ಕಾರ್ಕಳ: ಬೈಕ್ ಸ್ಕಿಡ್ – ಇಂಜಿನಿಯರಿಂಗ್ ವಿದ್ಯಾರ್ಥಿ ಮೃತ್ಯು..

ಕಾರ್ಕಳ: ಬೈಕ್ ಸ್ಕಿಡ್ ಆದ ಪರಿಣಾಮ ಸವಾರ ಇಂಜಿನಿಯರಿಂಗ್ ವಿದ್ಯಾರ್ಥಿ ಮೃತಪಟ್ಟ ಹಾಗೂ ಸಹಸವಾರ ಗಾಯಗೊಂಡ ಘಟನೆ ಕಾರ್ಕಳ ತಾಲೂಕಿನ ಪರ್ಪಲೆ ಗುಡ್ಡದ ತಿರುವಿನಲ್ಲಿ ಸಂಭವಿಸಿದೆ. ಬ್ರಹ್ಮಾವರ ನಿವಾಸಿ ಆಕಾಶ್ ಕಾಂಚನ್(18) ಮೃತ ವಿದ್ಯಾರ್ಥಿ. ನಿಟ್ಟೆಯ ಖಾಸಗಿ ಕಾಲೇಜಿನಲ್ಲಿ ಮೆಕ್ಯಾನಿಕ್ ಇಂಜಿನಿಯರಿಂಗ್ ಓದುತಿದ್ದ ಇವರು ಕಾಲೇಜಿನಲ್ಲಿ ವಾರ್ಷಿಕೋತ್ಸವ ಇದ್ದ ಕಾರಣ ಸ್ನೇಹಿತರೊಡಗೂಡಿ ಪ್ರತ್ಯೇಕ ಬೈಕ್‌ಗಳಲ್ಲಿ ತೆರಳುತಿದ್ದ ವೇಳೆ ಘಟನೆ ಸಂಭವಿಸಿದೆ. ಘಟನೆಯಲ್ಲಿ ಸವಾರ, ಸಹಸವಾರ ವಿದ್ಯಾರ್ಥಿಗಳಿಬ್ಬರು ರಸ್ತೆಗೆ ಎಸೆಯಲ್ಪಟ್ಟು ಆಕಾಶ್ ಗಂಭೀರ ಗಾಯಗೊಂಡು ಮೃತಪಟ್ಟರೆ, ಸಹಸವಾರ ವಿದ್ಯಾರ್ಥಿ […]
ದ್ವಿತೀಯ ಪಿ.ಯು.ಸಿ ಪರೀಕ್ಷೆಯನ್ನು ಶಿಸ್ತು ಬದ್ಧವಾಗಿ ನಡೆಸಿ: ಜಿಲ್ಲಾಧಿಕಾರಿ ಡಾ.ಕೆ. ವಿದ್ಯಾಕುಮಾರಿ

ಉಡುಪಿ: ದ್ವಿತೀಯ ಪಿ.ಯು.ಸಿ ಪರೀಕ್ಷೆಯು ಮಾರ್ಚ್ 1 ರಿಂದ 22 ರ ವರೆಗೆ ನಡೆಯಲಿದ್ದು, ಪರೀಕ್ಷಾ ಕೇಂದ್ರಗಳಲ್ಲಿ ಶಿಸ್ತು ಬದ್ಧವಾಗಿ ಪರೀಕ್ಷೆಗಳನ್ನು ನಡೆಸಿ, ಯಾವುದೇ ಗೊಂದಲಗಳಿಗೆ ಆಸ್ಪದ ನೀಡದಂತೆ ಎಚ್ಚರವಹಿಸಬೇಕು ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಹೇಳಿದರು. ಅವರು ಇಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಪಿ.ಯು.ಸಿ ಪರೀಕ್ಷೆಯ ಪೂರ್ವಭಾವಿ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ದ್ವಿತೀಯ ಪಿಯು ಪರೀಕ್ಷೆಗಳು ಮಾರ್ಚ್ 1 ರಿಂದ 22 ರ ವರೆಗೆ […]
ಉಡುಪಿ ಜಿಲ್ಲಾ ಕರಾಟೆ ಶಿಕ್ಷಕರ ಸಂಘದ ಅಧ್ಯಕ್ಷರಾಗಿ ರೊಹಿತಾಕ್ಷ ಆಯ್ಕೆ.

