ಬೆಳ್ತಂಗಡಿ: ಮಾಜಿ ಶಾಸಕ ವಸಂತ ಬಂಗೇರ ನಿಧನ.

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯ ಕಾಂಗ್ರೆಸ್ ಮುಖಂಡ, ಬೆಳ್ತಂಗಡಿಯ ಐದು ಬಾರಿ ಶಾಸಕರಾಗಿದ್ದ ಕೆ.ವಸಂತ ಬಂಗೇರ (79) ಅವರು ಬುಧವಾರ ಸಂಜೆ 4 ಗಂಟೆಗೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ವಸಂತ ಬಂಗೇರಾ ಅವರು ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಬೆಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು, ಇಂದು ಸಂಜೆ ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದಿದ್ದಾರೆ. ಮೇ 9ರಂದು ಮುಂಜಾನೆ ಪಾರ್ಥಿವ ಶರೀರ ಬೆಳ್ತಂಗಡಿಗೆ ಆಗಮಿಸುವ ನಿರೀಕ್ಷೆ ಇದೆ. ನಂತರ ಸಾರ್ವಜನಿಕರ ಅಂತಿಮ ದರ್ಶನಕ್ಕೆ ವ್ಯವಸ್ಥೆ […]
ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಸಮಗ್ರ ಥಲಸ್ಸೆಮಿಯಾ ಕ್ಲಿನಿಕ್ ಪ್ರಾರಂಭ ಹಾಗೂ ಅಂತರರಾಷ್ಟ್ರೀಯ ಥಲಸ್ಸೇಮಿಯಾ ದಿನದ ಆಚರಣೆ

ಮಣಿಪಾಲ, ಮೇ.8: ಥಲಸ್ಸೆಮಿಯಾ ಒಂದು ಆನುವಂಶಿಕ ರಕ್ತದ ಕಾಯಿಲೆಯಾಗಿದೆ. ಈ ಅಸ್ವಸ್ಥತೆಯಲ್ಲಿ ರೋಗಿಯು ಸಾಕಷ್ಟು ಕೆಂಪು ರಕ್ತ ಕಣಗಳನ್ನು ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿರುವುದಿಲ್ಲ. ಆದ್ದರಿಂದ, ಈ ಖಾಯಿಲೆ ಇರುವವರು ರಕ್ತ ಹೀನತೆಯಿಂದ ಬಳಳುತ್ತಾರೆ ಮತ್ತು ಜೀವನಪರ್ಯಂತ ನಿಯಮಿತ ರಕ್ತ ವರ್ಗಾವಣೆಯ ಮೇಲೆ ಅವಲಂಬಿತರಾಗಿರುತ್ತಾರೆ. ಥಲಸ್ಸೆಮಿಯಾ ರೋಗವನ್ನು ತಡೆಗಟ್ಟುವಿಕೆ, ಗುಣಪಡಿಸುವ ಆಯ್ಕೆಗಳು ಮತ್ತು ಥಲಸ್ಸೆಮಿಯಾ ರೋಗಿಗಳ ಆರೈಕೆಯ ಬಗ್ಗೆ ಜಾಗೃತಿ ಮೂಡಿಸಲು ಅಂತರರಾಷ್ಟ್ರೀಯ ಥಲಸ್ಸೆಮಿಯಾ ದಿನವನ್ನು ಪ್ರತಿವರುಷ ಮೇ 8 ರಂದು ಆಚರಿಸಲಾಗುತ್ತದೆ. ಈ ವರುಷ ಥಲಸ್ಸೆಮಿಯಾ ದಿನದ […]
ವಿಕಸನ: ಉಚಿತ ರಾಜ್ಯ ಮಟ್ಟದ ಬೇಸಿಗೆ ಶಿಬಿರ ಸಂಪನ್ನ

ಸಿದ್ಧಾಂತ್ ಫೌಂಡೇಶನ್ ನ ವತಿಯಿಂದ ಹತ್ತನೇ ತರಗತಿ ವಿದ್ಯಾರ್ಥಿಗಳಿಗೆ ನಡೆದ ರಾಜ್ಯ ಮಟ್ಟದ ಹತ್ತು ದಿನಗಳ ‘ವಿಕಸನ’ ಬೇಸಿಗೆ ಶಿಬಿರವು, ಇತ್ತೀಚಿಗೆ ಅಂಬಲಪಾಡಿಯ ಶ್ರೀ ಜನಾರ್ಧನ ಮಹಾಕಾಳಿ ದೇವಸ್ಥಾನದ ಸಭಾಭವನದಲ್ಲಿ ಸಂಪನ್ನಗೊಂಡಿತು. ಶಿಬಿರದ ವಿದ್ಯಾರ್ಥಿಗಳಿಗೆ ಪ್ರಮಾಣಪತ್ರವನ್ನು ವಿತರಿಸಲಾಯಿತು ಬಳಿಕ ಶಿಬಿರದ ವಿದ್ಯಾರ್ಥಿಗಳಿಂದ ಸಾಂಸ್ಕ್ರತಿಕ ಕಾರ್ಯಕ್ರಮವು ಜರುಗಿತು.10ನೇ ತರಗತಿಯ ವಿದ್ಯಾರ್ಥಿಗಳ ವೈಯಕ್ತಿಕ ಹಾಗೂ ಶೈಕ್ಷಣಿಕ ಬೆಳವಣಿಗೆಗಳಿಗೆ ಪೂರಕವಾಗುವಂತೆ ನುರಿತ ವಿಶೇಷ ತಜ್ಞರಿಂದ ಚಟುವಟಿಕೆ ಆಧಾರಿತ ಕಲಿಕೆಗಳಾದ ವಿಜ್ಞಾನ, ಗಣಿತ, ವಾಣಿಜ್ಯ ಹಾಗೂ ಪ್ರಯೋಗಶಾಲಾ ಪ್ರಯೋಗದ ಕುರಿತು ಮಾಹಿತಿ ಮತ್ತು […]
ಉಡುಪಿ ತಾಲೂಕು ಕಸಾಪ ದಿಂದ ಸಂಸ್ಥಾಪನ ದಿನಾಚರಣೆ ಹಾಗೂ ಉಪನ್ಯಾಸ

