ಉಡುಪಿ: ಅಂಗಡಿ ಮಾಲೀಕರು ಸ್ವಚ್ಛತೆ ಕಾಪಾಡದಿದ್ದಲ್ಲಿ ಹಾಗೂ ನಿಷೇಧಿತ ಪ್ಲಾಸ್ಟಿಕ್ ಬಳಸಿದ್ದಲ್ಲಿ ಉದ್ದಿಮೆ ಪರವಾನಿಗೆ ರದ್ದು.

ಉಡುಪಿ: ಮಳೆಗಾಲದಲ್ಲಿ ಸಾಮಾನ್ಯವಾಗಿ ಬಾಧಿಸುವ ಡೆಂಗ್ಯೂ, ಮಲೇರಿಯಾ, ಚಿಕನ್ ಗುನ್ಯಾದಂತಹ ಸಾಂಕ್ರಮಿಕ ರೋಗಗಳ ಬಗ್ಗೆ ಎಚ್ಚರ ವಹಿಸಿ ಮುಂಜಾಗೃತಾ ಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ ಹಾಗೂ ಉಡುಪಿ ನಗರಸಭಾ ವ್ಯಾಪ್ತಿಯಲ್ಲಿ ಪ್ಲಾಸ್ಟಿಕ್ ಬಳಕೆಯನ್ನು ನಿಷೇಧಿಸುವ ಉದ್ದೇಶದಿಂದ ನಗರಸಭೆ ನಿರಂತರ ಶ್ರಮಿಸುತ್ತಿದೆ. ಈ ನಿಟ್ಟಿನಲ್ಲಿ ಈಗಾಗಲೇ ನಗರಸಭೆ ವತಿಯಿಂದ ಸರ್ವೆಗಳನ್ನು ನಡೆಸಲಾಗುತ್ತಿದ್ದು, ಕಳೆದೆರಡು ದಿನಗಳಲ್ಲಿ ನಡೆಸಿದ ಸರ್ವೆಯಲ್ಲಿ ಅಂಗಡಿಯ ಸುತ್ತಮುತ್ತ ಸ್ವಚ್ಛತೆಯನ್ನು ಕಾಯ್ದುಕೊಳ್ಳದೇ ಇದ್ದ 9 ಅಂಗಡಿಗಳ ಮಾಲೀಕರಿಗೆ ಒಟ್ಟು 8,300 ರೂ. ಹಾಗೂ ನಗರಸಭಾ ವ್ಯಾಪ್ತಿಯಲ್ಲಿ ಪ್ಲಾಸ್ಟಿಕ್ ಬಳಕೆ […]
ಅತಿಥಿ ಶಿಕ್ಷಕರ ನೇಮಕಾತಿ: ಅರ್ಜಿ ಆಹ್ವಾನ

ಉಡುಪಿ: ಜಿಲ್ಲೆಯ ಉಡುಪಿ, ಕುಂದಾಪುರ, ಬೈಂದೂರು ಮತ್ತು ಹೆಬ್ರಿ ತಾಲೂಕುಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಶ್ರೀ ಮಹರ್ಷಿ ವಾಲ್ಮೀಕಿ ಆದಿವಾಸಿ ಬುಡಕಟ್ಟು ವಸತಿ ಶಾಲೆಗಳಲ್ಲಿನ ವಿದ್ಯಾರ್ಥಿಗಳಿಗೆ ಇಂಗ್ಲೀಷ್ ಕಲಿಕೆಗಾಗಿ ಗೌರವಧನದ ಆಧಾರದ ಮೇಲೆ ಅತಿಥಿ ಶಿಕ್ಷಕರ ನೇಮಕಾತಿಗಾಗಿ ಡಿ.ಎಡ್ ಕೋರ್ಸ್ನಲ್ಲಿ ಇಂಗ್ಲೀಷ್ ಐಚ್ಛಿಕ ಭಾಷಾ ವಿಷಯವನ್ನು ಅಧ್ಯಯನ ಮಾಡಿರುವ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಜುಲೈ 25 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಯೋಜನಾ ಸಮನ್ವಯಾಧಿಕಾರಿ, ಐ.ಟಿ.ಡಿ.ಪಿ ಕಛೇರಿ, ರಜತಾದ್ರಿ, ಮಣಿಪಾಲ, ಉಡುಪಿ […]
ಅಪರ ಸರ್ಕಾರಿ ವಕೀಲರ ಹುದ್ದೆ: ಅರ್ಜಿ ಆಹ್ವಾನ

