ಪರಿಷತ್ ಚುನಾವಣೆಯಲ್ಲಿ ಮೈತ್ರಿಕೂಟ ಇಬ್ಬರನ್ನೂ ಬಹುಮತದಿಂದ ಗೆಲ್ಲಿಸೋಣ.

ಬಂಟ್ವಾಳ: ಎನ್ ಡಿಎ ಮೈತ್ರಿಕೂಟದ ಜೆಡಿಎಸ್ ಅಭ್ಯರ್ಥಿ ಎಸ್.ಎಲ್.ಭೋಜೇಗೌಡ್ರು, ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಧನಂಜಯ ಸರ್ಜಿ ಅವರನ್ನು ಅತ್ಯಂತ ಬಹುಮತದಿಂದ ಗೆಲ್ಲಿಸಲು ಎಲ್ಲರೂ ಒಂದಾಗಿ ಕೆಲಸ ಮಾಡೋಣ ಎಂದು ಬಂಟ್ವಾಳ ಶಾಸಕ ರಾಜೇಶ್ ನಾಯಕ್ ಹೇಳಿದರು. ಬಂಟ್ವಾಳ ಸರ್ಶ ಕಲಾ ಮಂದಿರದಲ್ಲಿ ನಡೆದ ಬಿಜೆಪಿ ಕಾರ್ಯಕರ್ತರ ಸಭೆಯನ್ನುದ್ದೇಶಿಸಿ ಅವರು ಮಾತನಾಡಿ, ಹೆಚ್ಚು ನೋಂದಣಿ ಮಾಡಿದ ಕ್ಷೇತ್ರವಿದು, ಈ ಭಾಗದಿಂದ ಅಭ್ಯರ್ಥಿಗಳಿಗೆ ಹೆಚ್ಚಿನ ಲೀಡ್ ಕೊಡಲು ಶ್ರಮಿಸುವುದಾಗಿ ಹೇಳಿದರು. ನೈರುತ್ಯ ಪದವೀಧರ ಕ್ಷೇತ್ರದ ಸಹ ಸಂಚಾಲಕರಾದ ವಿಕಾಸ್ […]

ಪಳ್ಳಿ: ಟಿಪ್ಪರ್- ಬೈಕ್ ನಡುವೆ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು, ಇಬ್ಬರಿಗೆ ಗಂಭೀರ ಗಾಯ.

ಕಾರ್ಕಳ: ಟಿಪ್ಪರ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟು, ಇಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಸೋಮವಾರ ಬೆಳಿಗ್ಗೆ ಕಾರ್ಕಳ ತಾಲೂಕಿನ ಪಳ್ಳಿ ಗರಡಿ ಸಮೀಪ ಸಂಭವಿಸಿದೆ. ಕ್ರಶರ್ ನಿಂದ ಬರುತ್ತಿದ್ದ ಟಿಪ್ಪರ್ ಚಾಲಕನ ಅತೀವೇಗವೇ ಈ ದುರ್ಘಟನೆಗೆ ಕಾರಣ ಎನ್ನಲಾಗಿದೆ. ಗಾಯಾಳುಗಳನ್ನು ನೇಪಾಳ ಮೂಲದ ಪ್ರಸನ್ನ (26) ಹಾಗೂ ಬಚ್ಚನ್ ಡಿಸೋಜ(26) ಎಂದು ಗುರುತಿಸಲಾಗಿದೆ. ಮೃತಪಟ್ಟ ವ್ಯಕ್ತಿಯ ಗುರುತು ಇನ್ನಷ್ಟೇ ಪತ್ತೆಯಾಗಬೇಕಿದ್ದು, ಮೃತದೇಹವನ್ನು ಕಾರ್ಕಳ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಕಾರ್ಕಳ […]

ರಾಜ್ಯದಲ್ಲಿ ಮುಂದಿನ 5 ದಿನಗಳ ಕಾಲ ಭಾರೀ ಮಳೆ.

