ಕಾಂಗ್ರೆಸ್ ಟಾಸ್ಕ್ ಪೋರ್ಸ್ ಸಮಿತಿಯ ಆಹಾರ್ ಕಿಟ್ ವಿತರಣೆ ಕಾರ್ಯಕ್ರಮಕ್ಕೆ ಚಾಲನೆ: ಜಿಲ್ಲೆಯ ಪ್ರತಿ ಬ್ಲಾಕ್ ನಲ್ಲಿ 10 ಸಾವಿರ ಕಿಟ್ ವಿತರಿಸುವ ಗುರಿ: ಯು.ಆರ್. ಸಭಾಪತಿ

ಉಡುಪಿ: ಕಾಂಗ್ರೆಸ್ ಟಾಸ್ಕ್ ಪೋರ್ಸ್ ಸಮಿತಿ ವತಿಯಿಂದ ವಿವಿಧ ಮಠ, ಸಂಘಟನೆ ಹಾಗೂ ದಾನಿಗಳ ಸಹಕಾರದೊಂದಿಗೆ ಸಂಗ್ರಹಿಸಲಾದ ಆಹಾರ ಸಾಮಗ್ರಿಗಳ ಕಿಟ್ ಗಳನ್ನು‌ ಬ್ಲಾಕ್ ಕಾಂಗ್ರೆಸ್ ಸಮಿತಿ ಮೂಲಕ ಕೋವಿಡ್ 19 ನಿಂದಾಗಿ ಸಂಕಷ್ಟಗೀಡಾದ ಕೂಲಿ ಕಾರ್ಮಿಕರು ಹಾಗೂ ಬಡಜನರಿಗೆ ವಿತರಣೆ ಮಾಡುವ ಕಾರ್ಯಕ್ರಮಕ್ಕೆ ಉಡುಪಿ ಕಾಂಗ್ರೆಸ್ ಭವನದಲ್ಲಿ ಇಂದು ಚಾಲನೆ ನೀಡಲಾಯಿತು. ಕಾಂಗ್ರೆಸ್ ಟಾಸ್ಕ್ ಪೋರ್ಸ್ ಸಮಿತಿ ಅಧ್ಯಕ್ಷ ಯು.ಆರ್. ಸಭಾಪತಿ ಮಾತನಾಡಿ, ಕಾಂಗ್ರೆಸ್ ಟಾಸ್ಕ್ ಪೋರ್ಸ್ ಸಮಿತಿ ವತಿಯಿಂದ ಜಿಲ್ಲೆಯ ಪ್ರತಿ ಬ್ಲಾಕ್ ಮಟ್ಟದಲ್ಲಿ […]

ಉಡುಪಿ:ಅದಮಾರು ಮಠದ ಪರ್ಯಾಯ ಮಹೋತ್ಸವಕ್ಕೆ ಹೊರೆಕಾಣಿಕೆ ಮೆರವಣಿಗೆ

ಉಡುಪಿ:  ಅದಮಾರು ಮಠದ ಪರ್ಯಾಯ ಮಹೋತ್ಸವಕ್ಕೆ ಮಲ್ಪೆ,ಮಣಿಪುರ,ಅದಮಾರು ಮೊದಲಾದ ಗ್ರಾಮಗಳ ಭಕ್ತಾಧಿಗಳು ಹೊರೆಕಾಣಿಕೆಯನ್ನು ಜೋಡುಕಟ್ಟೆಯಿಂದ ಮೆರವಣಿಗೆಯಲ್ಲಿ ಬಂದು ಅರ್ಪಿಸಿದರು.ಈ ಸಂದರ್ಭದಲ್ಲಿ  ಅದಮಾರು ಮಠಾಧೀಶರಾದ ಶ್ರೀ ವಿಶ್ವಪ್ರಿಯತೀರ್ಥ ಶ್ರೀಪಾದರು ಆಗಮಿಸಿದ ಭಕ್ತಾಧಿಗಳಿಗೆ ಅನುಗ್ರಹ ಸಂದೇಶದೊಂದಿಗೆ ಫಲ ಮಂತ್ರಾಕ್ಷತೆ ನೀಡಿದರು.

