ದ.ಕ. ಜಿಲ್ಲೆಯಲ್ಲಿ ನಾಳೆ (ಜು.16) ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ.

ಮಂಗಳೂರು: ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನಲೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ನಾಳೆ (ಜು.16) ಶಾಲಾ-ಕಾಲೇಜುಗಳಿಗೆ ಜಿಲ್ಲಾಡಳಿತ ರಜೆ ಘೋಷಣೆ ಮಾಡಿದೆ. ನಾಳೆ ಅಂಗನವಾಡಿ, ಪ್ರಾಥಮಿಕ, ಪ್ರೌಢ ಹಾಗೂ ಪಿಯು ಕಾಲೇಜು ವಿದ್ಯಾರ್ಥಿಗಳಿಗೆ ರಜೆಯನ್ನು ಘೋಷಿಸಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌ ಆದೇಶ ನೀಡಿದ್ದಾರೆ.

ಭಾರೀ ಮಳೆ: ಉಡುಪಿ ಜಿಲ್ಲೆಯಾದ್ಯಂತ ನಾಳೆ(ಜು.16) ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ.

ಉಡುಪಿ: ಉಡುಪಿ ಜಿಲ್ಲೆಯಲ್ಲಿ ಕಳೆದ ಎರಡು ದಿನಗಳಿಂದ ನಿರಂತರ ಮಳೆಯಾಗುತ್ತಿದೆ. ಹವಾಮಾನ ಇಲಾಖೆ ಜುಲೈ 16ರಂದು ಭಾರೀ ಮಳೆಯಾಗುವ ಮುನ್ಸೂಚನೆ ನೀಡಿದ್ದು, ರೆಡ್‌ ಅಲರ್ಟ್‌ ಘೋಷಿಸಲಾಗಿದೆ. ಈ ಹಿನ್ನೆಲೆಯಲ್ಲಿ ಮುಂಜಾಗೃತ ಕ್ರಮವಾಗಿ ಉಡುಪಿ ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ ಹಾಗೂ ಪದವಿಪೂರ್ವ ಕಾಲೇಜುಗಳಿಗೆ ನಾಳೆ (ಜುಲೈ 16) ರಜೆ ಘೋಷಿಸಿ ಜಿಲ್ಲಾಧಿಕಾರಿ ಡಾ. ವಿದ್ಯಾಕುಮಾರಿ ಆದೇಶ ನೀಡಿದ್ದಾರೆ.ಉಳಿದಂತೆ ಎಲ್ಲಾ ಪದವಿ, ಸ್ನಾತಕೊತ್ತರ ಪದವಿ. ಡಿಪ್ಲೋಮ, ಇಂಜಿನಿಯರಿಂಗ್, ಐ.ಟಿ.ಐ ಗಳಿಗೆ ರಜೆ ಘೋಷಿಸಿರುವುದಿಲ್ಲ.

ಯೋಗಾಸನ ಸ್ಪರ್ಧೆಯಲ್ಲಿ ಸುಷ್ಮಾ ತೆಂಡುಲ್ಕರ್ ಅಂತರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ

ಉಡುಪಿ: ಹತ್ತನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ ಪ್ರಯುಕ್ತ ಎಸ್ ಜಿ ಎಸ್ ಅಂತರಾಷ್ಟ್ರೀಯ ಯೋಗ ಸಂಸ್ಥೆ ಬೆಂಗಳೂರು ಇದರ ವತಿಯಿಂದ ನಡೆದಂತಹ ಅಂತರಾಷ್ಟ್ರೀಯ ಯೋಗಾಸನ ಸ್ಪರ್ಧೆಯಲ್ಲಿ 20 ರಿಂದ 30 ವಯೋಮಿತಿಯ ವಿಭಾಗದಲ್ಲಿ ಸುಷ್ಮಾ ತೆಂಡುಲ್ಕರ್ ಗೋವಿಂದೂರು ಯರ್ಲಪಾಡಿ ಅವರು ಭಾಗವಹಿಸಿ ಆರನೇ ಸ್ಥಾನವನ್ನು ಗಳಿಸಿ ಅಂತರಾಷ್ಟ್ರೀಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಇವರಿಗೆ ನರೇಂದ್ರ ಕಾಮತ್ ಕಾರ್ಕಳ ಹಾಗೂ ಅಶೋಕ್ ಇವರು ಯೋಗ ತರಬೇತಿಯನ್ನು ನೀಡಿರುತ್ತಾರೆ

ಉಡುಪಿ: ಟೀಮ್ ನೇಷನ್ ಫಸ್ಟ್ (ರಿ) ವತಿಯಿಂದ ಆಯೋಜಿಸಿದ್ದ “ಚಿಣ್ಣರ ನಟ್ಟಿ” ಕಾರ್ಯಕ್ರಮ.

