ಬಂಟಕಲ್ಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿದ ಬಿಜೆಪಿ ಅಭ್ಯರ್ಥಿ ಗುರ್ಮೆ ಸುರೇಶ್ ಶೆಟ್ಟಿ
ಕಾಪು: ಕಾಪು ಬಿಜೆಪಿ ಅಭ್ಯರ್ಥಿ ಗುರ್ಮೆ ಸುರೇಶ್ ಶೆಟ್ಟಿ ಅವರು ಲಾಲಾಜಿ ಆರ್. ಮೆಂಡನ್ ಅವರೊಂದಿಗೆ ಬಂಟಕಲ್ಲಿನ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿ ದೇವಿಯ ದರ್ಶನ ಪಡೆದು ಪ್ರಸಾದ ಸ್ವೀಕರಿಸಿದರು.
ಮತದಾರರು ಯಾವುದೇ ಆಸೆ ಆಮಿಷಗಳಿಗೆ ಒಳಗಾಗದೇ ಮತದಾನ ಮಾಡಿ: ನ್ಯಾ.ಶಾಂತವೀರ ಶಿವಪ್ಪ
ಉಡುಪಿ: ಮೇ 10 ರಂದು ನಡೆಯುವ ವಿಧಾನಸಭಾ ಸಾರ್ವತ್ರಿಕ ಚುನಾವಣೆಯಲ್ಲಿ ಮತದಾರರು ಯಾವುದೇ ಆಸೆ ಆಮಿಷಗಳಿಗೆ ಒಳಗಾಗದೇ, ತಮ್ಮ ಮತವನ್ನು ಮಾರಿಕೊಳ್ಳದೇ, ಉತ್ತಮ ಅಭ್ಯರ್ಥಿಗೆ ಮತಚಲಾಯಿಸುವಂತೆ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಶಾಂತವೀರ ಶಿವಪ್ಪ ಹೇಳಿದರು. ಅವರು ಗುರುವಾರ ಉಡುಪಿ ಅಜ್ಜರಕಾಡು ಡಾ.ಜಿ.ಶಂಕರ್ ಮಹಿಳಾ ಸರಕಾರಿ ಪ್ರಥಮದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದಲ್ಲಿ, ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ನಡೆದ ಮತದಾನ ಜಾಗೃತಿ ಕಾರ್ಯಕ್ರಮದಲ್ಲಿ, ಮತದಾನ ಜಾಗೃತಿ ಸಾರುವ ಟ್ಯಾಬ್ಲೋ ವಾಹನಕ್ಕೆ ಚಾಲನೆ ನೀಡಿ ಮಾತನಾಡಿದರು. […]
ಏ. 29 ರಂದು ವಿದ್ಯುತ್ ವ್ಯತ್ಯಯ
ಉಡುಪಿ: 33/11 ಕೆ.ವಿಜಿ.ಐ.ಎಸ್‌ಉಪಕೇಂದ್ರದಿಂದ ಹೊರಡುವ 11 ಕೆ.ವಿ ಕೆದೂರು ಮಾರ್ಗದಲ್ಲಿ ಹೆಚ್.ಟಿ ವಾಹಕ ಬದಲಾವಣೆ, ಟ್ರೀ ಟ್ರಿಮ್ಮಿಂಗ್ ಮತ್ತು ಮಾರ್ಗ ನಿರ್ವಹಣಾ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ಕೆದೂರು, ಉಳ್ತೂರು, ಶಾನಾಡಿ ಮತ್ತು ಮಲ್ಯಾಡಿ ಗ್ರಾಮಗಳ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಏಪ್ರಿಲ್ 29 ರಂದು ಬೆಳಗ್ಗೆ 9 ರಿಂದ ಸಂಜೆ 5 ಗಂಟೆಯವರೆಗೆವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಮೆಸ್ಕಾಂನ ಪ್ರಕಟಣೆ ತಿಳಿಸಿದೆ.