ಕೆ.ಬಿ.ಸಿ ತಂಡಕ್ಕೆ ‘ಚಂದ್ ಮಾಮ್’ ಟ್ರೋಫಿ

ಕಾರ್ಕಳ: ಸ್ಥಳೀಯ ಸಾಲ್ಮರ ಸ್ಪೋರ್ಟ್ಸ್ ಕ್ಲಬ್ ಆಯೋಜಿಸಿದ ಜೆ.ಎಸ್.ಬಿ  ಬಾಂಧವರ ಓವರ್ ಆರ್ಮ್ ಕ್ರಿಕೆಟ್-2020 ಪಂದ್ಯಾಟದಲ್ಲಿ 21 ತಂಡಗಳು ಭಾಗವಹಿಸಿದ್ದವು. ಪ್ರಥಮ ಕೆ.ಬಿ.ಸಿ, ದ್ವಿತೀಯ ಜಿ.ಎಸ್.ಬಿ ಕುಂದಾಪುರ, ತೃತಿಯ ಜಿ.ಎಸ್.ಬಿ ಫ್ರೆಂಡ್ಸ್ ಕಾರ್ಕಳ, ಚತುರ್ಥ ಕೊಡಿಯಲ್ ಟೈಗರ್ಸ್.  ಸಮರೋಪ ಸಮಾರಂಭದಲ್ಲಿ ಗಣ್ಯ ವ್ಯಕ್ತಿಗಳಿಂದ ಬಹುಮಾನ ವಿತರಿಸಲಾಯಿತು.

ಮುಗಿಯದ ಪಂಪ್ವೆಲ್ ಕಾಮಗಾರಿ: ಅಧಿಕಾರಿಗಳ ವಿರುದ್ಧ ನಳಿನ್ ಆಕ್ರೋಶ

ಮಂಗಳೂರು: ಮಂಗಳೂರಿನ ಪಂಪ್ ವೆಲ್‌ ಫ್ಲೈಓವರ್ ಇನ್ನೂ ಪೂರ್ಣಗೊಳ್ಳದ ಹಿನ್ನೆಲೆಯಲ್ಲಿ ಸಂಸದ ನಳಿನ್ ಕುಮಾರ್ ಕಟೀಲ್ ಅಧಿಕಾರಿಗಳ ವಿರುದ್ಧ ತಮ್ಮ ಆಕ್ರೋಶ ಹೊರ ಹಾಕಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಭಾಂಗಣದಲ್ಲಿ ನಡೆದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿ, ಆಕ್ರೋಶ ವ್ಯಕ್ತಪಡಿಸಿದರು. ಮಂಗಳೂರಿನ ಪಂಪ್ ವೆಲ್‌ ಫ್ಲೈಓವರ್ ಜನವರಿ ಮೊದಲವಾರ ಲೋಕಾರ್ಪಣೆ ಮಾಡಲಾಗುವುದು ಎಂದು ಮಂಗಳೂರು ಸಂಸದ ನಳಿನ್ ಕುಮಾರ್ ಕಟೀಲು ಅವರು ಕೆಲ ತಿಂಗಳ ಹಿಂದೆ ಹೇಳಿಕೆ ನೀಡಿದ್ದರು, ಆದರೆ ಫ್ಲೈಓವರ್ ಕಾಮಗಾರಿ ಇನ್ನೂ ಪೂರ್ಣಗೊಳ್ಳದ ಹಿನ್ನೆಲೆಯಲ್ಲಿ ಮಂಗಳವಾರ […]

ಪೇಜಾವರ ಶ್ರೀಗಳ ಕೃಷ್ಣೈಕ್ಯ: ಉಡುಪಿ ಜಿಲ್ಲಾ ಮುಸ್ಲಿಮ್ ಒಕ್ಕೂಟ ಸಂತಾಪ

ಉಡುಪಿ: ಪೇಜಾವರ ಸ್ವಾಮೀಜಿಯ ನಿಧನಕ್ಕೆ ಉಡುಪಿ ಜಿಲ್ಲಾ ಮುಸ್ಲಿಮ್ ಒಕ್ಕೂಟ ತೀವ್ರ ಸಂತಾಪ ವ್ಯಕ್ತಪಡಿಸಿದೆ. ಸ್ವಾಮೀಜಿಯ ಅಗಲಿಕೆಯ ಸುದ್ದಿ ದುಃಖ ತಂದಿದೆ. ಹಿಂದೂ ಧರ್ಮದ ಪ್ರಮುಖ ಸ್ವಾಮಿಜಿಯಾಗಿದ್ದ ಪೇಜಾವರ ಶ್ರೀ ಅವರು ತಮ್ಮ ನಿಲುವನ್ನು ನೇರವಾಗಿ ವ್ಯಕ್ತಪಡಿಸುತ್ತಿದ್ದರು. ಅವರ ಅಗಲಿಕೆಯಿಂದಾಗಿ ಒರ್ವ ಹಿರಿಯ ಧರ್ಮದರ್ಶಿ  ಕಳೆದುಕೊಂಡಂತಾಗಿದೆ ಎಂದು ಜಿಲ್ಲಾಧ್ಯಕ್ಷ ಯಾಸೀನ್ ಮಲ್ಪೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.