ನಾಟಾ ಫಲಿತಾಂಶದಲ್ಲಿ ಕಾರ್ಕಳದ ಕ್ರಿಯೇಟಿವ್ ಕಾಲೇಜು ವಿದ್ಯಾರ್ಥಿಗಳ ಅಮೋಘ ಸಾಧನೆ

ಕಾರ್ಕಳ: ಕೌನ್ಸಿಲ್ ಆಫ್ ಆರ್ಕಿಟೆಕ್ಚರ್ ನವರು ನಡೆಸಿದ ನಾಟಾ ಪರೀಕ್ಷೆಯ ಫಲಿತಾಂಶವನ್ನು 6 ಜುಲೈ 2024ರಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಹೊರಹಾಕಿದ್ದು, ಕ್ರಿಯೇಟಿವ್ ಕಾಲೇಜಿನ ವಿದ್ಯಾರ್ಥಿಗಳು ಅಮೋಘ ಸಾಧನೆಗೈದಿದ್ದಾರೆ. ಕಾರ್ಕಳ ಕ್ರಿಯೇಟಿವ್ ಪಿಯು ಕಾಲೇಜಿನ ವಿದ್ಯಾರ್ಥಿಗಳು ಕ್ರಮ ಪ್ರಕಾರವಾಗಿ ಪೂರ್ಣಚಂದ್ರ ಪಿ.ಎಚ್ 55, ಆದಿತ್ಯ ಪಾಟೀಲ್ 74, ನೇಹ. ಎನ್ 76, ಶ್ರೀ ಹರಿ 109, ಸಾನ್ವಿ ಕುಮಾರ್ 120, ಕಿಶನ್ ಬಿ ಗೌಡ 133, ಅಂಕುಶ್. ವಿ 148, ಆತ್ಮಿಕ ನಾಯಕ್ 157, ಹರಿದ್ವರ್ಣ ಸಿ […]
ವಿವಿಧ ಯೋಜನೆ: ಅರ್ಜಿ ಆಹ್ವಾನ

ಉಡುಪಿ: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಅಂಗವಿಕಲರಿಗಾಗಿ, ಸರ್ಕಾರ ಅನುಷ್ಟಾನಗೊಳಿಸಿರುವ ಯೋಜನೆಗಳಾದ ಉನ್ನತ ಶಿಕ್ಷಣ ಪಡೆಯುತ್ತಿರುವ ವಿದ್ಯಾರ್ಥಿಗಳಿಗೆ ಶುಲ್ಕ ಮರುಪಾವತಿ, ವಿಕಲಚೇತನ ವ್ಯಕ್ತಿಯನ್ನು ವಿವಾಹವಾಗುವ ಸಾಮಾನ್ಯ ವ್ಯಕ್ತಿಗೆ ವಿವಾಹ ಪ್ರೋತ್ಸಾಹಧನ, ಬ್ಯಾಟರಿಚಾಲಿತ ಗಾಲಿಕುರ್ಚಿ, ನಿರಾಮಯ ಯೋಜನೆ ಹಾಗೂ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ ಪಡೆಯಲು ಸ್ಪರ್ಧಾ ಚೇತನ ಯೋಜನೆಗಳ ಸೌಲಭ್ಯ ಪಡೆಯಲು ಅರ್ಹ ವಿಕಲಚೇತನ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.ಅರ್ಜಿ ಸಲ್ಲಿಸಲು ಸೆಪ್ಟಂಬರ್ 30 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ […]
ಬಂಟಕಲ್ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳಿಗೆ “ಲೈನ್ ಫಾಲೋವಿಂಗ್ ರೋಬೋಟ್” ತಾಂತ್ರಿಕ ಸ್ಪರ್ಧೆಯಲ್ಲಿ ದ್ವಿತೀಯ ಬಹುಮಾನ.

