ಚಿನ್ನದ ಹುಡುಗನ ಮತ್ತೊಂದು ಪರಾಕ್ರಮ: ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ ನಲ್ಲಿ ಮತ್ತೊಮ್ಮೆ ಚಿನ್ನ ಬಾಚಿದ ನೀರಜ್ ಚೋಪ್ರಾ

ಒಲಿಂಪಿಕ್ ಚಾಂಪಿಯನ್ ನೀರಜ್ ಚೋಪ್ರಾ ಭಾನುವಾರ ಮತ್ತೊಮ್ಮೆ ಇತಿಹಾಸ ಬರೆದಿದ್ದು, ಪುರುಷರ ಜಾವೆಲಿನ್ ಫೈನಲ್‌ನಲ್ಲಿ 88.17 ಮೀಟರ್ ದೂರ ಎಸೆದು ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ನಲ್ಲಿ ಚಿನ್ನದ ಪದಕ ಗೆದ್ದ ಮೊದಲ ಭಾರತೀಯ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಪದಕ ಸಮಾರಂಭದ ನಂತರ, ಚೋಪ್ರಾ ಜೂಮ್ ನಲ್ಲಿ ತಡರಾತ್ರಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು. ತಾವು ಶ್ರೇಷ್ಠ ಕ್ರೀಡಾಪಟುವೇ ಎಂದು ಮಾಧ್ಯಮದವರು ಕೇಳಿದಾಗ, ಅವರು ವಿಶ್ವ ದಾಖಲೆ ಹೊಂದಿರುವ ಜಾನ್ ಜೆಲೆಜ್ನಿ ಹೆಸರನ್ನು ಉಲ್ಲೇಖಿಸಿ, “ನಾನು ಸಾರ್ವಕಾಲಿಕ ಶ್ರೇಷ್ಠ ಎಂದು ಹೇಳುವುದಿಲ್ಲ. […]

ಏಷ್ಯಾ ದಾಖಲೆ ಮುರಿದ ಭಾರತದ ಪುರುಷರ 4×400 ಮೀ ರಿಲೇ ತಂಡ: ವಿಶ್ವ ಚಾಂಪಿಯನ್‌ಶಿಪ್‌ನ ಫೈನಲ್‌ಗೆ ಅರ್ಹತೆ

ಆಗಸ್ಟ್ 26 ರಂದು ಬುಡಾಪೆಸ್ಟ್‌ನಲ್ಲಿ ನಡೆಯಲಿರುವ ವಿಶ್ವ ಚಾಂಪಿಯನ್‌ಶಿಪ್‌ನ ತನ್ನ ಮೊದಲ ಅಂತಿಮ ಸುತ್ತಿಗೆ ಅರ್ಹತೆ ಪಡೆಯಲು ಭಾರತೀಯ ಪುರುಷರ 4×400 ಮೀ ರಿಲೇ ತಂಡವು 2 ನಿಮಿಷ 59.05 ಸೆಕೆಂಡುಗಳ ಬೆರಗುಗೊಳಿಸುವ ಓಟದಲ್ಲಿ ಏಷ್ಯನ್ ದಾಖಲೆಯನ್ನು ಮುರಿದಿದೆ. ಮುಹಮ್ಮದ್ ಅನಾಸ್ ಯಾಹಿಯಾ, ಅಮೋಜ್ ಜಾಕೋಬ್, ಮುಹಮ್ಮದ್ ಅಜ್ಮಲ್ ವರಿಯಥೋಡಿ ಮತ್ತು ರಾಜೇಶ್ ರಮೇಶ್ ಅವರ ರಿಲೇ ತಂಡವು ಫೈನಲ್ ಪ್ರವೇಶಿಸಿದೆ. ಯು.ಎಸ್.ಎ ಮೊದಲನೆ ಸ್ಥಾನವನ್ನು ಪಡೆದುಕೊಂಡರೆ, ಭಾರತ ಎರಡನೇ ಸ್ಥಾನವನ್ನು ತನ್ನದಾಗಿಸಿಕೊಂಡಿದೆ. ಹಿಂದಿನ ಏಷ್ಯನ್ ದಾಖಲೆ […]

11 ದಿನದಲ್ಲಿ ಬೆಂಗಳೂರಿನಲ್ಲಿ 178 ಡೆಂಘೀ ಪ್ರಕರಣ ದಾಖಲು

ಬೆಂಗಳೂರು: ಬೆಂಗಳೂರಿನಲ್ಲಿ ಮಳೆ ಆರಂಭವಾಗಿದ್ದು, ಈ ನಡುವೆ ಡೆಂಘೀ ಪ್ರಕರಣಗಳ ಸಂಖ್ಯೆ ಏರಿಕೆ ಕಂಡಿದೆ. ಪ್ರಕರಣಗಳ ಸಂಖ್ಯೆ ಏರಿಕೆಯಾಗುತ್ತಿರುವ ಹಿನ್ನೆಲೆ ಜನರು ಈ ಬಗ್ಗೆ ಎಚ್ಚರಿಕೆವಹಿಸುವಂತೆ ಸೂಚಿಸಿದೆ. ನಿಂತ ನೀರಿನಲ್ಲಿ ಸೊಳ್ಳೆಗಳ ಸಂತಾನಾಭಿವೃದ್ಧಿ ಹೆಚ್ಚುವ ಹಿನ್ನೆಲೆಯಲ್ಲಿ ಮನೆ ಮತ್ತು ಸುತ್ತಮುತ್ತಲಿನ ಪರಿಸರದಲ್ಲಿ ನೀರು ನಿಲ್ಲದಂತೆ ನೋಡಿಕೊಳ್ಳುವುದು ಅವಶ್ಯಕವಾಗಿದೆ ಎಂದಿದ್ದಾರೆ.ಸಿಲಿಕಾನ್​ ಸಿಟಿಯಲ್ಲಿ ಡೆಂಘೀ ಪ್ರಕರಣಗಳ ಏರಿಕೆ ಕಂಡಿದ್ದು, ಕಳೆದ 11 ದಿನಗಳಲ್ಲಿ ಒಟ್ಟು 178 ಹೊಸ ಪ್ರಕರಣಗಳು ವರದಿಯಾಗಿದೆ.ಕರ್ನಾಟಕದಲ್ಲಿ 900 ಡೆಂಘೀ ಪ್ರಕರಣಗಳು ದೃಢ ಪಟ್ಟಿದೆ. ಬೆಂಗಳೂರಿನಲ್ಲಿ ಇದುವರೆಗೆ […]

