ಮುಜರಾಯಿ ಸಚಿವ ಶ್ರೀ ರಾಮಲಿಂಗ ರೆಡ್ಡಿ ಅವರನ್ನು ಶ್ರೀ ವಡಭಾಂಡ ಬಲರಾಮ ದೇವಳದ ವತಿಯಿಂದ ಭೇಟಿ.

ಮಲ್ಪೆ: ಮುಜರಾಯಿ ಸಚಿವ ಶ್ರೀ ರಾಮಲಿಂಗ ರೆಡ್ಡಿಯವರನ್ನು ಶ್ರೀ ವಡಭಾಂಡ ಬಲರಾಮ ದೇವಳದ ವತಿಯಿಂದ ಬೇಟಿಯಾಗಿ, ಆಮಂತ್ರಣ ಪತ್ರಿಕೆ ನೀಡಿ, ಮನವಿ ಸಲ್ಲಿಸಲಾಯಿತು. ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ ಸಚಿವರು ಧನಾತ್ಮಕ ಬೆಂಬಲದ ಭರವಸೆ ನೀಡಿದರು. ಈ ಸಂದರ್ಭದಲ್ಲಿ ಸಮಿತಿ ಗೌರವಾಧ್ಯಕ್ಷ ಶ್ರೀಶ ಭಟ್ ಕಡೆಕಾರ್, ಶೀರೂರು ಮಠದ ದಿವಾನ ಉದಯ ಸರಳತ್ತಾಯ, ಉದ್ಯಮಿ ರಾಮಚಂದ್ರ ಉಪಾಧ್ಯ, ಶ್ರೀನಿವಾಸ ಆಚಾರ್ಯ ಉಪಸ್ಥಿತರಿದ್ದರು.

ಅಯೋಧೆಯ್ಯಿಂದ ಮರಳಿದ ಪೇಜಾವರ ಶ್ರೀ ವಿಶ್ವಪ್ರಸನ್ನ ತೀರ್ಥರಿಗೆ ಅಭಿನಂದನಾ ಸಮಾರಂಭ

ಉಡುಪಿ: ಅಯೋಧ್ಯೆಯ ನೂತನ ಮಂದಿರದಲ್ಲಿ ಬಾಲರಾಮನ ಪ್ರಾಣಪ್ರತಿಷ್ಠಾಪನೆ ಹಾಗೂ ಮಂಡಲ ಪರ್ಯಂತ ವಿವಿಧ ಧಾರ್ಮಿಕ ವಿಧಿ ವಿಧಾನಗಳನ್ನು ಶಾಸ್ತ್ರೋಕ್ತವಾಗಿ ನೆರವೇರಿಸಿದ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರಿಗೆ ಅಭಿನಂದನಾ ಸಮಾರಂಭವು ಪರ್ಯಾಯ ಶ್ರೀ ಪುತ್ತಿಗೆ ಶ್ರೀ ಕೃಷ್ಣ ಮಠದ ರಾಜಾಂಗಣದಲ್ಲಿ ಪರ್ಯಾಯ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರ ಅಧ್ಯಕ್ಷತೆಯಲ್ಲಿ ಹಾಗೂ ಕಿರಿಯ ಸ್ವಾಮಿಗಳಾದ ಸುಶ್ರೀಂದ್ರ ತೀರ್ಥ ಶ್ರೀಪಾದರ ದಿವ್ಯ ಉಪಸ್ಥಿತಿಯಲ್ಲಿ ನೆರವೇರಿತು. ಶಾಸಕ ಯಶ್ ಪಾಲ್ ಸುವರ್ಣ, ಮಾಜಿ ಶಾಸಕ ರಘುಪತಿ ಭಟ್, […]

ಬಾರಕೂರು: ಸ್ಕೂಟಿ ಢಿಕ್ಕಿ – ಸೈಕಲ್‌ ಸವಾರ ಮೃತ್ಯು.

