ಬಂಡೆಗೆ ಡಿಕ್ಕಿ ಹೊಡೆದ ಆಳಸಮುದ್ರ ಬೋಟ್; ಮೀನುಗಾರರು ಬಚಾವ್, 60 ಲಕ್ಷ ರೂ.ನಷ್ಟ

ಉಡುಪಿ: ಜಿಲ್ಲೆಯ ಬೈಂದೂರಿನಿಂದ ಸುಮಾರು 13 ನಾಟಿಕಲ್ ಮೈಲು ದೂರದಲ್ಲಿ ಆಳಸಮುದ್ರ ಬೋಟ್ ಬಂಡೆಗೆ ಡಿಕ್ಕಿ ಹೊಡೆದು ಸುಮಾರು 60 ಲಕ್ಷ ರೂ.ನಷ್ಟ ಸಂಭವಿಸಿದೆ. ಬೋಟ್‌ನಲ್ಲಿದ್ದ ಮೀನುಗಾರರು ಅಪಾಯದಿಂದ ಪಾರಾಗಿದ್ದಾರೆ. ಮಲ್ಪೆಯಿಂದ ಹೊರಟಿದ್ದ ಕುಲಮಹಾಸ್ತ್ರೀ ಫಿಶರೀಶ್ ಆಳಸಮುದ್ರ ಬೋಟ್ ಭಟ್ಕಳದತ್ತ ಮೀನುಗಾರಿಕೆಗೆ ಹೋಗುತ್ತಿದ್ದಾಗ ಈ ಘಟನೆ ಸಂಭವಿಸಿದೆ. ಪ್ರಾರಂಭದಲ್ಲಿ ಮೀನಿಗೆ ಬಲೆ ಹಾಕಿ ಎಳೆದುಕೊಳ್ಳುವಾಗ ಆಕಸ್ಮಿಕವಾಗಿ ಬೋಟಿನ ಪ್ಯಾನ್‌ಗೆ ಬಲೆ ಬಿದ್ದು ಇಂಜಿನ್ ಸ್ಥಗಿತಗೊಂಡಿದೆ. ಹತ್ತಿರದಲ್ಲಿದ್ದ ಸಾಯಿ ಸಾಗರ್ ಬೋಟ್‌ನವರು ನೆರವಿಗೆ ಬಂದಿದ್ದರು. ಬಳಿಕ ಬೋಟ್‌ಅನ್ನು ಹಗ್ಗ […]
ಶಿಕ್ಷಕರು ಕೋಮು ಪ್ರಚೋದನೆಯ ವಿಚಾರಗಳನ್ನು ವಿದ್ಯಾರ್ಥಿಗಳ ಮನಸ್ಸಿನಲ್ಲಿ ತುಂಬಿಸುವುದು ಸರಿಯಲ್ಲ

ಉಡುಪಿ: ಶಿಕ್ಷಕರಾದವರು ತನ್ನ ಕಾಲೇಜಿನಲ್ಲಿ ಇರುವ ವಿದ್ಯಾರ್ಥಿಗಳ ಮನಸ್ಸಿನಲ್ಲಿ ಭವಿಷ್ಯ ರೂಪಿಸುವ ವಿಚಾರಗಳನ್ನು ಹೇಳುವ ಬದಲು ಕೋಮು ಪ್ರಚೋದನೆಗೆ ಸಂಬಂಧಿಸಿದ ವಿಚಾರಗಳನ್ನು ತುಂಬಿಸುವುದು ಸರಿಯಲ್ಲ ಇದು ನಮ್ಮ ಜಿಲ್ಲೆಯ ಸಂಸದರು ಮತ್ತು ಶಾಸಕರೂ ಕೂಡ ಅರ್ಥ ಮಾಡಿಕೊಂಡು ಜನಸೇವೆ ಮಾಡಲಿ ಎಂದು ಉಡುಪಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಕಾಂಚನ್ ಸಲಹೆ ನೀಡಿದ್ದಾರೆ. ಕುಂದಾಪುರದ ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಿಗೆ ನೀಡಲಾಗಿರುವ ಉತ್ತಮ ಪ್ರಾಂಶುಪಾಲ ಪ್ರಶಸ್ತಿಯನ್ನು ತಡೆಹಿಡಿದಿರುವ ಕುರಿತು ಬಿಜೆಪಿ ನಾಯಕರು ಒಬ್ಬರ ನಂತರ ಒಬ್ಬರು […]
ಉಡುಪಿ: ಆನ್ ಲೈನ್ ಟ್ರೇಡಿಂಗ್ ವಂಚನೆ ಪ್ರಕರಣ; ಇನ್ನೊಬ್ಬ ಆರೋಪಿಯ ಬಂಧನ, 80,000 ರೂ. ನಗದು ವಶ.

