ಮಲ್ಪೆ: ವ್ಯಕ್ತಿ ಮೂರ್ಛೆರೋಗದಿಂದ ಮೃತ್ಯು.

ಮಲ್ಪೆ: ಮಲ್ಪೆ ಮೀನುಗಾರಿಕೆ ಬಂದರಿನಲ್ಲಿ ಮೀನುಗಾರಿಕಾ ಕೆಲಸವನ್ನು ಮಾಡುತ್ತಿದ್ದ ದಾವಣಗೆರೆ ಚೆನ್ನಗಿರಿಯ ಹನುಮಂತ (56) ಅವರಿಗೆ ಮೇ 25ರಂದು ಮೂರ್ಛೆ ರೋಗ ಬಂದು ಸಾವನ್ನಪ್ಪಿದ್ದಾರೆ. ಅವರು ಕಳೆದ 20 ವರ್ಷದಿಂದ ಮಲ್ಪೆ ಬಂದರಿನಲ್ಲಿ ಮೀನುಗಾರಿಕೆ ಕೆಲಸ ಮಾಡಿಕೊಂಡಿದ್ದರು. ಅವರಿಗೆ ವಿಪರೀತ ಮಧ್ಯಪಾನ ಮಾಡುವ ಚಟವಿತ್ತು. ಈ ಕುರಿತು ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ರಂಗಭೂಮಿ ಬದುಕನ್ನು ಕಲಿಸುತ್ತದೆ – ಎಸ್ ರಾಮನಾಥ

ರಂಗಭೂಮಿಯ ಕೋರ್ಸ್ ಗಳ ಮೂಲಕ ನಾಯಕರನ್ನು ಕಟ್ಟುವುದು ಅಥವಾ ಅಭಿನಯಿಸುವುದಕ್ಕಿಂತಲೂ ಮಿಗಿಲಾಗಿ ಅದು ಬದುಕಲು ಕಲಿಸುತ್ತದೆ ಎಂದು ಮೈಸೂರು ರಂಗಾಯಣದ ಪ್ರಿನ್ಸಿಪಾಲ್ ಎಸ್ ರಾಮನಾಥ ಹೇಳಿದರು. ಅವರು ಅರೆಹೊಳೆ ಪ್ರತಿಷ್ಠಾನವು ಸಂತ ಅಲೋಶಿಯಸ್ ಪರಿಗಣಿತ ವಿಶ್ವವಿದ್ಯಾನಿಲಯ, ಕಲಾಭಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆಯೋಜಿಸಿದ್ದ ನಾಂದಿ ನಾಟಕೋತ್ಸವದಲ್ಲಿ ಮಾತಾಡುತ್ತಿದ್ದರು. ಈ ಹಿನ್ನೆಲೆಯಲ್ಲಿ ಹೆಚ್ಚೆಚ್ಚು ಯುವ ಜನತೆ ರಂಗಶಿಕ್ಷಣದಲ್ಲಿ ತೊಡಗಿಕೊಳ್ಳಬೇಕೆಂದು ಅವರು ಕರೆ ನೀಡಿದರು. ಇದೇ 31 ರಂದು ಸೇವಾ ನಿವೃತ್ತಿ ಹೊಂದಲಿರುವ ಹಿನ್ನೆಲೆಯಲ್ಲಿ ಅವರನ್ನು ಮಂಗಳೂರು […]
ಸಾಹಿತಿ ದಿ.ಮೇಟಿ ಮುದಿಯಪ್ಪ ನೆನಪಿನ ಯುವ ಕಥಾ ಸ್ಪರ್ಧೆಯ ಬಹುಮಾನ ವಿತರಣೆ

