ಪೋಷಕರು ಮಕ್ಕಳಿಗೆ ಪಲ್ಸ್ ಪೊಲೀಯೋ ಲಸಿಕೆಯನ್ನು ಹಾಕಿಸಲು ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಕರೆ.

ಉಡುಪಿ: ಮಾರ್ಚ್ 3 ರಂದು ಸಮೀಪದ ಪಲ್ಸ್ ಪೊಲಿಯೋ ಲಸಿಕಾ ಕೇಂದ್ರಗಳೀಗೆ ಪೋಷಕರು ತಮ್ಮ 5 ವರ್ಷದೊಳಗಿನ ಮಕ್ಕಳನ್ನು ಕರೆದೊಯ್ದು ಪೊಲಿಯೋ ಲಸಿಕೆಯನ್ನು ಹಾಕಿಸಬೇಕೆಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಕರೆ ನೀಡಿದರು.   ಅವರು ಇಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ರಾಷ್ಟ್ರೀಯ ಪಲ್ಸ್ ಪೊಲೀಯೋ ಕಾರ್ಯಕ್ರಮದ ಜಿಲ್ಲಾ ಲಸಿಕಾ ಕಾರ್ಯಪಡೆ ಸಮನ್ವಯ ಸಮಿತಿ ಹಾಗೂ ರಾಷ್ಟ್ರೀಯ ಜಂತುಹುಳು ನಿವಾರಣಾ ಕಾರ್ಯಕ್ರಮದ ಜಿಲ್ಲಾ ಸಮನ್ವಯ ಸಮಿತಿ ಸಭೆಯ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.   ರಾಷ್ಟ್ರೀಯ ಪಲ್ಸ್ […]

ಬೇಸಿಗೆಯಲ್ಲಿ ನೀರಿನ ಅಭಾವವಾಗದಂತೆ ಕ್ರಮವಹಿಸಿ: ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ. ಎಂ.ಟಿ.ರೇಜು

  ಉಡುಪಿ: ಜಿಲ್ಲೆಯಲ್ಲಿ ಮುಂಬರುವ ಬೇಸಿಗೆ ದಿನಗಳಲ್ಲಿ ಕುಡಿಯುವ ನೀರಿನ ಸಮಸ್ಯಾತ್ಮಕವಾಗುವಂತಹ ಗ್ರಾಮಗಳನ್ನು ಗುರುತಿಸಿ, ನೀರಿನ ಸಮಸ್ಯೆ ಉಂಟಾದಲ್ಲಿ ಸ್ಥಳೀಯ ನೀರಿನ ಮೂಲಗಳಿಂದ ಕುಡಿಯುವ ನೀರು ಒದಗಿಸಲು ಯೋಜನೆಗಳನ್ನು ಈಗಲೇ ರೂಪಿಸಿಕೊಂಡು ಯಾವುದೇ ನೀರಿನ ತೊಂದರೆಯಾಗದಂತೆ ಕ್ರಮವಹಿಸಬೇಕು ಎಂದು ಅಧಿಕಾರಿಗಳಿಗೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ. ಎಂ.ಟಿ ರೇಜು ಹೇಳಿದರು.    ಅವರು ಇಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಉಡುಪಿ ಜಿಲ್ಲೆಯ ಮಾಸಿಕ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.    ಗ್ರಾಮೀಣ […]

