ಬೆಳ್ತಂಗಡಿ: ಇಲಿ ಪಾಷಣ ಸೇವಿಸಿ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣು.

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಪುದುವೆಟ್ಟು ಬಳಿ ಇಲಿ ಪಾಷಣ ಸೇವಿಸಿ ಪ್ರಥಮ ಪಿಯುಸಿ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡವರು ಪುದುವೆಟ್ಟು ಗ್ರಾಮದ ಕಲ್ಲಾಜೆ ನಿವಾಸಿ ವೆಂಕಟೇಶ್ ಅವರ ಪುತ್ರಿ ಅನಿತಾ (17). ಈಕೆ ನಾಲ್ಕು ದಿನದ ಹಿಂದೆ ಇಲಿ ಪಾಷಾಣ ಸೇವಿಸಿ ಆತ್ಮಹತ್ಯೆ ಗೆ ಯತ್ನಿಸಿದ್ದಳು ತೀವ್ರ ಅಸ್ವಸ್ಥಗೊಂಡಿದ್ದು, ಆಕೆಯನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ 3 ದಿನಗಳ ಕಾಲ ಜೀವನ್ಮರಣ ಹೋರಾಟ ನಡೆಸಿದ ಅನಿತಾ ಜು.3ರ […]
ಫಲಾನುಭವಿ ಆಧಾರಿತ ಯೋಜನೆ: ಅರ್ಜಿ ಆಹ್ವಾನ

ಉಡುಪಿ: ಪ್ರಸಕ್ತ ಸಾಲಿನಲ್ಲಿ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ವತಿಯಿಂದ ಅನುಷ್ಠಾನಗೊಳಿಸಲಾದ ಫಲಾನುಭವಿ ಆಧಾರಿತ ಯೋಜನೆಗಳಾದ ಮೆರಿಟ್ ವಿದ್ಯಾರ್ಥಿಗಳಿಗಾಗಿ ಪ್ರೋತ್ಸಾಹಧನ, ಸ್ವಯಂ ಉದ್ಯೋಗಕ್ಕಾಗಿ ಆಧಾರ ಯೋಜನೆ, ಮರಣ ಪರಿಹಾರ ನಿಧಿ, ವೈದ್ಯಕೀಯ ಪರಿಹಾರ ನಿಧಿ, ಪ್ರತಿಭೆ ಯೋಜನೆ, ಸಾಧನೆ ಯೋಜನೆ, ನಿರುದ್ಯೋಗ ಭತ್ಯೆ, ಅಂಧ ಮಹಿಳೆಗಾಗಿ ಶಿಶುಪಾಲನಾ ಭತ್ಯೆ, ಅಂಧ ವಿದ್ಯಾರ್ಥಿಗಳಿಗೆ ಟಾಕಿಂಗ್ ಲ್ಯಾಪ್‌ಟಾಪ್ ಯೋಜನೆ, ದೈಹಿಕ ವಿಕಲಚೇತನರಿಗೆ ಯಂತ್ರಚಾಲಿತ ದ್ವಿಚಕ್ರ ವಾಹನ ಯೋಜನೆ, ಸಾಧನ ಸಲಕರಣೆಗಳ ಯೋಜನೆ, ಶ್ರವಣದೋಷವುಳ್ಳ ವ್ಯಕ್ತಿಗಳಿಗೆ ಸ್ವಯಂ ಉದ್ಯೋಗಕ್ಕಾಗಿ […]
ಪುಸ್ತಕ ಬಹುಮಾನ: ಲೇಖಕರು ಹಾಗೂ ಪ್ರಕಾಶಕರಿಂದ ಅರ್ಜಿ ಆಹ್ವಾನ

