ರಾಜ್ಯದಲ್ಲಿ ಬಜೆಟ್ ಮಂಡನೆ: ನನ್ನ ಜೀವಮಾನದಲ್ಲೇ ಇಂತಹ ಕಳಪೆ ಬಜೆಟ್ ನೋಡಿಲ್ಲ – ಬಿ.ಎಸ್ ಯಡಿಯೂರಪ್ಪ ಕಿಡಿ

ಬೆಂಗಳೂರು: ರಾಜ್ಯದಲ್ಲಿ 2024-25ನೇ ಸಾಲಿನ ಬಜೆಟ್ ಮಂಡನೆ ಇಂದು ಸಿಎಂ ಸಿದ್ದರಾಮಯ್ಯ ಅವರು ಮಾಡಿದ್ದಾರೆ. ಈ ಕುರಿತು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರು ಮಾಧ್ಯಮ ಪ್ರಕಟಣೆ ಹೊರಡಿಸಿದ್ದಾರೆ. ‘ಸಿದ್ದರಾಮಯ್ಯನವರು ಕಳಪೆ ಬಜೆಟ್ ಮಂಡಿಸಿದ್ದಾರೆ. ನನ್ನ ಜೀವಮಾನದಲ್ಲೇ ಇಂತಹ ಕಳಪೆ ಬಜೆಟ್ ನೋಡಿಲ್ಲ. ಹದಿನಾಲ್ಕು ಬಜೆಟ್ಗಳನ್ನು ಮಂಡಿಸಿರುವ ಸಿದ್ದರಾಮಯ್ಯರಿಂದ ಇಂತಹ ಕಳಪೆ ಬಜೆಟ್ ನಿರೀಕ್ಷಿಸಿರಲಿಲ್ಲ ಎಂದು ಕಿಡಿಕಾರಿದ್ದಾರೆ. ‘ಈ ಬಾರಿ ಬಜೆಟ್ನ ಬಹುತೇಕ ಅಂಶ ಕೇಂದ್ರ ಸರ್ಕಾರವನ್ನು ದೂರಲು ಮೀಸಲಿಡಲಾಗಿದೆ. ದೆಹಲಿ ಪ್ರತಿಭಟನೆಯ ಮುಂದುವರೆದ ಭಾಗವಾಗಿರುವ ಈ […]

ಕಾಪು: ದೇವಸ್ಥಾನದ ಕೆರೆಯಲ್ಲಿ ಯುವಕನ ಶವ ಪತ್ತೆ

ಉಡುಪಿ: ಕಾಪು ತಾಲೂಕಿನ ಇನ್ನಂಜೆ ಗ್ರಾಮದ ಉಂಡಾರು ದೇವಸ್ಥಾನದ ಕೆರೆಯಲ್ಲಿ ಯುವಕನ ಶವ ಪತ್ತೆಯಾಗಿದೆ. ಮೃತ ಯುವಕನನ್ನು ಪಡುಬಿದ್ರಿ ನಿವಾಸಿ ವಿನಯ್ ರಾವ್ (26)ಎಂದು ಗುರುತಿಸಲಾಗಿದೆ. ಈತ ಗುರುವಾರ ರಾತ್ರಿ 12 ಗಂಟೆ ವೇಳೆಗೆ ದೇವಸ್ಥಾನದ ಬಳಿ ತಿರುಗಾಡುತ್ತಿರುವ ದೃಶ್ಯ ಸಿಸಿ ಕ್ಯಾಮರದಲ್ಲಿ ಪತ್ತೆಯಾಗಿದೆ. ಹೀಗಾಗಿ ಈತ ದೇವಸ್ಥಾನದ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಕಾಪು ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಉಡುಪಿಗೆ ಕೊಂಡೊಯ್ದಿದ್ದಾರೆ. […]

ಕರ್ನಾಟಕ ರಾಜ್ಯ ಬಾಕ್ಸಿಂಗ್ ಸ್ಪರ್ಧಾ ಕೂಟ: ಜಿಲ್ಲೆಗೆ 9ಚಿನ್ನ 9ಬೆಳ್ಳಿ 4ಕಂಚಿನೊಂದಿಗೆ ಸಮಗ್ರ ದ್ವಿತೀಯ ಪ್ರಶಸ್ತಿ

