ್ರವೇಶಿಸಿದೆ. ಎರಡನೇ ಸೆಟ್ […]

ಗಂಡು ಮಗುವನ್ನು ಬರಮಾಡಿಕೊಂಡ ಜಸ್ಪ್ರೀತ್ ಬುಮ್ರಾ ದಂಪತಿಗಳು

ಮುಂಬೈ: ಭಾರತದ ವೇಗದ ಬೌಲರ್ ಜಸ್ಪ್ರೀತ್ ಬುಮ್ರಾ ಸೋಮವಾರ ತಮ್ಮ ಸಾಮಾಜಿಕ ಮಾಧ್ಯಮದಲ್ಲಿ ತಮ್ಮ ಮಗನ ಜನನದ ಸುದ್ದಿಯನ್ನು ಹಂಚಿಕೊಂಡಿದ್ದಾರೆ. “ನಮ್ಮ ಪುಟ್ಟ ಕುಟುಂಬ ಬೆಳೆದಿದೆ ಮತ್ತು ನಮ್ಮ ಹೃದಯಗಳು ನಾವು ಊಹಿಸಿಕೊಳ್ಳಲಾರದಷ್ಟು ತುಂಬಿ ಬಂದಿವೆ! ಇಂದು ಬೆಳಿಗ್ಗೆ ನಾವು ನಮ್ಮ ಪುಟ್ಟ ಹುಡುಗ ಅಂಗದ್ ಜಸ್ಪ್ರೀತ್ ಬುಮ್ರಾ ಅವರನ್ನು ಜಗತ್ತಿಗೆ ಸ್ವಾಗತಿಸಿದೆವು. ನಾವು ಚಂದ್ರನ ಮೇಲಿದ್ದೇವೆ ಮತ್ತು ನಮ್ಮ ಜೀವನದ ಈ ಹೊಸ ಅಧ್ಯಾಯವು ಅದರೊಂದಿಗೆ ತರುವ ಎಲ್ಲದಕ್ಕೂ ಕಾತುರರಾಗಿದ್ದೇವೆ – ಜಸ್ಪ್ರಿತ್ ಮತ್ತು ಸಂಜನಾ, […]

ಏಷ್ಯಾಕಪ್ 2023: ಟಾಸ್ ಗೆದ್ದ ಭಾರತ; ಮೊದಲು ಬ್ಯಾಟಿಂಗ್ ಮಾಡುವ ನಿರ್ಧಾರ

2023ರ ಏಷ್ಯಾಕಪ್ ಕ್ರಿಕೆಟ್ ಟೂರ್ನಿಯಲ್ಲಿ ಸಾಂಪ್ರದಾಯಿಕ ಎದುರಾಳಿಗಳಾದ ಭಾರತ ಮತ್ತು ಪಾಕಿಸ್ತಾನ ತಂಡಗಳು ಮುಖಾಮುಖಿಯಾಗಿದ್ದು, ಟೀಂ ಇಂಡಿಯಾ ಟಾಸ್ ಗೆದ್ದಿದ್ದು ನಾಯಕ ರೋಹಿತ್ ಶರ್ಮಾ ಮೊದಲು ಬ್ಯಾಟಿಂಗ್ ಮಾಡುವ ನಿರ್ಧಾರ ಮಾಡಿದ್ದಾರೆ. 4 ವರ್ಷಗಳ ಬಳಿಕ ಇತ್ತಂಡಗಳು ಏಕದಿನ ಕ್ರಿಕೆಟ್ ನಲ್ಲಿ ಮುಖಾಮುಖಿಯಾಗಿವೆ. 2019ರ ವಿಶ್ವಕಪ್‌ನಲ್ಲಿ ಕೊನೆಯ ಬಾರಿಗೆ ತಂಡಗಳು ಎದುರುಬದುರಾಗಿದ್ದವು. ಭಾರತ ತಂಡವು ಮೂರು ವೇಗಿಗಳು ಹಾಗೂ ಇಬ್ಬರು ಸ್ಪಿನ್ನರ್‌ಗಳೊಂದಿಗೆ ಕಣಕ್ಕಿಳಿದಿದೆ. ಅನುಭವಿ ವೇಗಿ ಮೊಹಮ್ಮದ್ ಶಮಿ ಬದಲಿಗೆ ಶಾರ್ದೂಲ್ ಠಾಕೂರ್ ಸ್ಥಾನ ಪಡೆದಿದ್ದಾರೆ. ಭಾರತದ […]