ಉಡುಪಿ: ಟೀಮ್ ನೇಷನ್ ಫಸ್ಟ್ (ರಿ) ಇದರ ವತಿಯಿಂದ ಆಯೋಜಿಸಿದ್ದ “ಚಿಣ್ಣರ ನಟ್ಟಿ” ಕಾರ್ಯಕ್ರಮವು ಆದಿತ್ಯವಾರದಂದು ಸಂಕೇಶ ಕಿದಿಯೂರು ಹೊಸ ನೀರಿನ ಟ್ಯಾಂಕ್ ಬಳಿ ಯಶಸ್ವಿಯಾಗಿ ಜರಗಿತು. ಶಾಸಕರಾದ ಯಶ್ಪಾಲ್ ಸುವರ್ಣ , ಮಾಜಿ ಶಾಸಕರಾದ ರಘುಪತಿ ಭಟ್, ಉದ್ಯಮಿ ಪ್ರವೀಣ್ ಶೆಟ್ಟಿ ಕಪ್ಪೆಟ್ಟು ಹಾಗು ಮಲ್ಪೆ ಠಾಣಾಧಿಕಾರಿ ಲೋಹಿತ್ ಕುಮಾರ್ ಪಾಲ್ಗೊಂಡರು. ಟೀಮ್ ನೇಷನ್ ಫಸ್ಟ್ ಅಧ್ಯಕ್ಷರಾದ ಸೂರಜ್ ಕಿದಿಯೂರ್ ಸ್ವಾಗತಿಸಿ ಪ್ರಾಸ್ತಾವಿಕ ಭಾಷಣ ಮಾಡಿದರು. ಸುಮಾರು ೨೦೦ ಶಾಲಾ ಮಕ್ಕಳು, ಸುಮಾರು ೧೫೦ ಸಾರ್ವಜನಿಕರು […]

ʼಮಹಾನಟಿʼ ಸೀಸನ್‌ -1 ರ ವಿನ್ನರ್‌ ಆದ ಮೈಸೂರಿನ ಪ್ರಿಯಾಂಕ.

ಬೆಂಗಳೂರು: ಸಾಂಸ್ಕೃತಿಕ ಕಾರ್ಯಕ್ರಮ, ಹಾಸ್ಯ, ಡ್ರಾಮಾ, ವಿಜೇತೆ ಯಾರು ಎನ್ನುವುದರ ಕುತೂಹಲದಿಂದ ʼಮಹಾನಟಿʼ ಗ್ರ್ಯಾಂಡ್‌ ಫಿನಾಲೆ ಮುಕ್ತಾಯಗೊಂಡಿದ್ದು, ತೀರ್ಪುಗಾರರಾಗಿ ರಮೇಶ್‌ ಅರವಿಂದ್‌ , ಪ್ರೇಮಾ, ತರುಣ್‌ ಸುಧೀರ್‌ ಹಾಗೂ ನಿಶ್ವಿಕಾ ನಾಯ್ಡು ಕಾಣಿಸಿಕೊಂಡಿದ್ದಾರೆ. ಅನೇಕ ಪ್ರದರ್ಶನಗಳು ವೇದಿಕೆಯಲ್ಲಿ ತೀರ್ಪುಗಾರರನ್ನು ಭಾವನಾತ್ಮಕವಾಗಿ ಸೆಳೆದಿತ್ತು. ಕಡೆಯದಾಗಿ ಗಗನಾ, ಶ್ವೇತಾ ಭಟ್, ಧನ್ಯಶ್ರೀ, ಪ್ರಿಯಾಂಕ, ಆರಾಧನಾ ಭಟ್ ಐವರು ಫಿನಾಲೆ ವೇದಿಕೆಗೆ ಹತ್ತಿದ್ದರು. ಈ ಐವರಲ್ಲಿ ಒಬ್ಬರಿಗೆ ʼಮಹಾನಟಿʼ ಚಿನ್ನದ ಕಿರೀಟ ಲಭಿಸಿದೆ. ಮೈಸೂರಿನ ಪ್ರಿಯಾಂಕ ʼಮಹಾನಟಿʼ ಸೀಸನ್‌ -1 ರ […]