ಚೊಚ್ಚಲ ಬಾರಿಗೆ ಸೆಮೀಸ್‌ಗೇರಿದ ಬೆಲಾರಸ್‌ ಪ್ರತಿಭೆ: ಫ್ರೆಂಚ್ ಓಪನ್ ಮಹಿಳೆಯರ ಸಿಂಗಲ್ಸ್‌

ಪ್ಯಾರಿಸ್‌: ಫ್ರೆಂಚ್ ಓಪನ್ ಮಹಿಳಾ ಸಿಂಗಲ್ಸ್​ನಲ್ಲಿ ಬೆಲಾರಸ್‌ನ ಅರೀನಾ ಸಬಲೆಂಕಾ 6-4, 6-4ರ ನೇರ ಸೆಟ್‌ಗಳಿಂದ ಉಕ್ರೇನ್‌ನ ಎಲಿನಾ ಸ್ವಿಟೋಲಿನಾ ಅವರನ್ನು ಮಣಿಸಿದರು. ಮಂಗಳವಾರ ನಡೆದ ಮಹಿಳೆಯರ ಸಿಂಗಲ್ಸ್​ ವಿಭಾಗದ ಪಂದ್ಯದಲ್ಲಿ ವಿಶ್ವದ ಎರಡನೇ ಶ್ರೇಯಾಂಕದ ಆಟಗಾರ್ತಿ ಬೆಲಾರಸ್‌ನ ಅರೀನಾ ಸಬಲೆಂಕಾ ಅವರು ಉಕ್ರೇನ್‌ನ ಎಲಿನಾ ಸ್ವಿಟೋಲಿನಾ ಅವರನ್ನು 6-4, 6-4 ಸೆಟ್‌ಗಳಿಂದ ಸೋಲಿಸಿ ಫ್ರೆಂಚ್ ಓಪನ್ ಸೆಮಿಫೈನಲ್ ತಲುಪಿದರು. ಸಬಲೆಂಕಾ ಸೆಮಿಫೈನಲ್​ನಲ್ಲಿ ಝೆಕ್ ಕರೋಲಿನಾ ಮುಚೋವಾ ಅವರನ್ನು ಎದುರಿಸಲಿದ್ದಾರೆ. ಈ ಪಂದ್ಯ ಹೆಚ್ಚು ಆಕರ್ಷಣೆಗೆ ಕಾರಣವಾಗಿತ್ತು. […]

ISSF​ ಜೂನಿಯರ್ ವಿಶ್ವಕಪ್ ನಲ್ಲಿ 3ನೇ ಚಿನ್ನ ಗೆದ್ದ ಧನುಷ್ ಶ್ರೀಕಾಂತ್

ಜರ್ಮನಿ: ಐಎಸ್​ಎಸ್​ಎಫ್​ ಜೂನಿಯರ್ ವಿಶ್ವಕಪ್ 2023 ಶೂಟಿಂಗ್‌ನಲ್ಲಿ ಧನುಷ್ ಶ್ರೀಕಾಂತ್ ಮೂರನೇ ಚಿನ್ನದ ಪದಕ ಗೆದ್ದರು. ಭಾರತ ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ. ಇಂಟರ್‌ನ್ಯಾಶನಲ್ ಶೂಟಿಂಗ್ ಸ್ಪೋರ್ಟ್ ಫೆಡರೇಶನ್ (ಐಎಸ್‌ಎಸ್‌ಎಫ್) ಜೂನಿಯರ್ ವಿಶ್ವಕಪ್‌ನಲ್ಲಿ ಧನುಷ್ ಶ್ರೀಕಾಂತ್ ಪುರುಷರ 10 ಮೀಟರ್ ಏರ್ ರೈಫಲ್​ ಸ್ಪರ್ಧೆಯಲ್ಲಿ ಚಿನ್ನದ ಪದಕಕ್ಕೆ ಕೊರಳೊಡ್ಡಿದರು. ಸ್ಪರ್ಧೆಯ ಮೂರನೇ ದಿನ ಭಾರತ 6 ಪದಕಗಳಿಂದ ಅಂಕಪಟ್ಟಿಯಲ್ಲಿ ಅಗ್ರಸ್ಥಾನ ಗಿಟ್ಟಿಸಿಕೊಂಡಿತು. ಶೂಟಿಂಗ್​ನಲ್ಲಿ ಭಾರತಕ್ಕೆ ದಕ್ಕಿದ ಮೂರನೇ ಚಿನ್ನದ ಪದಕ ಇದಾಗಿದೆ. ಶೂಟಿಂಗ್ ಫೈನಲ್‌ನಲ್ಲಿ ಧನುಷ್ 24 ಶಾಟ್‌ಗಳಲ್ಲಿ 249.4 […]