ಮಹಿಳೆಯರೇ ಮುಂಚೂಣಿಯಲ್ಲ: ವಿಶ್ವದ ಅತಿದೊಡ್ಡ ಮೊಬೈಲ್ ಗೇಮಿಂಗ್ ರಾಷ್ಟ್ರ ಭಾರತ

ನವದೆಹಲಿ: ಒಂದು ಕಾಲದಲ್ಲಿ ನೋಕಿಯಾ ಫೋನ್ಗಳಲ್ಲಿ ಸ್ನೇಕ್ ಗೇಮ್ ಆಡುವುದೇ ಒಂದು ಅದ್ಭುತ ಸಂಗತಿಯಾಗಿತ್ತು. ಅಂದಿನ ಆ ಸರಳವಾದ ಸ್ನೇಕ್ ಗೇಮ್ ಇವತ್ತು ಯಾರಿಗೂ ಇಷ್ಟವಿಲ್ಲ. ಮೊಬೈಲ್ ಗೇಮಿಂಗ್ ಎಂಬುದು ಕಳೆದ ಎರಡು ದಶಕಗಳಲ್ಲಿ ಸಾಕಷ್ಟು ದೂರ ಕ್ರಮಿಸಿದೆ. ಇವತ್ತು ಸ್ಮಾರ್ಟ್ಫೋನ್ಗಳಲ್ಲಿ ಆಡುವ ಗೇಮ್ಗಳ ಜಗತ್ತೇ ಬೇರೆಯಾಗಿದೆ. ಮೊಬೈಲ್ ಸಾಧನಗಳು ಎಷ್ಟು ಅತ್ಯಾಧುನಿಕವಾಗಿವೆಯೋ ಗೇಮ್ಗಳು ಸಹ ಅಷ್ಟೇ ಅತ್ಯಾಧುನಿಕ ತಂತ್ರಜ್ಞಾನ ಅಳವಡಿಸಿಕೊಂಡಿವೆ. ಭಾರತವು ವಿಶ್ವದ ಅತಿದೊಡ್ಡ ಮೊಬೈಲ್ ಗೇಮಿಂಗ್ ರಾಷ್ಟ್ರವಾಗಿ ಹೊರಹೊಮ್ಮಿದೆ. ದೇಶದಲ್ಲಿ ಮೊಬೈಲ್ ಗೇಮಿಂಗ್ ಮಾರುಕಟ್ಟೆ […]
ಸ್ಯಾಮ್‌ಸಂಗ್ ವಾಚ್ಗಳು ನೀಡಲಿವೆ ನಿಮ್ಮ ಹೃದಯ ಬಡಿತದ ಮಾಹಿತಿ .. ಶೀಘ್ರವೇ ಮಾರುಕಟ್ಟೆಯಲ್ಲಿ ಲಭ್ಯ

