ಮಂಗಳೂರು ಅಂತರಾಷ್ಟ್ರೀಯ ಗುಣಮಟ್ಟದ ನಗರವಾಗಿ ಬೆಳೆಯ ಬೇಕು: ರೋಹನ್ ಮೊಂತೇರೊ

ಮಂಗಳೂರು: ಮಂಗಳೂರು ಅಂತರಾಷ್ಟ್ರೀಯ ಗುಣಮಟ್ಟದ ನಗರವಾಗಿ ಬೆಳೆಯಬೇಕು ಈ ನಿಟ್ಟಿನಲ್ಲಿ ಸಾಮೂಹಿಕ ಪ್ರಯತ್ನದ ಅಗತ್ಯವಿದೆ ಎಂದು ರೋಹನ್ ಕಾರ್ಪೋರೇಷನ್‌ನ ಸ್ಥಾಪಕ ಮತ್ತು ಅಧ್ಯಕ್ಷ ರೋಹನ್ ಮೊಂತೇರೊ ತಿಳಿಸಿದ್ದಾರೆ. ಅವರು ಗುರುವಾರ ಮಂಗಳೂರು ಪ್ರೆಸ್ ಕ್ಲಬ್ ವತಿಯಿಂದ ನಗರದ ಪತ್ರಿಕಾ ಭವನದಲ್ಲಿ ನಡೆದ ಪ್ರೆಸ್ ಕ್ಲಬ್ ಗೌರವ ಅತಿಥಿ ಕಾರ್ಯಕ್ರಮದಲ್ಲಿ ಗೌರವ ಸ್ವೀಕರಿಸಿ ಮಾತನಾಡುತ್ತಿದ್ದರು. ಮಂಗಳೂರು ನಗರ ಇನ್ನಷ್ಟು ಬೆಳೆಯಲು ಬೇಕಾದ ನೈಸರ್ಗಿಕ ಸೌಲಭ್ಯ ವನ್ನು ಹೊಂದಿದೆ.ಮಂಗಳೂರು ಜಲ, ವಾಯು, ನೆಲ ಸಾರಿಗೆ ಸಂಪರ್ಕ ಹೊಂದಿರುವ ನಗರ.ಹೆಚ್ಚು ಸುಶಿಕ್ಷಿತ […]

ಉಡುಪಿ: ಗರುಡ ಗ್ಯಾಂಗ್ ಪುಂಡರ ಮೇಲೆ ಗೂಂಡಾ ಕಾಯ್ದೆ ಯಾಕಿಲ್ಲ – ಶ್ರೀನಿಧಿ ಹೆಗ್ಡೆ

ಉಡುಪಿ: ಉಡುಪಿ ನಗರದಲ್ಲಿ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ 169 ಎ ಯಲ್ಲಿ ಮಾರಕಾಸ್ತ್ರಗಳಿಂದ ಎರಡು ಗುಂಪುಗಳು ಹಲ್ಲೆ ನಡೆಸಿ ವಾರ ಕಳೆದರೂ ಪೋಲಿಸ್ ಇಲಾಖೆ ಆರೋಪಿಗಳನ್ನು ಪತ್ತೆ ಹಚ್ಚಲು ವಿಫಲವಾಗಿದೆ. ಅನೇಕ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿರುವ ಗರುಡ ಗ್ಯಾಂಗಿನ ಪುಂಡರ ಮೇಲೆ ಗೂಂಡಾ ಕಾಯ್ದೆಯನ್ನು ಯಾಕೆ ಹಾಕಿಲ್ಲ ಎಂದು ಬಿಜೆಪಿ ಜಿಲ್ಲಾ ಮಾಧ್ಯಮ ಸಂಚಾಲಕ ಹಾಗು ಹೈಕೋರ್ಟ್ ನ್ಯಾಯವಾದಿ ಶ್ರೀನಿಧಿ ಹೆಗ್ಡೆ ಪ್ರಶ್ನಿಸಿದ್ದಾರೆ. ಮೇ.18 ರಂದು ರಾತ್ರಿ ಘಟನೆ ನಡೆದಿದ್ದರೂ, ಎರಡು ದಿನಗಳ ತಡವಾಗಿ ಮೇ […]

ಗುಜರಾತ್: ರಾಜ್‌ಕೋಟ್‌’ನ ಗೇಮಿಂಗ್ ಝೋನ್‌ನಲ್ಲಿ ಅಗ್ನಿ ಅವಘಡ, 24 ಮಂದಿ ಸಾವು.

