ಅಪಘಾತದಲ್ಲಿ ಕಿರುತೆರೆ ನಟಿ ಪವಿತ್ರಾ ಜಯರಾಂ ನಿಧನ

ಬೆಂಗಳೂರು: ಕಿರುತೆರೆ ನಟಿ ಪವಿತ್ರಾ ಜಯರಾಂ ಅಪಘಾತದಲ್ಲಿ ದುರಂತ ಸಾವು ಕಂಡಿದ್ದಾರೆ. ಆಂಧ್ರಪ್ರದೇಶದ ಕರ್ನೂಲು ಸಮೀಪ ಅಪಘಾತಕ್ಕೀಡಾಗಿ ಪವಿತ್ರ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೂಲತಃ ಕನ್ನಡಿಗರಾದ ಪವಿತ್ರ ಜಯರಾಂ, ತೆಲುಗಿನ ‘ತ್ರಿನಯನಿ’ ಧಾರವಾಹಿಯಲ್ಲಿ ಜನಪ್ರಿಯರಾಗಿದ್ದರು.ಕನ್ನಡದ ‘ರೋಬೋ ಫ್ಯಾಮಿಲಿ’ ಮೂಲಕ ಕಿರುತೆರೆಗೆ ಎಂಟ್ರಿಕೊಟ್ಟಿದ್ದ ಪವಿತ್ರ ಮೂಲತಃ ಮಂಡ್ಯ ತಾಲೂಕಿನ ಹನಕೆರೆಯವರು. ನಟಿ ಪವಿತ್ರಾ ಅವರು ರೋಬೋ ಫ್ಯಾಮಿಲಿ, ಜೋಕಾಲಿ, ನೀಲಿ, ರಾಧಾರಮಣ ಧಾರವಾಹಿಯಲ್ಲಿ ನಟಿಸಿ ಜನಪ್ರಿಯರಾಗಿದ್ದರು.ತೆಲುಗಿನ ತ್ರಿನಯನಿ ಮೂಲಕ ತೆಲುಗರ ಮನೆಮಾತಾಗಿದ್ದ ಪವಿತ್ರ ಇಂದು ಮುಂಜಾನೆ ಅಪಘಾತದಲ್ಲಿ ಸಾವಿಗೀಡಾಗಿದ್ದಾರೆ. ಆಂಧ್ರಪ್ರದೇಶದ […]

ಕಾರ್ಕಳ ಜ್ಞಾನಸುಧಾ: ಅರ್ಹ ವಿದ್ಯಾರ್ಥಿಗಳಿಗೆ ವಾಣಿಜ್ಯ ವಿಭಾಗದಲ್ಲಿ ಉಚಿತ ಶಿಕ್ಷಣಕ್ಕೆ ಅರ್ಜಿ ಅಹ್ವಾನ

ಗಣಿತನಗರ: ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್(ರಿ.) ಇದರ ಆಡಳಿತಕ್ಕೆ ಒಳಪಟ್ಟ ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳಲ್ಲಿ ಸಮಾಜಮುಖಿ ಕಾರ್ಯಕ್ರಮದ ಒಂದು ಭಾಗವಾಗಿ ಹಲವಾರು ವರ್ಷಗಳಿಂದ 5 ರಿಂದ 10ನೇ ತರಗತಿಯವರೆಗೆ ಪ್ರತೀ ತರಗತಿಗೆ 5 ವಿದ್ಯಾರ್ಥಿಗಳಂತೆ ಉಚಿತ ಶಿಕ್ಷಣವನ್ನು ಸ್ಥಳೀಯ ಬಡ ಅರ್ಹ ಮಕ್ಕಳಿಗೆ ನೀಡಲಾಗುತ್ತಿದ್ದು, ಕಳೆದ ಶೈಕ್ಷಣಿಕ ವರ್ಷದಿಂದ ಈ ಉಚಿತ ಶಿಕ್ಷಣವನ್ನು ಕಾಲೇಜು ವಿಭಾಗದಲ್ಲಿ ವಾಣಿಜ್ಯ ವಿಭಾಗಕ್ಕೂ ವಿಸ್ತರಿಸಲಾಗಿದೆ. ಪ್ರಸ್ತುತ ಕಾರ್ಕಳ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನಲ್ಲಿ ವಾಣಿಜ್ಯ ವಿಭಾಗದಲ್ಲಿ ಇಕೋನಾಮಿಕ್ಸ್, ಬಿಸಿನೆಸ್ ಸ್ಟಡಿಸ್, ಎಕೌಂಟೆನ್ಸಿ […]

ಉಡುಪಿ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಎಸ್ಎಸ್ಎಲ್ ಸಿ ವಿದ್ಯಾರ್ಥಿನಿಯರ ಸಾಧನೆ.

ಉಡುಪಿ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ 128 ವಿದ್ಯಾರ್ಥಿನಿಯರು ಪರೀಕ್ಷೆಯನ್ನು ಬರೆದಿದ್ದು ಎಲ್ಲರೂ ಉತ್ತೀರ್ಣರಾಗಿ ಶೇಕಡಾ 100 ಫಲಿತಾಂಶ ದಾಖಲಾಗಿರುತ್ತದೆ. ಅವರಲ್ಲಿ 68 ವಿದ್ಯಾರ್ಥಿನಿಯರು ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾಗಿರುತ್ತಾರೆ. 47 ವಿದ್ಯಾರ್ಥಿನಿಯರು ವಿಶಿಷ್ಟ ಶ್ರೇಣಿಯ ಅಂಕವನ್ನು ಗಳಿಸಿರುತ್ತಾರೆ 27 ಜನ A+ ಗ್ರೇಡನ್ನು ಪಡೆಯುವಲ್ಲಿ ಸಫಲರಾಗಿದ್ದಾರೆ. 9 ವಿದ್ಯಾರ್ಥಿನಿಯರು 600ಕ್ಕಿಂತ ಅಧಿಕ ಅಂಕಗಳನ್ನು ಗಳಿಸಿದ್ದಾರೆ. ಎಲ್ಲ ಸಾಧಕ ವಿದ್ಯಾರ್ಥಿನಿಯರಿಗೆ ಅಭಿನಂದನೆಗಳನ್ನು ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯವರು ಸಲ್ಲಿಸಿರುತ್ತಾರೆ.

ಆರೂರು ಮಹತೋಭಾರ ಶ್ರೀ ವಿಷ್ಣುಮೂರ್ತಿ ದೇವಸ್ಥಾನ: ಇಂದು ಶ್ರೀಮನ್ಮಹಾರಥೋತ್ಸವ

ಬ್ರಹ್ಮಾವರ: ತಾಲೂಕಿನ ಬ್ರಹ್ಮಾವರ ಆರೂರು ಮಹತೋಭಾರ ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಇಂದು ಶ್ರೀ ಮನ್ಮಹಾರಥೋತ್ಸವ ನಡೆಯಲಿದೆ. ಮೇ.12 ಆದಿತ್ಯವಾರ ನಿತ್ಯಬಲಿ, ಮಹಾಪೂಜೆ, (ಮಧ್ಯಾಹ್ನ 12.30ಕ್ಕೆ) ರಥಾರೋಹಣ, ಮಧ್ಯಾಹ್ನ ಮಹಾ ಅನ್ನಸಂತರ್ಪಣೆ ಸಾಯಂಕಾಲ ಶ್ರೀ ಮನ್ಮಹಾರಥೋತ್ಸವ, ಭೂತಬಲಿ ಶಯನೋತ್ಸವ, ಕವಾಟ ಬಂಧನ ಮೇ.13 ಸೋಮವಾರ ತುಲಾಭಾರ ಸೇವೆ, ಕವಾಟೋದ್ಘಾಟನೆ, ಭಕ್ತಾದಿಗಳ ತುಲಾರೋಹಣ, ನಿತ್ಯಬಲಿ, ವಸಂತ ಸಮಾರಾಧನೆ ರಾತ್ರಿ ಅವಭ್ರತ ಸ್ನಾನ, ಕಟ್ಟೆಪೂಜೆ ಪೂರ್ಣಾಹುತಿ. ಮೇ.14ನೇ ಮಂಗಳವಾರ ಸಂಪ್ರೋಕ್ಷಣೆ, ಕುಂಭಾಭಿಷೇಕ, ಫಲ-ಮಂತ್ರಾಕ್ಷತೆ ಇತ್ಯಾದಿ, ಮಧ್ಯಾಹ್ನ ಸಂತರ್ಪಣೆ ರಾತ್ರಿ ಮಾರಿಪೂಜೆ ನಡೆಯಲಿದೆ.ಮೇ.12 […]