ಬಂಗಾಡಿ ಕೊಲ್ಲಿ “ಸೂರ್ಯ- ಚಂದ್ರ” ಜೋಡುಕರೆ ಕಂಬಳ ಕೂಟದ ಫಲಿತಾಂಶ

ಬಂಗಾಡಿ: ಮಾ.9 ರಂದು ನಡೆದ ಬಂಗಾಡಿ ಕೊಲ್ಲಿ “ಸೂರ್ಯ – ಚಂದ್ರ” ಜೋಡುಕರೆ ಕಂಬಳ ಕೂಟದ ಫಲಿತಾಂಶ ಹೀಗಿವೆ. ಕೂಟದಲ್ಲಿ ಭಾಗವಹಿಸಿದ ಕೋಣಗಳ ಸಂಖ್ಯೆ : ಕನೆಹಲಗೆ: 05 ಜೊತೆ ಅಡ್ಡಹಲಗೆ: 02 ಜೊತೆ ಹಗ್ಗ ಹಿರಿಯ: 11 ಜೊತೆ ನೇಗಿಲು ಹಿರಿಯ: 26 ಜೊತೆ ಹಗ್ಗ ಕಿರಿಯ: 20 ಜೊತೆ ನೇಗಿಲು ಕಿರಿಯ: 56 ಜೊತೆ ಒಟ್ಟು ಕೋಣಗಳ ಸಂಖ್ಯೆ: 120 ಜೊತೆ ಕನೆಹಲಗೆ: ( 6.5 ಕೋಲು ನಿಶಾನೆಗೆ ನೀರು ಹಾಯಿಸಿದ್ದಾರೆ ) ಬೋಳಾರ […]

ಹರ್ಲೆ‌ ಡೇವಿಡ್ಸನ್ ಎಕ್ಸ್ 440 ಮೋಟಾರ್ ಬೈಕ್ ಗ್ರಾಹಕರಿಗೆ ಹಸ್ತಾಂತರ ಕಾರ್ಯಕ್ರಮ

ಉಡುಪಿ : ಹಿರೋ ಶಕ್ತಿ ಮೋಟಾರ್ಸ್ ,ಹರ್ಲೆ ಡೇವಿಡ್ಸನ್ ವತಿಯಿಂದ ವಿನೂತನ ಮಾದರಿಯ ಹರ್ಲೆ‌ ಡೇವಿಡ್ಸನ್ ಎಕ್ಸ್ 440 ಮೋಟಾರ್ ಬೈಕ್ ಗ್ರಾಹಕರಿಗೆ ಹಸ್ತಾಂತರ ಕಾರ್ಯಕ್ರಮವು ಮಣಿಪಾಲದ ಕಂಟ್ರಿ ಇನ್ ಆ್ಯಂಡ್ ಸೂಟ್ಸ್ ಹೋಟೆಲ್ ನಲ್ಲಿ ನಡೆಯಿತು. ಹಿರೋ ಶಕ್ತಿ ಮೋಟಾರ್ಸ್ ಮ್ಯಾನೆಜಿಂಗ್ ಡೈರೆಕ್ಟರ್ ವಿಜಯ್ ಕರ್ಣೆ, ರಾಹುಲ್ ಮತ್ತು ಕಂಪನಿಯ ಪ್ರಶಾಂತ್ ಡಿಕೆ ನೂತನ ಮೊಟಾರ್ ಬೈಕ್ ಗಳನ್ನು ಗ್ರಾಹಕರಿಗೆ ಹಸ್ತಾಂತರಿಸಿದರು. ಕಾರ್ಯಕ್ರಮದಲ್ಲಿ ಒಟ್ಟು 7 ಮಂದಿ ಗ್ರಾಹಕರಿಗೆ ಬೈಕ್ ಗಳನ್ನು ಅತಿಥಿಗಳು ಹಸ್ತಾಂತರಿಸಿದರು. ಹಾರ್ಲೆ-ಡೇವಿಡ್ಸನ್ […]

ಜೆ.ಇ.ಇ ಮೈನ್-ಬ್ಯಾಚುಲರ್ ಆಫ್ ಆರ್ಕಿಟೆಕ್ಚರ್ ಮೊದಲ ಹಂತದ ಪರೀಕ್ಷೆಯಲ್ಲಿ ಜ್ಞಾನಸುಧಾದ 8 ಮಂದಿಗೆ 99ಕ್ಕೂ ಅಧಿಕ ಪರ್ಸಂಟೈಲ್, 3 ಮಂದಿಗೆ 99.9ಕ್ಕಿಂತ ಅಧಿಕ ಪರ್ಸಂಟೈಲ್, ಗಣಿತಶಾಸ್ತ್ರದಲ್ಲಿ ಪ್ರಿಯಾಂಶ್ ಗೆ 100 ಪರ್ಸಂಟೈಲ್.