ಉಡುಪಿ: ಉಡುಪಿ ತಾಲೂಕಿನ ಹಿರಿಯ ಶ್ರೇಣಿ ನ್ಯಾಯಾಲಯದ ಅಪರ ಸರ್ಕಾರಿ ವಕೀಲರ ಹುದ್ದೆಗೆ ಕರ್ನಾಟಕ ಕಾನೂನು ಅಧಿಕಾರಿಗಳು (ನೇಮಕಾತಿ ಮತ್ತು ಸೇವಾ ಷರತ್ತುಗಳು) ನಿಯಮಗಳು, 1977 ರ ನಿಯಮ 26(3) ರಡಿ ಹುದ್ದೆಯ ಪ್ರಭಾರವನ್ನು ವಹಿಸಿಕೊಳ್ಳುವ ದಿನಾಂಕದಿಂದ ಜಾರಿಗೆ ಬರುವಂತೆ ಒಂದು ವರ್ಷದ ಅವಧಿಗೆ ನೇಮಕಾತಿ ಮಾಡಿಕೊಳ್ಳಲು, ಏಳು ವರ್ಷಗಳ ಕಾಲ ವಕೀಲ ವೃತ್ತಿಯನ್ನು ಪೂರೈಸಿದ ಅರ್ಹ ಆಸಕ್ತ ವಕೀಲರಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಜುಲೈ 25 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ […]
ಜಿಲ್ಲಾ ಸರ್ಕಾರಿ ವಕೀಲರ ಹುದ್ದೆಗೆ ನೇಮಕಾತಿ: ಅರ್ಜಿ ಆಹ್ವಾನ

ಉಡುಪಿ: ಉಡುಪಿ ಜಿಲ್ಲಾ ಸರ್ಕಾರಿ ವಕೀಲರ ಹುದ್ದೆಗೆ ಕರ್ನಾಟಕ ಕಾನೂನು ಅಧಿಕಾರಿಗಳು (ನೇಮಕಾತಿ ಮತ್ತು ಸೇವಾ ಷರತ್ತುಗಳು) ನಿಯಮಗಳು, 1977 ರ ನಿಯಮ 26(3) ರಡಿ ಹುದ್ದೆಯ ಪ್ರಭಾರವನ್ನು ವಹಿಸಿಕೊಳ್ಳುವ ದಿನಾಂಕದಿಂದ ಜಾರಿಗೆ ಬರುವಂತೆ ಒಂದು ವರ್ಷದ ಅವಧಿಗೆ ನೇಮಕಾತಿ ಮಾಡಿಕೊಳ್ಳಲು, ಹತ್ತು ವರ್ಷಗಳ ಕಾಲ ವಕೀಲ ವೃತ್ತಿಯನ್ನು ಪೂರೈಸಿದ ಅರ್ಹ ಆಸಕ್ತ ವಕೀಲರಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಜುಲೈ 25 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾಧಿಕಾರಿ ಕಚೇರಿಯ ಆಡಳಿತ […]
ತ್ರಿಶಾ ಸಂಸ್ಥೆ: ಸಿಎ ಫೈನಲ್ ಮತ್ತು ಸಿಎ ಇಂಟರ್ಮಿಡಿಯೇಟ್ ಉತ್ತಮ ಫಲಿತಾಂಶ.

ಉಡುಪಿ: ಇನ್ಸ್ಟಿಟ್ಯೂಟ್ ಆಫ್ ಚಾರ್ಟರ್ಡ್ ಅಕೌಂಟೆಂಟ್ಸ್ ಆಫ್ ಇಂಡಿಯಾ (ಐಸಿಎಐ) ನಡೆಸುವ ಸಿ ಎ ಫೈನಲ್ ಹಾಗೂ ಸಿಎ ಇಂಟರ್ಮಿಡಿಯೇಟ್ ಪರೀಕ್ಷೆಯಲ್ಲಿ ತ್ರಿಶಾ ಸಂಸ್ಥೆಯ ವಿದ್ಯಾರ್ಥಿಗಳು ಅತ್ಯುತ್ತಮ ಫಲಿತಾಂಶ ಗಳಿಸಿಕೊಂಡಿದ್ದಾರೆ. 28 ವಿದ್ಯಾರ್ಥಿಗಳು ಸಿಎ ಫೈನಲ್ ಉತ್ತೀರ್ಣರಾದವರು: ಕಟಪಾಡಿಯ ತ್ರಿಶಾ ವಿದ್ಯಾ ಸಂಧ್ಯಾ ಕಾಲೇಜಿನ ವಿದ್ಯಾರ್ಥಿಗಳಾದ ನರೇಶ್ ಕೆ ಕಾಮತ್ , ಅರ್ಪಿತಾ ಡಿ, ಶ್ರೀಕೃಷ್ಣ ಎಚ್.ವಿ, ತೇಜಸ್ವಿನಿ ಕಾಮತ್, ವಿನಾಯಕ್ ಕಾಮತ್ ಧನ್ಯ ಶಾನಭಾಗ, ನೀಲೇಶ್ ಶೆಣೈ, ಶ್ರೀನಿಧಿ ಕಾಮತ್ , ಕೆ ಪ್ರಮೋದ್ ಶೆಣೈ, […]