ವಾಟ್ಸಾಪ್ (WhatsApp)ಬಳಕೆದಾರರು ಈಗ ನಾಲ್ಕು ಫೋನ್‌ಗಳಲ್ಲಿ ಒಂದು ಖಾತೆಯನ್ನು ಬಳಸಬಹುದು: ಹೇಗೆಂದು ತಿಳಿಯಿರಿ
ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಮ್‌ನ ಸಿಇಒ ಮಾರ್ಕ್ ಜುಕರ್‌ಬರ್ಗ್, ವಾಟ್ಸಾಪ್ (WhatsApp) ಅಂತಿಮವಾಗಿ ಬಹು-ಸಾಧನ ಲಾಗಿನ್ ಬೆಂಬಲವನ್ನು ಪರಿಚಯಿಸುತ್ತಿದೆ ಎಂದು ಘೋಷಿಸಿದ್ದು, ಇದು ಬಳಕೆದಾರರಿಗೆ ಒಂದೇ ವಾಟ್ಸಾಪ್ ಖಾತೆಯನ್ನು ನಾಲ್ಕು ಬೇರೆ ಬೇರೆ ಫೋನ್‌ಗಳಲ್ಲಿ ಬಳಸಲು ಅನುವು ಮಾಡಿಕೊಡುತ್ತದೆ. ವಾಟ್ಸಾಪ್ ಪ್ರಕಾರ, ಈ ವೈಶಿಷ್ಟ್ಯವನ್ನು ಮುಂಬರುವ ವಾರಗಳಲ್ಲಿ ಎಲ್ಲಾ ಬಳಕೆದಾರರಿಗೆ ಬಿಡುಗಡೆ ಮಾಡಲಾಗುವುದು. ಈ ಹಿಂದೆ, ಬಳಕೆದಾರರು ಒಂದೇ ಫೋನ್ ಮತ್ತು ಬಹು ಕಂಪ್ಯಾನಿಯನ್ ಡೆಸ್ಕ್‌ಟಾಪ್ ಸಾಧನಗಳಲ್ಲಿ ಒಂದು ವಾಟ್ಸಾಪ್ ಖಾತೆ ಬಳಸಲು ಸೀಮಿತರಾಗಿದ್ದರು. ಈ ಹೊಸ ಬಹು-ಸಾಧನ […]
ನಾಮಪತ್ರ ವಾಪಸ್ ಪಡೆಯಲು ಇಂದೇ ಕೊನೆ ದಿನ….!!
ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆ ನಾಮಪತ್ರ ವಾಪಸ್ ಪಡೆಯಲು ಇಂದೇ ಕೊನೆ ದಿನವಾಗಿದೆ. 3632 ಮಂದಿ ಚುನಾವಣೆಗೆ ಸ್ಪರ್ಧಿಸಿದ್ದಾರೆ. 502 ಅಭ್ಯರ್ಥಿಗಳ ನಾಮಪತ್ರ ಕ್ರಮಬದ್ಧವಾಗಿಲ್ಲದ ಕಾರಣ ತಿರಸ್ಕರಿಸಲಾಗಿದೆ. 3130 ಅಭ್ಯರ್ಥಿಗಳ ನಾಮಪತ್ರ ಕ್ರಮಬದ್ಧವಾಗಿವೆ. ಬಿಜೆಪಿ ಎಲ್ಲಾ ಇನ್ನೂ 224 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ. 75 ಹೊಸ ಮುಖಗಳಿಗೆ ಅವಕಾಶ ನೀಡಲಾಗಿದೆ. 68 ಮಂದಿ ಲಿಂಗಾಯಿತರಿಗೆ ಬಿಜೆಪಿ ಟಿಕೆಟ್ ನೀಡಲಾಗಿದ್ದು, 134 ಪದವೀಧರರು, 37 ಸ್ನಾತಕೋತ್ತರ ಪದವೀಧರರು ಸೇರಿದ್ದಾರೆ. ಕಾಂಗ್ರೆಸ್ 223 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ. 53 ಹೊಸ ಮುಖಗಳಿಗೆ […]