ಉಡುಪಿ: ಉಪೇಂದ್ರ ಅಂಬಲಪಾಡಿ ಉಡುಪಿರವರಿಗೆ ಅಪರಿಚಿತ ವ್ಯಕ್ತಿಗಳು ಕರೆ ಮಾಡಿ ವಾಟ್ಸಾಪ್ ನಲ್ಲಿ ಮೋತಿಲಾಲ್ ಒಸ್ವಾಲ್ ಪ್ರೈವೇಟ್ ಲಿಮಿಟೆಡ್ ಮ್ಯಾನೇಜ್‌ಮೆಂಟ್ ಗ್ರೂಪ್ ಸೇರಿಸಿದ್ದು. ಮೋತಿಲಾಲ್ ಒಸ್ವಾಲ್ ಪ್ರೈವೇಟ್ ಲಿಮಿಟೆಡ್ ಮ್ಯಾನೇಜ್‌ಮೆಂಟ್ ಗ್ರೂಪ್‌ನ VIP-203-845 ಎಂಬ ಅಕೌಂಟ್ ನ್ನು ನೀಡಿರುತ್ತಾರೆ. ಪಿರ್ಯಾದಿದಾರರಿಗೆ ಮೊ.ನಂ 7842874635 ಮತ್ತು 6391854496 ನೇದರಿಂದ ವಾಟ್ಸಾಪ್ ನಲ್ಲಿ ಟ್ರೇಡಿಂಗ್ ಬಗ್ಗೆ ಹಾಗೂ ಲಾಭಾಂಶಗಳ ಬಗ್ಗೆ ಮಾಹಿತಿ ತಿಳಿಸಿ ಪಿರ್ಯಾದಿದಾರರನ್ನು ನಂಬಿಸಿ, ಹೆಚ್ಚಿನ ಲಾಭಾಂಶ ಪಡೆಯಬಹುದೆಂದು ಆಸೆ ತೋರಿಸಿ,ಒಟ್ಟು 33,10,000/- ಹಣವನ್ನು ಡಿಪಾಸಿಟ್ ಮಾಡಿಸಿಕೊಂಡಿರುತ್ತಾರೆ. ತದನಂತರ […]
ಮದ್ಯ ಮಾರಾಟ ನಿಷೇಧ: ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಆದೇಶ

ಉಡುಪಿ: ಗಣೇಶ ಹಬ್ಬದ ಆಚರಣೆಯ ಪ್ರಯುಕ್ತ ಹೆಚ್ಚಿನ ಸ್ಥಳಗಳಲ್ಲಿ ಗಣೇಶ ವಿಗ್ರಹ ವಿಸರ್ಜನೆಯು ನಡೆಯುವ ಸಂದರ್ಭದಲ್ಲಿ ಬಾರ್ ಮತ್ತು ವೈನ್‌ಶಾಪ್‌ಗಳು ತೆರೆದಿದ್ದಲ್ಲಿ ಮದ್ಯಪಾನಾಸಕ್ತರು ಮದ್ಯಪಾನಮಾಡಿ ಗಲಭೆಮಾಡುವ ಸಾಧ್ಯತೆ ಇದ್ದು ಈ ಹಿನ್ನೆಲೆಯಲ್ಲಿ ಕಾನೂನು ಸುವ್ಯವಸ್ಥೆ ಮತ್ತು ಸಾರ್ವಜನಿಕ ಶಾಂತಿ ಕಾಪಾಡುವ ದೃಷ್ಟಿಯಿಂದ ಕರ್ನಾಟಕ ಅಬಕಾರಿ (ಭಾರತೀಯ ಮತ್ತು ವಿದೇಶಿಯ ಮದ್ಯ ಮಾರಾಟ) ನಿಯಮಗಳು 1968 ರ ನಿಯಮ 3 ರಡಿ ನೀಡಿರುವ ಮದ್ಯ ಮಾರಾಟದ ಸನ್ನದುಗಳನ್ನು ಹೊಂದಿರುವ ಅಂಗಡಿಗಳಲ್ಲಿ ಕರ್ನಾಟಕ ಅಬಕಾರಿ ಕಾಯ್ದೆ 1965 ಕಲಂ 21 […]
ನ.17, 18 ರಂದು ಉಡುಪಿ ನ್ಯಾಯಾಲಯ ಮತ್ತು ವಕೀಲರ ಸಂಘದ ಶತಮಾನೋತ್ತರ ರಜತ ಸಂಭ್ರಮ

ಉಡುಪಿ: ಉಡುಪಿ ನ್ಯಾಯಾಲಯ ಮತ್ತು ವಕೀಲರ ಸಂಘಕ್ಕೆ 125 ವರ್ಷ ತುಂಬಿದ್ದು, ಈ ಹಿನ್ನಲೆಯಲ್ಲಿ ಇದೇ ನವೆಂಬರ್ 17 ಮತ್ತು 18 ರಂದು ಉಡುಪಿ ನ್ಯಾಯಾಲಯದ ಆವರಣದಲ್ಲಿ 2 ದಿನಗಳ ಕಾಲ ಶತಮಾನೋತ್ತರ ರಜತ ಸಂಭ್ರಮವನ್ನು ಆಚರಿಸಲು ಉಡುಪಿ ವಕೀಲರ ಸಂಘ ನಿರ್ಧರಿಸಿದೆ. ಈ ಬಗ್ಗೆ ಶುಕ್ರವಾರ ನಡೆದ ಸುದ್ದಿಗೋಷ್ಠಿಯಲ್ಲಿ ಶತಮಾನೋತ್ತರ ರಜತ ಮಹೋತ್ಸವ ಸಮಿತಿಯ ಅಧ್ಯಕ್ಷ ಮಟ್ಟಾರ್ ರತ್ನಾಕರ್ ಹೆಗ್ಡೆ ಮಾಹಿತಿ ನೀಡಿದರು. ಉಡುಪಿಯ ಮೊದಲ ನ್ಯಾಯಾಲಯ ಬಾರೂಕೂರಿನಲ್ಲಿ 1899 ರಲ್ಲಿ ಸ್ಥಾಪನೆಯಾಗಿತ್ತು. ಆಗ ಅದನ್ನು […]