ಉಡುಪಿ: ನೀತಿ ಸಂಹಿತೆ ಉಲ್ಲಂಘನೆ – ಮದ್ಯ ವಶ

ಉಡುಪಿ: ಸಾರ್ವತ್ರಿಕ ಲೋಕಸಭಾ ಚುನಾವಣೆ-2024 ರ ಹಿನ್ನೆಲೆ, ಮಾದರಿ ನೀತಿ ಸಂಹಿತೆ ಉಲ್ಲಂಘನೆಯಾಗಿರುವ ಪ್ರಕರಣಕ್ಕೆ ಸಂಬAಧಿಸಿದAತೆ ಅಬಕಾರಿ ಇಲಾಖೆ ವತಿಯಿಂದ 20,300 ರೂ. ಮೌಲ್ಯದ 22.250 ಲೀ. ಮದ್ಯ ವಶಪಡಿಸಿಕೊಳ್ಳಲಾಗಿರುತ್ತದೆ ಹಾಗೂ ಉಡುಪಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಗೆ ಸಂಬAಧಿಸಿದAತೆ ಕಾಂಗ್ರೇಸ್ ಅಭ್ಯರ್ಥಿಯಾದ ಕೆ.ಜಯಪ್ರಕಾಶ್ ಹೆಗ್ಡೆರವರು ಕರಾವಳಿಗರ ಬಯಲು ಸೀಮೆ-ಮಲೆನಾಡ ಗಟ್ಟಿ ಧ್ವನಿ ಎಂಬ ಶೀರ್ಷಿಕೆಯ ಕರಪತ್ರಗಳನ್ನು ಮುದ್ರಿಸಿ, ಸಾರ್ವಜನಿಕವಾಗಿ ಉಡುಪಿಯಲ್ಲಿ ಹಂಚಿಕೆ ಮಾಡಲಾಗಿದ್ದು, ಕರಪತ್ರದಲ್ಲಿ ಪ್ರಕಾಶಕರ ಹೆಸರು, ಮುದ್ರಕರ ಹೆಸರು, ಮುದ್ರಣದ ವಿಳಾಸ ಹಾಗೂ ಮುದ್ರಿತ ಪ್ರತಿಗಳ […]

ಅತಿಥಿ ಉಪನ್ಯಾಸಕರ ಹುದ್ದೆ: ಅರ್ಜಿ ಆಹ್ವಾನ

ಉಡುಪಿ: ನಗರದ ಉಪ್ಪೂರು ಕೊಳಲ್‌ಗಿರಿಯ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರದಲ್ಲಿ ಡಿಪ್ಲೋಮಾ ಇನ್ ಮೆಕೆಟ್ರಾನಿಕ್ಸ್ ತರಗತಿಗಳನ್ನು ನಡೆಸಲು ಉಪನ್ಯಾಸಕರ ಅವಶ್ಯಕತೆ ಇದ್ದು, ಎಂ.ಟೆಕ್ ಹಾಗೂ ಬಿ.ಇ ವಿದ್ಯಾರ್ಹತೆಹೊಂದಿರುವ ಅರ್ಹ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಪ್ರಾಂಶುಪಾಲರು, ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ, ಸರ್ಕಾರಿ ಪ್ರೌಢಶಾಲೆ ಹತ್ತಿರ, ಕೊಳಲಗಿರಿ, ಉಪ್ಪೂರು ಉಡುಪಿ, ದೂರವಾಣಿ ಸಂಖ್ಯೆ: 0820-2950101, 9880510585, ಇ-ಮೇಲ್: [email protected] ಅನ್ನು ಸಂಪರ್ಕಿಸಬಹುದಾಗಿದೆ ಎಂದು ಸಂಸ್ಥೆಯ ಪ್ರಾಚಾರ್ಯರು ಪ್ರಕಟಣೆಯಲ್ಲಿ […]

ನೇಹಾ ಪೋಷಕರ ಆಗ್ರಹದಂತೆ ಪೊಲೀಸ್ ಇಲಾಖೆ ಎಲ್ಲಾ ಆಯಾಮಗಳಲ್ಲಿಯೂ ತನಿಖೆ ನಡೆಸಬೇಕು: ಕೆ.ಜಯಪ್ರಕಾಶ್ ಹೆಗ್ಡೆ