ಉಡುಪಿ: ವ್ಯಕ್ತಿ ನಾಪತ್ತೆ

ಉಡುಪಿ: ಉಡುಪಿ ತಾಲೂಕು ಕಾಪು ನಿವಾಸಿ ರವಿ (51) ಎಂಬ ವ್ಯಕ್ತಿಯು ಎರಡು ತಿಂಗಳಿನಿಂದ ಬ್ರಹ್ಮಾವರ ತಾಲೂಕಿನ ವಾರಂಬಳ್ಳಿ ಗ್ರಾಮದ ಅಪ್ಪ ಅಮ್ಮ ಅನಾಥಾಲಯದಲ್ಲಿ ವಾಸವಿದ್ದು ಫೆಬ್ರವರಿ 22 ರಂದು ಅಲ್ಲಿಂದ ಹೋದವರು ವಾಪಸ್ಸು ಬಾರದೇ ನಾಪತ್ತೆಯಾಗಿರುತ್ತಾರೆ. 5 ಅಡಿ 7 ಇಂಚು ಎತ್ತರ, ಗೋಧಿ ಮೈಬಣ್ಣ. ಕೋಲು ಮುಖ, ಸಾಧಾರಣ ಮೈಕಟ್ಟು ಹೊಂದಿದ್ದು, ಕನ್ನಡ, ತುಳು ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಹೆಚ್ಚಿನ ಮಾಹಿತಿ ದೊರೆತಲ್ಲಿ ಉಡುಪಿ ಪೊಲೀಸ್ ಕಂಟ್ರೋಲ್ ರೂಮ್ ದೂ ಸಂ: 0820-2526444, […]

ರಾಜಯೋಗಿನಿ ಬ್ರಹ್ಮಕುಮಾರಿ ವಸಂತಿ ನಿಧನ

ಕಾರ್ಕಳ: ನಗರದ ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವ ವಿದ್ಯಾಲಯದ ಸಂಚಾಲಕಿ ರಾಜಯೋಗಿನಿ ಬ್ರಹ್ಮಕುಮಾರಿ ವಸಂತಿ (83) ಫೆ.25ರಂದು ಎಸ್.ವಿ.ಟಿ. ಶಾಲಾ ರಸ್ತೆಯ ಸೇವಾಕೇಂದ್ರದಲ್ಲಿ ನಿಧನರಾದರು. ಮೃತರು 35ವರ್ಷಗಳಿಂದ ಈಶ್ವರೀಯ ಸೇವೆಯಲ್ಲಿ ತತ್ಪರರಾಗಿದ್ದರು.

ಮೂಡುಬಿದಿರೆ: ನಾಪತ್ತೆಯಾಗಿದ್ದ ವಿದ್ಯಾರ್ಥಿನಿ ಕೇರಳದಲ್ಲಿ ಪ್ರಿಯಕರನೊಂದಿಗೆ ಪತ್ತೆ.

ಮೂಡುಬಿದಿರೆ: ಮೂಡುಬಿದಿರೆಯ ಪ್ರತಿಷ್ಠಿತ ಕಾಲೇಜೊಂದರಲ್ಲಿ ಪ್ರಥಮ ವರ್ಷದ ಬಿಪಿಟಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿಯ ನಾಪತ್ತೆ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. ಶುಕ್ರವಾರ ನಾಪತ್ತೆಯಾಗಿದ್ದ ವಿದ್ಯಾರ್ಥಿನಿ ತನ್ನ ಪ್ರಿಯಕರನನ್ನು ಕೇರಳದಲ್ಲಿ ವಿವಾಹವಾಗಿ ಪತ್ತೆಯಾಗಿದ್ದಾಳೆ. ಬೈಂದೂರು ತಾಲೂಕಿನ ಕೊಲ್ಲೂರು ನಿವಾಸಿ 19ವರ್ಷದ ಆದಿರಾ ಎಂಬಾಕೆ ಶುಕ್ರವಾರ ಬೆಳಿಗ್ಗೆ ಕಾಣೆಯಾಗಿದ್ದಳು. ಅಂದು ತನ್ನ ಸಹಪಾಠಿಗಳೊಂದಿಗೆ ಕಾಲೇಜ್ ಬಸ್ ನಲ್ಲಿ ಬಂದು ಮೂಡುಬಿದಿರೆಯ ಕನ್ನಡ ಭವನದಲ್ಲಿ ಇಳಿದಿದ್ದಳು. ಆ ಬಳಿಕ ಅಲ್ಲಿಂದ ಕಾಲೇಜಿಗೆ ಹೋಗದೆ ನಾಪತ್ತೆಯಾಗಿದ್ದಳು. ಈ ಬಗ್ಗೆ ಆಕೆಯ ಪೋಷಕರು ಮೂಡುಬಿದಿರೆ ಠಾಣೆಯಲ್ಲಿ […]