ಉಡುಪಿ: ಕರ್ನಾಟಕ ಅಮೆಚೂರ್ ಬಾಕ್ಸಿಂಗ್ ಅಸೋಸಿಯೇಶನ್ ಇತ್ತೀಚಿಗೆ ಬೆಂಗಳೂರಿನ ಅಟಲ್ ಬಿಹಾರಿ ವಾಜಪೇಯಿ ಕ್ರೀಡಾಂಗಣದಲ್ಲಿ ಆಯೋಜಿಸಿದ ಕರ್ನಾಟಕ ರಾಜ್ಯ ಬಾಕ್ಸಿಂಗ್ ಸ್ಪರ್ಧಾ ಕೂಟದಲ್ಲಿ ಉಡುಪಿ ಜಿಲ್ಲಾ ಅಮೆಚೂರ್ ಬಾಕ್ಸಿಂಗ್ ಅಸೋಸಿಯೇಶನ್ 9ಚಿನ್ನ 9ಬೆಳ್ಳಿ 4ಕಂಚಿನ್ನೊಂದಿಗೆ ಸಮಗ್ರ ದ್ವಿತೀಯ ಪ್ರಶಸ್ತಿಯನ್ನು ಜಯಿಸಿದೆ. ಸ್ವರ್ಣ ಪದಕ: ಸಾಯಿ ವೈಷ್ಣವ್, ವಂದಿತ್, ಶ್ರೇಯಸ್ ಐತಾಳ್, ಮಾನ್ಸಿ ಜೆ ಸುವರ್ಣ, ಸಾಯಿ ಸಂತೋಷ್ ಕೋಟ್ಯಾನ್, ಅರ್ಹನ್ ಅಹ್ಮದ್, ಪ್ರೀತಮ್ ವಿ. ಯಮನೂರಪ್ಪ ಪೂಜಾರ್, ವಿರಾಜ್ ಬಂಗೇರ, ರಜತ ಪದಕ : ರಿಯಾನ್ಸ್ ನಂದನ್, […]

ಬ್ರಹ್ಮಾವರ: ಬೈಕ್ ಗೆ ಕಾರು ಡಿಕ್ಕಿ – ಸವಾರ ಮೃತ್ಯು

ಬ್ರಹ್ಮಾವರ: ಮಾರುತಿ ಸ್ವಿಫ್ಟ್‌ ಡಿಸೈರ್‌ ಕಾರೊಂದು ರಾಯಲ್‌ ಎನ್‌ಫೀಲ್ಡ್‌ ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ಬ್ರಹ್ಮಾವರ ತಾಲೂಕಿನ ಬಿಲ್ಲಾಡಿ ಗ್ರಾಮದ ಭಂಡಾರ್ತಿ ಎಂಬಲ್ಲಿ ಬುಧವಾರ ರಾತ್ರಿ ಸಂಭವಿಸಿದೆ. ಮೃತ ಸವಾರನನ್ನು ಮಹೇಂದ್ರ (23) ಎಂದು ಗುರುತಿಸಲಾಗಿದೆ. ಇವರು ನಿನ್ನೆ ರಾತ್ರಿ ಕೆಲಸ ಮುಗಿಸಿಕೊಂಡು ತನ್ನ ರಾಯಲ್ ಎನ್ ಫೀಲ್ಡ್ ಬೈಕ್ ನಲ್ಲಿ ಸೈಬ್ರಕಟ್ಟೆ ಕಡೆಯಿಂದ ಶಿರೂರು ಮೂರುಕೈ ಕಡೆಗೆ ಹೋಗುತ್ತಿದ್ದರು. ಬಿಲ್ಲಾಡಿ ಗ್ರಾಮದ ಭಂಡಾರ್ತಿ ಬಳಿ ತಲುಪಿದಾಗ ಗಣೇಶ್ ಎಂಬಾತ […]

ಉಡುಪಿ: ಯುವಕ ನಾಪತ್ತೆ

ಉಡುಪಿ, ಫೆಬ್ರವರಿ 15: ಪುತ್ತೂರು ಗ್ರಾಮದ ನಿಟ್ಟೂರಿನ ನಿವಾಸಿ ವಿನೋದ ಕುಚಲ (19) ಎಂಬ ಯುವಕನು ಫೆಬ್ರವರಿ 8 ರಂದು ಮನೆಯಿಂದ ಹೋದವರು ವಾಪಸ್ಸು ಬಾರದೇ ನಾಪತ್ತೆಯಾಗಿರುತ್ತಾರೆ. 168 ಸೆಂ.ಮೀ ಎತ್ತರ, ಸಾಧಾರಣ ಮೈಕಟ್ಟು, ಗೋಧಿ ಮೈಬಣ್ಣ, ದುಂಡು ಮುಖ ಹೊಂದಿದ್ದು, ಕನ್ನಡ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಹೆಚ್ಚಿನ ಮಾಹಿತಿ ದೊರೆತಲ್ಲಿ ನಗರ ಪೊಲೀಸ್ ಠಾಣೆಯನ್ನು ಸಂಪರ್ಕಿಸಬಹುದಾಗಿದೆ ಎಂದು ಠಾಣಾಧಿಕಾರಿಗಳ ಪ್ರಕಟಣೆ ತಿಳಿಸಿದೆ.