ಗುಜರಾತ್: ಗುಜರಾತ್‌ನ ರಾಜ್‌ಕೋಟ್‌ನಲ್ಲಿರುವ ಗೇಮಿಂಗ್ ಝೋನ್‌ನಲ್ಲಿ ಶನಿವಾರ ಸಂಜೆ ಭಾರಿ ಬೆಂಕಿ ಕಾಣಿಸಿಕೊಂಡು ಕನಿಷ್ಠ ಇಪ್ಪತ್ತನಾಲ್ಕು ಜನರು ಸಾವನ್ನಪ್ಪಿದ್ದಾರೆ. ಘಟನಾ ಸ್ಥಳಕ್ಕೆ ಅಗ್ನಿಶಾಮಕದವರನ್ನು ರವಾನಿಸಲಾಗಿದೆ. ಯುವರಾಜ್ ಸಿಂಗ್ ಸೋಲಂಕಿ ಒಡೆತನದ ಟಿಆರ್‌ಪಿ ಗೇಮಿಂಗ್ ಝೋನ್‌ಗೆ ಅಧಿಕಾರಿಗಳಿಂದ ಅಗತ್ಯ ಅಗ್ನಿ ಸುರಕ್ಷತಾ ಕ್ಲಿಯರೆನ್ಸ್ ಇಲ್ಲದಿರುವುದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಘಟನೆಯ ನಂತರ ಟಿಆರ್‌ಪಿ ಆಟದ ವಲಯದ ಮಾಲೀಕರು ಮತ್ತು ವ್ಯವಸ್ಥಾಪಕರನ್ನು ಪೊಲೀಸ್ ಠಾಣೆಗೆ ಕರೆದೊಯ್ಯಲಾಗಿದೆ ಎಂದು ರಾಜ್‌ಕೋಟ್ ನಗರ ಪೊಲೀಸ್ ಕಮಿಷನರ್ ಭಾರ್ಗವ ತಿಳಿಸಿದ್ದಾರೆ.

ಉಡುಪಿ: ಬಿಜೆಪಿಯಿಂದ ಮಾಜಿ ಶಾಸಕ ರಘುಪತಿ ಭಟ್‌ ಉಚ್ಚಾಟನೆ

ಉಡುಪಿ: ವಿಧಾನಪರಿಷತ್ ಚುನಾವಣೆಗೆ ನೈರುತ್ಯ ಪದವೀಧರರ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯ ವಿರುದ್ಧ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಮಾಜಿ ಶಾಸಕ ರಘುಪತಿ ಭಟ್‌ ಅವರನ್ನು ಬಿಜೆಪಿ ಪಕ್ಷದಿಂದ ಉಚ್ಚಾಟಿಸಿ ರಾಜ್ಯ ಬಿಜೆಪಿ ಶಿಸ್ತು ಸಮಿತಿ ಅಧ್ಯಕ್ಷ ಲಿಂಗರಾಜು ಪಾಟೀಲ್‌ ಆದೇಶಿಸಿದ್ದಾರೆ. ಪಕ್ಷದ ಸೂಚನೆಯನ್ನು ಕಡೆಗಣಿಸಿ ಪ್ರಸಕ್ತ ವಿಧಾನಪರಿಷತ್ ಚುನಾವಣೆಗೆ ನೈರುತ್ಯ ಪದವೀಧರರ ಕ್ಷೇತ್ರದಿಂದ ಪಕ್ಷದ ಅಧಿಕೃತ ಅಭ್ಯರ್ಥಿಯ ವಿರುದ್ಧ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿ, ಪಕ್ಷದ ಮುಜುಗರಕ್ಕೆ ಕಾರಣರಾಗಿದ್ದೀರಿ. ಇದು ಪಕ್ಷದ ಶಿಸ್ತು ಉಲ್ಲಂಘನೆಯಾಗಿದೆ. ಆದ್ದರಿಂದ ತಮ್ಮನ್ನು ತಕ್ಷಣದಿಂದ ಜಾರಿಗೆ […]