ಸ್ಯಾನ್ ಫ್ರಾನ್ಸಿಸ್ಕೋ( ಅಮೆರಿಕ): ಸ್ಯಾಮ್‌ಸಂಗ್ ಹೆಲ್ತ್ ಮಾನಿಟರ್ ಅಪ್ಲಿಕೇಶನ್‌ನಲ್ಲಿನ ‘ಅನಿಯಮಿತ ಹಾರ್ಟ್ ರಿದಮ್ ನೋಟಿಫಿಕೇಶನ್’ IHRN ವೈಶಿಷ್ಟ್ಯವು ಈ ವರ್ಷದ ಬೇಸಿಗೆಯಲ್ಲಿ ಆದಷ್ಟು ಶೀಘ್ರ 13 ಮಾರುಕಟ್ಟೆಗಳಲ್ಲಿ ಲಭ್ಯವಾಗಲಿದೆ ಎಂದು ಸ್ಯಾಮ್‌ಸಂಗ್ ಎಲೆಕ್ಟ್ರಾನಿಕ್ಸ್ ಪ್ರಕಟಿಸಿದೆ. ಹೃದಯದ ಆರೋಗ್ಯದ ಬಗ್ಗೆ ಮಾಹಿತಿ ನೀಡುವ ವಾಚ್ಗಳನ್ನು ಸ್ಯಾಮ್‌ಸಂಗ್ ಮಾರುಕಟ್ಟೆಗೆ ಪರಿಚಯಿಸಲು ಮುಂದಾಗಿದೆ. ಶೀಘ್ರದಲ್ಲೇ ಈ ವಾಚ್ಗಳು ವಿವಿಧ 13 ಮಾರುಕಟ್ಟೆಗಳಲ್ಲಿ ಲಭ್ಯವಾಗಲಿದೆ. ಏನಿದು IHRN ವೈಶಿಷ್ಟ್ಯ?: ಐಎಚ್ಆರ್ಎನ್ ಅಪ್ಲಿಕೇಶನ್‌ನ ಎಲೆಕ್ಟ್ರೋಕಾರ್ಡಿಯೋಗ್ರಾಮ್ (ECG) ಮಾನಿಟರಿಂಗ್‌ನೊಂದಿಗೆ ಸಂಯೋಜಿಸಲ್ಪಟ್ಟಿದೆ. ಗ್ಯಾಲಕ್ಸಿ ವಾಚ್ ಬಳಕೆದಾರರಿಗೆ ಹೃತ್ಕರ್ಣದ […]
ನಕಲಿ ಖಾತೆಗಳ ಕುರಿತು ತನಿಖೆಗೆ ಸಹಕಾರ ನೀಡಬೇಕು ಇಲ್ಲವಾದಲ್ಲಿ ಫೇಸ್ಬುಕ್ ಸ್ಥಗಿತಗೊಳಿಸಬೇಕಾಗುತ್ತದೆ ಎಂದು ಹೈಕೋರ್ಟ್ ಎಚ್ಚರಿಕೆ

ಬೆಂಗಳೂರು: ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಮತ್ತು ರಾಷ್ಟ್ರೀಯ ನಾಗರಿಕ ನೋಂದಣಿ ಕಾಯ್ದೆ (ಎನ್‌ಆರ್‌ಸಿ) ಬೆಂಬಲಿಸಿದ ಕಾರಣಕ್ಕೆ ಮಂಗಳೂರು ಮೂಲದ ಶೈಲೇಶ್ ಕುಮಾರ್ ಹೆಸರಿನಲ್ಲಿ ಅನಾಮಿಕರು ನಕಲಿ ಫೇಸ್ಬುಕ್ Facebook ಖಾತೆ ಪ್ರಾರಂಭಿಸಿ ಸೌದಿ ಅರೇಬಿಯಾದ ದೊರೆ ಬಗ್ಗೆ ಅವಹೇಳನಕಾರಿ ಹೇಳಿಕೆ ದಾಖಲಿಸಿದ್ದ ಪ್ರಕರಣದಲ್ಲಿ ತನಿಖೆಗೆ ಸೂಕ್ತ ಸಹಕಾರ ನೀಡಿದಿದ್ದಲ್ಲಿ ಭಾರತದಲ್ಲಿ ಫೇಸ್ಬುಕ್ ಕಾರ್ಯಾಚರಣೆ ಬಂದ್ ಮಾಡಲು ಆದೇಶ ಹೊರಡಿಸಬೇಕಾಗುತ್ತದೆ ಎಂದು ಹೈಕೋರ್ಟ್ ಎಚ್ಚರಿಕೆ ನೀಡಿದೆ. ಸೌದಿ ಅರೇಬಿಯಾ ದೊರೆ ಬಗ್ಗೆ ಅವಹೇಳನಕಾರಿ ಹೇಳಿಕೆ ದಾಖಲಿಸಿದ್ದ ಆರೋಪದ […]
ವಾಟ್ಸಾಪ್ನಿಂದ ಮೆಸೇಜ್ ಎಡಿಟಿಂಗ್ ಆಪ್ಶನ್ : ಹೊಸ ಫೀಚರ್

