ಉಡುಪಿಯ ಟೈಮ್ಸ್ ಸ್ಕ್ವೇರ್ ಮಾಲ್ ನಲ್ಲಿ ‘ದಿ ಓಷಿಯನ್ ಪರ್ಲ್ ಟೈಮ್ಸ್ ಸ್ಕ್ವೇರ್’ ಹೋಟೆಲ್ ಶುಭಾರಂಭ.

ಉಡುಪಿ: ಉಡುಪಿಯ ಹೃದಯಭಾಗ ಕಲ್ಸಂಕದಲ್ಲಿರುವ ಟೈಮ್ಸ್ ಸ್ಕ್ವೇರ್ ಮಾಲ್ ನಲ್ಲಿ ‘ದಿ ಓಷಿಯನ್ ಪರ್ಲ್ ಟೈಮ್ಸ್ ಸ್ಕ್ವೇರ್’ ಹೋಟೆಲ್ ಇಂದು ಶುಭಾರಂಭಗೊಂಡಿತು.ಪೇಜಾವರ ಮಠಾಧೀಶರಾದ ವಿಶ್ವಪ್ರಸನ್ನತೀರ್ಥ‌ ಶ್ರೀಪಾದರು ಮತ್ತು ಕುಕ್ಕೆ ಸುಬ್ರಹ್ಮಣ್ಯ ಮಠದ ಶ್ರೀ ವಿದ್ಯಾಪ್ರಸನ್ನತೀರ್ಥ ಶ್ರೀಪಾದರು ಜಂಟಿಯಾಗಿ ನೂತನ ಹೋಟೆಲ್ ಅನ್ನು ಉದ್ಘಾಟಿಸಿದರು. ನಂತರ ನಡೆದ ಸಭಾ ಕಾರ್ಯಕ್ರಮದಲ್ಲಿ ಆರ್ಶೀವಚನ ನೀಡಿದ ಪೇಜಾವರ ಶ್ರೀಗಳು, ಶ್ರೀಕೃಷ್ಣನ ಉಡುಪಿಗೆ ಜಯರಾಮ್ ಬನಾನ್ ಅವರು ಈ ಹೋಟೆಲ್ ಮೂಲಕ ದೊಡ್ಡ ಕೊಡುಗೆಯನ್ನು ನೀಡಿದ್ದಾರೆ. ಶ್ರೀ ಕೃಷ್ಣನ ಅನುಗ್ರಹದಿಂದ ನೂತನ ಹೋಟೆಲ್ ಯಶಸ್ವಿಯಾಗಲಿ […]

ಉಡುಪಿ: ಕಾರು ಡಿಕ್ಕಿ ಹೊಡೆದು ಯುವಕ ಮೃತ್ಯು.

ಉಡುಪಿ: ಕಾರೊಂದು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಯುವಕನೋರ್ವ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಇಂದ್ರಾಳಿ ದುರ್ಗಾಪರಮೇಶ್ವರಿ ದೇವಸ್ಥಾನದ ಬಳಿ ಬುಧವಾರ ನಡೆದಿದೆ. ಮೃತ ಸವಾರನನ್ನು ಮಣಿಪಾಲದ ಉದ್ಯೋಗಿ ದೀಪೇಶ್ ದೇವಾಡಿಗ ಎಂದು ಗುರುತಿಸಲಾಗಿದೆ. ಇಂದ್ರಾಳಿ ದೇವಸ್ಥಾನದಿಂದ ಕೆಳಗೆ ಬರುತ್ತಿದ್ದ ಕಾರಿನ ಬ್ರೇಕ್ ಫೇಲ್ ಆಗಿದ್ದು, ಎರಡೂ ಬದಿಯಲ್ಲಿದ್ದ ವಾಹನಗಳು ಸಹಿತ ಜನರಿಗೆ ಕಾರು ಢಿಕ್ಕಿ ಹೊಡೆದಿದೆ. ಇದರಿಂದ ಗಂಭೀರವಾಗಿ ಗಾಯಗೊಂಡ ದೀಪೇಶ್ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಕೆಲವು ಮಂದಿ ಸಣ್ಣಪುಟ್ಟ ಗಾಯದೊಂದಿಗೆ ಅಪಾಯದಿಂದ ಪಾರಾಗಿದ್ದಾರೆ. ಮಣಿಪಾಲ ಠಾಣೆಯಲ್ಲಿ […]

ಉಡುಪಿ ಗೀತಾಂಜಲಿ ಸಿಲ್ಕ್ಸ್’ನಲ್ಲಿ ನೂತನ ಪುರುಷರ ವಸ್ತ್ರ ಮಳಿಗೆ ಉದ್ಘಾಟನೆ.