ಉಡುಪಿ: ಉಡುಪಿ ಜಿಲ್ಲಾ ಕರಾಟೆ ಶಿಕ್ಷಕರ ಸಂಘ ಇದರ 17ನೇ ವರ್ಷದ ವಾರ್ಷಿಕ ಮಹಾಸಭೆ ಮತ್ತು ಕ್ರೀಡಾ ಸಮ್ಮಿಲನ ಭಾನುವಾರ ಶ್ರೀ ವಾಣಿ ಪ್ರೌಢಶಾಲೆ, ನಡುೂರು ಇಲ್ಲಿ ನೆರವೇರಿತು. ಸಮಾರಂಭವನ್ನು ಶ್ರೀಧರ್ ಶೆಟ್ಟಿ, ನಿವೃತ್ತ ದೈಹಿಕ ಉಪ ನಿರ್ದೇಶಕರು ಉದ್ಘಾಟಿಸಿದರು. ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಯಿತು. ಅಧ್ಯಕ್ಷ- ರೋಹಿತಾಕ್ಷ ಉದ್ಯಾವರ, ಪ್ರಧಾನ ಕಾರ್ಯದರ್ಶಿ ವಾಮನ ಪಾಲನ್, ಕೋಶಾಧಿಕಾರಿ ಜೀವನ್ ಪೂಜಾರಿ ಉಪಾಧ್ಯಕ್ಷರುಗಳಾಗಿ ಸಂದೀಪ್ ಕುಂದಾಪುರ, ಗಣೇಶ್ ಎರ್ಮಾಲ್, ಸುಂದರಂ, ಶ್ರೀಧರ್ ಬೈಂದೂರು, ವಿಜಯ್ ಬೈಂದೂರು, ಮೃಣಾಲಿನಿ […]
ಕುಂದಾಪುರ: ಬೈಕ್ ಗೆ ಲಾರಿ ಡಿಕ್ಕಿ; ಬ್ಯಾಂಕ್ ಮ್ಯಾನೇಜರ್ ಮೃತ್ಯು

ಉಡುಪಿ: ಬೈಕ್ ಗೆ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ರಾ.ಹೆ.66ರ ಆರಾಟೆ ಎಂಬಲ್ಲಿ ಶನಿವಾರ ರಾತ್ರಿ ನಡೆದಿದೆ.ಮೃತರನ್ನು ರಾಹುಲ್ ಬಾಲಕೃಷ್ಣ ರಣಕಂಬೆ ಎಂದು ಗುರುತಿಸಲಾಗಿದೆ. ಮೂಲತಃ ಮಹಾರಾಷ್ಟ್ರದವರಾದ ರಾಹುಲ್ ಅವರು, ಮರವಂತೆ ಕೆನರಾ ಬ್ಯಾಂಕ್ ಮ್ಯಾನೇಜರ್ ಆಗಿ ಕಾರ್ಯನಿರ್ವಹಿಸುತ್ತಿದ್ದರು. ಶನಿವಾರ ಸಂಜೆ ಬ್ಯಾಂಕಿನ ಕರ್ತವ್ಯ ಮುಗಿಸಿ ತನ್ನ ಬೈಕಿನಲ್ಲಿ ಕುಂದಾಪುರದ ಮನೆಗೆ ತೆರಳುತ್ತಿದ್ದ ವೇಳೆ ಆರಾಟೆ ಬಸ್ ನಿಲ್ದಾಣದ ಬಳಿ ಬೈಕಿಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ರಸ್ತೆಗೆ ಬಿದ್ದ ಪರಿಣಾಮ ರಾಹುಲ್ […]
12ನೇ ವರ್ಷದ ವಾಮಂಜೂರು ತಿರುವೈಲುಗುತ್ತು “ಸಂಕುಪೂಂಜ – ದೇವುಪೂಂಜ” ಜೋಡುಕರೆ ಕಂಬಳ ಕೂಟದ ಫಲಿತಾಂಶ

ಮಂಗಳೂರು: ಫೆ.17 ರಂದು ನಡೆದ 12ನೇ ವರ್ಷದ ವಾಮಂಜೂರು ತಿರುವೈಲುಗುತ್ತು “ಸಂಕುಪೂಂಜ – ದೇವುಪೂಂಜ” ಜೋಡುಕರೆ ಕಂಬಳ ಕೂಟದ ಫಲಿತಾಂಶ ಹೀಗಿದೆ. ಕೂಟದಲ್ಲಿ ಭಾಗವಹಿಸಿದ ಕೋಣಗಳ ಸಂಖ್ಯೆ: ಕನೆಹಲಗೆ: 06 ಜೊತೆ ಅಡ್ಡಹಲಗೆ: 05 ಜೊತೆ ಹಗ್ಗ ಹಿರಿಯ: 14 ಜೊತೆ ನೇಗಿಲು ಹಿರಿಯ: 35 ಜೊತೆ ಹಗ್ಗ ಕಿರಿಯ: 23 ಜೊತೆ ನೇಗಿಲು ಕಿರಿಯ: 83 ಜೊತೆ ಒಟ್ಟು ಕೋಣಗಳ ಸಂಖ್ಯೆ: 166 ಜೊತೆ ಕನೆಹಲಗೆ: ಪ್ರಥಮ: ಬೋಳಾರ ತ್ರಿಶಾಲ್ ಕೆ ಪೂಜಾರಿ ಹಲಗೆ ಮುಟ್ಟಿದವರು: […]