ರಮಾಕಾಂತ ಪುರಾಣಿಕರಿಗೆ ಪಿಎಚ್ ಡಿ ಪದವಿ

ರಮಾಕಾಂತ ಪುರಾಣಿಕ್ ಹೆಚ್. ಇವರು ಮಂಡಿಸಿದ ‘Studies on the physical and NLO properties of Halogen substituted novel Chalcones’ ಎಂಬ ಸಂಶೋಧನಾ ಮಹಾಪ್ರಬಂಧಕ್ಕೆ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ಬೆಳಗಾವಿ ಘಟಿಕೋತ್ಸವದಲ್ಲಿ ಪಿಎಚ್ ಡಿ ಪದವಿಯನ್ನು (ಡಾಕ್ಟರೇಟ್) ಪ್ರಧಾನ ಮಾಡಲಾಯಿತು. ರಮಾಕಾಂತ ಪುರಾಣಿಕರು ಎಂಎಸ್ಸಿ, ಎಂಟೆಕ್, ಎಂಫಿಲ್ ಪದವೀಧರರಾಗಿದ್ದು, ಡಾ ರವೀಂದ್ರ ಹೆಚ್ .ಜೆ (ಭೌತಶಾಸ್ತ್ರಮುಖ್ಯಸ್ಥರು, SMVITM ಬಂಟಕಲ್) ಅವರ ಮಾರ್ಗದರ್ಶನದಲ್ಲಿ ಸಂಶೋಧನಾ ಪ್ರಬಂಧ ಮಂಡಿಸಿದ್ದರು. ಪ್ರಸ್ತುತ ಇವರು ಮಂಗಳೂರಿನ ರಥಬೀದಿಯಲ್ಲಿರುವ ಸರ್ಕಾರಿ ಪ್ರಥಮ […]

ಮಣಿಪಾಲ ಶ್ರೀ ಶಾರದ ಟೀಚರ್ ಟ್ರೈನಿಂಗ್ ನಲ್ಲಿ ವಾರ್ಷಿಕೋತ್ಸವ

ಮಣಿಪಾಲ: ಶ್ರೀ ಶಾರದ ಟೀಚರ್ ಟ್ರೈನಿಂಗ್‍ನ ವಾರ್ಷಿಕೋತ್ಸವವು ಎ. 27ರಂದು ಸಂಸ್ಥೆಯಲ್ಲಿ ನಡೆಯಿತು. ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದ ಅದಮಾರ್ ಮಠ ಶಿಕ್ಷಣ ಸಂಸ್ಥೆಗಳ ಸಂಯೋಜಕರಾದ ಶ್ರೀ ಮಂಜುನಾಥ್ ಎ. ವಿ. ಅವರು ಮಾತನಾಡಿ ಶಿಕ್ಷಕಿಯರು ಮಗುವನ್ನು ತಾಯಿಯಂಂತೆ ಪ್ರೀತಿಸಬೇಕು ಹಾಗೂ ತಮ್ಮನ್ನು ಸಂಪೂರ್ಣ ವೃತ್ತಿಯಲ್ಲಿ ತೊಡಗಿಸಿಕೊಳ್ಳಬೇಕು ಎಂದರು. ಇಪ್ಪತ್ತು ಮಕ್ಕಳು ಒಂದು ತರಗತಿಯಲ್ಲಿದ್ದರೆ ನಲವತ್ತು ಕಣ್ಣುಗಳು ನಮ್ಮನ್ನು ವೀಕ್ಷಿಸುತ್ತವೆ ಮತ್ತು ಶಿಕ್ಷಕಿಯ ಪಾತ್ರವೇ ಅಂತಿಮ. ತರಗತಿಯ ಒಂದು ಘಟನೆಯನ್ನು ನೆನಪಿಸಿಕೊಂಡು ಅವರು, “ಒಮ್ಮೆ ತರಗತಿಯಲ್ಲಿ ಮಕ್ಕಳಿಗೆ ಚಿತ್ರಬಿಡಿಸಲು […]

ನಂದಿಕೂರು: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ – ಮಹಿಳೆ ಮೃತ್ಯು.

