ಬ್ರಹ್ಮಾವರ: ಕೆಲಸ ಕೊಡಿಸುವುದಾಗಿ ನಂಬಿಸಿ ಲಕ್ಷಾಂತರ ರೂ. ವಂಚನೆ: ಪ್ರಕರಣ ದಾಖಲು

ಬ್ರಹ್ಮಾವರ: ಬ್ರಹ್ಮಾವರದ ವರಂಬಳ್ಳಿ ಗ್ರಾಮದ ಅಲಿಶಾ (26) ಎಂಬುವವರಿಗೆ ಕೆಲಸ ಕೊಡಿಸುವುದಾಗಿ ನಂಬಿಸಿ ಲಕ್ಷಾಂತರ ರೂ. ವಂಚಿಸಲಾಗಿದೆ. ಮೇ 29 ರಿಂದ ಆಗಸ್ಟ್ 16 ರ ನಡುವೆ, ಆರೋಪಿಯ ಖಾತೆಗೆ ದೂರುದಾರರು 8,96,448 ರೂ. ವರ್ಗಾಯಿಸಿದ್ದಾರೆ. ಈ ಕುರಿತು ಸೈಬರ್ ಕ್ರೈಂಗೆ ದೂರು ದಾಖಲಿಸಲು ವೆಬ್‌ಸೈಟ್ ಸಂಪರ್ಕಿಸಿದಾಗ ಅದರಲ್ಲಿಯೂ 37,000 ರೂ. ಆನ್ ಲೈನ್ ವರ್ಗಾವಣೆ ಮಾಡಿಸಿಕೊಂಡು ವಂಚಿಸಲಾಗಿದೆ. ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ತ್ರಿಶಾ ಕ್ಲಾಸಸ್ : ಸಿ ಎಸ್ ಎಕ್ಸಿಕ್ಯೂಟಿವ್ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಸನ್ಮಾನ ಕಾರ್ಯಕ್ರಮ

ಉಡುಪಿ : ಸಿ ಎಸ್ ಎಕ್ಸಿಕ್ಯೂಟಿವ್ ಪರೀಕ್ಷೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ತ್ರಿಶಾ ಕ್ಲಾಸಸ್ ವತಿಯಿಂದ ಸನ್ಮಾನ ಕಾರ್ಯಕ್ರಮವು ಕಟಪಾಡಿಯ ತ್ರಿಶಾ ವಿದ್ಯಾ ಕಾಲೇಜಿನ ಸಭಾಂಗಣದಲ್ಲಿ ಆಗಸ್ಟ್ 31 ರಂದು ನಡೆಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿದ್ದ ತ್ರಿಶಾ ಸಂಸ್ಥೆಯ ಅನುಭವಿ ಬೋಧಕರಾದ ಪ್ರೊಫೆಸರ್ ರಾಜ್ ಗಣೇಶ್ ಕಾಮತ್ ಹಾಗೂ ಸಿ ಎ ನಾಗೇಂದ್ರ ಭಕ್ತ ರವರು ಮಾತನಾಡಿ ಜೀವನದಲ್ಲಿ ಯಶಸ್ಸನ್ನು ಸಾಧಿಸಲು ನಮ್ಮಲ್ಲಿ ಸತತ ಪ್ರಯತ್ನ ,ಕಠಿಣ ಪರಿಶ್ರಮ, ದೃಢ ಸಂಕಲ್ಪ ಇರಬೇಕು ಎಂದು ವಿದ್ಯಾರ್ಥಿಗಳಿಗೆ ಶುಭಹಾರೈಸಿದರು. ಕಾರ್ಯಕ್ರಮದಲ್ಲಿ […]
ಮಣಿಪಾಲ: ಬಾಲಕಿಯರ ಹಾಸ್ಟೆಲ್‌ಗೆ ವ್ಯಕ್ತಿಯೊರ್ವ ಅಕ್ರಮವಾಗಿ ಪ್ರವೇಶಿಸಿ ವಿದ್ಯಾರ್ಥಿನಿಗೆ ಕಿರುಕುಳ: ಪ್ರಕರಣ ದಾಖಲು