ಬ್ರಹ್ಮಾವರ: ಸ್ಕೂಟಿ ಒಂದು ಢಿಕ್ಕಿ ಹೊಡೆದ ಪರಿಣಾಮ ಸೈಕಲ್‌ ಸವಾರ ಸಾವನ್ನಪ್ಪಿದ ಘಟನೆ ಬ್ರಹ್ಮಾವರ ಸಮೀಪದ ಬಾರಕೂರು ಹೇರಾಡಿ ಬಳಿ ಸಂಭವಿಸಿದೆ. ಮೃತಪಟ್ಟ ವ್ಯಕ್ತಿ ಶೀನ ಮರಕಾಲ (76) ಎಂದು ತಿಳಿದು ಬಂದಿದೆ. ಅವರು ಬಾರಕೂರು ಕಡೆ ಬರುತ್ತಿದ್ದಾಗ ಸ್ಕೂಟಿ ಹಿಂದಿನಿಂದ ಢಿಕ್ಕಿ ಹೊಡೆಯತು. ತಲೆ, ಮುಖಕ್ಕೆ ತೀವ್ರ ಗಾಯಗಳಾಗಿ ಬ್ರಹ್ಮಾವರದ ಖಾಸಗಿ ಆಸ್ಪತ್ರೆಗೆ ದಾಖಲಾಗಿ, ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ. ಸ್ಕೂಟಿ ಸವಾರ ರಾಮಚಂದ್ರ ಸೋಮಯಾಜಿ ಅವರಿಗೂ ಗಾಯಗಳಾಗಿವೆ. ಪೊಲೀಸರು ಅಪಘಾತ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಕೌಶಾಲ್ಯಾಭಿವೃದ್ಧಿ ತರಬೇತಿ: ಅರ್ಜಿ ಆಹ್ವಾನ

ಉಡುಪಿ: ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಪಂಗಡದ ನಿರುದ್ಯೋಗಿ ಯುವಕ ಮತ್ತು ಯುವತಿಯರಿಗೆ ಕೌಶಾಲ್ಯಾಭಿವೃದ್ಧಿ ತರಬೇತಿ ಹಾಗೂ ಎಲೆಕ್ಟಾçನಿಕ್ ಮತ್ತು ಡಿಜಿಟಲ್ ಮಾಧ್ಯಮದಲ್ಲಿ ತರಬೇತಿ ನೀಡಲು ಅರ್ಹ ಪರಿಶಿಷ್ಟ ಪಂಗಡದ ಪತ್ರಿಕೋದ್ಯಮ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಮಾರ್ಚ್ 31 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ನಗರದ ಮಣಿಪಾಲದ ರಜತಾದ್ರಿಯ ಜಿಲ್ಲಾಡಳಿತ ಕಛೇರಿಗಳ ಸಂಕೀರ್ಣದ ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ […]

ಉಡುಪಿ ಜಿಲ್ಲಾಸ್ಪತ್ರೆಯ ಸರ್ಜನ್ ಆಗಿ ಡಾ.ಅಶೋಕ್ ಹೆಚ್. ಅಧಿಕಾರ ಸ್ವೀಕಾರ.

ಉಡುಪಿ: ಡಾ. ಅಶೋಕ್ ಹೆಚ್, ಎಂ.ಬಿ.ಬಿ.ಎಸ್, ಡಿ.ಪಿ.ಎಚ್ ಇವರು ಉಡುಪಿ ಜಿಲ್ಲಾ ಆಸ್ಪತ್ರೆಯಲ್ಲಿ ಜಿಲ್ಲಾ ಸರ್ಜನ್ ಆಗಿ ಅಧಿಕಾರ ಸ್ವೀಕರಿಸಿದ್ದಾರೆ. ಇವರು ಅನುಭವಿ ವೈದ್ಯರಾಗಿ ಸೇವೆ ಸಲ್ಲಿಸಿದವರು. ಅಲ್ಲದೆ 2012ರ ಅತ್ಯುತ್ತಮ DAPCO ಅಧಿಕಾರಿಯಾಗಿ, 2013ರಲ್ಲಿ ಉಡುಪಿ ಜಿಲ್ಲಾ ಸರ್ವೋತ್ತಮ ಸೇವಾ ಪ್ರಶಸ್ತಿ, 2021ರಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಸರ್ವೋತ್ತಮ ಸೇವಾ ಪ್ರಶಸ್ತಿಗೆ ಭಾಜನರಾಗಿ, ಜನ ಮೆಚ್ಚುಗೆ ಪಡೆದವರು. ಉಡುಪಿ ಜಿಲ್ಲೆಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಯಾಗಿ ಜವಾಬ್ದಾರಿ ಸ್ವೀಕರಿಸಿದ ಅಲ್ಪಾವಧಿಯಲ್ಲಿಯೇ ಸಾರ್ವಜನಿಕ ಆರೋಗ್ಯ ಕ್ಷೇತ್ರದಲ್ಲಿ […]