ಹಿರಿಯಡಕ: ಜ.11 ರಂದು ಎಂಕುಲ್ ಫ್ರೆಂಡ್ಸ್ ಟ್ರೋಫಿ-2025 ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾಕೂಟ.

ಹಿರಿಯಡಕ: ಎಂಕುಲ್ ಫ್ರೆಂಡ್ಸ್ ಕಲಾವಿದರು (ರಿ.) ಹಿರಿಯಡಕ ಇವರ ಆಶ್ರಯದಲ್ಲಿ ಸತತ 7ನೇ ವರ್ಷದ, ಪದವಿ ಹಾಗೂ ಪದವಿಪೂರ್ವ ಬಾಲಕರ ಮತ್ತು ವಯೋಮಿತಿ 40 ಮೀರಿದ ಪುರುಷರ ಹಾಗೂ ಗ್ರಾಮೀಣ ಮಟ್ಟದ ಪುರುಷರ ಹೊನಲು ಬೆಳಕಿನ ಮುಕ್ತ ವಾಲಿಬಾಲ್ ಪಂದ್ಯಾಕೂಟವು ಜನವರಿ 11 ರಂದು ಶನಿವಾರ ಸಂಜೆ ಗಂಟೆ 4.00 ರಿಂದ ಹಿರಿಯಡಕ ಕೋಟ್ನಕಟ್ಟೆ ಫ್ರೆಂಡ್ಸ್ ಮೈದಾನದಲ್ಲಿ ಜರುಗಲಿರುವುದು. ಎಂಕುಲ್ ಫ್ರೆಂಡ್ಸ್ ಟ್ರೋಫಿ 2025ಪದವಿ ಹಾಗೂ ಪದವಿ ಪೂರ್ವ ಬಾಲಕರು: ಲೆಜೆಂಡ್ಸ್ (40 ವಯೋಮಿತಿ ಪುರುಷರು): ಗ್ರಾಮೀಣ […]
ಉಡುಪಿ: ಗಾಯಗೊಂಡಿದ್ದ ಬಿಳಿಗೂಬೆಯನ್ನು ರಕ್ಷಿಸಿ ಅರಣ್ಯ ಅಧಿಕಾರಿಗಳಿಗೆ ಹಸ್ತಾಂತರ.

ಉಡುಪಿ: ನಗರದ ಕಿದಿಯೂರು ಹೋಟೆಲ್ ಸಮೀಪದ ಕಟ್ಟಡವೊಂದರ ಬಳಿ ಮಂಗನ ದಾಳಿಯಿಂದ ಗಾಯಗೊಂಡು ಬಿದ್ದಿದ್ದ ಬಿಳಿಗೂಬೆಯನ್ನು ಸಮಾಜ ಸೇವಕ ನಿತ್ಯಾನಂದ ಒಳಕಾಡು ರಕ್ಷಿಸಿದ್ದಾರೆ. ಹಾರಲಾರದ ಸ್ಥಿತಿಯಲ್ಲಿದ್ದ ಗೂಬೆಯನ್ನು ರಕ್ಷಿಸಿದ ನಿತ್ಯಾನಂದ ಅವರು,ಬಳಿಕ ಅದನ್ನು ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಹಸ್ತಾಂತರಿಸಿದರು.
ಉಡುಪಿ: ಬಂಟಕಲ್ ಕಾಲೇಜಿನಲ್ಲಿ ಎರಡು ದಿನಗಳ ಅಂತರಾಷ್ಟ್ರೀಯ ಸಮ್ಮೇಳನ ಮತ್ತು ವಿದ್ಯಾರ್ಥಿ ವಿಚಾರ ಸಂಕಿರಣದ ಸಮಾರೋಪ ಸಮಾರಂಭ.

ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದಲ್ಲಿ ನಡೆದ ಎರಡು ದಿನಗಳ ಕಂಪ್ಯೂಟೇಷನಲ್ ಇಂಟೆಲಿಜೆನ್ಸ್ ಮತ್ತು ಸ್ಮಾರ್ಟ್ ಕಮ್ಯುನಿಕೇಷನ್ (ಸಿಐಎಸ್‌ಸಿ-2024) ಮತ್ತು ಮೆಟೀರಿಯಲ್, ಎನರ್ಜಿ, ಎನ್ವಿರಾನ್ಮೆಂಟ್ ಮತ್ತು ಮ್ಯಾನ್ಯುಫಾಕ್ಚ್ಚರಿಂಗ್ (ಎಮ್‌ಇಇಎಮ್‌ಎಸ್ – 2024) ಎಂಬ ವಿಷಯದ ಕುರಿತು ಪ್ರತಿಷ್ಠಿತ ಅಂತರಾಷ್ಟ್ರೀಯ ಸಮ್ಮೇಳನ ಮತ್ತು ವಿದ್ಯಾರ್ಥಿ ವಿಚಾರ ಸಂಕಿರಣದ ಸಮಾರೋಪ ಸಮಾರಂಭವು 21 ಡಿಸೆಂಬರ್ 2024 ರಂದು ಕಾಲೇಜಿನ ಆವರಣದಲ್ಲಿ ಆಯೋಜಿಸಲಾಗಿತ್ತು. ಈ ಸಮ್ಮೇಳನದಲ್ಲಿ ಭಾಗವಹಿಸಲು ದೇಶ – ವಿದೇಶಗಳಿಂದ ಒಟ್ಟು 237 ಪ್ರಬಂಧಗಳು ಬಂದಿದ್ದು, ಅಂತಿಮವಾಗಿ 12 ಪ್ರಬಂಧಗಳನ್ನು […]
ಉಡುಪಿ:ಕಟ್ಟಡಗಳ ತ್ಯಾಜ್ಯ ನೀರನ್ನು ಮಳೆ ನೀರು ಹರಿಯುವ ಚರಂಡಿಗಳಿಗೆ ಬಿಡುತ್ತಿರುವವರ ವಿರುದ್ಧ ಶಿಸ್ತು ಕ್ರಮ

