ಎಸೆಸೆಲ್ಸಿ ಪರೀಕ್ಷೆ: ಮಧುಮೇಹ ವಿದ್ಯಾರ್ಥಿಗಳಿಗೆ ವಿಶೇಷ ಸೌಲಭ್ಯ, ವಿನಾಯಿತಿ
ಉಡುಪಿ:ಮಧುಮೇಹದಿಂದ ಬಳಲುತ್ತಿರುವ ಎಸೆಸೆಲ್ಸಿ ವಿದ್ಯಾರ್ಥಿಗಳಿಗೆ ಪರೀಕ್ಷೆ ಹಾಜರಾಗುವ ಸಂದರ್ಭ ವಿಶೇಷ ಸೌಲಭ್ಯ, ವಿನಾಯಿತಿ ನೀಡಲಾಗಿದೆ. ಔಷಧ, ಲಘು ಉಪಾಹಾರ, ಕುಡಿಯುವ ನೀರು, ಬಿಸ್ಕತ್ತು, ಒಣ ಹಣ್ಣು, ಗ್ಲುಕೋಮೀಟರ್, ಗ್ಲುಕೋಸ್ ಪರೀಕ್ಷಾ ಪಟ್ಟಿಯನ್ನು ತರಲು ಅನುವು ಮಾಡಿಕೊಡಲಾಗುವುದು. ಪರೀಕ್ಷೆ ಮಧ್ಯದಲ್ಲಿ ಅಗತ್ಯವಿದ್ದಲ್ಲಿ ಔಷಧ ಸೇವೆ, ರಕ್ತದಲ್ಲಿನ ಸಕ್ಕರೆ ಪರೀಕ್ಷಿಸಲು 15 ನಿಮಿಷಗಳ ಹೆಚ್ಚಿನ ಸಮಯದ ಅವಕಾಶ ನೀಡುವ ಬಗ್ಗೆ ಪರೀಕ್ಷಾ ಕೇಂದ್ರದ ಮುಖ್ಯಸ್ಥರು ಕ್ರಮ ತೆಗೆದುಕೊಳ್ಳುವಂತೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ಪರೀಕ್ಷಾ ವಿಭಾಗದ […]
ಜಿಲ್ಲೆಯಾದ್ಯಂತ 55 ಪರೀಕ್ಷಾ ಕೇಂದ್ರಗಳಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆ- 13,235 ವಿದ್ಯಾರ್ಥಿಗಳು ಹಾಜರು, 75 ಗೈರು
ಉಡುಪಿ: ಜಿಲ್ಲೆಯಾದ್ಯಂತ ಶುಕ್ರವಾರ ಎಸ್ಸೆಸ್ಸೆಲ್ಸಿ ಪರೀಕ್ಷೆ ಆರಂಭವಾಗಿದ್ದು ಮೊದಲ ದಿನ ಯಾವುದೇ ಗೊಂದಲಗಳು ಇಲ್ಲದಂತೆ ನಡೆಯಿತು. 55 ಪರೀಕ್ಷಾ ಕೇಂದ್ರಗಳಲ್ಲಿ ಮಾತೃ ಭಾಷೆ ವಿಷಯದಲ್ಲಿ ನಡೆದ ಪರೀಕ್ಷೆಯಲ್ಲಿ 13,235 ವಿದ್ಯಾರ್ಥಿಗಳು ಹಾಜರಾಗಿದ್ದರು.75 ಮಂದಿ ಗೈರಾಗಿದ್ದರು. ಬೆಳಿಗ್ಗೆ ಜಿಲ್ಲಾಧಿಕಾರಿ ಎಂ.ಕೂರ್ಮಾರಾವ್ ಉಡುಪಿಯ ಬೋರ್ಡ್ ಹೈಸ್ಕೂಲ್ ಪರೀಕ್ಷಾ ಕೇಂದ್ರಕ್ಕೆ ಭೇಟಿನೀಡಿ ಸೌಲಭ್ಯಗಳ ಪರಿಶೀಲನೆ ನಡೆಸಿದರು. ಮುನ್ನೆಚ್ಚರಿಕಾ ಕ್ರಮಗಳ ಪಾಲನೆಯ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದರು. ಈ ಸಂದರ್ಭ ಡಿಡಿಪಿಐ ಗಣಪತಿ, ಡಯಟ್ ಅಧಿಕಾರಿ ಡಾ.ಅಶೋಕ್ ಕಾಮತ್ ಇದ್ದರು. ಮೊದಲ ದಿನದ ಪರೀಕ್ಷೆಯಲ್ಲಿ […]
ಉಡುಪಿ: ಆಸ್ತಿ ತೆರಿಗೆ ಪಾವತಿಗೆ ಸೂಚನೆ
ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯ ಕಟ್ಟಡ ಹಾಗೂ ಖಾಲಿ ನಿವೇಶನ ಮಾಲೀಕರು ಹಾಗೂ ಅಧಿಭೋಗದಾರರಿಗೆ ಪ್ರಸಕ್ತ ಸಾಲಿನಲ್ಲಿ ಆಸ್ತಿ ತೆರಿಗೆಯನ್ನು ಶೇ.3 ರಷ್ಟು ಹೆಚ್ಚಿಸಲಾಗಿದ್ದು, ಏಪ್ರಿಲ್ 1 ರಿಂದ 30 ರ ಒಳಗೆ ಪಾವತಿಸಿದ್ದಲ್ಲಿ ಶೇ.5 ರಷ್ಟು ರಿಯಾಯಿತಿ ನೀಡಲಾಗುವುದು. ಮೇ 1 ರಿಂದ ಜೂನ್ 30 ರ ಒಳಗೆ ಪಾವತಿಸಿದ್ದಲ್ಲಿ ದಂಡ ರಹಿತವಾಗಿ ಪಾವತಿಸಲು ಅವಕಾಶವಿದ್ದು, ಜುಲೈ 1 ರ ನಂತರ ಪಾವತಿಸುವವರಿಗೆ ಆಸ್ತಿ ತೆರಿಗೆಯ ಮೇಲೆ ಪ್ರತಿ ತಿಂಗಳು ಶೇ.2 ರಷ್ಟು ದಂಡ ವಿಧಿಸಲಾಗುವುದು […]
ಎಸಿ ಮೆಷಿನ್ ಫಿಟ್ ಮಾಡಲು ಹೋಗಿ ಬಂಟ್ವಾಳದ ಯುವಕ ಮಹಡಿಯಿಂದ ಬಿದ್ದು ದಾರುಣ ಸಾವು!
ಮಂಗಳೂರು, ಮಾ.29 : ಹೊಸತಾಗಿ ಎಸಿ ಮೆಷಿನ್ ಫಿಟ್ ಮಾಡುತ್ತಿದ್ದಾಗ ಬಹುಮಹಡಿ ಕಟ್ಟಡದ ‘ಒಂಬತ್ತನೇ ಮಹಡಿಯಿಂದ ಆಯತಪ್ಪಿ ಬಿದ್ದ ಯುವಕನೊಬ್ಬ ಸ್ಥಳದಲ್ಲೇ ಮೃತಪಟ್ಟ ಘಟನೆ ನಗರದ ನಂತೂರಿನಲ್ಲಿ ನಡೆದಿದೆ. ಬಂಟ್ವಾಳ ತಾಲೂಕಿನ ಮಣಿಹಳ್ಳಿ ನಿವಾಸಿ ವಿನಯ್ ತಾವ್ರೊ (23) ಮೃತ ಯುವಕ ನಂತೂರಿನ ಹಮಾರಾ ರೆಫ್ರಿಜರೇಟರ್ ಕಂಪೆನಿಯಲ್ಲಿ ಕೆಲಸಕ್ಕಿದ್ದ ವಿನಯ್, ನಂತೂರಿನ ಮೌಂಟ್ ಟಿಯಾರಾ ಅಪಾರ್ಟೆಂಟ್ ನಲ್ಲಿ ಎಸಿ ಮೆಷಿನ್ ಫಿಟ್ ಮಾಡಲು ತೆರಳಿದ್ದ ಒಂಬತ್ತನೇ ಮಹಡಿಯ ಮನೆಯ ಆವರಣ ಗೋಡೆಯ ಹೊರಭಾಗದಲ್ಲಿ ವಿನಯ್ ಮತ್ತು ಇನ್ನೊಬ್ಬ […]
Shakti Jaguar Land Roverಸೂಪರ್ ವುಮನ್ ಅವಾರ್ಡ್ 2023: ಹೇಮಾ ನಿರಂಜನ್ ಇವರಿಗೆ ಉದ್ಯಮಿ ವಿಭಾಗದಲ್ಲಿ ಪ್ರಶಸ್ತಿ
ಬೆಂಗಳೂರು: Shakti Jaguar Land Roverಸೂಪರ್ ವುಮನ್ ಅವಾರ್ಡ್ 2023 – ಉದ್ಯಮಿ ವಿಭಾಗದಲ್ಲಿ ಮಹಿಳಾ ಉದ್ಯಮಿ, ಹೇಮಾ ನಿರಂಜನ್ ಅವರಿಗೆ ಪ್ರಶಸ್ತಿ ಲಭಿಸಿದೆ. ಸಾಧನೆಯನ್ನು ಗುರುತಿಸಿ ಪ್ರಶಸ್ತಿ ನೀಡಿದ ಶಕ್ತಿ ಸಂಸ್ಥೆ, ಹಾಗೂ ತನಿಷ್ಕ್ ಚಿನ್ನಾಭರಣ ಸಂಸ್ಥೆಗೆ ಹೇಮಾ ನಿರಂಜನ್ ಧನ್ಯವಾದ ಸಲ್ಲಿಸಿದ್ದಾರೆ.