ಉಡುಪಿ: ವ್ಯಕ್ತಿಯೊರ್ವ ಅಕ್ರಮವಾಗಿ ಪ್ರವೇಶಿಸಿ ಹಾಸ್ಟೆಲ್ ವಿದ್ಯಾರ್ಥಿನಿಗೆ ಕಿರುಕುಳ ನೀಡಿದ ಘಟನೆ ಮಣಿಪಾಲದಲ್ಲಿ ಮಧ್ಯರಾತ್ರಿ ವೇಳೆ ನಡೆದಿದೆ. ಮಣಿಪಾಲದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ಅನಂತರದ ಬಾಲಕಿಯರ ವಿದ್ಯಾರ್ಥಿ ನಿಲಯದಲ್ಲಿ ವ್ಯಕ್ತಿ ಓರ್ವ ಕಿಟಕಿ ಬಳಿ ಮಲಗಿದ್ದ ವಿದ್ಯಾರ್ಥಿನಿಗೆ ಕಿರುಕುಳ ನೀಡಿದ್ದಾನೆ. ಕೂಡಲೇ ವಿದ್ಯಾರ್ಥಿನಿ ಕಿರುಚಾಡಿದ್ದು, ಈ ವೇಳೆ ಆತ ಸ್ಥಳದಿಂದ ಪರಾರಿಯಾಗಿದ್ದಾನೆ. ಪೊಲೀಸರು ಸಿಸಿ ಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದ್ದಾರೆ. ಅದರಲ್ಲಿ ಓರ್ವ ಓಡಾಟ ನಡೆಸುತ್ತಿರುವುದು ಕಂಡುಬಂದಿದೆ. ಹಾಸ್ಟೆಲ್‌ನಲ್ಲಿ 90ಕ್ಕೂ ಅಧಿಕ ಮಂದಿ ವಿದ್ಯಾರ್ಥಿನಿಯರಿದ್ದು, 3ರಿಂದ […]
ಮೂಡುಬಿದಿರೆ: ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ನಾಪತ್ತೆ.

ಮೂಡುಬಿದಿರೆ: ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿ ಕಾಣೆಯಾದ ಬಗ್ಗೆ ಮೂಡುಬಿದಿರೆ ಠಾಣೆಯಲ್ಲಿ ದೂರು ದಾಖಲಾಗಿದೆ. ಕಾಣೆಯಾದ ವಿದ್ಯಾರ್ಥಿನಿ ಕಾಲೇಜಿನ ಹಾಸ್ಟೆಲ್ ನಲ್ಲಿ ವಾಸವಾಗಿದ್ದ ಬೆಂಗಳೂರು ಮೂಲದ ಬೃಂದಾ ಜೈನ್ (17). ಕಳೆದ ಒಂದು ವಾರದ ಹಿಂದೆ ಹಾಸ್ಟೆಲ್ ನಿಂದಕಾಣೆಯಾಗಿರುವುದಾಗಿ ತಿಳಿದು ಬಂದಿದೆ. ಬಿಳಿ ಮೈ ಬಣ್ಣ ಕೋಲು ಮುಖ, 5ಅಡಿ ಎತ್ತರವನ್ನು ಹೊಂದಿರುವ ಬೃಂದಾ ಇಂಗ್ಲಿಷ್ ಮತ್ತು ಕನ್ನಡ ಭಾಷೆಯನ್ನು ಬಲ್ಲವಳಾಗಿದ್ದಾಳೆ. ಕಾಣೆಯಾಗುವ ಸಂದರ್ಭ ಕಪ್ಪು ಬಣ್ಣದ ಪ್ಯಾಂಟ್ ಮತ್ತು ಕಪ್ಪು ಬಣ್ಣದ ಜಾಕೆಟ್ ಧರಿಸಿದ್ದು, […]
ಉಡುಪಿ:ಅರ್ಜಿ ಸಲ್ಲಿಕೆ : ಅವಧಿ ವಿಸ್ತರಣೆ

ಉಡುಪಿ: ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳನ್ನು ಮಹಾರಾಷ್ಟ್ರದ ನಾಗಪುರದಲ್ಲಿನ ದೀಕ್ಷಾಭೂಮಿ ಯಾತ್ರೆಗೆ ನಿಯೋಜಿಸಲು ಅರ್ಹ ಆಸಕ್ತ 18 ವರ್ಷಮೇಲ್ಪಟ್ಟ ಅಭ್ಯರ್ಥಿಗಳಿಂದ ಇಲಾಖೆಯ ವೆಬ್‌ಸೈಟ್ https://swdservices.karnataka.gov.in/ ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಅವಧಿಯನ್ನು ಸೆಪ್ಟಂಬರ್ 5 ರ ವರೆಗೆ ವಿಸ್ತರಿಸಲಾಗಿದೆ. ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಸಂಬಂಧಿಸಿದ ಸೂಕ್ತ ದಾಖಲೆಗಳನ್ನು ಎರಡು ದಿನಗಳ ಒಳಗಾಗಿ ಉಪನಿರ್ದೇಶಕರ ಕಚೇರಿ, ಸಮಾಜಕಲ್ಯಾಣ ಇಲಾಖೆ, ರಜತಾದ್ರಿ, ಬಿ ಬ್ಲಾಕ್, ಎರಡನೇ ಮಹಡಿ, […]