ಉಡುಪಿ: ಕರ್ನಾಟಕ ಯಕ್ಷಗಾನ ಅಕಾಡೆಮಿಯ ವತಿಯಿಂದ ಯಕ್ಷಗಾನ (ತೆಂಕು, ಬಡಗು ಬಡಾಬಡಗು, ಯಕ್ಷಗಾನ ಗೊಂಬೆಯಾಟ), ಮೂಡಲಪಾಯ ಯಕ್ಷಗಾನ, ಕೇಳಿಕೆ, ಘಟ್ಟದಕೋರೆ ಮತ್ತು ತಾಳಮದ್ದಲೆ ಇತ್ಯಾದಿ ಕಲಾಪ್ರಕಾರಗಳಲ್ಲಿ 2022 ಹಾಗೂ 2023ನೇ ಸಾಲಿನ ಕ್ಯಾಲೆಂಡರ್ ವರ್ಷದಲ್ಲಿ ಪ್ರಕಟಿಸಿರುವ ಪುಸ್ತಕಗಳನ್ನು ಬಹುಮಾನಕ್ಕೆ ಆಯ್ಕೆ ಮಾಡಲು ಲೇಖಕರು ಹಾಗೂ ಪ್ರಕಾಶಕರಿಂದ ಅರ್ಜಿ ಆಹ್ವಾನಿಸಲಾಗಿದೆ. ಆಯ್ಕೆಯಾದ ಪುಸ್ತಕಕ್ಕೆ 25,000 ರೂ.ಗಳ ಬಹುಮಾನವನ್ನು ನೀಡಲಾಗುವುದು. ಯಕ್ಷಗಾನ ವಿವಿಧ ಆಯಾಮಗಳ ಬಗ್ಗೆ ಸಂಗೀತ, ಆಹರ‍್ಯ, ಅಭಿನಯ, ಸಂಶೋಧನೆ, ವಿಮರ್ಶೆ, ಜೀವನಚರಿತ್ರೆ, ಪ್ರಸಂಗ ಪುಸ್ತಕ ಇತ್ಯಾದಿ ಪ್ರಕಾರಗಳನ್ನು […]
ಶಿರಿಯಾರ: ಅಪ್ರಾಯ ನಾಯಕ್ ನಿಧನ.

ಕೋಟ: ಶಿರಿಯಾರ ನಿವಾಸಿ, ಸ್ಥಳೀಯ ಜನರಲ್ ಸ್ಟೋರ್ ಮಾಲಕ ಅಪ್ರಾಯ ನಾಯಕ್ (87) ಅವರು ಜು.2 ರಂದು ಸ್ವಗ್ರಹ ದಲ್ಲಿ ನಿಧನ ಹೊಂದಿದರು. ಮ್ರತರು ಪತ್ನಿ ,ಪುತ್ರ ಮತ್ತು ಆರು ಮಂದಿ ಪುತ್ರಿ ಯರನ್ನು ಅಗಲಿದ್ದಾರೆ. ಹಲವಾರು ದಶಕದಿಂದ ಜನರಲ್ ಸ್ಟೋರ್ ನಡೆಸುತ್ತಿದ್ದ ಇವರು ಸ್ಥಳೀಯ ರಾಮ ಮಂದಿರ ಟ್ರಸ್ಟ್ ಸದಸ್ಯ ಹಾಗೂ ಜಿ.ಎಸ್.ಬಿ. ಸಂಘದ ಸದಸ್ಯರಾಗಿದ್ದರು.
ಹಿರಿಯಡಕ: ಡಾ.ಸುಧಾ ಕಾಮತ್ ಅವರಿಗೆ ಬಿ.ಸಿ. ರಾಯ್ ಪುರಸ್ಕಾರ

ಹಿರಿಯಡಕ: ಭಾರತೀಯ ವೈದ್ಯಕೀಯ ಸಂಘ ಉಡುಪಿ ಕರಾವಳಿಯ ಹಿರಿಯ ಸದಸ್ಯ ಡಾ.ಸುಧಾ ಕಾಮತ್ ರವರು ಭಾರತೀಯ ವೈದ್ಯಕೀಯ ಸಂಘದ ಕರ್ನಾಟಕ ರಾಜ್ಯ ಶಾಖೆಯಿಂದ ಕೊಡ ಮಾಡಲ್ಪಡುವ 2024ರ ಡಾ. ಬಿ.ಸಿ. ರಾಯ್ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಬೆಂಗಳೂರಿನಲ್ಲಿ ನಡೆದ ವೈದ್ಯರ ದಿನಾಚರಣೆಯ ಸಂದರ್ಭ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಸಚಿವ ಡಾ.ಎಚ್ ಕೆ ಪಾಟೀಲ್, ಭಾ ವೈ ಸಂಘದ ರಾಜ್ಯಾಧ್ಯಕ್ಷ ಡಾ. ಶ್ರೀನಿವಾಸ ಹಾಗೂ ಗೌರವ ಕಾರ್ಯದರ್ಶಿ ಡಾ ಕರುಣಾಕರ್ ಉಪಸ್ಥಿತರಿದ್ದರು.