ಉಡುಪಿ: ಮಂಗಳೂರಿನ ಕಾಮೆಡ್‍ಕೇರ್ಸ್ ಇನ್ನೋವೇಶನ್ ಹಬ್ ಇವರು ಜು.7 ರಂದು ಆಯೋಜಿಸಿದ್ದ “Tech-X 2024” ತಾಂತ್ರಿಕ ಸ್ಪರ್ಧೆಯಲ್ಲಿ ಬಂಟಕಲ್‍ನ ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾ ವಿದ್ಯಾಲಯದ ವಿದ್ಯಾರ್ಥಿಗಳಾದ ಪವನ್ ಗೋಂಡ್, ವಿಶ್ವಾಸ್ ಭಟ್, ರಂಜನ್ ಪೂಜಾರಿ, ವಿಜೇತಾ, ಗಣಕಯಂತ್ರ ವಿಭಾಗ ಮತ್ತು ವಿದ್ಯುನ್ಮಾನ ಮತ್ತು ಸಂವಹನ ವಿಭಾಗದ ಶ್ರೀ ಹರ್ಷ ಗುನಗಾ ಇವರು “ಲೈನ್ ಫಾಲೋವಿಂಗ್ ರೋಬೋಟ್” ಸ್ಪರ್ಧೆಯಲ್ಲಿ ದ್ವೀತೀಯ ಬಹುಮಾನ ಗಳಿಸಿರುತ್ತಾರೆ. ವಿದ್ಯಾರ್ಥಿಗಳ ಈ ಸಾಧನೆಗೆ ಸಂಸ್ಥೆಯ ಆಡಳಿತ ಮಂಡಳಿ, ಪ್ರಾಂಶುಪಾಲರು ಮತ್ತು ಶಿಕ್ಷಕ […]
ಬೆಳ್ತಂಗಡಿ: ಅನಾರೋಗ್ಯದಿಂದ ಯುವತಿ ಮೃತ್ಯು.

ಬೆಳ್ತಂಗಡಿ: ಅನಾರೋಗ್ಯದಿಂದ ಯುವತಿ ಒಬ್ಬಳು ಮೃತಪಟ್ಟ ಘಟನೆ ಬೆಳ್ತಂಗಡಿ ತಾಲೂಕಿನ ಕೊಕ್ಕಡ ಶಿಶಿಲ ಗ್ರಾಮದ ಪೇರಿಕೆಯಲ್ಲಿ ಮಂಗಳವಾರ ಮಧ್ಯಾಹ್ನ ನಡೆದಿದೆ. ಮೃತಪಟ್ಟ ಯುವತಿಯನ್ನು ಪೇರಿಕೆಯ ಕೃಷ್ಣಪ್ಪ ಮಲೆಕುಡಿಯ ಮತ್ತು ಸುನಂದಾ ದಂಪತಿಯ ಪುತ್ರಿ ಸುಪ್ರಿತಾ(16) ಎಂದು ಗುರುತಿಸಲಾಗಿದೆ. ಕಳೆದೆರಡು ದಿನಗಳಿಂದ ಜ್ವರದಿಂದ ಬಳಲುತ್ತಿದ್ದು ಚಿಕಿತ್ಸೆ ಪಡೆದಿದ್ದರು ಎನ್ನಲಾಗಿದೆ. ಮಂಗಳವಾರ ಆರೋಗ್ಯದಲ್ಲಿ ತೀವ್ರ ಏರುಪೇರು ಉಂಟಾಗಿದ್ದು ತಕ್ಷಣ ಅವರನ್ನು ಉಪ್ಪಿನಂಗಡಿ ಆಸ್ಪತ್ರೆಗೆ ಕರೆದೊಯ್ದು ಔಷಧ ಕೊಡಿಸಿದ್ದರು. ಆದರೆ ಬಳಿಕ ಮನೆಗೆ ಹಿಂದಿರುಗವ ವೇಳೆ ಪ್ರಜ್ಞೆ ತಪ್ಪಿದ್ದರು. ಬಳಿಕ ವೈದ್ಯರ ಬಳಿಗೆ […]
ಉಡುಪಿ: ಗಾಂಜಾ ಸೇವನೆ – ಒರ್ವ ಪೊಲೀಸರ ವಶಕ್ಕೆ.

ಉಡುಪಿ: ಉಡುಪಿಯಲ್ಲಿ ಇತ್ತೀಚೆಗೆ ನಡೆದ ಗ್ಯಾಂಗ್‌ವಾರ್ ಪ್ರಕರಣದಲ್ಲಿ ಶಾಮೀಲಾಗಿದ್ದಾನೆ ಎಂಬ ಶಂಕೆಯಲ್ಲಿ ಕಾಪುವಿನ ಬೆಳಪುವಿನಲ್ಲಿ ಮಹಮ್ಮದ್ ನೌಫುಲ್ ಎಂಬಾತನನ್ನು ಉಡುಪಿ ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ. ಪೊಲೀಸರ ವಿಚಾರಣೆ ವೇಳೆ ಆತ ಮಾದಕ ದ್ರವ್ಯ ಸೇವನೆ ಮಾಡಿ ಅಮಲಿನಲ್ಲಿದ್ದಂತೆ ಕಂಡುಬಂದಿದ್ದಾನೆ. ಬಳಿಕ ಆತನನ್ನು ಫಾರೆನ್ಸಿಕ್ ಪರೀಕ್ಷೆಗೆ ಒಳಪಡಿಸಲಾಗಿದ್ದು, ಆತ ಗಾಂಜಾ ಸೇವಿಸಿರುವುದು ದೃಢಪಟ್ಟಿದೆ. ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.