ಮತದಾನ ದಿನದಂದು ವೇತನ ಸಹಿತ ರಜೆ

ಉಡುಪಿ: 2024 ನೇ ಸಾಲಿನ ಲೋಕಸಭೆಗೆ ಸಾರ್ವತ್ರಿಕ ಚುನಾವಣೆ ಘೋಷಣೆಯಾಗಿದ್ದು, ಕರ್ನಾಟಕ ರಾಜ್ಯದ ನೆರೆ ರಾಜ್ಯಗಳಾಗಿರುವ ತಮಿಳುನಾಡು ರಾಜ್ಯದಲ್ಲಿ ಏಪ್ರಿಲ್ 19 ರ ಶುಕ್ರವಾರ ಹಾಗೂ ಅಂಧ್ರ ಪ್ರದೇಶ ಮತ್ತು ತೆಲಂಗಾಣ ರಾಜ್ಯಗಳಲ್ಲಿ ಮೇ 13 ರ ಸೋಮವಾರದಂದು ಮತದಾನ ನಡೆಯಲಿದೆ. ಈ 3 ರಾಜ್ಯಗಳಲ್ಲಿ ಮತದಾರರಾಗಿರುವವರು ಕರ್ನಾಟಕ ರಾಜ್ಯದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸಾಧ್ಯತೆ ಇರುವ ಹಿನ್ನೆಲೆ, ಅಂತಹ ಮತದಾರರಿಗೆ ಮತದಾನದ ದಿನಾಂಕಗಳoದು ಆಯಾ ಗಡಿ ಜಿಲ್ಲೆಗಳಲ್ಲಿನಕೈಗಾರಿಕೆಗಳು, ಕಾರ್ಖಾನೆಗಳು ಹಾಗೂ ಇನ್ನಿತರೆ ಸಂಸ್ಥೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಮತದಾರರಿಗೆ […]

ಉಡುಪಿ ಜಿಲ್ಲಾ ಬೇಕರಿ ಮತ್ತು ಖಾದ್ಯ ತಿನಿಸುಗಳ ತಯಾರಕರ ಮತ್ತು ಮಾರಾಟಗಾರರ ಸಂಘ: ತಿಂಗಳ ಸಾಮಾನ್ಯ ಸಭೆ.

ಉಡುಪಿ ಜಿಲ್ಲಾ ಬೇಕರಿ ಮತ್ತು ಖಾದ್ಯ ತಿನಿಸುಗಳ ತಯಾರಕರ ಮತ್ತು ಮಾರಾಟಗಾರರ ಸಂಘ (ರಿ ) ಇದರ ತಿಂಗಳ ಸಾಮಾನ್ಯ ಸಭೆಯು ಎ.17 ರಂದು ಸಂಜೆ ಬ್ರಹ್ಮಾವರದ ಸಿಟಿ ಸೆಂಟರ್ ನ ಸಿಂಧೂರ ಹವಾ ನಿಯಂತ್ರಿತ ಸಭಾಭವನದಲ್ಲಿ ನಡೆಯಿತು. ಸಂಘದ ಅಧ್ಯಕ್ಷರಾದ ವಿಶ್ವನಾಥ್ ಕುಲಾಲ್ ಅವರ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು. ಸಂಘದ ಸದಸ್ಯರಾದ ರಾಜ್ ಮೋಹನ್ ನಾಯಿರಿ ಅವರಿಂದ ಪ್ರಾರ್ಥನೆ ನೆರವೇರಿತು. ಪ್ರಧಾನ ಕಾರ್ಯದರ್ಶಿಗಳಾದ ಸತ್ಯಪ್ರಸಾದ್ ಶೆಣೈ ಅತಿಥಿಗಳನ್ನು ಸ್ವಾಗತಿಸಿದರು. ನಾಲ್ಕು ಜನ ಹೊಸ ಸದಸ್ಯರನ್ನು ಸಂಘಕ್ಕೆ […]

ಪರ್ಕಳ ಶ್ರೀ ದುರ್ಗಾಪರಮೇಶ್ವರಿ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ರೂ 2.59 ಕೋಟಿ ನಿವ್ವಳ ಲಾಭ.