ಉಡುಪಿ: ಉಡುಪಿ ಜಿಲ್ಲೆ ಕನ್ನಡ ಸಾಹಿತ್ಯ ಪರಿಷತ್ತು, ಉಡುಪಿ ತಾಲೂಕು ಘಟಕ ಮತ್ತು ಉಪೇಂದ್ರ ಪೈ ಮೆಮೋರಿಯಲ್ ಕಾಲೇಜು ಉಡುಪಿ ಇವರ ಸಹಯೋಗದೊಂದಿಗೆ ಕನ್ನಡ ಸಾಹಿತ್ಯ ಪರಿಷತ್ತಿನ ೧೧೦ ನೇ ಸಂಸ್ಥಾಪನಾ ದಿನಾಚರಣೆ ಮತ್ತು ದತ್ತಿ ಉಪನ್ಯಾಸ ಕಾರ್ಯಕ್ರಮವು ಮೇ ಏಳರಂದು ಮಂಗಳವಾರ ಉಡುಪಿಯ ಉಪೇಂದ್ರ ಪೈ ಮೆಮೋರಿಯಲ್ ಕಾಲೇಜಿನ ನಲ್ಲಿ ನಡೆಯಿತು. ಸಮಾರಂಭವನ್ನು ಜಿಲ್ಲಾಧ್ಯಕ್ಷರಾದ ನೀಲಾವರ ಸುರೇಂದ್ರ ಅಡಿಗ ಉದ್ಘಾಟಿಸಿದರು. ಡಾ. ಕೋಟ ಶಿವರಾಮ ಕಾರಂತ ದತ್ತಿ ಉಪನ್ಯಾಸ ನೀಡಿದ ಸಾಹಿತಿ ಡಾ. ನಿಕೇತನ, ಕಾರಂತರ […]
ಮಂಜೇಶ್ವರ: ಆ್ಯಂಬುಲೆನ್ಸ್- ಕಾರು ನಡುವೆ ಭೀಕರ ಅಪಘಾತ – ಮೂವರು ಸಾವು

ಕಾಸರಗೋಡು: ರಾಷ್ಟ್ರೀಯ ಹೆದ್ದಾರಿಯ ಮಂಜೇಶ್ವರ ಸಮೀಪದ ಕುಂಜತ್ತೂರಿನಲ್ಲಿ ಆ್ಯಂಬುಲೆನ್ಸ್ ಮತ್ತು ಕಾರೊಂದರ ನಡುವೆ ಭೀಕರ ಅಪಘಾತ ಸಂಭವಿಸಿ ಮೂವರು ಮೃತಪಟ್ಟಿರುವ ಘಟನೆ ನಡೆದಿದೆ.ಮೃತರನ್ನು ಶಿವಕುಮಾರ್ (54), ಶರತ್ ಮೆನೋನ್(23) ಮತ್ತು ಸೌರವ್(15) ಎಂದು ಗುರುತಿಸಲಾಗಿದೆ. ಆ್ಯಂಬುಲೆನ್ಸ್ ನಲ್ಲಿದ್ದ ರೋಗಿ ಉಷಾ, ಜೊತೆಗಿದ್ದ ಶಿವದಾಸ್ ಮತ್ತು ಆ್ಯಂಬುಲೆನ್ಸ್ ಚಾಲಕ ಗಾಯಗೊಂಡಿದ್ದಾರೆ. ಕಾಸರಗೋಡಿನಿಂದ ಮಂಗಳೂರು ಕಡೆಗೆ ರೋಗಿಯೊಬ್ಬರನ್ನು ಕರೆದೊಯ್ಯುತ್ತಿದ್ದ ಆ್ಯಂಬುಲೆನ್ಸ್ ಮತ್ತು ಮಂಗಳೂರು ಕಡೆಯಿಂದ ಕಾಸರಗೋಡಿಗೆ ಬರುತ್ತಿದ್ದ ಕಾರು ನಡುವೆ ಈ ಅಪಘಾತ ಸಂಭವಿಸಿದೆ.