ಉಡುಪಿ: ಕಳೆದ ನಾಲ್ಕು ದಶಕಗಳಿಂದ ಜವಳಿ ವ್ಯವಹಾರದಲ್ಲಿ ಮನೆಮಾತಾಗಿರುವ ಆರ್‌ಕೆ ಸಹೋದರು ಇದೀಗ ನಗರದ ಗೀತಾಂಜಲಿ ಶಾಪರ್ ಸಿಟಿಯಲ್ಲಿರುವ ತಮ್ಮ ಗೀತಾಂಜಲಿ ಸಿಲ್ಕ್ಸ್ ನಲ್ಲಿ ನೂತನವಾಗಿ ಆರಂಭಿಸಿರುವ ಪುರುಷರ ಪ್ರತ್ಯೇಕ ವಿಭಾಗವನ್ನು ಬುಧವಾರ ಗ್ರಾಹಕರಿಂದಲೇ ಉದ್ಘಾಟಿಸಲಾಯಿತು.ಉದ್ಯಮಿ ಡಾ.ಜಿ ಶಂಕರ್ ಮಾತನಾಡಿ, ಸಣ್ಣ ಅಂಗಡಿಯ ಮೂಲಕ ಸತತ ಪರಿಶ್ರಮ, ಶ್ರದ್ದೆಯಿಂದ ದುಡಿಯುತ್ತಾ, ಪ್ರಸ್ತುತ ಜಿಲ್ಲೆಯಲ್ಲಿಯೇ ಬೃಹತ್ ವಸ್ತ್ರ ವೈವಿಧ್ಯಗಳ ಮಳಿಗೆಯನ್ನು ತೆರೆಯುವ ಸಾಧನೆ ಮಾಡಿದ್ದಾರೆ. ಗ್ರಾಹಕರಿಗೆ ಉತ್ತಮ ಸೇವೆ, ಗುಣಮಟ್ಟದ ವಸ್ತ್ರ ವಿನ್ಯಾಸಗಳನ್ನು ನೀಡಿದಾಗ ವ್ಯಾಪಾರ ಇನ್ನಷ್ಟು ಅಭಿವೃದ್ಧಿ […]

ಉಡುಪಿ: ಷೇರು ಮಾರುಕಟ್ಟೆ ಟ್ರೇಡಿಂಗ್ ಹೆಸರಿನಲ್ಲಿ ಲಕ್ಷಾಂತರ ರೂ. ವಂಚನೆ: ಪ್ರಕರಣ ದಾಖಲು

ಉಡುಪಿ: ಷೇರು ಮಾರುಕಟ್ಟೆ ಟ್ರೇಡಿಂಗ್ ಹೆಸರಿನಲ್ಲಿ ಲಕ್ಷಾಂತರ ರೂ. ವಂಚಿಸಿರುವ ಬಗ್ಗೆ ಉಡುಪಿ ಸೆನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಬ್ದುಲ್ ರಫಿಯತ್ ಎಂಬವರಿಗೆ ದುಷ್ಕರ್ಮಿಗಳು ಷೇರು ಮಾರುಕಟ್ಟೆ ಟ್ರೇಡಿಂಗ್ ಬಗ್ಗೆ ವಾಟ್ಸಾಪ್‌ನಲ್ಲಿ ಮಾಹಿತಿಯನ್ನು ನೀಡುತ್ತಿದ್ದು, ಇದರಲ್ಲಿ ಹಣ ಹೂಡಿಕೆ ಮಾಡಿದಲ್ಲಿ ಹೆಚ್ಚಿಗೆ ಹಣ ನೀಡುವುದಾಗಿ ತಿಳಿಸಿದ್ದರು. ಅದರಂತೆ ರಫಿಯತ್ ಅವರಿಂದ ದುಷ್ಕರ್ಮಿಗಳು ಒಟ್ಟು 16,78,500ರೂ. ಹಣವನ್ನು ವರ್ಗಾವಣೆ ಮಾಡಿಸಿಕೊಂಡು ವಂಚಿಸಿರುವುದಾಗಿ ದೂರಲಾಗಿದೆ.

ಕಚ್ಚೂರು ಶ್ರೀ ಮಾಲ್ತಿದೇವಿ ದೇವಸ್ಥಾನದಲ್ಲಿ ಅ.12ರಂದು ಸಾಮೂಹಿಕ ಚಂಡಿಕಾಯಾಗ

ಬ್ರಹ್ಮಾವರ: ಇತಿಹಾಸ ಪ್ರಸಿದ್ಧ ಕಚ್ಚೂರು ಶ್ರೀ ಮಾಲ್ತಿದೇವಿ ದೇವಸ್ಥಾನ, ಬಬ್ಬುಸ್ವಾಮಿ ಮೂಲ ಕ್ಷೇತ್ರದಲ್ಲಿ ಶನಿವಾರ ವಿಜಯದಶಮಿ ಪ್ರಯಾಕ್ತ ಸಾಮೂಹಿಕ ಚಂಡಿಕಾ ಯಾಗ, ತುಲಬಾರ ಸೇವೆ‌, ವಿವಿಧ ತಂಡಗಳಿಂದ ಭಜನಾ ಸೇವೆ, ಹಾಗೂ ಮದ್ಯಾಹ್ನ ಅನ್ನಸಂತರ್ಪಣೆ ನಡೆಯಲಿದೆ. 1 ಗಂಟೆಯಿಂದ ಆಕಾಶವಾಣಿ ಕಲಾವಿದ ಶ್ರೀ ತಿಮ್ಮಪ್ಪ ಕರ್ಕೇರ ಸಾಲಿಗ್ರಾಮ ಹಾಗೂ ಬಳಗದಿಂದ ಸುಗಮ ಸಂಗೀತ ಕಾರ್ಯಕ್ರಮ ಜರಗಲಿದೆ. ಸಾಮೂಹಿಕ ಚಂಡಿಕಾ ಯಾಗ ಸೇವೆಯಲ್ಲಿ ಸುಮಾರು 200 ಅಧಿಕ ಸೇವಕರ್ತರು ಹೆಸರು ನೋಂದಾಯಿಸಿಕೊಂಡಿದ್ದಾರೆ ಎಂದು ಆಡಳಿತ ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದೆ.