ಜು.20ರಂದು ಮಣಿಪಾಲ MSDCಯಲ್ಲಿ “ಮಣಿ ನೇಯ್ಗೆ” ಕಾರ್ಯಗಾರ.

ಮಣಿಪಾಲ: MSDC ಮಣಿಪಾಲ ಕೌಶಲ್ಯ ಅಭಿವೃದ್ಧಿ ಕೇಂದ್ರ (ಡಾ ಟಿಎಂಎ ಪೈ ಫೌಂಡೇಶನ್‌ನ ಒಂದು ಘಟಕ) ಡ್ರೀಮ್ ಜೋನ್ ನಲ್ಲಿ “ಮಣಿ ನೇಯ್ಗೆ” ಕಾರ್ಯಗಾರ ಜು.20ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 1:00 ರವರೆಗೆ ನಡೆಯಲಿದೆ. ಈ ಕಾರ್ಯಗಾರದಲ್ಲಿ ತಜ್ಞರ ಮಾರ್ಗದರ್ಶನದಿಂದ ಅತ್ಯಾಕರ್ಷಕ ಮಣಿ ನೇಯ್ಗೆ ಮತ್ತು ಆಭರಣಗಳನ್ನು ರಚಿಸಲು ಕಲಿಯಿರಿ. ಹಾಗೂ ಈ ಕೌಶಲ್ಯ ತರಬೇತಿಯ ಸದುಪಯೋಗವನ್ನು ಪಡೆದುಕೊಳ್ಳಿ. ನೋಂದಣಿ ಮಾಡಿ, ಪ್ರವೇಶ ಉಚಿತವಾಗಿದೆ. ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ: ಡ್ರೀಮ್ ಜೋನ್, msdc ಕಟ್ಟಡ, 2 […]
ಜುಲೈ 28ರಂದು ಉಡುಪಿ ಜಿಲ್ಲಾ ಬೇಕರಿ ಮತ್ತು ಖಾದ್ಯ ತಿನಿಸುಗಳ ತಯಾರಕರ ಹಾಗೂ ಮಾರಾಟಗಾರರ ಸಂಘದ ವಾರ್ಷಿಕ ಮಹಾಸಭೆ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ

ಉಡುಪಿ: ಉಡುಪಿ ಜಿಲ್ಲಾ ಬೇಕರಿ ಮತ್ತು ಖಾದ್ಯ ತಿನಿಸುಗಳ ತಯಾರಕರ ಹಾಗೂ ಮಾರಾಟಗಾರರ ಸಂಘದ ವಾರ್ಷಿಕ ಮಹಾಸಭೆ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಇದೇ ಜುಲೈ 28ರಂದು ಬ್ರಹ್ಮಾವರದ ಸಿಟಿ ಸೆಂಟರ್ ಕುಂಕುಮ ಸಭಾಂಗಣ ದಲ್ಲಿ ನಡೆಯಲಿದೆ.ಅಂದು ಬೆಳಿಗ್ಗೆ 11ಗಂಟೆಗೆ ವಾರ್ಷಿಕ ಮಹಾಸಭೆ ಹಾಗೂ ಬೆಳಿಗ್ಗೆ 11.30ಕ್ಕೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಜರುಗಲಿದೆ. ಬೆಂಗಳೂರು ಮಯೂರ್ ಗ್ರೂಪ್ ಹಾಗೂ ಕುಂದಾಪುರ ಕೇಕ್ ವಾಲ ಮತ್ತು ಈಶಾನ್ಯ ಸ್ಟ್ರೀಟ್ ಫುಡ್ ಕೆಫೆ ಚೇರ್ ಮೆನ್ ಆ್ಯಂಡ್ ಮ್ಯಾನೇಜಿಂಗ್ ಡೈರೆಕ್ಟರ್ […]
ಉಡುಪಿ: ತಲೆ ಛಿದ್ರಗೊಂಡ ಸ್ಥಿತಿಯಲ್ಲಿ ಯುವಕನ ಶವ ಪತ್ತೆ; ಆತ್ಮಹತ್ಯೆ ಶಂಕೆ

ಉಡುಪಿ: ಸಗ್ರಿ ರೈಲು ಸೇತುವೆ ಸಮೀಪದ ರೈಲು ಹಳಿಯ ಬಳಿ ವ್ಯಕ್ತಿಯೊಬ್ಬರ ಮೃತದೇಹ ಬುಧವಾರ ತಡರಾತ್ರಿ ಪತ್ತೆಯಾಗಿದೆ.ಮೃತವ್ಯಕ್ತಿಯನ್ನು ಉಡುಪಿ ಮೂಡಬೆಟ್ಟು ನಿವಾಸಿ ಪ್ರಸಾದ್ ಆಚಾರ್ಯ ಎಂದು ಗುರುತಿಸಲಾಗಿದೆ. ವ್ಯಕ್ತಿಯ ತಲೆ ಭಾಗ ಛಿದ್ರಗೊಂಡಿದ್ದು, ರೈಲು ಬಡಿದು ಅಥವಾ ರೈಲು ಹಳಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಸ್ಥಳದಲ್ಲಿ ಆಧಾರ್ ಚೀಟಿ ಪತ್ತೆಯಾಗಿದೆ. ಸ್ಥಳಕ್ಕೆ ಧಾವಿಸಿ ಬಂದ ಮಣಿಪಾಲ ಠಾಣೆಯ ಎಸ್ ಐ ರಾಘವೇಂದ್ರ ಸಿ ಮತ್ತು ಅವರ ತಂಡ ಮಹಜರು ಪ್ರಕ್ರಿಯೆ ನಡೆಸಿದರು. ಬಳಿಕ ಸಮಾಜಸೇವಕ […]
ಉಡುಪಿ: ಮೆಡಿಕಲ್ ಸ್ಟೋರ್ ಅಸೋಸಿಯೇಟ್ ಹುದ್ದೆಗೆ ನೇಮಕಾತಿ

ಉಡುಪಿ: ಉಡುಪಿ ಅಂಬಲಪಾಡಿಯಲ್ಲಿ ಮೆಡಿಕಲ್ ಸ್ಟೋರ್ ಅಸೋಸಿಯೇಟ್ ಹುದ್ದೆಗೆ ನೇಮಕಾತಿ ನಡೆಯಲಿದೆ. ಆಸಕ್ತರು ಸಂಪರ್ಕಿಸಬಹುದು.8762542501
ಉಡುಪಿ: ರಾಧಿಕಾ ಆರ್ ಉಪಾಧ್ಯ ಸಿಎ ಅಂತಿಮ ಪರೀಕ್ಷೆಯಲ್ಲಿ ಉತ್ತೀರ್ಣ.

ಉಡುಪಿ: ಉಡುಪಿ ಚಿಟ್ಪಾಡಿ ಕಸ್ತೂರ್ಬಾ ನಗರದ ರಾಧಿಕಾ ಆರ್ ಉಪಾಧ್ಯ ಅವರು ಸಿಎ ಅಂತಿಮ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಉಡುಪಿಯ ಭಾರತೀಶ & ಅಸೋಸಿಯೇಟ್ಸ್ ನಲ್ಲಿ ಆರ್ಟಿಕಲ್ ಶಿಪ್ ಪೂರೈಸಿರುವ ಅವರು ಕೆ. ರಾಘವೇಂದ್ರ ಉಪಾಧ್ಯಾಯ ಮತ್ತು ರಾಜಲಕ್ಷ್ಮೀ ದಂಪತಿಯ ಪುತ್ರಿ ಆಗಿರುತ್ತಾರೆ.