ಉಡುಪಿ: ಉಡುಪಿ ನಗರಸಭೆಯ ವ್ಯಾಪ್ತಿಯಲ್ಲಿ ಮಳೆ ನೀರು ಹರಿಯುವ ಚರಂಡಿಗಳಿಗೆ ವಸತಿ ಸಮುಚ್ಚಯ, ಹೋಟೆಲ್, ಇತ್ಯಾದಿ ವಾಣಿಜ್ಯ ಸಂಕೀರ್ಣಗಳ ಕೊಳಚೆ ನೀರನ್ನು ಅನಧಿಕೃತವಾಗಿ ಬಿಡುತ್ತಿರುವುದು ಕಂಡು ಬಂದಿದ್ದು, ಇದರಿಂದ ಕಲುಷಿತ ನೀರು ಕುಡಿಯುವ ನೀರಿನ ಮೂಲಗಳು ಸೇರಿ ನೆರೆಹೊರೆಯ ಬಾವಿಗಳ ನೀರು ಹಾಳಾಗುತ್ತಿದೆ ಹಾಗೂ ನೈರ್ಮಲ್ಯಕ್ಕೂ ತೊಂದರೆಯುಂಟಾಗುತ್ತಿದೆ. ನಗರಸಭಾ ವ್ಯಾಪ್ತಿಯಲ್ಲಿ ಇರುವ ವಸತಿ ಸಮುಚ್ಚಯ, ಹೋಟೆಲ್, ಇತ್ಯಾದಿ ವಾಣಿಜ್ಯ ಸಂಕೀರ್ಣಗಳ ಮಾಲೀಕರು ತಮ್ಮ ಕಟ್ಟಡದ ಕಲುಶಿತ ನೀರನ್ನು ವೈಜ್ಞಾನಿಕವಾಗಿ ವಿಲೇವಾರಿ ಮಾಡಲು ವ್ಯವಸ್ಥೆ ಮಾಡಿಕೊಳ್ಳಬೇಕು. ಯಾವುದೇ ಕಟ್ಟಡ […]
ಉಡುಪಿ:ಸಮಾರಂಭಗಳಲ್ಲಿ ಮಧ್ಯ ಸರಬರಾಜು ಹಾಗೂ ವಿತರಣೆಗೆ ಅಬಕಾರಿ ಇಲಾಖೆಯ ಅನುಮತಿ ಕಡ್ಡಾಯ

ಉಡುಪಿ: ಜಿಲ್ಲೆಯ ಎಲ್ಲಾ ಇವೆಂಟ್ ಮ್ಯಾನೇಜ್ಮೆಂಟ್, ಮದುವೆ ಸಭಾಂಗಣ, ಇತರೆ ಕಾರ್ಯಕ್ರಮ ಜರುಗುವ ಸಭಾಂಗಣ, ಹೋಂ ಸ್ಟೇ, ರೆಸಾರ್ಟ್ಗಳ ಮಾಲೀಕರು ಹಾಗೂ ವ್ಯವಸ್ಥಾಪಕರ ಸಭೆಯು ಶುಕ್ರವಾರ ಜಿಲ್ಲೆಯ ಅಬಕಾರಿ ಉಪ ಆಯುಕ್ತರ ಕಛೇರಿ ಸಭಾಂಗಣದಲ್ಲಿ ನಡೆಯಿತು. ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಮಂಗಳೂರು ವಿಭಾಗದ ಅಬಕಾರಿ ಜಂಟಿ ಆಯುಕ್ತ (ಜಾರಿ ಮತ್ತು ತನಿಖೆ) ಡಾ.ಬಾಲಕೃಷ್ಣ ಸಿ ಹೆಚ್, ಮುಂಬರುವ ಕ್ರಿಸ್‌ಮಸ್, ಹೊಸ ವರ್ಷ ಆಚರಣೆ ಮತ್ತು ಇತರೆ ಸಭೆ ಸಮಾರಂಭಗಳಲ್ಲಿ ಊಟದೊಂದಿಗೆ ಮದ್ಯ ಸರಬರಾಜು ಮಾಡಿದ್ದಲ್ಲಿ ಅಬಕಾರಿ […]