ಕಾರ್ಕಳ: ರಾಷ್ಟ್ರಮಟ್ಟದಲ್ಲಿ ಎನ್.ಟಿ.ಎ ನಡೆಸುವ ಜೆ.ಇ.ಇ.ಮೈನ್ – ಬ್ಯಾಚುಲರ್ ಆಫ್ ಆರ್ಕಿಟೆಕ್ಚರ್ – 2024 ಪ್ರಥಮ ಹಂತದ ಪರೀಕ್ಷೆಯ ಫಲಿತಾಂಶದಲ್ಲಿ ಕಾರ್ಕಳ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ 8 ಮಂದಿ ವಿದ್ಯಾರ್ಥಿಗಳು 99ಕ್ಕಿಂತ ಅಧಿಕ ಪರ್ಸಂಟೈಲ್ ಗಳಿಸಿರುತ್ತಾರೆ. ವಿದ್ಯಾರ್ಥಿಗಳಾದ ಕೇದಾರ್ ರಮೇಶ್ ಕುಲಕರ್ಣಿ 99.9670351 ಪರ್ಸಂಟೈಲ್, ಬಿಪಿನ್ ಜೈನ್.ಬಿ.ಎಂ. 99.9495831 ಪರ್ಸಂಟೈಲ್, ಪ್ರಣವ್ ಕುಮಾರ್ ಭಂಡಿ 99.9069226 ಪರ್ಸಂಟೈಲ್, ಚೈತನ್ಯ ಚಲಿತ್ 99.7905759 ಪರ್ಸಂಟೈಲ್, ಚಿರಂತನ ಜೆ.ಎ. 99.7498546 ಪರ್ಸಂಟೈಲ್, ಪ್ರಿಯಾಂಶ್ ಎಸ್.ಯು. 99.705255 ಪರ್ಸಂಟೈಲ್ (ಗಣಿತ […]

ಉಡುಪಿ: ರಸ್ತೆ ಬದಿಯಲ್ಲಿ ನಿಂತಿದ್ದ ಕಾರಿಗೆ ಬೈಕ್ ಡಿಕ್ಕಿ – ಸವಾರ ಮೃತ್ಯು.

ಉಡುಪಿ: ರಸ್ತೆ ಬದಿಯಲ್ಲಿ ನಿಂತಿದ್ದ ಕಾರಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರನೋರ್ವ ಮೃತಪಟ್ಟ ಘಟನೆ ಉಡುಪಿ ನಿಟ್ಟೂರಿನ ಕಾಂಚನಾ ಹುಂಡೈ ಕಾರ್ ಶೋ ರೂಂ ಬಳಿ ಇಂದು ಮುಂಜಾನೆ ನಡೆದಿದೆ. ಮೃತ ಸವಾರನನ್ನು 21 ವರ್ಷದ ಸ್ವಸ್ತಿಕ್ ಎಂದು ಗುರುತಿಸಲಾಗಿದೆ. ಇವರು ಇಂದು ಮುಂಜಾನೆ ತನ್ನ ಬೈಕ್ ನಲ್ಲಿ ಉಡುಪಿ ಕಡೆಗೆ ತೆರಳುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಸ್ವಸ್ತಿಕ್ ಅವರನ್ನು ಕೂಡಲೇ ಉಡುಪಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ […]

ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಗೆ ಪ್ರಧಾನಿ ನರೇಂದ್ರ ಮೋದಿ ಅವರಿಂದ ಸಿಹಿ ಸುದ್ದಿ..

ಉಡುಪಿ: ಗೃಹ ಬಳಕೆಯ ಎಲ್ ಪಿಜಿ ಸಿಲಿಂಡರ್ ಬೆಲೆಯನ್ನು 100 ಇಳಿಕೆ ಮಾಡುವುದಾಗಿ ಘೋಷಣೆ ಮಾಡುವ ಮೂಲಕ ಅಂತಾರಾಷ್ಟ್ರೀಯ ಮಹಿಳಾ ದಿನಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಸಿಹಿ ಸುದ್ದಿ ನೀಡಿದ್ದಾರೆ. ಈ ಕುರಿತು ಟ್ವೀಟ್ ಮಾಡಿದ ಅವರು ‘ಇಂದು ಅಂತಾರಾಷ್ಟ್ರೀಯ ಮಹಿಳಾ ದಿನ, ನಮ್ಮ ಸರ್ಕಾರವು ಎಲ್‌ಪಿಜಿ ಸಿಲಿಂಡರ್ ಬೆಲೆಯನ್ನು 100 ರಷ್ಟು ಕಡಿಮೆ ಮಾಡಲು ನಿರ್ಧರಿಸಿದೆ. ಇದು ದೇಶಾದ್ಯಂತ ಲಕ್ಷಾಂತರ ಕುಟುಂಬಗಳ ಆರ್ಥಿಕ ಹೊರೆಯನ್ನು ತಗ್ಗಿಸುವಲ್ಲಿ ಹೆಚ್ಚಿನ ಪಾತ್ರ ವಹಿಸಲಿದೆ, ವಿಶೇಷವಾಗಿ ನಮ್ಮ ನಾರಿ […]