ಸ್ಯಾನ್ ಫ್ರಾನ್ಸಿಸ್ಕೋ: ವಾಟ್ಸಾಪ್ ತನ್ನ ಬಳಕೆದಾರರಿಗೆ ಮೋಜಿನ ಅನುಭವವನ್ನು ನೀಡಲು ನಿರಂತರವಾಗಿ ಹೊಸ ಹೊಸ ವೈಶಿಷ್ಟ್ಯಗಳನ್ನು ಹೊರತರುತ್ತಿದೆ. ಈಗ ಜನಪ್ರಿಯ ತ್ವರಿತ ಸಂದೇಶ ಕಳುಹಿಸುವಿಕೆ ಅಪ್ಲಿಕೇಶನ್ ಲ್ಯಾಪ್‌ಟಾಪ್‌ಗಳು ಮತ್ತು ಡೆಸ್ಕ್‌ಟಾಪ್‌ಗಳ ಕೆಲವು ಬೀಟಾ ಪರೀಕ್ಷಕರಿಗೆ ಮೆಸೇಜ್ ಎಡಿಟಿಂಗ್ ಫೀಚರ್ ಅನ್ನು ಪ್ರಸ್ತುತ ಪಡಿಸಿದೆ. ಅದರ ಸಹಾಯದಿಂದ, ಬಳಕೆದಾರರು ಕಳುಹಿಸಿದ ಸಂದೇಶವನ್ನು ಎಡಿಟ್ ಮಾಡಬಹುದಾಗಿದೆ. ಇದೀಗ ಈ ವೈಶಿಷ್ಟ್ಯವನ್ನು ಕೆಲವು ಬೀಟಾ ಬಳಕೆದಾರರಿಗೆ ಮಾತ್ರ ತರಲಾಗಿದೆ. ಮುಂಬರುವ ಅಪ್ಡೇಟ್ಗಳೊಂದಿಗೆ ಈ ವೈಶಿಷ್ಟ್ಯವು ಎಲ್ಲಾ ಬಳಕೆದಾರರಿಗೆ ಪರಿಚಯಿಸಲಾಗುತ್ತದೆ. ಕಂಪನಿಯು ಮೇ […]
ಮುಂಬೈ ಮಂಗಳೂರು ಎರಡನೇ ದೈನಂದಿನ ವಿಮಾನ ಹಾರಾಟ ಆರಂಭಿಸಿದ ಏರ್ ಇಂಡಿಯಾ

ಮಂಗಳೂರು: ಏರ್ ಇಂಡಿಯಾದ ಎರಡನೇ ಮುಂಬೈ ಮಂಗಳೂರು ದೈನಂದಿನ ವಿಮಾನ ಹಾರಾಟ ಆರಂಭವಾಗಿದೆ. ಏರ್ ಇಂಡಿಯಾ ವಿಮಾನಯಾನ ಸಂಸ್ಥೆಯು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಮುಂಬೈಗೆ ಎರಡನೇ ದೈನಂದಿನ ವಿಮಾನ ಯಾನವನ್ನು ಆರಂಭಿಸಿದೆ. ಭಾರತದ ಆರ್ಥಿಕ ರಾಜಧಾನಿ ಮುಂಬೈಗೆ ಜೂನ್ 10ರಿಂದ ಏರ್ ಇಂಡಿಯಾ ತನ್ನ ಎರಡನೇ ದೈನಂದಿನ ವಿಮಾನಯಾನ ಸೇವೆಯನ್ನು ಆರಂಭಿಸಿದೆ. ಮೇ 22 ರಂದು ಇಂಡಿಗೊ ಮುಂಬೈ-ಮಂಗಳೂರು ವಲಯದಲ್ಲಿ ಮೂರನೇ ದೈನಂದಿನ ವಿಮಾನವನ್ನು ಪ್ರಾರಂಭಿಸಿದ ನಂತರ ಈ ವಿಮಾನ ಸಂಚಾರ ಆರಂಭವಾಗಿದೆ. ಇದರೊಂದಿಗೆ, ಎರಡು […]