ಉಡುಪಿ: ಗುರುವಾರ ಹುಬ್ಬಳ್ಳಿಯ ಕಾಲೇಜು ಆವರಣದಲ್ಲಿ ದುಷ್ಕರ್ಮಿಯಿಂದ ಅಮಾನುಷವಾಗಿ ಕೊಲೆಗೀಡಾದ ವಿದ್ಯಾರ್ಥಿನಿ ನೇಹಾ ಸಾವಿಗೆ ಕಂಬನಿ ಮಿಡಿದಿರುವ ಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕೆ.ಜಯಪ್ರಕಾಶ್ ಹೆಗ್ಡೆ ದುಷ್ಕರ್ಮಿಯ ಕೃತ್ಯವನ್ನು ಖಂಡಿಸಿದ್ದಾರೆ. ಭವಿಷ್ಯದ ಕನಸುಗಳಿಗಾಗಿ ಬಾಳಿ ಬದುಕಬೇಕಾಗಿದ್ದ, ಶಿಕ್ಷಣಾಭ್ಯಾಸ ಮಾಡುತ್ತಿದ್ದ ನೇಹಾ ಹತ್ಯೆ ಮನಸ್ಸಿಗೆ ನೋವು ತಂದಿದೆ. ಆಕೆಯನ್ನು ಅಮಾನುಷವಾಗಿ ಕೊಂದಿರುವ ವಿಕೃತ ಹಾಗೂ ಕ್ರೂರ ಮನಸ್ಥಿತಿಯ ಕೊಲೆಗಾರನ ಕೃತ್ಯವನ್ನು ಸುಸಂಸ್ಕೃತ ನಾಗರಿಕ ಸಮಾಜದ ಯಾರೂ ಒಪ್ಪುವುದಿಲ್ಲ. ಆತನ ಕೃತ್ಯಕ್ಕೆ ಕಾನೂನು ಕ್ರಮದಲ್ಲಿ ಕಠಿಣ ಶಿಕ್ಷೆಯಾಗಬೇಕು. […]

ಮಲ್ಪೆ: ಸಮುದ್ರದಲ್ಲಿ ಮುಳುಗಿ ಕಾಲೇಜು ವಿದ್ಯಾರ್ಥಿ ಮೃತ್ಯು

ಉಡುಪಿ: ಮಲ್ಪೆ ಬೀಚ್ ನಲ್ಲಿ ಸ್ನಾನಕ್ಕಿಳಿದ ಯುವಕನೋರ್ವ ಸಮುದ್ರದಲ್ಲಿ ಮುಳುಗಿ ಮೃತಪಟ್ಟ ಘಟನೆ ಭಾನುವಾರ ಮಧ್ಯಾಹ್ನ ಸಂಭವಿಸಿದೆ. ಮೃತರನ್ನು ಮಂಡ್ಯ ಮೂಲದ ನಾಗೇಂದ್ರ (21) ಎಂದು ಗುರುತಿಸಲಾಗಿದೆ. ನಾಗೇಂದ್ರ ಅವರು ಬೆಂಗಳೂರಿನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದು, ಐದು ಮಂದಿ ಸ್ನೇಹಿತರೊಂದಿಗೆ ಮಲ್ಪೆ ಬೀಚ್ ಗೆ ಪ್ರವಾಸಕ್ಕೆ ಬಂದಿದ್ದರು. ಭಾನುವಾರ ಮಧ್ಯಾಹ್ನ ಸಮುದ್ರಕ್ಕಿಳಿದು ನೀರಿನಲ್ಲಿ ಆಡುತ್ತಿದ್ದ ವೇಳೆ ನಾಗೇಂದ್ರ ಅಲೆಗಳ ಅಬ್ಬರಕ್ಕೆ ಸಿಲುಕಿ ನೀರಿನಲ್ಲಿ ಕೊಚ್ಚಿಕೊಂಡು ಹೋಗಿದ್ದಾರೆ ಎನ್ನಲಾಗಿದೆ. ಕೂಡಲೇ ಮುಳುಗುತಜ್ಞ ಈಶ್ವರ ಮಲ್ಪೆ ತಂಡ ಕಾರ್ಯಾಚರಣೆ ನಡೆಸಿ ನಾಗೇಂದ್ರನನ್ನು […]