ಉಡುಪಿ: ಪರ್ಕಳದಲ್ಲಿ ಪ್ರಧಾನ ಕಚೇರಿ ಹೊಂದಿ ಉಡುಪಿ ಜಿಲ್ಲೆಯ ವಿವಿಧ ಭಾಗಗಳಲ್ಲಿ 6 ಶಾಖೆಗಳನ್ನು ತೆರೆದು ಸದಸ್ಯರ ಸೇವೆಯಲ್ಲಿ ನಿರತವಾಗಿರುವ ಸೊಸೈಟಿಯು ಆರ್ಥಿಕ ವರ್ಷ 2023-24 ರಲ್ಲಿ ರೂ. 1.80 ಕೋಟಿಗೂ ಮಿಗಿಲಾದ ಪಾಲುಬಂಡವಾಳ, ರೂ . 11.70 ಕೋಟಿಗೂ ಮಿಕ್ಕಿ ಸ್ವಂತ ನಿಧಿಗಳನ್ನು ಸ್ಥಾಪಿಸಿ, ರೂ 116.86 ಕೋಟಿ ಠೇವಣಿ, ರೂ 82.43 ಕೋಟಿ ಸಾಲ ಹೊರಬಾಕಿಯೊಂದಿಗೆ, ರೂ 478 ಕೋಟಿ ಮಿಕ್ಕಿ ವಾರ್ಷಿಕ ವ್ಯವಹಾರ ನಡೆಸಿ ರೂ 2.59 ಕೋಟಿ ನಿವ್ವಳ ಲಾಭ ಗಳಿಸಿತು. […]

ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಸ್ಕೂಲ್’ನ (ಶುಭದಾ ಆಂಗ್ಲ ಮಾಧ್ಯಮ ಶಾಲೆ) ಶುಭಾರಂಭ.

ಕುಂದಾಪುರ: ಬೈಂದೂರು ತಾಲೂಕಿನ ಕಿರಿಮಂಜೇಶ್ವರ ಗ್ರಾಮದ ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಸ್ಕೂಲ್ (ಶುಭದಾ ಆಂಗ್ಲ ಮಾಧ್ಯಮ ಶಾಲೆ) ಸಮರ್ಪಣಾ ಟ್ರಸ್ಟ್ ಹೆಮ್ಮಾಡಿ ನೂತನ ಆಡಳಿತ ಮಂಡಳಿ ಯೊಂದಿಗೆ ಶಾಲೆಯ ಶುಭಾರಂಭ ಮತ್ತು ಚಿಣ್ಣರ ಬೇಸಿಗೆ ಶಿಬಿರ ಉದ್ಘಾಟನಾ ಸಮಾರಂಭ ಕಾರ್ಯಕ್ರಮ ಶುಭದಾ ಆಂಗ್ಲ ಮಾಧ್ಯಮ ಶಾಲಾ ವಠಾರದಲ್ಲಿ ಅದ್ದೂರಿಯಾಗಿ ಸೋಮವಾರ ನಡೆಯಿತು. ನಿವೃತ್ತ ಪ್ರಾಧ್ಯಾಪಕರಾದ ಎಸ್.ಜನಾರ್ದನ ಮರವಂತೆ ಅವರು ಒಳಂಗಾಣ ಕ್ರೀಡಾಂಗಣವನ್ನು ಉದ್ಘಾಟಿಸಿ ಮಾತನಾಡಿ, ಹೊಸ ವಿನ್ಯಾಸದೊಂದಿಗೆ ಆರಂಭಗೊಂಡಿರುವ ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಸ್ಕೂಲ್‍ನಲ್ಲಿ […]

ಬಿಜೆಪಿ ಸರ್ಕಾರಕ್ಕೆ ದೇಶದ ಸಂವಿಧಾನವೇ ಸರ್ವಸ್ವ: ಪ್ರಧಾನಿ ಮೋದಿ

ಈ ಸಂವಿಧಾನ ನಮಗೆ ಗೀತಾ, ಕುರಾನ್, ಬೈಬಲ್ ಎಲ್ಲವೂ ಆಗಿದೆ. ಬಾಬಾ ಸಾಹೇಬ್ ಅಂಬೇಡ್ಕರ್ ಅವರೇ ಖುದ್ದು ಬಂದರೂ ಸಂವಿಧಾನವನ್ನು ರದ್ದು ಮಾಡಲು ಸಾಧ್ಯವಿಲ್ಲ. ಬಿಜೆಪಿ ಸರ್ಕಾರಕ್ಕೆ ದೇಶದ ಸಂವಿಧಾನವೇ ಸರ್ವಸ್ವ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. ರಾಜಸ್ಥಾನದ ಬಾರ್ಮರ್‍ನಲ್ಲಿ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದ ಪ್ರಧಾನಿ ಮೋದಿ, ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಮೂರನೇ ಬಾರಿಗೆ ಗೆದ್ದರೆ ದೇಶದ ಸಂವಿಧಾನ ಮತ್ತು ಪ್ರಜಾಪ್ರಭುತ್ವಕ್ಕೆ ಅಪಾಯವಿದೆ. ದೇಶದಲ್ಲಿ ತುರ್ತುಪರಿಸ್ಥಿತಿ ಹೇರುವ ಮೂಲಕ ಸಂವಿಧಾನವನ್ನು ನಾಶಪಡಿಸಲು ಯತ್ನಿಸಿದ್ದು ಕಾಂಗ್ರೆಸ್, ಇದೀಗ […]