ಮಣಿಪಾಲ MSDCಯಲ್ಲಿ ಯುವಕರಿಗೆ “ಕಾರ್ ವೀಲ್ ಅಲೈನ್ಮೆಂಟ್” & “ಕಾರ್ ಎಸಿ ಸರ್ವಿಸಿಂಗ್” ಕ್ರ್ಯಾಶ್ ಕೋರ್ಸ್.

ಮಣಿಪಾಲ: ಮಣಿಪಾಲ್ ಕೌಶಲ್ಯ ಅಭಿವೃದ್ಧಿ ಕೇಂದ್ರ (ಡಾ ಟಿಎಂಎ ಪೈ ಫೌಂಡೇಶನ್‌ನ ಒಂದು ಘಟಕ) ದಲ್ಲಿ ಯುವಕರಿಗೆ ಕಾರ್ ವೀಲ್ ಅಲೈನ್ಮೆಂಟ್ ಮತ್ತು ಕಾರ್ ಎಸಿ ಸರ್ವಿಸಿಂಗ್ ಕ್ರ್ಯಾಶ್ ಕೋರ್ಸ್’ನ ಅರ್ಜಿಯನ್ನು ಆಹ್ವಾನಿಸಿದೆ. ಕೋರ್ಸ್’ನ ಬಗ್ಗೆ: ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ:ಡಾ.ಟಿ.ಎಂ.ಎ ಪೈ ಪಾಲಿಟೆಕ್ನಿಕ್ ಕ್ಯಾಂಪಸ್ ಮಿಲ್ಕ್ ಡೈರಿ ರಸ್ತೆ, ಮಣಿಪಾಲ.📞 ದೂರವಾಣಿ 9148757193/8123163934🌐 ವೆಬ್‌ಸೈಟ್: https://msdcskills.org
ಉಡುಪಿ: ವೀಣಾ ಸಂಧ್ಯಾ ಸರಣಿ ಕಾರ್ಯಕ್ರಮಕ್ಕೆ ಚಾಲನೆ

ಉಡುಪಿ: ಕಲಾಸ್ಪಂದನ ಕಲಾ ಶಾಲೆಯು ಮೂವತ್ತನೆಯ ವರ್ಷಕ್ಕೆ ಕಾಲಿಡುವ ಪ್ರಯುಕ್ತ ಡಾ. ಪಳ್ಳತಡ್ಕ ಕೇಶವ ಭಟ್ ಮೆಮೋರಿಯಲ್ ಟ್ರಸ್ಟ್ (ರಿ) ಸಂಸ್ಥೆಯು ಕನ್ನಡ ಮತ್ತು ಸಂಸ್ಕೃತಿ ಇಲಾಖೆ,ಕರ್ನಾಟಕ ಸರಕಾರ ಇವರ ಸಹಯೋಗದಲ್ಲಿ ವೀಣಾ ಸಂಧ್ಯಾ ಎನ್ನುವ ಪಂಚ ವೀಣಾ ಕಾರ್ಯಕ್ರಮವನ್ನು ಜೂ.20 ರಂದು ಸಂಜೆ ಗ್ರೀನ್ ವ್ಯಾಲಿ ಪ್ಯಾರಿಡೈಸ್ ರಿಟೈರ್ಮೆಂಟ್ ಹೋಂ ಮಂಚಿ ಮಣಿಪಾಲ ಇಲ್ಲಿ ನಡೆಸಿಕೊಟ್ಟರು. ಮುಖ್ಯ ಅತಿಥಿಗಳಾಗಿ ಶ್ರೀಮತಿ ಎಸ್ ಎನ್ ಕಮಲಾ ರವರು ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿದರು. ಡಾ ಇಂದಿರಾ ಶಾನುಭೋಗ […]
ಸಾರ್ವಜನಿಕರ ಸುಗಮ ಸಂಚಾರಕ್ಕೆ ಅನುಗುಣವಾಗಿ ರಸ್ತೆ ಅಭಿವೃದ್ಧಿ ಕಾರ್ಯಕೈಗೊಳ್ಳಿ: ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ

ಉಡುಪಿ: ಹೆದ್ದಾರಿ ಸುಂಕ ವಸೂಲಾತಿ ಕೇಂದ್ರದ ಸ್ಥಳೀಯ ಸಾರ್ವಜನಿಕರಿಗೆ ಈ ಹಿಂದೆ ನೀಡಿದ ರೀತಿಯಲ್ಲಿ ಸುಂಕ ವಿನಾಯಿತಿ ನೀಡಬೇಕು. ಹೆದ್ದಾರಿಗಳಲ್ಲಿ ವಾಹನಗಳು ಸುಗಮವಾಗಿ ಸಂಚರಿಸಲು ಅನುಕೂಲವಾಗುವಂತೆ ವೈಜ್ಞಾನಿಕ ರೀತಿಯಲ್ಲಿ ರಸ್ತೆ ಅಭಿವೃದ್ಧಿ ಹಾಗೂ ದುರಸ್ಥಿ ಕಾರ್ಯಗಳನ್ನು ಕೈಗೊಂಡು ಅಪಘಾತ ಪ್ರಕರಣಗಳನ್ನು ಇಳಿಕೆಯಾಗುವಂತೆ ಅಗತ್ಯವಿರುವ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ರಾ.ಹೆ. ಅಧಿಕಾರಿಗಳಿಗೆ ಹಾಗೂ ಗುತ್ತಿಗೆದಾರರಿಗೆ ಸೂಚನೆ ನೀಡಿದರು. ಅವರು ಜೂ.4 ರಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ರಾಷ್ಟ್ರೀಯ […]
ಜಿಲ್ಲೆಯಲ್ಲಿ ವಿಕಲಚೇತನ ತಂಡದ ಹಸಿರು ಕ್ರಾಂತಿ: ಶಾಲಾ ಕಾಲೇಜು ಹಾಗೂ ಸಂಘ ಸಂಸ್ಥೆಗಳಲ್ಲಿ ಸಾವಿರ ಗಿಡ ನೆಡುವ ಕಾರ್ಯಕ್ರಮಕ್ಕೆ ಚಾಲನೆ.