ಉಡುಪಿ: ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಉಡುಪಿ ತಾಲೂಕು ಘಟಕ, ಉಡುಪಿ ಜಿಲ್ಲಾ ಶರಣ ಸಾಹಿತ್ಯ ಪರಿಷತ್ತು, ಸಂಸ್ಕೃತಿ ಸಿರಿ ಟ್ರಸ್ಟ್ ಹಿರಿಯಡ್ಕ , ಸಂಸ್ಕೃತಿ ವಿಶ್ವ ಪ್ರತಿಷ್ಠಾನ (ರಿ) ಉಡುಪಿ ಆಶ್ರಯದಲ್ಲಿ ಸಾಹಿತಿ ದಿ.ಮೇಟಿ ಮುದಿಯಪ್ಪ ನೆನಪಿನ ಯುವ ಕಥಾ ಸ್ಪರ್ಧೆಯ ವಿಜೇತರರಿಗೆ ಬಹುಮಾನ ವಿತರಣೆ ಹಾಗೂ ಅವರ ಬದುಕು ಬರಹದ ಕುರಿತು ಉಪನ್ಯಾಸ ಕಾರ್ಯಕ್ರಮ ಉಡುಪಿಯ ಯಕ್ಷಗಾನ ಕಲಾರಂಗದ ಐವೈಸಿ ಸಭಾಂಗಣದಲ್ಲಿ ನಡೆಯಿತು. ಸಾಹಿತಿ ದಿ. ಮೇಟಿ ಮುದಿಯಪ್ಪನವರು ಮಾನವೀಯತೆ ಪ್ರಧಾನವಾದ ಬಹುಮುಖ […]
ಮಣಿಪಾಲ: ಶಾಂತನು ಶೆಟ್ಟಿ ಆರೋಗ್ಯ ಕಾರ್ಡ್ ವಿತರಣಾ ಕಾರ್ಯಕ್ರಮ ಉದ್ಘಾಟನೆ

ಮಣಿಪಾಲ, ಮೇ.26: ಶಾಂತನು ಶೆಟ್ಟಿ ಚಾರಿಟೇಬಲ್ ಟ್ರಸ್ಟ್ (ರಿ) ಮಣಿಪಾಲವು, ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ (ಮಾಹೆ) ಸಹಯೋಗದೊಂದಿಗೆ ಶಾಂತನು ಶೆಟ್ಟಿ ಆರೋಗ್ಯ ಕಾರ್ಡ್ ವಿತರಣಾ ಕಾರ್ಯಕ್ರಮದ ಉದ್ಘಾಟನಾ ಸಮಾರಂಭವನ್ನು ಭಾನುವಾರ, ಮೇ 26 ರಂದು ಶ್ರೀ ಶ್ರೀನಿವಾಸ ಪೈ ಪ್ರಸನ್ನ ಸೇವಾ ಮಂದಿರ ಸಭಾಂಗಣ, ಪರ್ಕಳ ಇಲ್ಲಿ ಆಯೋಜಿಸಿತ್ತು. ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಶಾಂತನು ಶೆಟ್ಟಿ ಚಾರಿಟೇಬಲ್ ಟ್ರಸ್ಟ್ (ರಿ) ಮಣಿಪಾಲದ ಅಧ್ಯಕ್ಷರಾದ ಶ್ರೀ ಸೋಮನಾಥ ಶೆಟ್ಟಿಯವರು ಉಪಸ್ಥಿತರಿದ್ದರು. ಗೌರವ ಅತಿಥಿಗಳಾಗಿ ಮಾಹೆ ಮಣಿಪಾಲದ […]
ಅಂತರ್‌ಕಾಲೇಜು ರಸಪ್ರಶ್ನೆ ಸ್ಪರ್ಧೆ

ಮಹಾತ್ಮ ಗಾಂಧಿ ಸ್ಮಾರಕ ಸಂಧ್ಯಾ ಕಾಲೇಜು ಉಡುಪಿ ಇಲ್ಲಿನ ವಿದ್ಯಾರ್ಥಿ ಕ್ಷೇಮಪಾಲನಾ ಮಂಡಳಿಯ ವತಿಯಿಂದ ಅಂತರ್ ಕಾಲೇಜು ಮಟ್ಟದ ‘ನಿಮ್ಮ ಪ್ರಪಂಚವನ್ನು ತಿಳಿಯಿರಿ’ ಎಂಬ ರಸಪ್ರಶ್ನಾ ಸ್ಪರ್ಧೆಯನ್ನು ಕಾಲೇಜಿನ ನೂತನ ರವೀಂದ್ರ ಮಂಟಪದಲ್ಲಿ ಆಯೋಜಿಸಲಾಯಿತು. ಕಾರ್ಯಕ್ರಮವನ್ನು ಕ್ವಿಜ್ ಮಾಸ್ಟರ್, ಪ್ರೊ ಪ್ರಭಾಕರ ಶಾಸ್ತ್ರಿ, ಉದ್ಘಾಟಿಸಿ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಡಾ. ದೇವಿದಾಸ್ ನಾಯ್ಕ್ ವಹಿಸಿದ್ದರು.ರಸಪ್ರಶ್ನೆ ಸ್ಪರ್ಧೆಯಲ್ಲಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ವಿವಿಧ ಕಾಲೇಜುಗಳಿಂದ ಸುಮಾರು 40 ತಂಡಗಳು ಭಾಗವಹಿಸಿದ್ದವು. […]