ರಾಜ್ಯದಲ್ಲಿ ಜೂನ್‌ ಮೊದಲನೇ ವಾರದಲ್ಲಿ ಮುಂಗಾರು ಪ್ರವೇಶವಾಗುವ ಸಾಧ್ಯತೆಗಳಿವೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ರಾಜ್ಯದಲ್ಲಿ ಈ ಬಾರಿ ಮುಂಗಾರು ಜೂನ್‌ ಮೊದಲ ವಾರದಲ್ಲಿ ಅಂದರೆ ಅಂದಾಜು ಜೂ.5ರಂದು ರಾಜ್ಯವನ್ನು ಪ್ರವೇಶಿಸುವ ಸಾಧ್ಯತೆಗಳಿವೆ. ಕಳೆದ ವರ್ಷ ರಾಜ್ಯದಲ್ಲಿ ಬರ ಉಂಟಾಗಿದ್ದ ಹಿನ್ನೆಲೆಯಲ್ಲಿ ಮೇ ಅಂತ್ಯಕ್ಕೆ ಮುಂಗಾರು ಪ್ರವೇಶ ವಾಗಿ ಬಳಿಕ ಮಳೆಯ ಪ್ರಮಾಣ ಕಡಿಮೆಯಾಗಿತ್ತು. ಈ ಬಾರಿ ವಾಡಿಕೆಯಷ್ಟು ಮಳೆ ಸುರಿಯುವ ಸಾಧ್ಯತೆಗಳಿವೆ. ಸುಮಾರು ಮೇ 22ರಂದು ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿ ಮಳೆಯಾಗುವ […]

ಕಾರ್ಕಳ: ಶಿರ್ಲಾಲು ಗ್ರಾಮದಲ್ಲಿ ಇಬ್ಬರು ನೀರುಪಾಲು.

ಕಾರ್ಕಳ: ತಾಲೂಕಿನ ಶಿರ್ಲಾಲು ಗ್ರಾಮದ ಮುಗೆರ್ಕಳ ಸಮೀಪದ ಉಬ್ಬರಬೈಲು ಎಂಬಲ್ಲಿ ಮೀನು ಹಿಡಿಯಲು‌‍ ಹೋಗಿದ್ದ ಇಬ್ಬರು ನೀರು ಪಾಲಾದ ಘಟನೆ ಮೇ.19 ರಂದು ಸಂಭವಿಸಿದೆ. ನಿವಾಸಿ ಹರೀಶ್ ಪೂಜಾರಿ (48) ಮತ್ತು ಅವರ ಅಕ್ಕನ ಮಗ ಕಾರ್ಕಳ ಕ್ರೈಸ್ಟ್ ಕಿಂಗ್ ಕಾಲೇಜು ವಿದ್ಯಾರ್ಥಿ ಹೃತೇಶ್ ಪೂಜಾರಿ (18) ಉಬ್ಬರಬೈಲು ಗುಂಡಿಯಲ್ಲಿ ಮೀನು ಹಿಡಿಯಲು ಹೋಗಿದ್ದ ಸಂದರ್ಭ ನೀರಿನ ಸುಳಿಗೆ ಸಿಕ್ಕಿ ಅಸುನೀಗಿದ್ದಾರೆ. ಘಟನಾ ಸ್ಥಳಕ್ಕೆ ಅಜೆಕಾರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಜೆ.ಇ.ಇ ಮೈನ್-ಬ್ಯಾಚುಲರ್ ಆಫ್ ಆರ್ಕಿಟೆಕ್ಚರ್ ಅಂತಿಮ ಫಲಿತಾಂಶ ಪ್ರಕಟ.

ಕಾರ್ಕಳ: ರಾಷ್ಟ್ರಮಟ್ಟದಲ್ಲಿ ಎನ್.ಟಿ.ಎ ನಡೆಸುವ ಜೆ.ಇ.ಇ.ಮೈನ್ – ಬ್ಯಾಚುಲರ್ ಆಫ್ ಆರ್ಕಿಟೆಕ್ಚರ್ -2024 ಅಂತಿಮ ಪರೀಕ್ಷೆಯ ಫಲಿತಾಂಶದಲ್ಲಿ ಕಾರ್ಕಳ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ 9 ಮಂದಿ ವಿದ್ಯಾರ್ಥಿಗಳು 99ಕ್ಕಿಂತ ಅಧಿಕ ಪರ್ಸಂಟೇಜ್ ಗಳಿಸಿರುತ್ತಾರೆ. ವಿದ್ಯಾರ್ಥಿಗಳಾದ ಬಿಪಿನ್ ಜೈನ್.ಬಿ.ಎಂ. 99.9754815ಪರ್ಸಂಟೇಜ್ (ಗಣಿತ ಶಾಸ್ತ್ರ 100 ಪರ್ಸಂಟೇಜ್, ಆಲ್ ಇಂಡಿಯಾ ರ್ಯಾಂಕ್ 22), ಕೇದಾರ್ ರಮೇಶ್ ಕುಲಕರ್ಣಿ 99.9670351 ಪರ್ಸಂಟೇಜ್(ಆಲ್ ಇಂಡಿಯಾ ರ್ಯಾಂಕ್ 32), ಪ್ರಣವ್ ಕುಮಾರ್ ಭಂಡಿ 99.9069226 ಪರ್ಸಂಟೇಜ್ (ಆಲ್ ಇಂಡಿಯಾ ರ್ಯಾಂಕ್ 75), ಚೈತನ್ಯ […]