ಉಡುಪಿ: ವಿಕಲಚೇತನರ ಪರವಾಗಿ ಜಿಲ್ಲೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಡಾ.ಸೋನಿಯಾ ನೇತೃತ್ವದ ಪೀಸ್ ಫೌಂಡೇಶನ್ ನ್ಯಾಶನಲ್ ಎನ್‌ಜಿ ಓ ಹಾಗೂ ಉಡುಪಿ ಜಿಲ್ಲಾ ಅರಣ್ಯ ಇಲಾಖೆ ಸಹಭಾಗಿತ್ವದಲ್ಲಿ ಸಾವಿರ ಗಿಡಗಳನ್ನು ನೆಡುವ ಪರಸರ ಸ್ನೇಹಿ ಕಾರ್ಯಕ್ರಮಕ್ಕೆ ಉಡುಪಿ ವಲಯ ಅರಣ್ಯಾಧಿಕಾರಿ ವಾರಿಜಾಕ್ಷಿ ದೀಪ ಬೆಳಗಿಸಿ ಚಾಲನೆ ನೀಡಿದರು. ನಗರದ ಅದಿ ಉಡುಪಿ ಬಳಿಯಿರುವ ವಲಯ ಅರಣ್ಯ ಕಚೇರಿಯಲ್ಲಿ ನಡೆದ ಕಾರ್ಯಕಮದಲ್ಲಿ ಮಾತನಾಡಿದ ಅವರು ಪೀಸ್ ಪೌಂಡೇಶನ್ ಜಿಲ್ಲೆಯ ವಿವಿಧ ಶಾಲೆ ಹಾಗೂ ಸಂಘ ಸಂಸ್ಥೆಗಳಲ್ಲಿ ಸಾವಿರಕ್ಕೂ ಹೆಚ್ಚು ಸಸಿಗಳನ್ನು […]
ನಾಳೆ (ಜುಲೈ 5) ಬೈಂದೂರು, ಕುಂದಾಪುರ ಹಾಗೂ ಬ್ರಹ್ಮಾವರ ತಾಲೂಕಿನ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ.

ಉಡುಪಿ: ಉಡುಪಿ ಜಿಲ್ಲೆಯಾದ್ಯಂತ ನಿರಂತರ ಮಳೆಯಾಗುತ್ತಿದ್ದು, ಹಲವೆಡೆ ಪ್ರವಾಹ ಸ್ಥಿತಿ ನಿರ್ಮಾಣವಾಗಿದೆ. ಬೈಂದೂರು, ಕುಂದಾಪುರ ತಾಲೂಕಿನಲ್ಲಿ ಭಾರೀ ವರ್ಷಧಾರೆ ಆಗುತ್ತಿದ್ದು, ನೆರೆ ಭೀತಿ ಉಂಟಾಗಿದೆ. ಈ ಹಿನ್ನೆಲೆಯಲ್ಲಿ ಮುಂಜಾಗೃತ ಕ್ರಮವಾಗಿ ಉಡುಪಿ ಜಿಲ್ಲೆಯ ಬೈಂದೂರು, ಕುಂದಾಪುರ ಮತ್ತು ಬ್ರಹ್ಮಾವರ ತಾಲೂಕಿನ ಅಂಗನವಾಡಿ ಕೇಂದ್ರಗಳಿಗೆ, ಹಾಗೂ ಪ್ರಾಥಮಿಕ, ಪ್ರೌಢಶಾಲೆ, ಪದವಿ ಪೂರ್ವ ಕಾಲೇಜುಗಳಿಗೆ ನಾಳೆ (ಜುಲೈ 5) ರಜೆ ಘೋಷಿಸಲಾಗಿದೆ.ಭಾರೀ ಗಾಳಿಮಳೆಗೆ ತಾಲೂಕಿನಾದ್ಯಂತ ಅಪಾರ ಪ್ರಮಾಣದಲ್ಲಿ ಹಾನಿ ಸಂಭವಿಸಿದೆ. ಮಳೆ ಮುಂದುವರಿಯುವ ಸಾಧ್ಯತೆ ಇರುವ ಕಾರಣ ಕುಂದಾಪುರ ಉಪ […]