ಪಡುಬಿದ್ರಿ: ನಗರ ಸಮೀಪ ನಂದಿಕೂರು ಗ್ರಾಮದ ಮುದರಂಗಡಿ ಜಂಕ್ಷನ್‌ ಬಳಿ ಬೆಳಗ್ಗೆ ಕೆಂಪು ಬಣ್ಣದ ವ್ಯಾಗನರ್‌ ಕಾರು ವಿದ್ಯುತ್‌ ಕಂಬಕ್ಕೆ ಢಿಕ್ಕಿಯಾಗಿ, ಮಹಿಳೆಯೊಬ್ಬರು ಮೃತಪಟ್ಟ ಘಟನೆ ನಡೆದಿದೆ. ಮೃತಪಟ್ಟವರು ಪುರುಷೋತ್ತಮ ಆರ್‌. ಆಭ್ಯಂಕರ್‌ ಅವರ ಪತ್ನಿ ಸುಮಂಗಲಾ ಎಂ. (55) ಎಂದು ತಿಳಿದು ಬಂದಿದೆ. ರಾಜ್ಯ ಹೆದ್ದಾರಿ-1ರಲ್ಲಿ ಪಡುಬಿದ್ರಿ ಕಡೆಯಿಂದ ಕಾರ್ಕಳ ಕಡೆಗೆ ಅತೀ ವೇಗ ಹಾಗೂ ಅಜಾಗರೂಕತೆಯಿಂದ ಚಲಾಯಿಸಿಕೊಂಡು ಬಂದ ಪರಿಣಾಮ ಅಪಘಾತ ಸಂಭವಿಸಿದೆ. ಈ ದಂಪತಿ ಕಾರ್ಕಳ ಮಾಳದಲ್ಲಿನ ಉಪನಯನ ಕಾರ್ಯಕ್ರಮಕ್ಕೆ ಮಂಗಳೂರು ಕಾವೂರಿನಿಂದ […]

ದ್ವಿತೀಯ ಪಿ.ಯು.ಸಿ ಮರುಮೌಲ್ಯಮಾಪನ ಫಲಿತಾಂಶ ಪ್ರಕಟ: ಕಾರ್ಕಳದ ಕ್ರಿಯೇಟಿವ್ ಕಾಲೇಜಿನ ಸಾನ್ವಿ ರಾವ್ ರಾಜ್ಯಕ್ಕೆ ಪ್ರಥಮ, ಭಕ್ತಿ ಕಾಮತ್ ರಾಜ್ಯಕ್ಕೆ ಐದನೇ ರ‍್ಯಾಂಕ್

ಶೈಕ್ಷಣಿಕ ಸಾಧನೆಯಲ್ಲಿ ತನ್ನದೇ ಛಾಪು ಮೂಡಿಸುತ್ತಿರುವ ಕಾರ್ಕಳದ ಕ್ರಿಯೇಟಿವ್ ಶಿಕ್ಷಣ ಸಂಸ್ಥೆಯು ರಾಜ್ಯಮಟ್ಟದಲ್ಲಿ ಗಮನಾರ್ಹ ಸಾಧನೆಗೈದಿದ್ದು ವಾಣಿಜ್ಯ ವಿಭಾಗದ ಸಾನ್ವಿ ರಾವ್ ರಾಜ್ಯಕ್ಕೆ ಪ್ರಥಮ ರ‍್ಯಾಂಕ್ ಪಡೆದು ವಿಶೇಷ ಸಾಧನೆಗೈದಿದ್ದಾರೆ. ಸಂಸ್ಕೃತ ಮತ್ತು ಇ.ಬಿ.ಎ.ಸಿ ಯಲ್ಲಿ ತಲಾ 100 ಕ್ಕೆ 100 ಅಂಕಗಳನ್ನು ಪಡೆದುಕೊಂಡಿದ್ದ ಸಾನ್ವಿ ರಾವ್ ಆಂಗ್ಲ ಭಾಷೆಯಲ್ಲಿ 95 ಅಂಕಗಳನ್ನು ಗಳಿಸಿದ್ದರು. ಇದೀಗ ಮರುಮೌಲ್ಯಮಾಪನ ಫಲಿತಾಂಶದಲ್ಲಿ 03 ಅಂಕಗಳನ್ನು ಹೆಚ್ಚುವರಿಯಾಗಿ ಗಳಿಸಿಕೊಂಡು 598 ಅಂಕಗಳೊಂದಿಗೆ ರಾಜ್ಯಕ್ಕೆ ಪ್ರಥಮ ಸ್ಥಾನಿಯಾಗಿ ಹೊರಹೊಮ್ಮಿದ್ದಾರೆ. ಇವರು ಉತ್ತರಕನ್ನಡದ ಹೊನ್ನಾವರದ […]